Connect with us

LATEST NEWS

ಜಿ.ಪಂ. ಯೋಗೇಶ್ ಗೌಡ ಕೊಲೆ ಪ್ರಕರಣ : ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ..!

Published

on

ಜಿ.ಪಂ. ಯೋಗೇಶ್ ಗೌಡ ಕೊಲೆ ಪ್ರಕರಣ : ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ..!

ಧಾರವಾಡ: 2016 ರಲ್ಲಿ ನಡೆದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಕೈಗೆತ್ತಿಕೊಂಡಿರುವ ಸಿಬಿಐ ಇಂದು ಮುಜಾನೆಯೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದೆ.

ಧಾರವಾಡ ಕಲ್ಯಾಣ ನಗರದಲ್ಲಿರುವ ಮನೆಗೆ ತೆರಳಿದ ಆರು ಜನರಿದ್ದ ಸಿಬಿಐ ಅಧಿಕಾರಿಗಳು  ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆಂದು ಕರೆದೊಯ್ದಿದ್ದಾರೆ.

ಧಾರವಾಡ ಉಪನಗರ ಠಾಣೆಗೆ ಕರೆದೊಯ್ದು ಅಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ ಮಧ್ಯಭಾಗದಲ್ಲಿ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನೂ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

ಪ್ರಕರಣದ ಹಿನ್ನೆಲೆ: 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಉದಯ್ ಜಿಮ್ ಬಳಿ ಯೋಗೀಶ್​ ಗೌಡರನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ‌ ಕೊಲೆ ಮಾಡಿತ್ತು.

ಪ್ರಕರಣದ ಗಂಭೀರತೆ ಅರಿತ ಸರ್ಕಾರ‌ 2019ರಲ್ಲಿ ಈ ಕೇಸನ್ನು ಸಿಬಿಐಗೆ ವರ್ಗಾಯಿಸಿತ್ತು. 6 ಆರೋಪಿಗಳ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿತ್ತು. ಸಿಬಿಐ ತನಿಖೆ ಪ್ರಶ್ನಿಸಿ ಬಸವರಾಜ ಮುತ್ತಗಿ ಕೋರ್ಟ್ ಮೊರೆ ಹೋಗಿದ್ದರು.

ಆಗ, ಸಿಬಿಐ ತನಿಖೆಗೆ ಧಾರವಾಡ ಹೈಕೋರ್ಟ್‌ ವಿಭಾಗೀಯ ಪೀಠ ತಡೆ ನೀಡಿತ್ತು. ಈ ಆದೇಶದ ವಿರುದ್ಧ ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟಿನ ಮೊರೆ ಹೋಗಿದ್ದರು.

ಬಳಿಕ ತಡೆಯಾಜ್ಞೆ ತೆರವುಗೊಳಿಸಿದ ಸುಪ್ರೀಂಕೋರ್ಟ್‌, ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ಟಿತ್ತು.‌ ತದನಂತರ ಸಿಬಿಐ ಟೀಂ ಬೆಂಗಳೂರು ಮತ್ತು ತಮಿಳುನಾಡು ಮೂಲದ ಅಶ್ವತ್ಥ್‌, ಪುರುಷೋತ್ತಮ ಸೇರಿ ಐವರು ಆರೋಪಿಗಳನ್ನು ಬಂಧಿಸಿತ್ತು.

ಬಸವರಾಜ್‌ ಮುತ್ತಗಿ ಕಡೆಯಿಂದ ಯೋಗೀಶ್‌ಗೌಡ ಕೊಲೆಗೆ ಸುಫಾರಿ ಪಡೆದಿರುವ ಆರೋಪವಿದೆ.

ಇದೇ ಕೇಸ್​ನಲ್ಲಿ ಹುಬ್ಬಳ್ಳಿ-ಧಾರವಾಡ ನಗರದ ಮಾಜಿ ಪೊಲೀಸ್ ಕಮಿಷನರ್ ಪಾಂಡುರಂಗ ಎಚ್‌. ರಾಣೆಗೆ ಸಿಬಿಐ ನೋಟಿಸ್ ನೀಡಿತ್ತು.

ಬಳಿಕ ಪಾಂಡುರಂಗ ರಾಣೆ ಅವರು ಬೆಂಗಳೂರಿನ ಸಿಬಿಐ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಈ ವೇಳೆ ಯೋಗೀಶ್ ಗೌಡ ಕೊಲೆ ಪ್ರಕರಣ ಕುರಿತು ಆಗ ಏನೆಲ್ಲ ಕ್ರಮ ಕೈಗೊಳ್ಳಲಾಗಿತ್ತು? ಘಟನೆ ಸಂಬಂಧ ಯಾವೆಲ್ಲ ಸಾಕ್ಷ್ಯಧಾರ ಪತ್ತೆಯಾಗಿತ್ತು?.. ಹೀಗೆ ಹಲವಾರು ಆಯಾಮದಲ್ಲಿ ವಿಚಾರಣೆ ನಡೆದಿದೆ.

LATEST NEWS

ಚೀನಾ: ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 20 ಜನ ಸಾವು

Published

on

ಚೀನಾ: ರೆಸ್ಟೋರೆಂಟ್‌ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 20 ಮಂದಿ ಸಾವನ್ನಪ್ಪಿದ್ದು, 3 ಮಂದಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಚೀನಾದ ಉತ್ತರ ನಗರ ಲೀಯಾವೊಯಾಂಗ್‌ನ ಚುನಿಯಾಂಗ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬೈರನ್ ವಾನ್ ಎನ್ನುವ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ 43 ಸೆಕೆಂಡುಗಳ ವಿಡಿಯೋದಲ್ಲಿ ಅಗ್ನಿ ಜ್ವಾಲೆ ಮುಗಿಲೆತ್ತರಕ್ಕೆ ಚಿಮ್ಮುತ್ತಿರುವುದನ್ನು ಕಾಣಬಹುದು.

ಅಗ್ನಿ ವ್ಯಾಪಿಸುತ್ತಿದ್ದಂತೆ ಅಕ್ಕಪಕ್ಕದಲ್ಲಿದ್ದ ಜನರು ಕಾಲ್ಕಿತ್ತಿದ್ದಾರೆ. ಇನ್ನೂ ಕೆಲವರು ಘಟನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿಯುವಲ್ಲಿ ನಿರತರಾಗಿದ್ದರು.

ಪ್ರಾಥಮಿಕ ಮೂಲಗಳ ಪ್ರಕಾರ ಮೊದಲು ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ರೆಸ್ಟೋರೆಂಟ್‌ಗೆ ವ್ಯಾಪಿಸಿದೆ. ಈ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ.

Continue Reading

LATEST NEWS

ಅಮೆರಿಕದ ದೇಗುಲದಲ್ಲಿ ಪ್ರಧಾನಿ ಹೆಸರಿನಲ್ಲಿ ಪೂಜೆ ಸಲ್ಲಿಸಿದ ಅಣ್ಣಾಮಲೈ

Published

on

ಮಂಗಳೂರು : ಅಮೆರಿಕದ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಲಾಗಿದೆ. ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಈ ಪೂಜೆ ನೆರವೇರಿಸಿದ್ದು, ಪ್ರಧಾನಿ ಹಾಗೂ ಸೈನ್ಯಕ್ಕೆ ಶಕ್ತಿ ತುಂಬುವಂತೆ ಕೃಷ್ಣನಲ್ಲಿ ಪ್ರಾರ್ಥಿಸಿದ್ದಾರೆ.

ಅಮೆರಿಕದ ಫೀನಿಕ್ಸ್ ಮಹಾನಗರದಲ್ಲಿ ಇರುವ ಕೃಷ್ಣ ಮಂದಿರಲ್ಲಿ ಈ ಪೂಜೆ ಸಲ್ಲಿಸಿದ್ದಾರೆ. ಅಲ್ಲಿನ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ತೆರಳಿದ್ದ ಅಣ್ಣಾಮಲೈ, ಉಡುಪಿ ಪುತ್ತಿಗೆ ಮಠಕ್ಕೆ ಸೇರಿದ ಕೃಷ್ಣ ಮಂದಿರದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

 

 

Continue Reading

LATEST NEWS

ಹಿಂದೂಗಳೇ, ನಿಮ್ಮ ಮನೆಯಲ್ಲಿ ತಲ್ವಾರ್, ಮಹಿಳೆಯರು ಬ್ಯಾಗ್‌ನಲ್ಲಿ ಚೂರಿ ಇಟ್ಕೊಳ್ಳಿ : ಕಲ್ಲಡ್ಕ ಪ್ರಭಾಕರ ಭಟ್

Published

on

ಮಂಗಳೂರು/ಮಂಜೇಶ್ವರ : ಹಿಂದೂ ಮುಸ್ಲಿಂ ಗಲಾಟೆ ಆದ್ರೆ ಹಿಂದೂಗಳು ಓಡುವ ಕಾಲ ಒಂದು ಇತ್ತು. ಈಗ ಕೈ ತೋರಿಸಿದ್ರೆ ಮುಸ್ಲಿಮರು ಓಡಿ ಹೋಗ್ತಾರೆ. ಹೀಗಾಗಿ ನಿಮ್ಮ ಮನೆಯಲ್ಲಿ ಒಂದು ತಲ್ವಾರ್ ಯಾವಾಗಲೂ ಇಟ್ಟುಕೊಳ್ಳಿ ಮತ್ತು ಮಹಿಳೆಯರು ಚೂರಿ ಇಟ್ಟುಕೊಳ್ಳಿ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪೆಹಲ್ಗಾಮ್ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಅಲ್ಲಿ ಉಗ್ರರಿಗೆ ತಲ್ವಾರ್ ತೋರಿಸಿದ್ರೂ ಸಾಕಿತ್ತು ಓಡಿ ಹೋಗ್ತಾ ಇದ್ರು. ಮಹಿಳೆಯರು ತಮ್ಮ ಬ್ಯಾಗಿನಲ್ಲಿ ಸ್ನೋ ಪೌಡರ್ ಬಾಚಣಿಗೆ ಜೊತೆಯಲ್ಲಿ ಆರು ಇಂಚಿನ ಚೂರಿ ಇಟ್ಟುಕೊಳ್ಳಿ, ಅದಕ್ಕೆ ಲೈಸೆನ್ಸ್ ಬೇಡ.

ಇದನ್ನೂ ಓದಿ : ಅಮೆರಿಕದಲ್ಲಿ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಮೈಸೂರು ಉದ್ಯಮಿ

ಸಂಜೆ ಆರು, ಏಳು ಗಂಟೆ ಬಳಿಕ ನಿಮ್ಮ ಮೇಲೆ ಆಕ್ರಮಣ ಮಾಡುತ್ತಾರೆ. ಆವಾಗ ಕೈ ಮುಗಿದು ಬೇಡಿಕೊಳ್ಳದೆ ಚೂರಿ ತೆಗೆದು ತೋರಿಸಿ ಎಂದು ಪ್ರಭಾಕರ್ ಭಟ್ ಕರೆ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page