Connect with us

BELTHANGADY

ಬೆಳ್ತಂಗಡಿ: ಹಿಟಾಚಿಗೆ ಖಾಸಗಿ ಬಸ್ ಡಿ*ಕ್ಕಿ; ಓರ್ವ ಸಾ*ವು, ಹಲವರಿಗೆ ಗಾಯ

Published

on

ಬೆಳ್ತಂಗಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃ*ತಪಟ್ಟು ಹಲವರು ಗಂ*ಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ ರಾತ್ರಿ ನಡೆದಿದೆ.

ಮೃ*ತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಸಿಡಿಲು ಬ*ಡಿದು ಅವಳಿ ಹೆಣ್ಣುಮಕ್ಕಳ ಸಹಿತ ದಂಪತಿ ಸಜೀವ ದ*ಹನ!

ಘಟನೆಯಲ್ಲಿ ಹತ್ತಕ್ಕೂ ಹೆಚ್ವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಶಂಕರ ನಾರಾಯಣ ಭಟ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃ*ತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

BELTHANGADY

ನಮ್ಮ ಕುಡ್ಲ ವಾಹಿನಿಯ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ

Published

on

ಧರ್ಮಸ್ಥಳ: 25 ವರ್ಷಗಳಿಂದ ನಿಖರ ಸುದ್ದಿಗಳೊಂದಿಗೆ ಸಂಪರ್ಕದಲ್ಲಿ ಇಟ್ಟಿರುವ ಕರಾವಳಿ ಕರ್ನಾಟಕದ ಪ್ರಪ್ರಥಮ ತುಳು ವಾರ್ತಾ ವಾಹಿನಿ “ನಮ್ಮ ಕುಡ್ಲ” ಕ್ಕೆ ರಜತ ಮಹೋತ್ಸವ ಸಂಭ್ರಮ. ಸಣ್ಣ ಸುದ್ದಿ ಸಂಸ್ಥೆಯಾಗಿ ಪ್ರಾರಂಭವಾದ ಈ ಸಂಸ್ಥೆ ಇಂದು ದೇಶದಾದ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮವಾಗಿ ಬೆಳೆದು ನಿಂತಿದೆ. ಇದೀಗ ನಮ್ಮ ಕುಡ್ಲ ವಾಹಿನಿಯ 25ನೇ ವರ್ಷದ ಸಂಭ್ರಮದ ಅಂಗವಾಗಿ ಆಗಸ್ಟ್ 12 ಕ್ಕೆ “ನಮ್ಮ ಕುಡ್ಲ ಬೊಳ್ಳಿ ಪರ್ಬ 2025’’ ಎಂಬ ಕಾರ್ಯಕ್ರಮವು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಆ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು ನಮ್ಮ ಕುಡ್ಲ ಸತತ 25 ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ಬಿತ್ತರಿಸಿಕೊಂಡು ಬರುತ್ತಿದೆ. ಅಲ್ಲದೇ ಧರ್ಮಸ್ಥಳದಲ್ಲಿ ನಡೆಯುವ ಹಲವಾರು ಕಾರ್ಯಕ್ರಮದ ನೇರಪ್ರಸಾರವನ್ನು ಯಶಸ್ವಿಗೊಳಿಸಿದೆ. ಇದೇ ರೀತಿ 25 ವರ್ಷ, 50, 100 ವರ್ಷವಾಗಿ ಮುಂದುವರಿಯಲಿ ಎಂದು ಶುಭ ನುಡಿದರು.

ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಮಾತನಾಡಿ ಕರಾವಳಿ ಕರ್ನಾಟಕದ ಹೆಮ್ಮೆಯ ಚಾನೆಲ್ ಆಗಿದ್ದು, ನಮ್ಮ ಕುಡ್ಲ ವಾಹಿನಿ ತುಳು ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಬಿಂಬಿಸುವುದರ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲೂ ನಡೆಯುವಂತಹ ವೈವಿಧ್ಯಮಯ ಕಾರ್ಯಕ್ರಮಗಳ ಸುದ್ದಿ ಹಾಗೂ ನೇರಪ್ರಸಾರಗಳನ್ನು ಮಾಡುತ್ತಿದೆ. ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುವ ಲಕ್ಷದೀಪ, ನಡಾವಳಿ, ಮಹಾಮಸ್ತಕಾಭಿಷೇಕ, ಮಕ್ಕಳ ಮೇಳ ಮತ್ತು ವಿಶ್ವ ತುಳು ಸಮ್ಮೇಳನ ಹೀಗೆ ಕ್ಷೇತ್ರದಲ್ಲಿ ನಡೆಯುವ ಯಾವುದೇ ಕಾರ್ಯಕ್ರಮವನ್ನು ನಮ್ಮ ಕುಡ್ಲ ಚಾನೆಲ್ ತಪ್ಪಿಸದೇ ಜನರಿಗೆ ತಲುಪಿಸಲು ಕೆಲಸವನ್ನು ಮಾಡುತ್ತಿದೆ. ನಿನ್ನೆ ಮೊನ್ನೆ ಆರಂಭವಾದ ಸಂಸ್ಥೆಗೆ ಇದೀಗ 25 ವರ್ಷ ತುಂಬಿದೆ. ಮುಂದೆಯೂ ಹೆಚ್ಚಿನ ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡುವ ಹಾಗೆ ಬಿತ್ತರಿಸುವಂತಾಗಲಿ ಎಂದು ಹೇಳಿದರು.

ಇದನ್ನೂ ಓದಿ: ಆಗಸ್ಟ್ 12 ರಂದು ‘ನಮ್ಮ ಕುಡ್ಲ’ ವಾಹಿನಿಯ ಬೆಳ್ಳಿ ಹಬ್ಬ ಕಾರ್ಯಕ್ರಮ

ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ, ಧರ್ಮಸ್ಥಳ ಐಟಿ ಡಿವಿಜನ್‌ನ ಮ್ಯಾನೇಜರ್ ಮಲ್ಲಿನಾಥ್ ಜೈನ್, ನಮ್ಮ ಕುಡ್ಲ ಸಂಸ್ಥೆಯ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರ, ಸಿಒಒ ಕದ್ರಿ ನವನೀತ್ ಶೆಟ್ಟಿ, ಹಿರಿಯ ಕ್ಯಾಮೆರಾ ಮನ್‌ ಶ್ರೀಕಾಂತ್ ರಾವ್‌, ಸಂತೋಷ್ ದೇವಾಡಿಗ ಉಪಸ್ಥಿತರಿದ್ದರು.

Continue Reading

BELTHANGADY

ಬೆಳ್ತಂಗಡಿ: ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ

Published

on

ಬೆಳ್ತಂಗಡಿ: ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಸುಲ್ಕೆರಿ ಗ್ರಾಮದ ಮುಡಿಪಿರೆ ನಿವಾಸಿ 25 ವರ್ಷದ ಕಿಶೋರ್ ಮೃ*ತ ಯುವಕ.

ಕಿಶೋ‌ರ್ ಅವರು ಗಾರೆ ಕೆಲಸ, ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದರೆನ್ನಲಾಗಿದೆ. ಕಳೆದ ಒಂದು ವಾರದಿಂದ ಯಾರಲ್ಲಿಯೂ ಹೆಚ್ಚು ಬೆರೆಯುತ್ತಿರಲಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಅಪಘಾತ – 8 ಮಂದಿ ಸಾವು

ನಿನ್ನೆ ಮಧ್ಯಾಹ್ನದಿಂದ ಅವರು ನಾಪತ್ತೆಯಾಗಿದ್ದು, ಸಂಜೆಯವರೆಗೆ ಮನೆಗೆ ಬಾರದೆ ಇದ್ದಾಗ ಸ್ಥಳಿಯರು ಸೇರಿ ಹುಡುಕಲು ಪ್ರಾರಂಭಿಸಿದಾಗ ರಾತ್ರಿ ಸುಮಾರು 11 ಗಂಟೆಗೆ ನೇ*ಣು ಬಿಗಿದುಕೊಂಡ ರೀತಿಯಲ್ಲಿ ಕಿಶೋ‌ರ್ ಅವರ ಮೃ*ತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ವೇಣೂರು ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

 

Continue Reading

BELTHANGADY

ಬೆಳ್ತಂಗಡಿ: ಕಾರಿನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

Published

on

ಬೆಳ್ತಂಗಡಿ: ಅಗತ್ಯ ಕೆಲಸದ ನಿಮಿತ್ತ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಾಲ್ ಕರಾಯ ಎಂಬವರು ಹೆರಿಗೆ ನೋವಿನಿಂದ ಚಡಪಡಿಸುತ್ತಿದ್ದ ಮಹಿಳೆಯೊಬ್ಬರಿಗೆ ಸ್ಪಂದಿಸುವ ಮೂಲಕ ಅವರು ಕಾರಿನಲ್ಲೇ ಮಹಿಳೆಗೆ ಹೆರಿಗೆಯಾದ ಘಟನೆ ಮಂಗಳವಾರ ನಡೆದಿದೆ.

ಜಮಾಲ್ ಅವರ ಕಾರಿನಲ್ಲೇ ಹೆರಿಗೆಯಾಗಿರುವ ಮಹಿಳೆ ಮತ್ತು ಮಗು ಇಬ್ಬರೂ ಆರೋಗ್ಯವಂತರಾಗಿದ್ದು ಬೆಳ್ತಂಗಡಿ ಸಾರ್ವಜನಿಕ ಸಮುದಾಯ ಆಸ್ಪತ್ರೆಯಲ್ಲಿ ಆರೈಕೆಯಲ್ಲಿದ್ದಾರೆ.

ಸುನ್ನತ್‌ಕೆರೆ ನಿವಾಸಿ ಇಕ್ಬಾಲ್ ಎಂಬವರ ಪತ್ನಿ ಸಫಿಯಾ ಅಳದಂಗಡಿ ಅವರು ಹೆರಿಗೆ ನೋವಿನೊಂದಿಗೆ ರಸ್ತೆ ಬದಿ ‌ನಿಂತುಕೊಂಡಿದ್ದರು. ಇದನ್ನು ಗಮನಿಸಿದ ಜಮಾಲ್ ತನ್ನ ಕಾರನ್ನು ತಿರುಗಿಸಿ ಬಂದು ವಿಚಾರಿಸಿದ್ದಾರೆ. ದಂಪತಿಯ ಸಂಕಷ್ಟ ಅರಿತ ಅವರು ತನ್ನ ಪ್ರಯಾಣ ಮೊಟಕುಗೊಳಿಸಿ ತಕ್ಷಣ ಮಹಿಳೆಯನ್ನು ತನ್ನ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು.

ಇದನ್ನೂ ಓದಿ:‘ನೀನಾದೆ ನಾ’ ಮುಗಿದ ಬೆನ್ನಲ್ಲೇ ಹೊಸ ಧಾರಾವಾಹಿ ಲಗ್ಗೆ; ಹಲವು ವರ್ಷಗಳ ಬಳಿಕ ಕಿರುತೆರೆಯತ್ತ ಹಿರಿಯ ನಟ! 

ಆದರೆ ಅದಾಗಲೇ ಸಫಿಯಾ ಅವರಿಗೆ ಕಾರಿನಲ್ಲೇ ಹೆರಿಗೆಯಾಗಿದೆ. ಪ್ರಸವದ ವೇಳೆ ಪತಿ ಇಕ್ಬಾಲ್ ಮತ್ತು ಜಮಾಲ್ ಮಹಿಳೆಗೆ ತುರ್ತು ಸ್ಪಂದಿಸಿದ್ದು ಬಳಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ಇದೀಗ ಜಮಾಲ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page