Connect with us

LATEST NEWS

ಫೇಸ್ ಬುಕ್ ನಲ್ಲಿ ನಾಥೂರಾಮ್ ಗೋಡ್ಸೆ ಪರ ಕಮೆಂಟ್ ಮಾಡಿದ ಶಿಕ್ಷಕಿ…!

Published

on

ಕೇರಳ: ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು ಎಂದು ಕೇರಳದ ಶಿಕ್ಷಕಿಯೋರ್ವರು ಫೆಸ್ ಬುಕ್ ನಲ್ಲಿ ಕಮೆಂಟ್ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿರುವ ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಕಮೆಂಟ್ ಮಾಡಿದ್ದಾರೆ.

ಹೀಗಾಗಿ ಮಹಿಳೆಯ ವಿರುದ್ಧ ತನಿಖೆಗಾಗಿ ಕ್ಯಾಲಿಕಟ್ ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಸಮಿತಿಯನ್ನು ರಚಿಸಲಾಗಿದೆ.ವಕೀಲ ಕೃಷ್ಣ ರಾಜ್ ಎಂಬವರ “ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಎಂಬ ಪೋಸ್ಟ್ ಗೆ ಶಿಕ್ಷಕಿ ಕಮೆಂಟ್ ಮಾಡಿದ್ದಾರೆ.

 

Advertisement
Click to comment

Leave a Reply

Your email address will not be published. Required fields are marked *

LATEST NEWS

ಬದಲಾಗಲಿದೆ ಬ್ಯಾಂಕ್ ಸೇವೆಗಳು; RBI ಹೊಸ ರೂಲ್ಸ್

Published

on

ಮಂಗಳೂರು/ನವದೆಹಲಿ : ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತರಲಿದೆ. ಮೇ 1 ರಿಂದ ಹೊಸ ನಿಯಮ ಜಾರಿಗೆ ಬರಲಿದೆ. ಎಟಿಎಂ ಕ್ಯಾಶ್ ವಿತ್‌ಡ್ರಾಶುಲ್ಕ ಹೆಚ್ಚಳ ಸೇರಿದಂತೆ ಹಲವು ನಿಯಮಗಳನ್ನು ಪರಿಷ್ಕರಿಸಲಾಗಿದೆ. ಎಟಿಎಂಗಳಿಂದ ಹಣ ವಿತ್‌ಡ್ರಾ ಮಾಡುವ ಸೇವಾ ಶುಲ್ಕವನ್ನು 2 ರೂ.ಗೆ ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಪಾವತಿ ನಿಗಮ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಇಂಟರ್‌ಚೇಂಜ್ ಶುಲ್ಕವನ್ನು ಹೆಚ್ಚಿಸಿದೆ. ಈ ಹಿಂದೆ ಪ್ರತಿ ವಹಿವಾಟಿಗೆ 17 ರೂ. ವಿಧಿಸಲಾಗಿತ್ತು. ಇನ್ನು ಮುಂದಕ್ಕೆ 19 ರೂಪಾಯಿ ಪಾವತಿಸಬೇಕಾಗುತ್ತದೆ.ಎಟಿಎಂ ಇಂಟರ್‌ಚೇಂಜ್ ಶುಲ್ಕ ಅಂದರೆ ಎಟಿಎಂ ಸೇವೆ ಒದಗಿಸುವುದಕ್ಕಾಗಿ ಒಂದು ಬ್ಯಾಂಕ್ ಮತ್ತೊಂದು ಬ್ಯಾಂಕ್‌ಗೆ ವಿಧಿಸುವ ಶುಲ್ಕವಾಗಿದೆ.

ನಿಗದಿತ ಮಿತಿಯನ್ನು ಮೀರಿ ಹೆಚ್ಚು ಬಾರಿ ವಿತ್‌ ಡ್ರಾ ಮಾಡಿದರೆ ಆಗ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗಿದ್ದು, ಇದನ್ನು 1 ರಿಂದ 2 ರೂ.ವರೆಗೆ ಹೆಚ್ಚಳ ಮಾಡಲಾಗುತ್ತಿದೆ. ಅಕೌಂಟ್ಸ್ ಬ್ಯಾಲೆನ್ಸ್ ಪರಿಶೀಲನೆ ಸೇರಿದಂತೆ ನಾನ್ ಟ್ರಾನ್ಸಾಕ್ಷನ್ ಶುಲ್ಕ 6 ರೂ. ಇದ್ದುದು 7 ರೂ. ವರೆಗೆ ಆಗಲಿದೆ ಎಂದು ತಿಳಿದುಬಂದಿದೆ.

ಮಿನಿಮಮ್ ಬ್ಯಾಲೆನ್ಸ್ ಶುಲ್ಕವನ್ನೂ ಪರಿಷ್ಕರಿಸಲಾಗುತ್ತಿದ್ದು, ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಯಮ ಜಾರಿಗೆ ಬರುವ ಸಾಧ್ಯತೆಗಳಿವೆ.

ಸೇವಿಂಗ್ಸ್ ಬ್ಯಾಂಕ್ ಅಕೌಂಟ್ಸ್‌ನಲ್ಲಿ 100 ರೂ ಇದ್ದವರಿಗೂ ಶೇ.4, 1 ಲಕ್ಷ ಇಟ್ಟವರಿಗೂ ಅಷ್ಟೇ  ಬಡ್ಡಿದರ ಸಿಗುತ್ತದೆ. ಈ ನಿಯಮದಲ್ಲೂ ಬದಲಾವಣೆ ಮಾಡುವ ಯೋಜನೆ ಇದ್ದು, ಹೆಚ್ಚು ಹಣಕ್ಕೆ ಹೆಚ್ಚು, ಕಡಿಮೆ ಹಣಕ್ಕೆ ಕಡಿಮೆ ಬಡ್ಡಿದರ ನಿಗದಿ ಮಾಡಲಾಗುತ್ತಿದೆ.

ಇದನ್ನೂ ಓದಿ : ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಹೊಸ ಟೋಲ್ ರೇಟ್ ..! ಎಷ್ಟು ಹೆಚ್ಚಾಗಲಿದೆ ಗೊತ್ತಾ ?

ಎಸ್‌ಬಿಐ, ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಮೊದಲಾದ ಪ್ರಮುಖ ಬ್ಯಾಂಕ್‌ಗಳು ತಮ್ಮ ವಿಸ್ತಾರ ಕ್ರೆಡಿಟ್ ಕಾರ್ಡ್‌ಗಳ ನಿಯಮದಲ್ಲಿ ಬದಲಾವಣೆ ಮಾಡುತ್ತಿವೆ.

 

Continue Reading

LATEST NEWS

PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಆರೋಪಿಗಳು ಅರೆಸ್ಟ್

Published

on

ಬೆಂಗಳೂರು: PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು. ಅಲ್ಲದೇ ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ.

ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ. ಇವರಿಂದ ನಕಲಿ ಅಂಕಪಟ್ಟಿ ಪಡೆದ ಜನರು ಸಾರಿಗೆ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳು 5 ರಿಂದ 10 ಸಾವಿರ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು.

Continue Reading

LATEST NEWS

ಅಪ*ಘಾತದಲ್ಲಿ ಮಗನ ದುರ್ಮ*ರಣ; ಕೋಮಾಕ್ಕೆ ಜಾರಿದ್ದ ತಾಯಿಯೂ ಸಾ*ವು

Published

on

ಮಂಗಳೂರು/ಶಿರ್ವ: ಪುತ್ರ ಶೋಕಂ ನಿರಂತರಂ ಎನ್ನುವ ಹಾಗೆ, ಅಪ*ಘಾತದಲ್ಲಿ ಮೃ*ತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ.


ಮೃ*ತ ಬೈಕ್‌ ಸವಾರನನ್ನು ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್ ಮೂಲ್ಯ (51). ಪುತ್ರನ ಸಾವಿನ ಶೋಕದಿಂದ ಸಾವನ್ನಪ್ಪಿದ ಇಂದಿರಾ ಮೂಲ್ಯ (74) ಮೃತ ತಾಯಿ. ಮೃತ ರಮೇಶ್ ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಅಷ್ಟಕ್ಕೂ ಮಾ.23 ರಂದು ಬಂಟಕಲ್ಲಿನಿಂದ ಬಿ ಸಿ ರೋಡ್-ಪಾಂಬೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಪಾಂಬೂರು ಬಳಿ ಡಿ*ಕ್ಕಿ ಹೊಡೆದು ಬೈಕ್ ಸವಾರ ರಮೇಶ್ ಮೂಲ್ಯ ತೀವ್ರ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಾ. 24ರಂದು ರಾತ್ರಿ ಅವರು ಮೃ*ತಪಟ್ಟಿದ್ದರು.

ಇದನ್ನೂ ಓದಿ: ಆಟವಾಡುತ್ತಿದ್ದಾಗ ಟ್ರ್ಯಾಕ್ಟರ್‌ ಹರಿದು 5 ವರ್ಷದ ಮಗು ಸಾವು

ಪುತ್ರನ ಸಾವಿನ ಸುದ್ದಿ ಕೇಳಿ ಆಘಾತಗೊಂಡ ತಾಯಿ
ಬೈಕ್ ಅಪ*ಘಾತದಲ್ಲಿ ಮೃ*ತಪಟ್ಟ ರಮೇಶ್ ಅವರ ಮೃತ ದೇಹವನ್ನು ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ (74) ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ತೆರಳಿದ್ದು, ಮಂಗಳವಾರ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಇಂದಿರಾ ಮೂಲ್ಯ ಅವರು ಮೃ*ತಪಟ್ಟಿದ್ದಾರೆ. ದಿನದ ಅಂತರದಲ್ಲಿ ತಾಯಿ-ಮಗ ಇಬ್ಬರೂ ಮೃ*ತಪಟ್ಟಿದ್ದು, ಮೃ*ತರ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page