Connect with us

LATEST NEWS

ಬೈಂದೂರು: ಮೀನುಗಾರಿಕಾ ದೋಣಿ ಮುಳುಗಡೆ- ಓರ್ವ ಮೃತ್ಯು, ಮತ್ತೋರ್ವ ಗಂಭೀರ..!

Published

on

ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ಉಪ್ಪುಂದ ಸಮೀಪ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದರೆ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ನಾಗೇಶ್ (29) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.

ಸಚಿನ್ ಎಂಬವರ ಮಾಲಕತ್ವದ ಮಾಸ್ತಿ ಮರ್ಲ ಚಿಕ್ಕು ಹೆಸರಿನ ದೋಣಿಯು ಅಲೆಗಳ ಹೊಡೆತಕ್ಕೆ ಸಿಲುಕಿ ಸಂಪೂರ್ಣವಾಗಿ ಮುಳುಗಡೆಯಾಗಿಗಿದಗದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.

ದೋಣಿಯಲ್ಲಿ ಒಟ್ಟು 8 ಮಂದಿ ಇದ್ದರು. ಉಳಿದವರಲ್ಲಿ ಕೆಲವರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೈಂದೂರು ತಹಸಿಲ್ದಾರ್ ಶ್ರೀಕಾಂತ್ ಹೆಗಡೆ, ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ಬೈಂದೂರ್ ಪೊಲೀಸ್, ಅಗ್ನಿಶಾಮಕ ದಳ, ಪೋಸ್ಟಲ್ ಗಾರ್ಡ್ , ಮೀನುಗಾರಿಕಾ ಸಹಾಯಕ ನಿರ್ದೇಶಕರು ಕುಂದಾಪುರ ಸುಮಲತಾ, ಮುಳುಗುತಜ್ಞ ದಿನೇಶ್ ಖಾರ್ವಿ ಹಾಗೂ ತಂಡ, ಬೈಂದೂರು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಖಾರ್ವಿ ಉಪ್ಪುಂದ ಮೊದಲಾದವರು ಆಗಮಿಸಿದ್ದರು.

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಚೀನಾ: ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 20 ಜನ ಸಾವು

Published

on

ಚೀನಾ: ರೆಸ್ಟೋರೆಂಟ್‌ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 20 ಮಂದಿ ಸಾವನ್ನಪ್ಪಿದ್ದು, 3 ಮಂದಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಚೀನಾದ ಉತ್ತರ ನಗರ ಲೀಯಾವೊಯಾಂಗ್‌ನ ಚುನಿಯಾಂಗ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬೈರನ್ ವಾನ್ ಎನ್ನುವ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ 43 ಸೆಕೆಂಡುಗಳ ವಿಡಿಯೋದಲ್ಲಿ ಅಗ್ನಿ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮುತ್ತಿರುವುದನ್ನು ಕಾಣಬಹುದು.

ಅಗ್ನಿ ವ್ಯಾಪಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಜನರು ಕಾಲ್ಕಿತ್ತಿದ್ದಾರೆ. ಇನ್ನೂ ಕೆಲವರು ಘಟನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿಯುವಲ್ಲಿ ನಿರತರಾಗಿದ್ದರು.

ಪ್ರಾಥಮಿಕ ಮೂಲಗಳ ಪ್ರಕಾರ ಮೊದಲು ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ರೆಸ್ಟೋರೆಂಟ್‌ಗೆ ವ್ಯಾಪಿಸಿದೆ. ಈ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ.

Continue Reading

LATEST NEWS

ಅಮೆರಿಕದ ದೇಗುಲದಲ್ಲಿ ಪ್ರಧಾನಿ ಹೆಸರಿನಲ್ಲಿ ಪೂಜೆ ಸಲ್ಲಿಸಿದ ಅಣ್ಣಾಮಲೈ

Published

on

ಮಂಗಳೂರು : ಅಮೆರಿಕದ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಲಾಗಿದೆ. ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಈ ಪೂಜೆ ನೆರವೇರಿಸಿದ್ದು, ಪ್ರಧಾನಿ ಹಾಗೂ ಸೈನ್ಯಕ್ಕೆ ಶಕ್ತಿ ತುಂಬುವಂತೆ ಕೃಷ್ಣನಲ್ಲಿ ಪ್ರಾರ್ಥಿಸಿದ್ದಾರೆ.

ಅಮೆರಿಕದ ಫೀನಿಕ್ಸ್ ಮಹಾನಗರದಲ್ಲಿ ಇರುವ ಕೃಷ್ಣ ಮಂದಿರಲ್ಲಿ ಈ ಪೂಜೆ ಸಲ್ಲಿಸಿದ್ದಾರೆ. ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ತೆರಳಿದ್ದ ಅಣ್ಣಾಮಲೈ, ಉಡುಪಿ ಪುತ್ತಿಗೆ ಮಠಕ್ಕೆ ಸೇರಿದ ಕೃಷ್ಣ ಮಂದಿರದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

 

 

Continue Reading

LATEST NEWS

ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

Published

on

ಮಂಗಳೂರು/ಮಂಜೇಶ್ವರ : ಹಿಂದೂ ಮುಸ್ಲಿಂ ಗಲಾಟೆ ಆದ್ರೆ ಹಿಂದೂಗಳು ಓಡುವ ಕಾಲ ಒಂದು ಇತ್ತು. ಈಗ ಕೈ ತೋರಿಸಿದ್ರೆ ಮುಸ್ಲಿಮರು ಓಡಿ ಹೋಗ್ತಾರೆ. ಹೀಗಾಗಿ ನಿಮ್ಮ ಮನೆಯಲ್ಲಿ ಒಂದು ತಲ್ವಾರ್ ಯಾವಾಗಲೂ ಇಟ್ಟುಕೊಳ್ಳಿ ಮತ್ತು ಮಹಿಳೆಯರು ಚೂರಿ ಇಟ್ಟುಕೊಳ್ಳಿ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪೆಹಲ್ಗಾಮ್ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಅಲ್ಲಿ ಉಗ್ರರಿಗೆ ತಲ್ವಾರ್ ತೋರಿಸಿದ್ರೂ ಸಾಕಿತ್ತು ಓಡಿ ಹೋಗ್ತಾ ಇದ್ರು. ಮಹಿಳೆಯರು ತಮ್ಮ ಬ್ಯಾಗಿನಲ್ಲಿ ಸ್ನೋ ಪೌಡರ್ ಬಾಚಣಿಗೆ ಜೊತೆಯಲ್ಲಿ ಆರು ಇಂಚಿನ ಚೂರಿ ಇಟ್ಟುಕೊಳ್ಳಿ, ಅದಕ್ಕೆ ಲೈಸೆನ್ಸ್ ಬೇಡ.

ಇದನ್ನೂ ಓದಿ : ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಮೈಸೂರು ಉದ್ಯಮಿ

ಸಂಜೆ ಆರು, ಏಳು ಗಂಟೆ ಬಳಿಕ ನಿಮ್ಮ ಮೇಲೆ ಆಕ್ರಮಣ ಮಾಡುತ್ತಾರೆ. ಆವಾಗ ಕೈ ಮುಗಿದು ಬೇಡಿಕೊಳ್ಳದೆ ಚೂರಿ ತೆಗೆದು ತೋರಿಸಿ ಎಂದು ಪ್ರಭಾಕರ್ ಭಟ್ ಕರೆ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page