Connect with us

LATEST NEWS

ಬೆಂಗಳೂರು BMTC ಬಸ್ ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​; ಡ್ರೈವರ್​ ಕೈವಾಡದ ಶಂಕೆ- ತನಿಖೆ ಚುರುಕು..!

Published

on

ಎರಡು ದಿನಗಳ ಹಿಂದೆ ನಿಂತಿದ್ದ ಬಿಎಂಟಿಸಿ ಬಸ್​​ಗೆ ಬೆಂಕಿ ತಗುಲಿ ಕಂಡಕ್ಟರ್ ಮುತ್ತಪ್ಪ ಸಜೀವ ದಹನ ಆಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ಬೆಂಗಳೂರು: ಎರಡು ದಿನಗಳ ಹಿಂದೆ ನಿಂತಿದ್ದ ಬಿಎಂಟಿಸಿ ಬಸ್​​ಗೆ ಬೆಂಕಿ ತಗುಲಿ ಕಂಡಕ್ಟರ್ ಮುತ್ತಪ್ಪ ಸಜೀವ ದಹನ ಆಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ನಿಂತಿದ್ದ ಬಸ್​​ನಲ್ಲಿ ಶಾರ್ಟ್​​ ಸಕ್ಯೂಟ್  ಹೇಗಾಯಿತು ಅನ್ನೋದೆ ಅನುಮಾನಕ್ಕೆ ಕಾರಣವಾಗಿದೆ. ಶಾರ್ಟ್ ಸರ್ಕ್ಯೂಟ್​​​ನಿಂದ ಅವಘಡ ಸಂಭವಿಸಿದೆಯೋ ಇಲ್ಲವೋ ಅನ್ನೋ ಅನುಮಾನ ಮೂಡಿಸಿದೆ. ಬಸ್ ರಾತ್ರಿ 10:30ಕ್ಕೆ ನಿಲ್ದಾಣಕ್ಕೆ ಬಂದಿತ್ತು, ಇಂಜಿನ್ ಆಫ್​ ಆಗಿತ್ತು.

ಆದರೆ ಮುಂಜಾನೆ 4:26ರ ಸಮಯಕ್ಕೆ ಕೋಲ್ಡ್ ಆಗಿದ್ದ ಇಂಜಿನ್ ಹೇಗೆ ಶಾರ್ಟ್ ಸರ್ಕ್ಯೂಟ್ ಆಯ್ತು ಅನ್ನೋದು ಅನುಮಾನಕ್ಕೆ ಕಾರಣವಾಗಿದೆ.

ಪ್ರಕರಣದಲ್ಲಿ ಬಸ್ ಡ್ರೈವರ್  ಪ್ರಕಾಶ್ ಕೈವಾಡದ ಬಗ್ಗೆ ಅನುಮಾನ ಮೂಡಿದ್ದು, ಈ ನಿಟ್ಟಿನಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು ಎಫ್​​ಎಸ್​ಎಲ್​ ರಿಪೋರ್ಟ್ ಜೊತೆ ತಜ್ಞರ ವರದಿಯನ್ನು ಪೊಲೀಸರು ಕೇಳಿದ್ದಾರೆ.

ಅವಘಡ ನಡೆದ ದಿನ ಕೊಠಡಿಯಲ್ಲಿ ಮಲಗಿದ್ದ ಡ್ರೈವರ್ ಪ್ರಕಾಶ್ ಮುಂಜಾನೆ 3 ಗಂಟೆ ಹಾಗೂ 4 ಗಂಟೆಗೊಮ್ಮೆ ಎದ್ದಿರೋದು ಬಸ್ ನಿಲ್ದಾಣದಲ್ಲಿರೋ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಗೊತ್ತಾಗಿದೆ.

ಆದರೆ ಮೂತ್ರ ವಿಸರ್ಜನೆಗೆ ಎದ್ದಿದ್ದಾಗಿ ಪ್ರಕಾಶ್​ ಹೇಳಿದ್ದಾನೆ. ಬೆಳಗ್ಗೆ 4 ಗಂಟೆಗೆ ಪ್ರಕಾಶ್ ಎದ್ದಿದ್ದು, 4:26ಕ್ಕೆ ಅಗ್ನಿ ಅವಘಡ ನಡೆದಿದೆ. ಹೀಗಾಗಿ ಘಟನೆ ನಡೆದ ಬಸನ್ನು ಎಫ್​​ಎಸ್​​ಎಲ್​ ಅಧಿಕಾರಿಗಳು ಪರಿಶೀಲಿಸಿದ್ದು, ಕೆಲ ಸ್ಯಾಂಪಲ್‌ ಕಲೆಕ್ಟ್ ಮಾಡಿದ್ದಾರೆ.

ಸದ್ಯ ಪೊಲೀಸರು ತಜ್ಞರ ವರದಿ ಕೇಳಿದ್ದು, ವರದಿ ಬಂದ ಬಳಿಕ ಸತ್ಯಾಸತ್ಯಾತೆ ತಿಳಿಯಲಿದೆ. ಸದ್ಯ ಡ್ರೈವರ್ ಪ್ರಕಾಶ್ ಮೇಲೆ ಪೊಲೀಸರಿಗೆ ಅನುಮಾನ ಇದೆ.

ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಧ್ಯೆ ಮುತ್ತಪ್ಪಗೆ ಏನಾದರೂ ಮನಸ್ತಾಪ ಇತ್ತ ಎನ್ನುವ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಸದ್ಯದ ಮಾಹಿತಿ ಕಳೆದ ತಿಂಗಳು ಬಸ್ ಚೆಕ್ ಮಾಡಲಾಗಿತ್ತು. ಬಸ್ಸಿನಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ ಎನ್ನಲಾಗಿದೆ.

ಆದರೂ ಬೆಳಗ್ಗಿನ ಜಾವ ಬಸ್​ ನಿಂತಿದ್ದಾಗ ಹೊತ್ತಿಕೊಂಡಿದ್ದು ಹೇಗೆ? ಅದೇ ಸಮಯಕ್ಕೆ ಡ್ರೈವರ್​ ಎದ್ದು ಹೊರ ಹೋಗಿದ್ದರ ಹಿಂದೆ ಏನಾದರೂ ಮಸಲತ್ತು ಇದ್ಯಾ ಅನ್ನೋ ಬಗ್ಗೆ ತನಿಖೆ ನಡೆಯುತ್ತಿದೆ.

LATEST NEWS

ಜನ್ಮದಿನದ ಪಾರ್ಟಿಗೆ ಕರೆಸಿ ಯುವಕನ ಹ*ತ್ಯೆ

Published

on

ಮಂಗಳೂರು/ರಾಯಚೂರು :  ಜನ್ಮದಿನದ ಪಾರ್ಟಿಗೆ ಕರೆಸಿ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಯುವಕನ ಕೊ*ಲೆ ಮಾಡಿರುವ ಘಟನೆ ರಾಯಚೂರಿನ ಮಾವಿನಕೆರೆ ದಂಡೆಯ ಮೇಲೆ  ನಡೆದಿದೆ.

ಜಹೀರಾಬಾದ್ ಬಡಾವಣೆ ನಿವಾಸಿ, 22 ವರ್ಷದ ವಿಶಾಲ್ ಕೊ*ಲೆಯಾದ ಯುವಕ. 19 ವರ್ಷದ ರಾಜು ಅಲಿಯಾಸ್ ಯೇಸು ಮತ್ತು ಬಸವರಾಜ  ಕೊ*ಲೆಗೈದ ಆರೋಪಿಗಳು.

ಇದನ್ನೂ ಓದಿ : ವಸತಿ ಕಟ್ಟಡದ ಮೇಲೆ ಫೈ*ರಿಂಗ್ ; ಬಾಲಿವುಡ್ ನಟನ ಬಂಧನ

ಬಸವರಾಜ ಜನ್ಮದಿನದ ಪಾರ್ಟಿ ಕೊಡಿಸುವುದಾಗಿ ವಿಶಾಲ್ ನನ್ನು ಕರೆಸಿಕೊಂಡಿದ್ದ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ಬಳಿಕ ಕೊ*ಲೆಯಲ್ಲಿ ಅಂತ್ಯ ಕಂಡಿದೆ. ಕೊ*ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Continue Reading

bangalore

ಕೆಲಸಕ್ಕೆ ಗೈರಾಗಿದ್ದಕ್ಕೆ ಯುವತಿಗೆ ಸಾರ್ವಜನಿಕವಾಗಿ ಅವಮಾನ: ಮಾಲೀಕ ಪೊಲೀಸರ ವಶ

Published

on

ಬೆಂಗಳೂರು: ಐದು ವರ್ಷದಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್‌ ಸೆಂಟರ್‌ ಮಾಲೀಕ ಆಕೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.


ಕಳೆದ ಐದು ವರ್ಷಗಳಿಂದ ಲಕ್ಷ್ಮಿ ಎಂಬ ಯುವತಿ ‘ಮುಸ್ಕಾನ್‌ ಟೈಮ್ಸ್‌’ ಸೈಬರ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಲಕ್ಷ್ಮಿ ವೈಯಕ್ತಿಕ ಕಾರಣದಿಂದ ಗೈರಾಗಿದ್ದರು. ಈ ಕಾರಣಕ್ಕೆ ಕೋಪಗೊಂಡ ಮಾಲೀಕ ಸೈಯದ್‌, ಯುವತಿಯ ವಿರುದ್ಧ ಧ್ವೇಷ ಸಾಧಿಸಲು ಶುರುಮಾಡಿದ್ದ.

ಲಕ್ಷ್ಮಿ ಗುರುವಾರ(ಜ.22) ರಾತ್ರಿ 7.30ರ ಹೊತ್ತಿಗೆ ರಸ್ತೆಯಲ್ಲಿ ಹೋಗುತ್ತಿದ್ದಾಗ, ಸೈಯದ್‌ ಆಕೆಯನ್ನು ಅಡ್ಡಗಟ್ಟಿ ಸಾವರ್ಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಲು ಶುರು ಮಾಡಿದ್ದ. ‘ನಿನಗೆ ಬಟ್ಟೆ ಬಿಚ್ಚಿ ಹೊಡೆಯುತ್ತೇನೆ, ರಸ್ತೆಯಲ್ಲಿಯೇ ಕತ್ತರಿಸಿ ಹಾಕುತ್ತೇನೆ. ನಿನ್ನಿಂದ ನನ್ನ ದುಡ್ಡೆಲ್ಲಾ ಹೋಯಿತು, ನನ್ನ ತಲೆ ಕೆಡಿಸಬೇಡ’ ಎಂದು ಅತೀ ಕೀಳಾಗಿ ಮಾತನಾಡಿದಲ್ಲದೇ, ಅಸಭ್ಯವಾಗಿ ವರ್ತಿಸಿದ್ದ.

ಸೈಯದ್‌ನ ಈ ವರ್ತನೆ ಗಮನಿಸಿದ ಸ್ಥಳೀಯರು ಆತನನ್ನು ಸ್ಥಳದಲ್ಲೇ ಜಮಾಯಿಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಒಂದು ಮಹಿಳೆಯ ಜತೆ ವರ್ತಿಸುವ ರೀತಿ ಇದಲ್ಲ ಎಂದು ಬುದ್ಧಿ ಹೇಳಿದರು. ಬಳಿಕ ಪರಿಸ್ಥಿತಿ ತೀವ್ರ ವೀಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯರೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದು ಕಪಾಳಮೋಕ್ಷಕ್ಕೆ ಬಲಿಯಾಯ್ತು ಗೆಳೆತನ; ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಮಾಡಿ ತಪ್ಪೊಪ್ಪಿಕೊಂಡ ಯುವಕ

ಮಾಹಿತಿ ತಿಳಿದು ಸ್ಥಳಕ್ಕೆ ತಕ್ಷಣ ಧಾವಿಸಿದ ಕೆಂಗೇರಿ ಪೊಲೀಸರು ಯುವತಿಗೆ ಪ್ರಾಣ ಬೆದರಿಕೆ ಮತ್ತು ಮಾನಹಾನಿ ಮಾಡಿದ ಆರೋಪದಡಿ ಪ್ರಕರಣ ದಾಖಲಾಸಿ, ಸೈಯದ್‌ನನ್ನು ವಶಕ್ಕೆ ಪಡೆದಿದ್ದಾರೆ. ಜತೆಗೆ ಈ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Continue Reading

DAKSHINA KANNADA

ಫೆ.14ರಂದು 16ನೇ ವರ್ಷದ ಜಯ-ವಿಜಯ ಜೋಡುಕರೆ ಕಂಬಳ; ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಜಯ-ವಿಜಯ ಜೋಡುಕರೆ ಕಂಬಳ ಸಮಿತಿ (ರಿ) ಜಪ್ಪಿನಮೊಗರು ಮಂಗಳೂರು ಇವರ ನೇತೃತ್ವದಲ್ಲಿ ಮನ್ಕು ತೋಟಗುತ್ತು ಮತ್ತು ನಾಡಾಜೆಗುತ್ತು ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿಯವರ ಸ್ಮರಣಾರ್ಥ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಫೆ.14 ಮತ್ತು 15ರಂದು ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ನಗರದ ಓಷಿಯನ್ ಪರ್ಲ್ ಹೊಟೇಲ್ ನಲ್ಲಿ ನಡೆಯಿತು. ಸುತೇಜ್ ಎಂಟರ್ ಪ್ರೈಸಸ್ ಮುಂಬಯಿ ಇದರ ಎಂಡಿ, ಹಾಗೂ ಕಂಬಳದ ಮಾರ್ಗದರ್ಶಕ ಎಚ್. ಸುಧಾಕರ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಮುಂದಾಳತ್ವದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು.

ನಂತರ ಈ ಬಗ್ಗೆ ಸುಧಾಕರ್ ಶೆಟ್ಟಿ ಮಾತನಾಡಿ ಜಪ್ಪಿನಮೊಗರುವಿನಲ್ಲಿ ನಡೆಯುತ್ತಿರುವ ಕಂಬಳ ಅತ್ಯಂತ ವಿಶೇಷವಾದದ್ದು. ಯಾಕಂದ್ರೆ ಶಾಸಕ ವೇದವ್ಯಾಸ್ ಕಾಮತ್ ಅವರ ಸಹಕಾರದಿಂದ ವ್ಯವಸ್ಥಿತವಾಗಿ ಈಗ ನಡೆಯುತ್ತಿದೆ. ಕಂಬಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸ್ತಾರೆ. ಕಂಬಳವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: 33ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಗೌರವಾಧ್ಯಕ್ಷ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ ಶ್ರೀ ಅನಂತಪದ್ಮನಾಭ ಅಸ್ರಣ್ಣರ ಆಶೀರ್ವಚನದೊಂದಿಗೆ ವೇದಮೂರ್ತಿ ಬ್ರಹ್ಮ ಶ್ರೀ ವಿಠಲದಾಸ್ ತಂತ್ರಿವರ್ಯರಿಂದ ಕಂಬಳವು ಉದ್ಘಾಟನೆಗೊಳ್ಳಲಿದೆ. ಉದ್ಯಮಿಗಳು ಸೇರಿದಂತೆ ಸಿನಿಮಾ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುತ್ತದೆ. ಕಂಬಳದಲ್ಲಿ 150ಕ್ಕೂ ಹೆಚ್ಚಿನ ಸಂಖ್ಯೆಯ ಕೋಣಗಳು ಭಾಗವಹಿಸಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಯ ವಿಜಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅನಿಲ್ ಶೆಟ್ಟಿ, ಕಾರ್ಯಾಧ್ಯಕ್ಷೆ ವೀಣಾಮಂಗಳ, ಮತ್ತೋರ್ವ ಕಾರ್ಯಾಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ತಿರುವೈಲುಗುತ್ತು, ಸಂದೀಪ್ ಶೆಟ್ಟಿ ಎಕ್ಕೂರು ಮತ್ತಿತ್ತರರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page