Connect with us

DAKSHINA KANNADA

ಬಸ್‌-ಟ್ಯಾಂಕರ್ ಮುಖಾಮುಖಿ ; ಚಾಲಕ ಹಾಗೂ ಪ್ರಯಾಣಿಕರಿಗೆ ಗಂಭೀರ ಗಾ*ಯ

Published

on

ಕೆಎಸ್ಸಾರ್ಟಿಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಡಿ*ಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯ*ಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪ ನಿನ್ನೆ(ಸೆ.23) ಸಂಜೆ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ನಡುವೆ ಮುಖಾಮುಖಿ ಡಿ*ಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಟ್ಯಾಂಕರ್ ಹಾಗೂ ಬಸ್ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರು ವುದಾಗಿ ತಿಳಿದುಬಂದಿದೆ. ಈ ಪೈಕಿ ಗಂ*ಭೀರ ಗಾಯ*ಗೊಂಡಿರುವ ಟ್ಯಾಂಕರ್ ಚಾಲಕ, ಬಸ್ಸಿನಲ್ಲಿದ್ದ ಮಹಿಳೆ ಸಹಿತ ಇಬ್ಬರು ಪ್ರಯಾಣಿಕರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಹಾಗೂ ಸಣ್ಣ ಪುಟ್ಟ ಗಾಯಗೊಂಡಿರುವವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ತಲಪಾಡಿ: ಟ್ಯಾಂಕರ್ ಗೆ ಗುದ್ದಿದ ಕಾರು, ತಪಾಸಣೆ ವೇಳೆ ಕಾರಿನಲ್ಲಿ ಸಿಕ್ತು ಲಕ್ಷಾಂತರ ಮೌಲ್ಯದ ಡ್ರಗ್ಸ್..!

Published

on

ಉಳ್ಳಾಲ: ಕಾರೊಂದು ಟ್ಯಾಂಕರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿದ್ದು ಕಾರಿನೊಳಗೆ ಲಕ್ಷಾಂತರ ರೂ. ಮೌಲ್ಯದ ನಿಷೇಧಿತ ಎಂಡಿಎಂಎ ಪತ್ತೆಯಾದ ಘಟನೆ ಮಂಗಳೂರು ಹೊರ ವಲಯದ ತಲಪಾಡಿಯಲ್ಲಿ ಇಂದು ನಡೆದಿದೆ.

ಮಂಗಳೂರಿನಿಂದ‌ ಉಪ್ಪಳದ ಕಡೆಗೆ ಬರುತ್ತಿದ್ದ ಕಾರು ತಲಪಾಡಿಯ ಆರ್ ಟಿಓ ಚೆಕ್ ಪೋಸ್ಟ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ  ಆದಮ್‌ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಪೊಲೀಸರು ತನಿಖೆಗೆ ಕಾರನ್ನು ಪರಿಶೀಲನೆ ನಡೆಸಿದ ವೇಳೆ ಕಾರಿನಲ್ಲಿ ಸುಮಾರು 78 ಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಕಾರು ಚಾಲಕ ಸಿದ್ಧೀಕ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಸಿದ್ಧೀಕ್ ಮತ್ತು ಆದಮ್ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

 

Continue Reading

DAKSHINA KANNADA

ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ; ಪ್ರಕರಣ ದಾಖಲು

Published

on

ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಳಿತಪಡ್ಪು ನಿವಾಸಿ ಇದಿನಬ್ಬ ಎಂಬವರ ಮಗ ಮಹಮ್ಮದ್ ರಾಝಿಮ್ (23) ಎಂಬಾತ ಕಾಣೆಯಾಗಿರುವ ಯುವಕನಾಗಿದ್ದಾನೆ.

ರಾಝಿಮ್ ಕಾರ್ಕಳದ ಕಂಪೆನಿಯ ಲಾರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪ್ರತಿದಿನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಡಿಸೆಂಬರ್ 5 ರಂದು ಮನೆಯಿಂದ ಕಾರ್ಕಳಕ್ಕೆ ಕೆಲಸಕ್ಕೆಂದು ಹೋದ ಈತ ಸಂಜೆ ಮನೆಗೆ ಬಾರದೆ ಕಾಣೆಯಾಗಿದ್ದಾನೆ.

ಇದನ್ನೂ ಓದಿ: ಸುರತ್ಕಲ್‌: ಒಂಟಿ ವೃದ್ಧೆ ಮನೆಯಲ್ಲಿ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ

ಮೊಬೈಲ್ ಸ್ವಿಚ್ ಆಪ್ ಆಗಿದ್ದು, ಈತನ ಸುಳಿವಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Continue Reading

BANTWAL

ಬಂಟ್ವಾಳ: ರಸ್ತೆ ಅಗೆದು ಜಲ್ಲಿ ಹಾಕಿ ಹೋದವರು ನಾಪತ್ತೆ; ಅಣ್ಣಳಿಕೆಯಿಂದ ಕೊಯಿಲದವರೆಗಿನ ರಸ್ತೆಗಿಲ್ಲ ಡಾಂಬರ್ ಭಾಗ್ಯ

Published

on

ಬಂಟ್ವಾಳ: ರಸ್ತೆಯನ್ನು ಅಗೆದು ಜಲ್ಲಿ ಹಾಕಿ ಹೋದವರು ಪತ್ತೆಯಿಲ್ಲ, ಡಾಂಬರ್‌ಗಾಗಿ ಕಾದು ಕಾದು ಸುಸ್ತಾದ ರಸ್ತೆಯ ಜಲ್ಲಿಕಲ್ಲುಗಳು ವಾಹನ ಮೇಲೆ ದಾಳಿ ಮಾಡುತ್ತಿದ್ದು, ವಾಹನ ಸವಾರರಿಗೆ ಅಪಾಯದ ಕರೆಗಂಟೆ ಬಾರಿಸಿದೆ.


ಇದು ಬಂಟ್ವಾಳ ಮೂಡಬಿದಿರೆ ರಸ್ತೆಯ ಅಣ್ಣಳಿಕೆಯಿಂದ ಕೊಯಿಲವರೆಗಿನ ಒಂದುಕಾಲು ಕಿ.ಮೀ‌.ರಸ್ತೆಯ ದುರಾವಸ್ಥೆ! ಹೇಳುವವರು ಇಲ್ಲ, ಕೇಳುವರು ಇಲ್ಲ… ಅನ್ನುವ ಸ್ಥಿತಿ ಎದುರಾಗಿದ್ದು, ಕಳೆದ ಒಂದು ವರ್ಷಗಳಿಂದ ಇಲ್ಲಿನ ಜನರು ರಸ್ತೆಯಲ್ಲಿ ಓಡಾಟ ಮಾಡಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.

ಇದು ಝಿಗ್‌ ಜ್ಯಾಗ್‌ ರಸ್ತೆಯಾಗಿದ್ದು ನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಓಡಾಟ ನಡೆಸುತ್ತಿವೆ. ಜನರು ಸಾವಿನ ಭಯದಿಂದ ಸಂಚರಿಸುವಂತಾಗಿದೆ. ಪಿಡಬ್ಲ್ಯೂ ಇಲಾಖೆಗೆ ಸೇರಿದ ರಸ್ತೆ ಇದಾಗಿದ್ದು, ರಸ್ತೆಯ ಡಾಂಬರೀಕರಣಕ್ಕಾಗಿ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿಯೂ ಆರಂಭವಾಗಿದೆ ಆದರೆ ಕಾಮಗಾರಿ ಇನ್ನೂ ಮುಗಿಯುತ್ತಿಲ್ಲ.

ಇದನ್ನೂ ಓದಿ: ಸುರತ್ಕಲ್‌: ಒಂಟಿ ವೃದ್ಧೆ ಮನೆಯಲ್ಲಿ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ

ಡಾಂಬರು ಹಾಕಲೆಂದು‌ ರಸ್ತೆಯನ್ನು ಅಗೆದು ತಿಂಗಳುಗಳು ಕಳೆದಿವೆಯಾದರೂ ಇನ್ನೂ ಡಾಂಬರು ಹಾಕಿಲ್ಲ. ಇದ್ದ ರಸ್ತೆಯನ್ನು ಅಗೆದು ಜಲ್ಲಿ ಹಾಕಿ ತಿಂಗಳಾಗುತ್ತಾ ಬಂದಿದ್ದು, ಇನ್ನೂ ಧೂಳು ಮಿಶ್ರಿತ ಜಲ್ಲಿ ಕಲ್ಲು ಮೇಲೆ ಡ್ಯಾನ್ಸ್ ಮಾಡುತ್ತಾ ಕುಂಟುತ್ತಾ, ಉರುಳುತ್ತಾ ಸಾಗಬೇಕಾಗಿರುವ ಸ್ಥಿತಿ ಉಂಟಾಗಿದೆ ಎಂಬ ಆರೋಪ ಇಲ್ಲಿನ‌ ಜನರದ್ದಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page