Connect with us

LATEST NEWS

ಟ್ಯಾಂಕರ್‌ಗೆ ಕಾರು ಢಿಕ್ಕಿ: ಹೋಂಗಾರ್ಡ್‌ ಸಾವು

Published

on

ಉಡುಪಿ: ನಿಯಂತ್ರಣ ತಪ್ಪಿದ ಕಾರು ಟ್ಯಾಂಕರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.


ಮೃತರನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡಿರುವ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ .

ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಉದ್ಯಾವರದ ಬಳಿ ರಾಕೇಶ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ತೆರಳುತ್ತಿದ್ದ ಟ್ಯಾಂಕರ್ ನ ಹಿಂಭಾಗಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

DAKSHINA KANNADA

ಗಾಂಜಾ ಸೇವನೆ ಆರೋಪ; ನಾಲ್ವರ ಬಂಧನ

Published

on

ಮಂಗಳೂರು : ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ನಾಲ್ಕು ಮಂದಿಯನ್ನು ಕಂಕನಾಡಿ ನಗರ ಮತ್ತು ಉರ್ವ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. 

ಅಬ್ದುಲ್ ಖಾದರ್ ಸಹರನ್ , ಹರ್ಷಿತ್(22), ಆನಂದ ಗಿರೀಶ್ (27), ಅಶೋಕ್ (22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಜಪ್ಪಿನಮೊಗರು ಜಂಕ್ಷನ್ ಹತ್ತಿರ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ವೈನು ದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಇದೀಗ ಮೂವರು ಯುವಕರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಕಾರಿಗೆ ಲಾರಿ ಡಿಕ್ಕಿ ಹೊಡೆದು ಐವರ ಸಾವು

Published

on

ಬೆಂಗಳೂರು: ಎರಿಟಿಕಾ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶ ಕಾಣಿಪಾಕಂ ಸಮೀಪದ ತೋಟಪಲ್ಲಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

Continue Reading

LATEST NEWS

ಪರೀಕ್ಷಾರ್ಥಿಗಳಿಗೆ ಜನಿವಾರ, ಮಂಗಳಸೂತ್ರ ನಿಷೇಧ; ಆದೇಶ ಹಿಂಪಡೆದುಕೊಂಡ ರೈಲ್ವೇ ಇಲಾಖೆ

Published

on

ಮಂಗಳೂರು/ಬೆಂಗಳೂರು : ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗಲು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕೆಂದು ಸೂಚಿಸಿದ ವಿಚಾರ  ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಈ ವಿಚಾರವಾಗಿ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ರೈಲ್ವೆ ಸಚಿವ ವಿ.ಸೋಮಣ್ಣ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಎಪ್ರಿಲ್ 28, 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ.

ಇದನ್ನೂ ಓದಿ : ರಾಜ್ಯಪಾಲರ ಭೇಟಿಯಾದ ಬಿಜೆಪಿ; 18 ಶಾಸಕರ ಅಮಾನತು ರದ್ದುಗೊಳಿಸಲು ಮನವಿ

ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ. ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ.

ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಎಂದು ಬರೆದುಕೊಂಡಿದ್ದಾರೆ.



Continue Reading
Advertisement

Trending

Copyright © 2025 Namma Kudla News

You cannot copy content of this page