Connect with us

LATEST NEWS

ಬೆಂಗಳೂರು ಜೈಲು ಸೇರಿದ ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣದ ಅಪರಾಧಿ..!

Published

on

ಉಡುಪಿ : ರಾಜ್ಯದಲ್ಲೇ ಸಚಲನ ಮೂಡಿಸಿದ್ದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ರಾಜೇಶ್ವರಿ ಶೆಟ್ಟಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಳೆ.

ಕೋವಿಡ್ ಹಿನ್ನೆಲೆಯಲ್ಲಿ ಆಕೆಗೆ ಜೈಲಿನ ಪ್ರತ್ಯೇಕ ಸೆಲ್‌ನಲ್ಲಿ 14 ದಿನಗಳ ಕಾಲ ಕ್ವಾರಂಟೈನ್ ವಿಧಿಸಲಾಗಿದೆ.

ಜೂನ್ 8ರಂದು ಉಡುಪಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಜೀವಿತಾವಧಿ ಜೈಲುಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಯನ್ನು ವಶಕ್ಕೆ ಪಡೆದು, ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು.

ಮೊದಲು ಆಕೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಫಿವರ್ ಕ್ಲಿನಿಕ್‌ನಲ್ಲಿ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ರಾಪಿಡ್ ಟೆಸ್ಟ್ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಆ ಬಳಿಕ ಮಣಿಪಾಲ ಪೊಲೀಸರು, ಮಹಿಳಾ ಠಾಣೆಯ ಎಸ್‌ಐ, ಸಶಸ್ತ್ರ ಹೊಂದಿರುವ ಸಿಬ್ಬಂದಿಗಳೊಂದಿಗೆ ರಾಜೇಶ್ವರಿ ಶೆಟ್ಟಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು.

ಅದೇ ದಿನ ರಾತ್ರಿ 10ಗಂಟೆಗೆ ಬೆಂಗಳೂರು ತಲುಪಿರುವ ಆಕೆಯನ್ನು ಪೊಲೀಸರು ಅಲ್ಲಿ ಪರಪ್ಪನ ಅಗ್ರಹಾರಕ್ಕೆ ಹಸ್ತಾಂತರಿಸಿದರು.

ಜೈಲಿನಲ್ಲಿರುವ ಪ್ರತ್ಯೇಕ ಸೆಲ್‌ನಲ್ಲಿ 14 ದಿನಗಳ ಕ್ವಾರಂಟೈನ್ ಮುಗಿಸಿ ಶಿಕ್ಷೆ ಬಂಧಿಯಾಗಿರುವ ಸೆಲ್‌ನಲ್ಲಿ ಆಕೆಯನ್ನು ಹಾಕಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 ಈಗಾಗಲೇ ರಾಜೇಶ್ವರಿ ಶೆಟ್ಟಿಯ ಮಗ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಬೆಂಗಳೂರಿನ ಜೈಲಿನಲ್ಲಿದ್ದಾರೆ.

LATEST NEWS

ಹಾಡಿಗೆ ವಿದಾಯ ತಿಳಿಸಿ ಇಹಲೋಕ ತ್ಯಜಿಸಿದ ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ

Published

on

ಮಂಗಳೂರು/ಕಾರವಾರ: ಹಾಡನ್ನೇ ಜೀವನವನ್ನಾಗಿಸಿದ್ದ ಸುಮಧುರ ಕಂಠದ ಕೋಗಿಲೆ, ಪದ್ಮಶ್ರೀ‌ ಪುರಸ್ಕೃತೆ 88 ವರ್ಷದ ಸುಕ್ರಿ ಬೊಮ್ಮ ಗೌಡ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಇಂದು (ಫೆ. 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.

ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಗಾನಕೋಗಿಲೆ ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಜ್ಜಿ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿಯಾಗಿದ್ದು, ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದರು. ಜಾನಪದ ಲೋಕಕ್ಕೆ ತನ್ನನ್ನು ತಾನೇ ತೊಡಗಿಸಿಕೊಂಡಿದ್ದ ಸುಕ್ರಜ್ಜಿಯನ್ನು ‘ಜಾನಪದ ಕೋಗಿಲೆ’ ಎಂದೇ ಕರೆಯಲಾಗುತ್ತದೆ.

ಸುಕ್ರಜ್ಜಿ ಬಾಲ್ಯದಲ್ಲಿ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು. ಇತ್ತೀಚೆಗೆ ಶಿರೂರಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತಕ್ಕೆ ಮರುಗಿದ್ದರು. ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಲು ಜನಪದ ಕೋಗಿಲೆ ಸುಕ್ರಜ್ಜಿ ನಿರ್ಧರಿಸಿದ್ದರು. ಜೊತೆಗೆ ತಮ್ಮ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಕೂರುವ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಇದೀಗ ಹಾಲಕ್ಕಿ ಸಮುದಾಯ ತುಳಸಿ ಗೌಡ ಬೆನ್ನಲ್ಲೇ ಸುಕ್ರಿ ಬೊಮ್ಮಗೌಡ ಸಹ ಕಳೆದುಕೊಂಡಿದೆ.

Continue Reading

LATEST NEWS

ಗರ್ಭಿಣಿ ಪ್ರಿಯತಮೆಯ ಕೊಂದು, ಸುಟ್ಟು ಹಾಕಿದ ಕಟುಕ

Published

on

ಮಂಗಳೂರು/ಮಹರಾಷ್ಟ್ರ: ಕಟುಕನೊಬ್ಬ ತನ್ನ 18 ವರ್ಷದ ಗೆಳತಿಯನ್ನು ಹತ್ತಿರದ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಕತ್ತು ಹಿಸುಕಿ ಕೊಂದು, ಬಳಿಕ ದೇಹವನ್ನು ಬೆಂಕಿ ಹಚ್ಚಿ ಸುಟ್ಟ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ.

ಶಕೀಲ್ ಮುಸ್ತಫಾ ಆರೋಪಿ ಎಂದು ಗುರುತಸಲಾಗಿದೆ. ಶಕೀಲ್ ಹಾಗೂ ಮೃತ ಮಹಿಳೆಗೆ ಕೆಲವು ತಿಂಗಳಿನಿಂದ ಸಂಬಂಧವಿತ್ತು. ಅವರಿಬ್ಬರ ಸಂಬಂಧಕ್ಕೆ ಸಾಕ್ಷಿಯಾಗಿ ಆಕೆ ಗರ್ಭಿಣಿಯಾದಳು. ಬಳಿಕ ಶಕೀಲ್ ಜೊತೆಗೆ ಬಾಳುವುದಾಗಿ ನಿರ್ಧರಿಸಿ ಹಠ ಹಿಡಿದಿದ್ದಾಳೆ. ಶಕೀಲ್ ಆಕೆ ಜೊತೆಯಾಗಿರುವುದು ಇಷ್ಟವಿರಲಿಲ್ಲ. ಹಲವು ಬಾರಿ ಶಕಿಳ್ ಒತ್ತಾಯಿಸಿದೂ ಆಕೆ ಕೇಳಿರಲಿಲ್ಲ. ಹಾಗಾಗಿ ಶಕೀಲ್ ಆಕೆಯನ್ನು ಕೊಲೆ ಮಾಡಲು ಮುಂದಾಗಿದ್ದಾನೆ.

ಶಕೀಲ್ ಕೊಲೆ ಮಾಡಿರುವ ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಸ್ಥಳಕ್ಕೆ ಆಗಮಿಸಿದ ವೇಳೆ ಹೊಲದಲ್ಲಿ ಅರೆ ಬೆಂದಿದ್ದ ಬೆತ್ತಲೆ ಶವ ಇತ್ತು. ಈ ಕುರಿತು ಪೊಲೀಸರು ತನಿಖೆ ನಡೆಸಿ, ಕೆಲವೇ ಗಂಟೆಗಳಲ್ಲಿ ಆರೋಪಿ ಶಕೀಲ್‌ನನ್ನು ಪತ್ತೆಹಚ್ಚಿ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ : ಬೈಕ್ ಕಳವು ಪ್ರಕರಣ; ಇಬ್ಬರ ಬಂಧನ

ಆರೋಪಿಯನ್ನು ವಿಚಾರಣೆ ನಡೆಸಿದಾಗ “ಬಾಲಕಿಯನ್ನು ಕತ್ತು ಹಿಸುಕಿ ಕೊಂದು ನಂತರ ಆಕೆಯ ದೇಹವನ್ನು ಸುಟ್ಟು ಹಾಕಿರುವುದಾಗಿ ಒಪ್ಪಿಕೊಂಡಿದ್ದಾನೆ. ಪಿತೂರಿಯಂತೆ, ಫೆಬ್ರವರಿ 10 ರಂದು, ಶಕೀಲ್ ಬಾಲಕಿಯನ್ನು ದೇವುತೋಲಾ ಹೊಲಕ್ಕೆ ಕರೆದು ದುಪಟ್ಟಾದಿಂದ ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ, ಆಕೆಯ ದೇಹವನ್ನು ಹಾಳೆ ಮತ್ತು ಒಣಹುಲ್ಲಿನಿಂದ ಮುಚ್ಚಿ, ಸಾಕ್ಷ್ಯವನ್ನು ನಾಶಮಾಡಲು ದೇಹವನ್ನು ಸುಟ್ಟು ಹಾಕಿದ್ದಾನೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

ಬೈಕ್ ಕಳವು ಪ್ರಕರಣ; ಇಬ್ಬರ ಬಂಧನ

Published

on

ಉಡುಪಿ : ಪಡಿಬಿದ್ರಿ ಪೇಟೆಯಲ್ಲಿ 20 ದಿನಗಳ ಹಿಂದೆ ಬುಲೆಟ್ ಬೈಕ್ ಕಳ್ಳತನವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೂಳೆಬೈಲು ನಿವಾಸಿ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ.ಕೆ ಯಾನೆ ತಾಜು ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಏನಿದು ಪ್ರಕರಣ ?

ಜನವರಿ 21ರಂದು ರಾತ್ರಿ ಮುಂಡ್ಕೂರು ನಿವಾಸಿ ಪರೀಕ್ಷಿತ್ ಶೆಟ್ಟಿ ಎಂಬವರು ಪಡುಬಿದ್ರಿ ಪೇಟೆಯಲ್ಲಿ ಬುಲೆಟ್ ಬೈಕ್‍ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ ಕೆಲಸ ಮುಗಿಸಿ ವಾಪಸ್ ಬಂದು ನೋಡಿದಾಗ ಅಲ್ಲಿ ಬೈಕ್ ಇರಲಿಲ್ಲ. ಬೈಕನ್ನು ಕಳವು ಮಾಡಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಶಿವಮೊಗ್ಗದಲ್ಲಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ : ರಿಕ್ಷಾ ಹಾಗೂ ಹೊಂಡಾ ಆಕ್ಟಿವಾ ನಡೆವೆ ಅಪಘಾತ; ಸವಾರರಿಗೆ ಗಾಯ

ಸದ್ಯ ಪೊಲೀಸರ ಬಲೆಗೆ ಬಿದ್ದ ಕಳ್ಳರಿಂದ ಪಡುಬಿದ್ರಿಯಲ್ಲಿ ಕಳವು ಮಾಡಿದ ಬುಲೆಟ್ ಮತ್ತು ಕಳ್ಳತನ ಸಮಯ ಉಪಯೋಗಿಸಿದ ಕಾರನ್ನು ಸ್ವಾಧೀನ ಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page