Connect with us

DAKSHINA KANNADA

ಪುತ್ತೂರು : ಭಕ್ತಿಭಾವದಿಂದ ನೆರವೇರಿತು ಮೌಂಡಿ (ಪವಿತ್ರ) ಗುರುವಾರದ ಆಚರಣೆ

Published

on

ಪುತ್ತೂರು : ಪುತ್ತೂರಿನ ಮಾಯ್‌ದೆ ದೇವುಸ್ ಚರ್ಚಿನಲ್ಲಿ ಮೌಂಡಿ (ಪವಿತ್ರ)ಗುರುವಾರದ ಪವಿತ್ರ ಆಚರಣೆ ಭಕ್ತಿಭಾವದಿಂದ ನಡೆಯಿತು. ಈ ವಿಶೇಷ ಧರ್ಮಾಚರಣೆಯಲ್ಲಿ ಮುಖ್ಯ ಗುರುಗಳಾಗಿ ವಂದನೀಯ. ರೂಪೇಶ್ ತಾವ್ರೋ ಬಲಿಪೂಜೆ ನೆರವೇರಿಸಿದರು.

ಪೂಜೆಯಲ್ಲಿ ಶ್ರದ್ಧಾವಂತರ ಭಾಗಿವಹಿಸುವಿಕೆ ಗಮನಸೆಳೆಯಿತು. ಧರ್ಮೋಪದೇಶವನ್ನು ವಂದನೀಯ ರಾಯನ್ ಕ್ರಾಸ್ತಾ ನೀಡಿದರು, ಅವರು ಈ ದಿನದ ಮಹತ್ವವನ್ನು ವಿವರಿಸುತ್ತಾ “ಏಸುಕ್ರಿಸ್ತರು ತನ್ನ ಶಿಷ್ಯರ ಪಾದಗಳನ್ನು ಶುದ್ಧೀಕರಿಸುವ ಮುಖಾಂತರ ಎಲ್ಲಾ ಪ್ರಜೆಗಳಿಗೆ ಇತರರ ಪಾದಗಳನ್ನು ತೊಳೆಯಲು ಕರೆಕೊಟ್ಟರು. ಪಾದಗಳನ್ನು ತೊಳೆಯುವುದು ಅಂದರೆ ಇತರರ ಸೇವೆ ಮಾಡುವುದು ಇತರರ ಅಗತ್ಯಗಳಿಗೆ ನಾವು ಸ್ಪಂದಿಸುವುದು ಹಾಗೆಯೇ ದಯೆಯನ್ನು ತೋರಿಸುವುದು. ಏಸುಕ್ರಿಸ್ತರು ತನಸ್ರೊಂದಿಗೆ ಕೊನೆಯ ಭೋಜನವನ್ನು ಮಾಡಿದರು ಈ ಗೋವಾ ಭೋಜನದಲ್ಲಿ ರೊಟ್ಟಿಯನ್ನು ಹಂಚಿದರು ಹಾಗೆಯೇ ದ್ರಾಕ್ಷಾ ರಸವನ್ನು ಹಂಚಿದರು ಈ ಮೂಲಕ ಯೇಸುಕ್ರಿಸ್ತರು ತಮ್ಮ ಜೀವನವನ್ನು ಪರರೊಂದಿಗೆ ಹಂಚಿಕೊಳ್ಳಲು ಕರೆಕೊಟ್ಟರು ನಾವು ಎಲ್ಲರ ಪ್ರೀತಿಯನ್ನು ಮಾಡಿ ಬದುಕಬೇಕು” ಎಂದು ಒತ್ತಿಹೇಳಿದರು.

ಶಿಷ್ಯರ ಪಾದ ತೊಳೆಯುವ ಆಚರಣೆಯನ್ನು ಅತೀ ವಂದನೀಯ ಲಾರೆನ್ಸ್ ಮಸ್ಕರೆನಸ್‌ರವರು ನೆರವೇರಿಸಿದರು. ಅವರೊಂದಿಗೆ ವಂದನೀಯ ಲೋಹಿತ್ ಮಸ್ಕರೆನಸ್ ಮತ್ತು ವಂದನೀಯ ಮ್ಯಾಕ್ಸಿಂ ಡಿಸೋಜಾ ರವರು ಬಲಿಪೂಜೆಯಲ್ಲಿ ಭಾಗವಹಿಸಿದರು. ಮೌಂಡಿ ಗುರುವಾರವು ಪವಿತ್ರ ವಾರದ ಪ್ರಮುಖ ಭಾಗವಾಗಿದ್ದು, ಈ ದಿನ ಯೇಸು ತನ್ನ ಶಿಷ್ಯರೊಂದಿಗೆ ಅಂತಿಮ ಭೋಜನವನ್ನು ಮಾಡಿದದಾದ ದಿನ. ಈ ದಿನವೇ ಕ್ರಿಸ್ತನು ತನ್ನ ಶಿಷ್ಯರಿಗೆ ಸತ್ಯ ಸೇವೆಯ ಪಾಠವನ್ನು ಕಲಿಸಿದರು. ಚರ್ಚಿನಲ್ಲಿ ನಡೆದ ಈ ಆಚರಣೆ ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಉಂಟುಮಾಡಿತು

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page