Connect with us

LATEST NEWS

ಸೈಕಲ್‌ ಗೆ ಢಿಕ್ಕಿ ಹೊಡೆದು ಕಾರು: ಸವಾರ ಮೃತ್ಯು

Published

on

ಕುಂದಾಪುರ: ಸೈಕಲ್ ಕಾರು ಢಿಕ್ಕಿ ಹೊಡೆದ ಪರಿಣಾಮ ಸೈಕಲ್‌ ಸವಾರ ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.


ಮೃತರನ್ನು ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್ ಎಂದು ಗುರುತಿಸಲಾಗಿದೆ. ಗಾಯಗೊಂಡ ರಾಮ ಕುಲಾಲ್ ಅವರನ್ನು ಗಂಗೊಳ್ಳಿ ಆಪತ್ಭಾಂದವ ಆ್ಯಂಬುಲೆನ್ಸ್ ಇಬ್ರಾಹೀಂ ಗಂಗೊಳ್ಳಿ ಕುಂದಾಪುರ ಆಸ್ಪತ್ರೆಗೆ ಸಾಗಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರು ದಾರಿಮಧ್ಯೆ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS

ಉಡುಪಿ ಖಾಸಗಿ ಬಸ್ ಚಾಲಕನ ಹುಚ್ಚಾಟಕ್ಕೆ ಬ್ರೇಕ್ ಹಾಕಿದ ಪೊಲೀಸರು..ಬಸ್ ಸಹಿತ ಚಾಲಕ ಅಂದರ್.!

Published

on

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಖಾಸಗಿ ಬಸ್ ಚಾಲಕನ ಹುಚ್ಚಾಟದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಉಡುಪಿ ಸಂಚಾರ ಠಾಣೆ ಪೊಲೀಸರು ಬಸ್ಸನ್ನು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.


ಖಾಸಗಿ ಬಸ್ ಚಾಲಕನೊಬ್ಬ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬಸ್ಸು 180 ಡಿಗ್ರಿ ಸುತ್ತಿದ ಭಯಾನಕ ಘಟನೆ ಉಡುಪಿ ನಗರದ ಬನ್ನಂಜೆ ಬಳಿ ನಿನ್ನೆ ನಡೆದಿತ್ತು. ಈ ಘಟನೆಯಿಂದ ಬಸ್ ನೊಳಗೆ ಕುಳಿತಿದ್ದ ಪ್ರಯಾಣಿಕರು ಒಮ್ಮೆ ಕಂಗಾಲಾಗಿದ್ದರು. ಇಷ್ಟಾದರೂ ಚಾಲಕನು ಏನೂ ಆಗದಂತೆ ಅತಿ ವೇಗದಿಂದ ಬಸ್ ಓಡಿಸಿದ್ದಾನೆ. ಮತ್ತೊಮ್ಮೆ ರಾಂಗ್ ಸೈಡ್ ನಲ್ಲಿ ಹೋಗಿ ಯೂಟರ್ನ್ ತೆಗೆದುಕೊಂಡು ಅತಿ ವೇಗದಿಂದ ಬಸ್ ಚಲಾಯಿಸಿದ್ದಾನೆ. ಬಸ್ ಚಾಲಕನ ಹುಚ್ಚಾಟಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿತ್ತು.

ಇದನ್ನೂ ಓದಿ: Watch Video: ಉಡುಪಿಯಲ್ಲಿ ದಿಢೀರ್‌ ಬ್ರೇಕ್ ಹಾಕಿ 180 ಡಿಗ್ರಿ ಸುತ್ತಿದ ಖಾಸಗಿ ಬಸ್

ಇದೀಗ ಉಡುಪಿ ಸಂಚಾರ ಠಾಣೆ ಪೊಲೀಸರು ಬಸ್ಸನ್ನು ವಶಕ್ಕೆ ಪಡೆದು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

 

Continue Reading

LATEST NEWS

ಏರ್‌ ಇಂಡಿಯಾ ವಿಮಾನ ದುರಂತ: ಸಹೋದರನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ವಿಶ್ವಾಸ್ ರಮೇಶ್‌

Published

on

ಮಂಗಳೂರು/ಅಹಮದಾಬಾದ್: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬ್ರಿಟನ್ ಪ್ರಜೆ ವಿಶ್ವಾಸ್ ಕುಮಾರ್ ರಮೇಶ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಅದೇ ದುರಂತದಲ್ಲಿ ಮೃತಪಟ್ಟ ಸಹೋದರ ಅಜಯ್ ರಮೇಶ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.


ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ಬ್ರಿಟನ್‌ನಿಂದ ದಿಯುಗೆ ಬಂದಿದ್ದ ಸಹೋದರರು ಜೂನ್ 12ರಂದು ಮರಳಿ ಲಂಡನ್‌ಗೆ ಹೊರಟಿದ್ದರು. ಈ ವೇಳೆ ವಿಮಾನ ಅಪಘಾತ ಸಂಭವಿಸಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ; ಕೊನೆಗೂ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಪರ್ಯಾಸವೆಂದರೆ ವಿಶ್ವಾಸ್ ಅವರ ಸಹೋದರ ಅಜಯ್ ರಮೇಶ್ ಸಾವನ್ನಪ್ಪಿದ್ದರು. ಹೀಗಾಗಿ ಅವರ ಡಿಎನ್‌ಎ ಗುರುತಿಸಲಾಗಿದ್ದು, ಇಂದು ದಿಯುವಿನಲ್ಲಿ ಬೆಳಿಗ್ಗೆ ಅಜಯ್ ಅವರ ಅಂತ್ಯಕ್ರಿಯೆ ನಡೆದಿದ್ದು, ವಿಶ್ವಾಸ್ ಕೂಡ ಅಲ್ಲಿ ಹಾಜರಿದ್ದರು ಎಂದು ವರದಿಯಾಗಿದೆ.

Continue Reading

LATEST NEWS

ಇನ್ನು ಮುಂದೆ 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

Published

on

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದೆ ಪಯಾಣಕ್ಕೆ ಅನುಕೂಲವಾಗುವಂತೆ ಫಾಸ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ.

3 ಸಾವಿರ ರೂಪಾಯಿಗೆ ವಾರ್ಷಿಕ ಟೋಲ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ.

READ IN ENGLISH : https://www.nammakudlaenglish.com/annual-toll-pass-for-%e2%82%b93000-from-now-on/

ಇದನ್ನೂ ಓದಿ: 6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್!?

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆ ಯಾಗಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page