Connect with us

LATEST NEWS

ಬೆಳ್ತಂಗಡಿ: ಸುಮಂತ್‌ ನಿಗೂಢ ಸಾವು; ಕೊಲೆ ಪ್ರಕರಣ ದಾಖಲಿಸಿದ ಪೊಲೀಸರು

Published

on

ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಪಂಚಾಯತಿನ ಒಡಿಲ್ನಾಳ ಗ್ರಾಮದ ಸಂಬೋಳ್ಯದ ಬಾಲಕ 9 ನೇ ತರಗತಿಯ ವಿದ್ಯಾರ್ಥಿ 15 ವರ್ಷ ಪ್ರಾಯದ ಸುಮಂತ್‌ ಕೆರೆಯಲ್ಲಿ ನಿಗೂಢವಾಗಿ ಶವವಾಗಿ ಪತ್ತೆಯಾದ ಘಟನೆ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕೆಲವೊಂದು ಮಾಹಿತಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.


ಬಾಲಕನ ಸಾವಿಗೆ ಕಾರಣ ನಿಗೂಢವಾಗಿದ್ದು, ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದೆ. ಇದೀಗ ಅಸಹಜ ಸಾವಿನ ಪ್ರಕರಣದಿಂದ ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

ಮೃತ ದೇಹದ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಪ್ರಕಾರ ಸುಮಂತ್‌ ಕೆರೆಯಲ್ಲಿ ಮುಳುಗುವ ಸಂದರ್ಭದಲ್ಲಿ ಜೀವಂತನಾಗಿದ್ದನು ಮತ್ತು ಕ್ರಮೇಣ ನೀರಿನಲ್ಲಿ ಮುಳುಗಿ ಸಾವು ಸಂಭವಿಸಿದೆ. ತಲೆಯ ಮೇಲಿನ ಗಾಯಗಳು ಮಂದ ಬಲದ ಪರಿಣಾಮ ಉಂಟಾದ ಗಾಯಗಳಾಗಿವೆ ಮತ್ತು ಯಾವುದೇ ಚೂಪಾದ ಆಯುಧಗಳಿಂದ ಆಗಿರುವ ಗಾಯಗಳು ಅಲ್ಲ ಎಂದು ತಿಳಿದು ಬಂದಿರುತ್ತದೆ.

ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬೆಳ್ತಂಗಡಿ: ದೇವಸ್ಥಾನಕ್ಕೆ ತೆರಳಿದ್ದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ; ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿವೈಎಸ್‌ಪಿ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟನೆ ತಿಳಿಸಿದೆ. ಹೆಚ್ಚಿನ ತನಿಖೆಗಾಗಿ ಬಾವಿಯ ನೀರನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗುತ್ತಿದೆ. ಕಾಡಿನ ಸುತ್ತ ಮುತ್ತ ಸುಳಿವಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

DAKSHINA KANNADA

ಬಜೆಟ್ ನಲ್ಲಿ ದ.ಕ ಜಿಲ್ಲೆ ಸಹಿತ ಕರಾವಳಿ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ, ಇದು ಅಮಲುಪ್ರೇರಿತ ಸರ್ಕಾರ-ಸತೀಶ್ ಕುಂಪಲ

Published

on

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಪ್ರದೇಶವನ್ನು ಕಡೆಗಣಿಸಿದ್ದಾರೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಾತ್ರ ಗಮನ ಹರಿಸಿದ್ದಾರೆಯೇ ಹೊರತು ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಲ್ಲ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.

ಶನಿವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ಕರಾವಳಿಯ ಜನರು ಈ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನು ಹೊಂದಿದ್ದರು. ಈ ಭಾಗದ ಶಾಸಕರು ವಿಧಾನ ಮಂಡಲದ ಅಧಿವೇಶನಗಳಲ್ಲಿ ಹಲವು ಪ್ರಸ್ತಾಪಗಳನ್ನು ಮುಂದಿಟ್ಟಿದ್ದರು. ಆದರೆ ಯಾವುದಕ್ಕೂ ಅನುದಾನ ಒದಗಿಸಿಲ್ಲ ಎಂದರು. ಅಲ್ಪ ಸಂಖ್ಯಾತ ಸಮುದಾಯಗಳನ್ನು ಅದರಲ್ಲೂ ಮುಖ್ಯವಾಗಿ ಮುಸ್ಲಿಮರನ್ನು ಓಲೈಸುವ ವೋಟ್ ಬ್ಯಾಂಕ್ ಬಜೆಟ್ ಇದಾಗಿದೆ.

ಸಾಲ ಮಾಡುವ ಕೆಲಸವನ್ನು ಮಾತ್ರ ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದ ಸಾಲದ ಮೊತ್ತ 5 ಲಕ್ಷ ಕೋಟಿ ರೂಪಾಯಿಗೆ ಏರಿದೆ.  2013 ರಲ್ಲಿ ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಾಲದ ಮೊತ್ತ 1.23 ಲಕ್ಷ ಕೋಟಿ ರೂಪಾಯಿ ಇತ್ತು. ಅಂದಿನಿಂದ ಸಾಲವನ್ನೇ ಮಾಡುತ್ತಾ ಬಂದಿದ್ದಾರೆ ಎಂದು ಟೀಕಿಸಿದರು.  ಹಾಲು ಉತ್ಪಾದಕರ ಪ್ರೋತ್ಸಾಹ ಧನ 9 ತಿಂಗಳುಗಳಿಂದ ಪಾವತಿಯಾಗಿಲ್ಲ.

ಸುಮಾರು 900 ಕೋಟಿ ರೂ. ಬಾಕಿ ಇದೆ. ವಿವಿಧ ನಿಗಮಗಳಿಗೆ ಅನುದಾನ ಕಡಿಮೆ ಮಾಡಿದೆ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರ ನಿಗಮಗಳಿಗೆ ಅನುದಾನ ಕಡಿಮೆ ಮಾಡುವ ಮೂಲಕ ಅನ್ಯಾಯ ಎಸಗಿದೆ. ಇದೊಂದು ಅಮಲು ಪ್ರೇರಿತ ಸರಕಾರ. ಕಂಬಳ ಕ್ರೀಡೆಗೆ ಅನುದಾನ ಒದಗಿಸಿಲ್ಲ. ದ.ಕ. ಉಡುಪಿ ಜಿಲ್ಲೆಯಲ್ಲಿ ಐಟಿ ಉದ್ಯಮಕ್ಕೆ ಅನುದಾನ ನೀಡಿಲ್ಲ. ಮೀನುಗಾರಿಕೆಗೆ ಯಾವುದೇ ಹೊಸ ಯೋಜನೆ ಇಲ್ಲ. ಕಡಲ ಕೊರೆತ ಸಮಸ್ಯೆಗೆ ಪರಿಹಾರ ಇಲ್ಲ. ಅಭಿವೃದ್ಧಿಗೆ ಮಾರಕವಾದ ಬಜೆಟ್ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕೊಟ್ಟಾರಿ , ಬಿಜೆಪಿ ಮುಖಂಡ ನಿತಿನ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

 

Continue Reading

DAKSHINA KANNADA

ಬಿಜೆಪಿ ಮಾಡಿದ ಕೆಲಸಗಳಿಗೆ ಕಾಂಗ್ರೆಸ್‌ ಕ್ರೆಡಿಟ್ ಪಡೆದುಕೊಳ್ತಿರೋದು ನಾಚಿಕೇಡು-ಶಾಸಕ ಕಾಮತ್ ಗರಂ

Published

on

ಮಂಗಳೂರು:  ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಸಮಸ್ಯೆ ಇರುವ ಕಡೆಗಳಲ್ಲಿ ಅನುದಾನ ಮಂಜೂರು ಆಗಿದೆ ಎಂದು 28 ಜಾಗಗಳಿಗೆ ತೆರಳಿ ಕಾಮಗಾರಿಗೆ ಅನುದಾನ ನೀಡಲಾಗಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ನಾಯಕರು ದಿನನಿತ್ಯ ಪತ್ರಿಕೆಗಳಲ್ಲಿ ಪುಕ್ಕಟೆ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿರಂತರವಾಗಿ ಒತ್ತಡ ಹೇರಿದ ಫಲವಾಗಿ ಪ್ರಕೃತಿ ವಿಕೋಪದಡಿ ಹಲವು ಕಡೆಗಳಲ್ಲಿ ಕಾಮಗಾರಿ ಮಾಡಲು ಅನುದಾನ ಮಂಜೂರು ಮಾಡಲಾಗಿದೆ. ಆದರೆ ಒಂದು ರೂಪಾಯಿ ಕೆಲಸ ಮಾಡದೆ ಅದರ ಕ್ರೆಡಿಟ್‌ ಅನ್ನು ಕಾಂಗ್ರೆಸ್ಸಿಗರು ಪಡೆಯುತ್ತಿದ್ದಾರೆ ಎಂದು ದೂರಿದರು.

ಸರಕಾರಕ್ಕೆ ಅದರದ್ದೇ ಆದ ನಿಯಮಗಳಿವೆ. ಅದನ್ನು ಮೀರಿ ಯಾರೂ ಹೋಗಬಾರದು. ಆದರೆ ವೇದವ್ಯಾಸ್ ಕಾಮತ್‌ ಪ್ರಯತ್ನ ಪಟ್ಟು ಈ ಬಗ್ಗೆ ಅಧಿವೇಶನದಲ್ಲಿ ಮಾತನಾಡಿ ಕಷ್ಟಪಟ್ಟು  ತಂದಿರುವ ಅನುದಾನದ ವಿಚಾರಗಳನ್ನು ತಮ್ಮದೆಂದು ಬಿಂಬಿಸುವುದನ್ನು ಖಂಡಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ತರಲಾಗದೆ ಹತಾಶರಾಗಿ ಕಾಂಗ್ರೆಸ್ ನಾಯಕರು  ಇದು ನಾನೇ ತಂದ್ದು ಎಂದು ಫೋಟೋ ಕ್ಲಿಕ್ಕಿಸಿ ಪತ್ರಿಕೆಗೆ ನೀಡೋದು ಸಣ್ಣತನ. ಕಾಂಗ್ರೆಸ್ಸಿಗರ  ಪ್ರಚಾರದ ಭರಾಟೆಯಲ್ಲಿ ನಿಜವಾಗಿಯೂ ಅನ್ಯಾಯವಾಗುತ್ತಿರುವ ಆಶಾ ಕಾರ್ಯಕರ್ತರಿಗೆ ಇವರೇನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ವೇದವ್ಯಾಸ್‌ ಆಶಾ ಕಾರ್ಯಕರ್ತರನ್ನು ಬೀದಿಪಾಲು ಮಾಡುವ ಕೆಲಸ ನಿಲ್ಲಿಸಿ. ಇದನ್ನು ಬಿಜೆಪಿ ಪಕ್ಷ ಒಪ್ಪಲ್ಲ.  ಮುಂದೆ ನಮ್ಮ ಸರ್ಕಾರ ಕೂಡಾ ಬರುತ್ತದೆ. ರಾಜ್ಯಸರ್ಕಾರದ ಆರೋಗ್ಯ ಇಲಾಖೆಯಿಂದ ಅನುದಾನ ತರುವ ಕೆಲಸ ನಾವು ಮಾಡುತ್ತೇವೆ. ಕೇಂದ್ರ ಸರಕಾರದ ಜೊತೆ ಮಾತನಾಡಿ ಅವರ ನೋವಿಗೆ ಬಿಜೆಪಿ ಸ್ಪಂದಿಸುವುದಾಗಿ ನುಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

Continue Reading

LATEST NEWS

ದೇವಸ್ಥಾನದ ಸ್ನಾನಗೃಹದಲ್ಲಿ ಇಬ್ಬರು ಯುವತಿಯರ ಶವ ಪತ್ತೆ

Published

on

ಗಾಂಧೀನಗರ: ದೇವಾಲಯದ ಆವರಣದಲ್ಲಿ ಇಬ್ಬರು ಯುವತಿಯರ ಮೃತದೇಹಗಳು ಪತ್ತೆಯಾಗಿರುವ ಘಟನೆ ಗುಜರಾತ್‌ ಗಾಂಧೀನಗರದ ಸೂರತ್‌ನ ಸ್ವಾಮಿನಾರಾಯಣ ದೇವಾಲಯದಲ್ಲಿ ನಡೆದಿದೆ.


ದೇವಾಲಯದ ಆವರಣದಲ್ಲಿರುವ ಸ್ನಾನಗೃಹದಲ್ಲಿ ಇಬ್ಬರು ಯುವತಿಯರು ಶವವಾಗಿ ಪತ್ತೆಯಾಗಿದ್ದಾರೆ. ವಿಷಕಾರಿ ಔಷಧಗಳ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಶುಕ್ರವಾರ ಬೆಳಗ್ಗೆ ಇಬ್ಬರು ಹುಡುಗಿಯರು ಮನೆಯಿಂದ ಕಾಲೇಜಿಗೆ ಹೊರಟಿದ್ದು, ಆದರೆ ಮಧ್ಯಾಹ್ನದ ವೇಳೆಗೆ ಹಿಂತಿರುಗಲಿಲ್ಲ. ಬಳಿಕ ಮಾಹಿತಿ ತಿಳಿದ ಪೊಲೀಸರು ಹುಡುಕಾಟ ಆರಂಭಿಸಿದ್ದು, ಫೋನ್‌ಗಳ ಲೊಕೇಷನ್‌ ಆಧರಿಸಿ ದೇವಾಲಯ ಸಂಕೀರ್ಣದಲ್ಲಿ ಕೊನೆಯದಾಗಿ ಇದ್ದ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದರು. ಶನಿವಾರವೂ ಮುಂದುವರಿದ ಹುಡುಕಾಟದಲ್ಲಿ ಅವರ ಸ್ಕೂಟರ್‌ಗಳು ನಿಂತಿರುವುದು ಕಂಡುಬಂದಿದೆ.

ದೇವಾಲಯದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಹುಡುಗಿಯರು ಸ್ನಾನಗೃಹದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ, ಲಾಕ್‌ ಆಗಿದ್ದ ಸ್ನಾನಗೃಹದ ಬಾಗಿಲನ್ನು ಒಡೆದು ಒಳನುಗ್ಗಿದಾಗ ಹುಡುಗಿಯರು ಸತ್ತಿರುವುದು ಕಂಡುಬಂದಿದೆ. ಅವರ ದೇಹದ ಬಳಿ ಬಿದ್ದಿದ್ದ ಒಂದು ಸಿರಿಂಜ್ ಮತ್ತು ಮೂರು ಬಾಟಲಿ ವಿಷಕಾರಿ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಪ್ರವಾಸಿ ತಾಣ ಜೇನುಕಲ್ಲು ಗುಡ್ಡದಲ್ಲಿ ದುರಂತ: ಪ್ರಪಾತಕ್ಕೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ

ಯುವತಿಯರ ಸಾವಿಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page