Connect with us

LATEST NEWS

ಅಮೇರಿಕಾದಲ್ಲಿ ನಿಲ್ಲದ ಕಾಡ್ಗಿಚ್ಚು : 15 ಮಂದಿ ಸಾವು.! ಕೆಂಪೇರಿದ ಬಾನು..!

Published

on

ಅಮೇರಿಕಾದಲ್ಲಿ ನಿಲ್ಲದ ಕಾಡ್ಗಿಚ್ಚು : 15 ಮಂದಿ ಸಾವು.! ಕೆಂಪೇರಿದ ಬಾನು..!

ಕ್ಯಾಲಿಫೋರ್ನಿಯಾ : ಅಮೆರಿಕದಲ್ಲಿ ಕಾಡ್ಗಿಚ್ಚಿನ ಆರ್ಭಟ ತೀವ್ರಗೊಂಡಿದೆ. ಅಮೆರಿಕದ ಪಶ್ಚಿಮ ಕರಾವಳಿಯ ಮೂರು ರಾಜ್ಯಗಳು ಕಾಡ್ಗಿಚ್ಚು ಬಾಧಿತವಾಗಿವೆ.

ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದರೂ ಯಾವುದೇ ಪ್ರಗತಿ ಕಾಣ್ತಾ ಇಲ್ಲ.  ಅದರಲ್ಲೂ ಓರೆಗನ್ ರಾಜ್ಯದಲ್ಲಿ ಕಾಡ್ಗಿಚ್ಚಿನ ಹಾವಳಿಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಈಗಾಗಲೇ 16 ಮಂದಿ ಬಲಿಯಾಗಿದ್ದಾರೆ.

ಸರಿಸುಮಾರು 5 ಲಕ್ಷ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಭಾಗದಲ್ಲಿ ಬಿಸಿ ಗಾಳಿ, ಧೂಳು ಹಾಗೂ ಹೊಗೆ ಉಸಿರುಗಟ್ಟಿಸುವ ವಾತಾವರಣಕ್ಕೆ ಕಾರಣವಾಗಿದೆ.

ಕೇವಲ ಓರೆಗನ್ ರಾಜ್ಯ ಮಾತ್ರವಲ್ಲ ಪಕ್ಕದ ವಾಷಿಂಗ್ಟನ್ ಹಾಗೂ ಕ್ಯಾಲಿಫೋರ್ನಿಯಾ ರಾಜ್ಯಗಳಲ್ಲೂ ಕಾಡ್ಗಿಚ್ಚು ಹರಡಿದೆ.  ಧೂಳೂ ಮತ್ತು ಕಾಡ್ಗಿಚ್ಚಿನಿಂದ ಬಾನೆಲ್ಲ ಕೆಂಪಾಗಿದೆ. ಕೆಲವೆಡೆ ಸಂಪೂರ್ಣ ಪಟ್ಟಣಗಳೇ ಅಗ್ನಿಗಾಹುತಿಯಾಗಿವೆ.

ಕ್ಯಾಲಿಫೋರ್ನಿಯಾ ರಾಜ್ಯವೊಂದರಲ್ಲೇ 10 ಮಂದಿ ಕಾಡ್ಗಿಚ್ಚಿಗೆ ಬಲಿಯಾಗಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ ಹೊಗೆಯಿಂದಾಗಿ ಆಕಾಶ ಕಿತ್ತಳೆ ಬಣ್ಣಕ್ಕೆ ತಿರುಗಿದೆ.

ಈವರೆಗೆ 4.4 ದಶಲಕ್ಷ ಎಕರೆ ಅರಣ್ಯ ಪ್ರದೇಶ ಅಗ್ನಿಗೆ ಆಹುತಿಯಾಗಿದೆ. ಅರಣ್ಯದ ನಡುವೆ ಹಾದು ಹೋಗಿದ್ದ ಗ್ಯಾಸ್‌ ಪೈಪ್‌ ಲೈನ್‌ಗಳೂ ಕಾಡ್ಗಿಚ್ಚಿನಿಂದಾಗಿ ಹೊತ್ತಿ ಉರಿದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

FILM

ರಶ್ಮಿಕಾ ಮಂದಣ್ಣ ಮದ್ವೆ ಬೆನ್ನಲ್ಲೇ ಈ ಫೋಟೋ ಪೋಸ್ಟ್ ಮಾಡಿದ ನಟ ರಕ್ಷಿತ್ ಶೆಟ್ಟಿ..!

Published

on

ಕರಾವಳಿ ಮೂಲದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಇತ್ತೀಚೆಗೆ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳು ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ. ರಿಚರ್ಡ್ ಆ್ಯಂಟನಿ’ ಸಿನಿಮಾ ಘೋಷಣೆ ಮಾಡಿ ಹಲವು ಸಮಯ ಕಳೆದರೂ ಆ ಚಿತ್ರದ ಬಗ್ಗೆ ಯಾವುದೇ ಅಪ್​​ಡೇಟ್ ಇಲ್ಲ. ಈ ಎಲ್ಲ ವಿಷಯದಲ್ಲಿ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಬೇಸರದ ಮುಖ ಭಾವವಿರುವ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮತ್ತು ಕುತೂಹಲ ಅಭಿಮಾನಿಗಳದ್ದು.

ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಮುರಿದು ಬಿದ್ದಿತ್ತು. ಇದೀಗ ನಟಿ ರಶ್ಮಿಕಾ ಮಂದಣ್ಣ ನಟ ವಿಜಯ ದೇವರಕೊಂಡ ಅವರ ಕೈ ಹಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೆಲ್ಲ ಅವರ ವಿವಾಹದ ಫೋಟೋಗಳು ಸಖತ್ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಬೇಸರದಲ್ಲಿರೋ ಫೋಟೋನೇ ಪೋಸ್ಟ್ ಮಾಡಿದ್ದು ಅಚ್ಚರಿ ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಇವರ ಪೋಸ್ಟ್ ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ಸ್ ಗಳನ್ನು ಹಾಕಿದ್ದಾರೆ. ‘ಹಳೆಯದನ್ನು ಮರೆತು ಮುಂದೆ ಸಾಗಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ಇನ್ನೂ ಕೆಲವರು, ‘ನಿಮ್ಮ ಕಂಬ್ಯಾಕ್ ಬೇರೆಯವರಿಗೆ ಸ್ಲಿಪ್ಪರ್ ಶಾಟ್ ಆಗಬೇಕು’ ಎಂದು ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಇದ್ದಿದ್ದು ಕಡಿಮೆ. ಆದರೆ ಏಕಾಏಕಿ ಚಾರ್ಲಿ ಸಿನಿಮಾದ ಈ ಫೋಟೋ ಪೋಸ್ಟ್ ಮಾಡಿದ್ದು ಯಾಕೆ ಎಂಬ ಕ್ಯೂರಾಸಿಟಿ ಮಾತ್ರ ಜಾಸ್ತಿಯಾಗಿದೆ.

Continue Reading

LATEST NEWS

ರಾಜ್ಯ ಸರ್ಕಾರ ಮಂಡಿಸಿದ್ದು ನಿರಾಶಾದಾಯಕ ಬಜೆಟ್: ಉದಯ್ ಕುಮಾರ್ ಶೆಟ್ಟಿ

Published

on

ಉಡುಪಿ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ. ಯಾವುದೇ ದೂರದೃಷ್ಟಿ ಇಲ್ಲದ ಕಾಟಾಚಾರದ ಬಜೆಟ್ ಇದಾಗಿದೆ. ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ರು. ಆದರೆ ಬಹುಪಾಲು ಯೋಜನೆಗಳು ಹಳ್ಳ ಹಿಡಿದಿದೆ ಎಂದು ಬಿಜೆಪಿ ಮುಖಂಡ ಉದಯ್ ಕುಮಾರ್ ಶೆಟ್ಟಿ ವ್ಯಂಗ್ಯವಾಡಿದರು.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಕರಾವಳಿ ಜಿಲ್ಲೆಗಳಿಗೆ ವಿಶೇಷ ಸವಲತ್ತುಗಳು ನೀಡಬೇಕು ಅನ್ನೊ‌ ನಿರೀಕ್ಷೆ ಇತ್ತು ಅದ್ರೆ ಯಾವುದೇ ಸೌಲಭ್ಯ ನೀಡಿಲ್ಲ. ಯುವ ನಿಧಿ ಯೋಜನೆಯನ್ನು ಆರಂಭಿಸಿದ್ರು ಯುವಜನತೆಗೆ ಪ್ರಯೋಜನ ಅಗಿಲ್ಲ.

ಇದನ್ನೂ ಓದಿ: ಸಿದ್ಧರಾಮಯ್ಯ ದಾಖಲೆ ಬಜೆಟ್ ಬಿಟ್ಟರೆ ನ್ಯಾಯ ಸಿಕ್ಕಿಲ್ಲ: ಸಂಸದ ಕೋಟ

ಆಶಾದಾಯಕ ಬಜೆಟ್ ಅನ್ನೋ ನಿರೀಕ್ಷೆ ಸುಳ್ಳಾಗಿದೆ. ಗೋವು ಸಾಗಾಟ ಬಗ್ಗೆ ಕಟ್ಟುನಿಟ್ಟಾದ ಕ್ರಮಕ್ಕೆ ಸರ್ಕಾರ ಮುಂದಾಗಿಲ್ಲ. ಇನ್ನು ಗೋ ರಕ್ಷಣೆ ಶಿಬಿರ ನಡೆಸಲು ಕಾಂಗ್ರೆಸ್ ಮುಂದಾಗಿರೋದು ಅಭಾಸ ಸಂಗತಿ ಎಂದು ಹೇಳಿದರು.

Continue Reading

DAKSHINA KANNADA

ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ: ಸಚಿವ ದಿನೇಶ್ ಗುಂಡೂ ರಾವ್ ವಿರುದ್ಧ ಶಾಸಕ ಕಾಮತ್ ಗರಂ

Published

on

ಮಂಗಳೂರು: ನಗರದ ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ. ರಾಜ್ಯ ಸರಕಾರ ಈ ಯೋಜನೆಗೆ ಚಿಕ್ಕಾಸು ನೀಡದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ದಿನೇಶ್ ಗುಂಡೂ ರಾವ್ ಅವರು ಶಿಲಾನ್ಯಾಸ ನೆರವೇರಿಸಿದ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಗರಂ ಆಗಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಪಚ್ಚನಾಡಿ ಎಸ್.ಟಿ.ಪಿ ಆವರಣದಲ್ಲಿ ಮಂಗಳೂರು ನಗರದ ಒಳಚರಂಡಿ ವ್ಯವಸ್ಥೆಯ ನಿರ್ಮಾಣ ಮತ್ತು ಉನ್ನತೀಕರಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಗುದ್ದಲಿ ಪೂಜೆ ನಡೆಸಿ, ಮಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ವಾಸ್ತವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರವು ಕ್ಷೇತ್ರದ ಅಭಿವೃದ್ಧಿಗೆ ಕಳೆದ ಎರಡೂ ವರ್ಷಗಳಿಂದ ನಯಾ ಪೈಸೆ ನೀಡಿಲ್ಲ. ಮೊದಲು ಆ ಅನುದಾನ ಬಿಡುಗಡೆಗೊಳಿಸಿ ತನ್ನ ಬದ್ಧತೆಯನ್ನು ಪ್ರದರ್ಶಿಸಲಿ. ಸ್ವಚ್ಛ ಭಾರತ ಮಿಷನ್ 2.0 ಮತ್ತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಪರಿಸರ ಪರಿಹಾರ ನಿಧಿಯಡಿ, ಸುಮಾರು 40 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಎಸ್.ಟಿ.ಪಿ. ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಇದು ಸಂಪೂರ್ಣ ಕೇಂದ್ರ ಸರಕಾರದ ಅನುದಾನವಾಗಿದೆ.

ಇದನ್ನೂ ಓದಿ: ಸಿದ್ಧರಾಮಯ್ಯ ದಾಖಲೆ ಬಜೆಟ್ ಬಿಟ್ಟರೆ ನ್ಯಾಯ ಸಿಕ್ಕಿಲ್ಲ: ಸಂಸದ ಕೋಟ

ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಾದ ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ಸಹಿತ ಇಲ್ಲಿನ ಸಂಸದರಿಗೆ ಸರಿಯಾಗಿ ಮಾಹಿತಿ ನೀಡದಿರುವುದು ಮಂಗಳೂರಿಗೆ ಹಾಗೂ ಇಲ್ಲಿನ ಜನತೆಗೆ ಮಾಡುವ ಅವಮಾನವಾಗಿದೆ ಎಂದರು.

Continue Reading
Advertisement

Trending

Copyright © 2025 Namma Kudla News

You cannot copy content of this page