Connect with us

bangalore

ಮದುವೆ ಮನೆ ಬಫೆ ಆ್ಯಪ್‌ ಅಭಿವೃದ್ಧಿಪಡಿಸಿದ ಬೆಂಗಳೂರು ಯುವಕನಿಗೆ ಕೊಲೆ ಬೆದರಿಕೆ!

Published

on

ಬೆಂಗಳೂರು: ಬೆಂಗಳೂರಿನ ಟೆಕ್ಕಿಯೊಬ್ಬರು ತಮಾಷೆಗಾಗಿ ರೂಪಿಸಿದ AI ಆಧಾರಿತ ಬಫೆ ಆ್ಯಪ್ ಆನ್‌ಲೈನ್‌ನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಅವರಿಗೆ ಕೊಲೆ ಬೆದರಿಕೆಗಳು ಬಂದಿರುವ ಘಟನೆ ವರದಿಯಾಗಿದೆ.


ಬೆಂಗಳೂರಿನ ಪಂಕಜ್ ಎಂಬ ಟೆಕ್ಕಿ, ತಮಾಷೆಯಾಗಿ ಭಾರತೀಯ ವಿವಾಹಗಳ ಸಂಭ್ರಮಗಳಲ್ಲಿ ಬೃಹತ್ ಬಫೆ ವ್ಯವಸ್ಥೆ ನಿರ್ಹಿಸಿ, ಯಾವ ಆಹಾರವನ್ನು ಸೇವಿಸಬೇಕು ಮತ್ತು ಯಾವುದನ್ನು ಬಿಡಬೇಕು ಎಂದು ನಿರ್ಧರಿಸಲು ಸಹಾಯ ಮಾಡುವ ಬಫೆಟ್‌ ಎಂಬ ಕೃತಕ ಬುದ್ಧಿಮತ್ತೆ ಆಧಾರಿತ ಉಪಕರಣವನ್ನು ಅಭಿವೃದ್ಧಿಪಡಿಸಿದ್ದರು.

ಈ ಎಐ ಮಾದರಿಗಳನ್ನು ತರಬೇತುಗೊಳಿಸಲು ಹಾಗೂ ಬಳಸಲು ಹೆಚ್ಚಿನ ವಿದ್ಯುತ್ ಮತ್ತು ನೀರಿನ ಅಗತ್ಯವಿರುತ್ತದೆ. ಇಂತಹ ಉಪಯೋಗವಿಲ್ಲದ ಕೆಲಸಗಳಿಗೆ ಎಐ ಬಳಸುವ ಮೂಲಕ ಪರಿಸರವನ್ನು ಹಾನಿಮಾಡುತ್ತಿದ್ದೀರಿ ಎಂದು ಕೆಲವರು ಆರೋಪಿದ್ದಾರೆ. ಇನ್ನು ಕೆಲವರು AI ತಂತ್ರಜ್ಞಾನವನ್ನು ಇಂತಹ ಅತಿ ಸಣ್ಣ ಕೆಲಸಕ್ಕೆ ವ್ಯರ್ಥ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ

ತನಗೆ ಮತ್ತು ತನ್ನ ಕುಟುಂಬಕ್ಕೆ ಹತ್ತಾರು ಜನರು ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಕಜ್ X ಪೇಜ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. “ಕೇವಲ ವಾರಾಂತ್ಯದ ಒಂದು ಸಣ್ಣ ಪ್ರಾಜೆಕ್ಟ್‌ಗಾಗಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

bangalore

ಕ್ಯಾಬ್‌ನಲ್ಲಿ ಗುಟ್ಟು ಬಿಟ್ಟುಕೊಟ್ಟ ಕುಟುಂಬ; ರಾತ್ರಿ ಮನೆ ದೋಚಿದ ಡ್ರೈವರ್!

Published

on

ಬೆಂಗಳೂರು: ರಂಜಾನ್ ಹಬ್ಬದ ಶಾಪಿಂಗ್‌ಗೆ ತೆರಳಿದ ಒಂದು ಕುಟುಂಬಕ್ಕೆ ದಿನನಿತ್ಯದ ಕ್ಯಾಬ್ ಪ್ರಯಾಣವೇ ದೊಡ್ಡ ನಷ್ಟಕ್ಕೆ ಕಾರಣವಾಗಿದ್ದು, ಕ್ಯಾಬ್ ಚಾಲಕನೇ ಪ್ರಯಾಣದ ವೇಳೆ ಕುಟುಂಬದ ಮಧ್ಯೆ ನಡೆದ ಮಾತುಕತೆಯನ್ನು ದುರುಪಯೋಗಪಡಿಸಿಕೊಂಡು ಮನೆ ಕಳ್ಳತನ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಅಬ್ದುಲ್ ರೆಹಮಾನ್(40) ಎಂಬಾತನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.


ಕುಟುಂಬವೊಂದು ರಂಜಾನ್ ಹಬ್ಬದ ಹಿನ್ನೆಲೆ ಫೆಬ್ರವರಿ 11ರಂದು ಖರೀದಿಗಾಗಿ ಕುಟುಂಬ ಸಮೇತ ಮುಂಬೈಗೆ ತೆರಳಲು ಅವರು ಮನೆಗೆ ಬೀಗ ಹಾಕಿ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ, ಮನೆಯಲ್ಲಿ ಯಾರೂ ಇಲ್ಲದಿರುವ ಬಗ್ಗೆ ಮತ್ತು ತಮ್ಮ ಬಳಿ ಇರುವ ಬೆಲೆಬಾಳುವ ವಸ್ತುಗಳ ಬಗ್ಗೆ ಚಾಲಕನ ಮುಂದೆಯೇ ಚರ್ಚಿಸಿದ್ದಾರೆ. ಇದನ್ನು ಗಮನಿಸಿದ ಕ್ಯಾಬ್ ಡ್ರೈವರ್, ಆ ಕುಟುಂಬ ಅಂದು ರಾತ್ರಿ ಮನೆಯಲ್ಲಿ ಇರುವುದಿಲ್ಲ ಎಂಬ ವಿಷಯ ತಿಳಿದು ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾನೆ.

ಅದೇ ರಾತ್ರಿ ಕುಟುಂಬದ ಸದಸ್ಯರು ಮನೆಯಲ್ಲಿ ಇಲ್ಲದ ಸಮಯ ನೋಡಿ, ಡ್ರೈವರ್ ಮನೆಯ ಬೀಗ ಮುರಿದು ನಗದು ಮತ್ತು ಸುಮಾರು 25 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿಯಿಂದ 180 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಕದ್ದ ಚಿನ್ನದ ಒಂದು ಭಾಗವನ್ನು ಶಿವಾಜಿನಗರ ಮತ್ತು ಕೆ.ಜಿ.ಹಳ್ಳಿ ಪ್ರದೇಶಗಳಲ್ಲಿನ ಅಂಗಡಿಗಳಲ್ಲಿ ಅಡವಿಟ್ಟಿದ್ದರೆ, ಉಳಿದ ಭಾಗವನ್ನು ತಮಿಳುನಾಡಿನ ವೆಲ್ಲೂರಿನ ಪರಿಚಯಸ್ಥರಿಗೆ ಮಾರಾಟ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬೀಡಿಗಾಗಿ ಜೈಲಿನಲ್ಲಿ ದಾಂ*ಧಲೆ ನಡೆಸಿದ ವಿಚಾರಣಾಧೀನ ಖೈದಿಗಳು

ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಅಬ್ದುಲ್ ರೆಹಮಾನ್ ಈ ಹಿಂದೆ ಕೂಡ ಮೂರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

Continue Reading

bangalore

ಅಕ್ರಮ ಸಂಬಂಧ ಮುಚ್ಚಿಡಲು ಗೆಳತಿಯ ಕೊಲೆ ಮಾಡಿ ಶವ ಸುಟ್ಟ ವ್ಯಕ್ತಿ ಬಂಧನ

Published

on

ಬೆಂಗಳೂರು: ತನ್ನ ಪತ್ನಿಯಿಂದ ದೂರವಾಗುವ ಭಯದಲ್ಲಿ ಮಹಿಳೆಯನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಿ, ಬಳಿಕ ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರಾಜಕಾಲುವೆಗೆ ಎಸೆದಿದ್ದ ಭಯಾನಕ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.


ರಾಯಚೂರು ಮೂಲದ, ಮೌನೀಶ್ ಮೈತ್ರಿ ಬಂಧಿತ ವ್ಯಕ್ತಿ. ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಆರೋಪಿಯ ಪತ್ನಿ ಹೆರಿಗೆಗಾಗಿ ತನ್ನ ತವರು ಮನೆಗೆ ತೆರಳಿದ್ದ ಸಂದರ್ಭದಲ್ಲಿ, ಈತ ಬೆಂಗಳೂರಿನಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು.

ಹೆರಿಗೆಯ ನಂತರ ಪತ್ನಿ ಬೆಂಗಳೂರಿಗೆ ಮರಳುವ ಸಮಯ ಹತ್ತಿರವಾಗುತ್ತಿದ್ದಂತೆ, ತನ್ನ ಅಕ್ರಮ ಸಂಬಂಧದ ವಿಷಯ ಪತ್ನಿಗೆ ತಿಳಿಯಬಹುದೆಂಬ ಭಯದಿಂದ ಆತ ತನ್ನ ಗೆಳತಿಯನ್ನೇ ಕೊಲೆ ಮಾಡಿದ್ದಾನೆ.

ಗೆಳತಿಯನ್ನು ಕೊಲೆ ಮಾಡಿದ ನಂತರ ಕೂಡಲೇ ಶವವನ್ನು ಸಾಗಿಸದೆ, ಸುಮಾರು ಎರಡು ದಿನಗಳ ಕಾಲ ತನ್ನ ಮನೆಯಲ್ಲೇ ಇರಿಸಿಕೊಂಡಿದ್ದು, ಬೆಡ್‌ಶೀಟ್ ಹಾಗೂ ಪ್ಲಾಸ್ಟಿಕ್ ಟಾರ್ಪಲ್‌ನಲ್ಲಿ ಶವವನ್ನು ಸುತ್ತಿ ಹಗ್ಗದಿಂದ ಬಿಗಿದು ದ್ವಿಚಕ್ರ ವಾಹನದಲ್ಲಿ ತೆಗೆದುಕೊಂಡು ಹೋಗಿ ದೇವನಹಳ್ಳಿ ಸಮೀಪದ ರಾಜಕಾಲುವೆಗೆ ಶವವನ್ನು ಎಸೆದು, ಸಾಕ್ಷ್ಯ ನಾಶ ಮಾಡಲು ಅದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಿದ್ದಾನೆ.

ಇದನ್ನೂ ಓದಿ: ನೇತ್ರಾವತಿ ನದಿದಡದಲ್ಲಿ ಪತ್ತೆಯಾಗಿದ್ದ ಆಧಾರ್‌ಕಾರ್ಡ್‌ಗಳು; ಫರಂಗಿಪೇಟೆಯ ಅಂಚೆ ಇಲಾಖೆ ವಿರುದ್ದ ಪ್ರಕರಣ ದಾಖಲು

ರಾಜಕಾಲುವೆಯಲ್ಲಿ ಸುಟ್ಟ ಸ್ಥಿತಿಯಲ್ಲಿದ್ದ ಅಪರಿಚಿತ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದರು. ಸಿಸಿಟಿವಿ ದರಶ್ಯಗಳು ಮತ್ತು ಇತರೆ ಮಾಹಿತಿಗಳ ಆದಾರದ ಮೇಲೆ ಆರೋಪಿ ಮೌನೀಶ್ ಮೈತ್ರಿಯನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ.

Continue Reading

bangalore

ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಬುಜ್ಜಿ ವಿರುದ್ಧ ಎಫ್‌ಐಆರ್ ದಾಖಲು

Published

on

ಬೆಂಗಳೂರು: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಬೆದರಿಕೆ ಮತ್ತು ನಿಂದನೆ ಆರೋಪದಡಿ ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಎಂಬುವವರು ನೀಡಿದ ದೂರಿನ ಅನ್ವಯ, ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 351(2) ಮತ್ತು 352 ಅಡಿ ರಜತ್ (A1) ಮತ್ತು ಕಿರಣ್ (A2) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಗ್ ಬಾಸ್ ಮಾಜಿ ಸ್ಪರ್ಧಿ ‘ಡಾಗ್’ ಸತೀಶ್ ಜೊತೆಗಿನ ಸ್ನೇಹವನ್ನು ಬಿಡಬೇಕು ಎಂದು ರಜತ್ ಫೋನ್ ಕರೆ ಮತ್ತು ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ದೂರುದಾರರ ಕಾರಿನ ಫೋಟೋ ಕಳಿಸಿ, ‘ಇದು ರಜತ್ ಬುಜ್ಜಿ… ವಾಪಸ್ ಕಾಲ್ ಮಾಡ್ತೀರಾ ಇಲ್ಲ ನಾವೇ ಒಳಗೆ ನುಗ್ಗಬೇಕಾ?” ಎಂದು ಸಂದೇಶ ಕಳಿಸಿರುವುದು ಮತ್ತು ಕಾನ್ಫರೆನ್ಸ್ ಕಾಲ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ದೂರಿನಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಮದ್ವೆ ಬೆನ್ನಲ್ಲೇ ಈ ಫೋಟೋ ಪೋಸ್ಟ್ ಮಾಡಿದ ನಟ ರಕ್ಷಿತ್ ಶೆಟ್ಟಿ..!

ಸದ್ಯ ಕರೆಯಲ್ಲಿ ಮಾತನಾಡಿರೋದು ರಜತ್ ಅಥವಾ ಬೇರೆ ವ್ಯಕ್ತಿ ಎಂಬುವುದರ ಪರಿಶೀಲನೆ ನಡೆಸಲಾಗುತ್ತಿದೆ. ದೂರಿನ ಆಧಾರದ ಮೇಲೆ ರಜತ್ ಮತ್ತು ಕಿರಣ್ ಮೇಲೆ FIR ದಾಖಲು ಮಾಡಿಕೊಂಡಿರುವ ಕೆ.ಆರ್.ಪುರಂ ಪೊಲೀಸರು ಘಟನೆ ಸಂಬಂಧ ವಿಚಾರಣೆಗೆ ಬರುವಂತೆ ರಜತ್ ಹಾಗೂ ಕಿರಣ್ ಎಂಬುವವರಿಗೆ ನೋಟಿಸ್ ನೀಡಿ, ವಿಚಾರಣೆ ಕರೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page