Connect with us

DAKSHINA KANNADA

ಮಂಗಳೂರು ವಿಮಾನ ನಿಲ್ದಾಣದ ಭದ್ರತಾ ಸಿಬಂದಿಗೆ ‘ಬಾಂಬ್ ಸೂಟ್’..!

Published

on

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ‘ಬಾಂಬ್ ಸೂಟ್’ ಗಳನ್ನು ಖರೀದಿಸಿ ಸಿಐಎಸ್ಎಫ್‌ ಪಡೆಯ ಏರ್‌ ಪೋರ್ಟ್ ಸೆಕ್ಯುರಿಟಿ ಗ್ರೂಪ್ ಗೆ ಹಸ್ತಾಂತರಿಸುವ ಮೂಲಕ ಭದ್ರತೆಯನ್ನು ಹೆಚ್ಚಿಸುವಲ್ಲಿ ಮತ್ತೊಂದು ಹೆಜ್ಜೆ ಇರಿಸಿದೆ.

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ‘ಬಾಂಬ್ ಸೂಟ್’ ಗಳನ್ನು ಖರೀದಿಸಿ ಸಿಐಎಸ್ಎಫ್‌ ಪಡೆಯ ಏರ್‌ ಪೋರ್ಟ್ ಸೆಕ್ಯುರಿಟಿ ಗ್ರೂಪ್ ಗೆ ಹಸ್ತಾಂತರಿಸುವ ಮೂಲಕ ಭದ್ರತೆಯನ್ನು ಹೆಚ್ಚಿಸುವಲ್ಲಿ ಮತ್ತೊಂದು ಹೆಜ್ಜೆ ಇರಿಸಿದೆ.

ವಿಮಾನ ನಿಲ್ದಾಣದ ಆವರಣದಲ್ಲಿ ಸ್ಫೋಟಕಗಳ ಸಹಿತ ಯಾವುದೇ ಭದ್ರತಾ ಬೆದರಿಕೆಯನ್ನು ತಡೆಯಲು ಏರ್‌ ಪೋರ್ಟ್ ಸೆಕ್ಯುರಿಟಿ ಗ್ರೂಪ್ ನ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳವು ಬಾಂಬ್ ಸೂಟ್ ಅನ್ನು ಬಳಸುತ್ತದೆ.

ಬಾಂಬ್‌ ಸೂಟ್‌ ಸ್ಫೋಟಕಗಳನ್ನು ನಿಯಂತ್ರಿಸಲು ತರಬೇತಿ ಪಡೆದ .ಎ.ಎಸ್.ಜಿ ಸಿಬಂದಿಗೆ ಹೆಚ್ಚು ಅಗತ್ಯವಾದ ಆತ್ಮವಿಶ್ವಾಸ ಮತ್ತು ತುರ್ತು ಭದ್ರತಾ ಬೆದರಿಕೆಗಳನ್ನು ಎದುರಿಸಲು ರಕ್ಷಣೆಯನ್ನು ನೀಡುತ್ತದೆ.

ಮಾತ್ರವಲ್ಲದೆ ಬಾಂಬ್ ನಿಷ್ಕ್ರಿಯ ಮತ್ತು ಪತ್ತೆ ಸಾಧನಗಳು ಅತ್ಯಂತ ಕಡಿಮೆ ಅವಧಿಯಲ್ಲಿ ಬೆದರಿಕೆಯನ್ನು ಎದುರಿಸಲು ಸಹಾಯ ಮಾಡಲಿವೆ.

ಕಳೆದ ಡಿಸೆಂಬರ್‌ ತಿಂಗಳಲ್ಲಿ ವಿಮಾನ ನಿಲ್ದಾಣವು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಉಪಕರಣಗಳ ಮೊದಲ ಬ್ಯಾಚ್ ಅನ್ನು ಎ.ಎಸ್‌. ಜಿ. ಘಟಕಕ್ಕೆ ಹಸ್ತಾಂತರಿಸಿತ್ತು.

ಕಳೆದ ವರ್ಷದ ಆರಂಭದಲ್ಲಿ ಎ.ಎಸ್‌.ಜಿ. ಘಟಕಕ್ಕೆ ಮದ್ದು ಗುಂಡು ನಿರೋಧಕ ವಾಹನವನ್ನು ಹಸ್ತಾಂತರಿಸಲಾಗಿತ್ತು.

ಅದರ ಮುಂದುವರಿದ ಭಾಗವಾಗಿ ಇದೀಗ ಬಾಂಬ್‌ ಸೂಟ್‌ ಒದಗಿಸಲಾಗಿದೆ.

ಇದೀಗ ವಿಮಾನ ನಿಲ್ದಾಣವು ದಿನದ 24 ಗಂಟೆಯೂ ಭದ್ರತೆಯನ್ನು ಒದಗಿಸಲು ನಿಯೋಜಿಸಲಾದ ಸಿ.ಐ.ಎಸ್.ಎಫ್. ತಂಡಕ್ಕೆ ಹೆಚ್ಚಿನ ಬಲ ಬಂದಿದೆ.

ಈ ಸೂಟ್‌ ಧರಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದವರು ನಿರ್ಭಯದಿಂದ ಕಾರ್ಯಾಚರಣೆ ನಡೆಸ ಬಹುದಾಗಿದೆ.

2025 ರ ವೇಳೆಗೆ ಈ ವಿಮಾನ ನಿಲ್ದಾಣವನ್ನು ದೇಶೀಯ ಮತ್ತು ಅಂತಾರಾರಾಷ್ಟ್ರೀಯ ಕಾರ್ಯಾಚರಣೆಗಳಿಗೆ ಸುರಕ್ಷಿತ, ಗ್ರಾಹಕ ಕೇಂದ್ರಿತ ಮತ್ತು ಪರಿಸರ ಸ್ನೇಹಿ ಕೇಂದ್ರವನ್ನಾಗಿ ಮಾಡಲು ಯೋಜಿಸಿರುವ ವಿಷನ್ 2025 ಗೆ ಪೂರಕವಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page