Connect with us

BELTHANGADY

ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಗಂಭೀರ ಸ್ಥಿತಿಯಲ್ಲಿ ಅಸ್ಪತ್ರೆಗೆ ದಾಖಲು

Published

on

ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಗಂಭೀರ ಸ್ಥಿತಿಯಲ್ಲಿ ಅಸ್ಪತ್ರೆಗೆ ದಾಖಲು

ಬೆಳ್ತಂಗಡಿ : ಕೊಕ್ರಾಡಿಯ ಅತ್ರಿಜಾಲು ಸಮೀಪದ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಕೃಷಿಕ ದಂಪತಿ ತಮ್ಮ ಮಗುವಿನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.2 ರಂದು ತಡರಾತ್ರಿ ನಡೆದಿದೆ.


ಕೊಕ್ರಾಡಿ ಗ್ರಾಮದ ಅತ್ರಿಜಾಲು ನಿವಾಸಿ ಚಂದ್ರಶೇಖರ ಶೆಟ್ಟಿಗಾರ್(37.ವ) ಅವರ ಪತ್ನಿ ಆಶಾ(30.ವ) ಹಾಗೂ 5 ವರ್ಷ ಪ್ರಾಯದ ಮಗು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಿಂದ ಈ ಮೂವರ ಸ್ಥಿತಿಯೂ ಚಿಂತಾಜನಕವಾಗಿದೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಆರ್ಥಿಕವಾಗಿ ಸಧೃಢರಾಗಿದ್ದರು. ಯಾವುದೋ ಕೌಟುಂಬಿಕ ಕಲಹದಿಂದ ಈ ಕೃತ್ಯವೆಸಗಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

BELTHANGADY

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಅಗ್ನಿ ದುರಂತ; ಬೆಂಕಿಯಲ್ಲಿ ಸುಟ್ಟು ಕರಕಲಾದ ಅಂಗಡಿ

Published

on

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ನಡೆದಿದೆ.


ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ ಕೆಎಎಫ್ ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಲಿಗೆ ಅಕ್ಕಪಕ್ಕದ ಶಾಪ್ ಗಳಿಗೂ ಹಾನಿಯಾಗಿದೆ.

ಇದನ್ನೂ ಓದಿ: ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಘಟನೆಯನ್ನು ನೋಡಲು ನೂರಾರು ಮಂದಿ ಜಾಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Continue Reading

BELTHANGADY

ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Published

on

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನ ಚಿತ್ರಶೇಖರ ಎಂಬವರಿಗೆ 2013 ರಲ್ಲಿ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಬೆಳ್ತಂಗಡಿಯ ಪಾರೆಂಕಿ ಗ್ರಾಮದ 53 ವರ್ಷ ಪ್ರಾಯದ ಆಲ್ವಿನ್ ರೊಡ್ರಿಗಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಚಿತ್ರಶೇಖರ ಎಂಬವರಿಗೆ ಹಲ್ಲೆ ನಡೆಸಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಮ್ಮ ಕುಟುಂಬದ ಮಕ್ಕಳನ್ನ ನಾವೇ ಸರಿಯಾಗಿ ಗಮನಿಸಬೇಕು: ಲವ್ ಜಿಹಾದ್ ಕುರಿತು ಶಾಸಕ ಯತ್ನಾಳ್ ಹೇಳಿಕೆ

ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಆಲ್ವಿನ್ ರೊಡ್ರಿಗಸ್‌ನನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Continue Reading

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page