Connect with us

LATEST NEWS

ಧರ್ಮಸ್ಥಳಕ್ಕೆ ಹೊರಟ್ಟಿದ್ದ ಸ್ನೇಹಿತರು ಸಿಲುಕಿದ್ದು ಯಮನ ಪಾಶಕ್ಕೆ;ಓರ್ವ ಸಾವು ನಾಲ್ವರು ಗಂಭೀರ..!

Published

on

ಧರ್ಮಸ್ಥಳಕ್ಕೆ ಹೊರಟ್ಟಿದ್ದ ಸ್ನೇಹಿತರು ಸಿಲುಕಿದ್ದು ಯಮನ ಪಾಶಕ್ಕೆ;ಓರ್ವ ಸಾವು ನಾಲ್ವರು ಗಂಭೀರ..!

ಹಾಸನ: ಧರ್ಮಸ್ಥಳಕ್ಕೆ ಹೊರಟಿದ್ದ ನಾಲ್ವರು ಸ್ನೇಹಿತರ ಕಾರು ಚಾಲಕನ ನಿಯಂತ್ರಣ ತಪ್ಪಿ ತೆಂಗಿನ ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ   ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್‌ಪೋಸ್ಟ್‌ ಬಳಿ ಸಂಭವಿಸಿದೆ.ತಡ ರಾತ್ರಿ KA 53 MD 4411 ಐಟ್ವೆಂಟಿ ಕಾರಿನಲ್ಲಿ ಧರ್ಮಸ್ಥಳಕ್ಕೆ ಐವರು ಸ್ನೇಹಿತರು ಹೊರಟಿದ್ದರು. ದಾರಿ ಮಧ್ಯೆ ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ತೆಂಗಿನ ಮರಕ್ಕೆ ಗುದ್ದಿರುವ ಸಾಧ್ಯತೆಯಿದೆ. ಗುದ್ದಿದ ರಭಸಕ್ಕೆ ಕಾರಿನ ಗಾಜು ಪುಡಿ ಪುಡಿಯಾಗಿದ್ದು ಕಾರು ನಜ್ಜುಗುಜ್ಜಾಗಿದೆ.ಇನ್ನು ಕಾರಿನಲ್ಲಿದ್ದವರನ್ನು ಹೊರ ತೆಗೆಯಲು ಸ್ಥಳೀಯರು ಹರ ಸಾಹಸ ಪಡುವಂತಾಯ್ತು.ಘಟನೆಯಲ್ಲಿ ಬೆಂಗಳೂರು ಮೂಲದ ದೇವರಾಜು(38) ಮೃತಪಟ್ಟಿದ್ದಾರೆ. ಮಧುಕಿರಣ್, ಶ್ರೀನಿಧಿ, ಕೇಶವಯ್ಯ, ನಾಗರಾಜು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಾಳುಗಳಾಗಿದ್ದು ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚನ್ನರಾಯಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page