Connect with us

LATEST NEWS

ದುರಂ*ತಕ್ಕೆ ಸಾಕ್ಷಿಯಾಯಿತೇ ‘ಚಾಲಿಯಾರ್’!: ನದಿಯಲ್ಲಿ ತೇಲಿ ಬರುತ್ತಿವೆ ಶ*ವಗಳು

Published

on

ಮಂಗಳೂರು/ವಯನಾಡ್ : ಕೇರಳದ ಮೂರು ಜಿಲ್ಲೆಗಳ ಜೀವನದಿ ‘ಚಾಲಿಯಾರ್’ ಈಗ ವಯನಾಡ್ ದುರಂ*ತದ ಸಾಕ್ಷಿ ಎಂಬಂತೆ ಹೆಣಗಳನ್ನು ಹೊತ್ತು ತರುತ್ತಿದೆ. ‘ಚಾಲಿಯಾರ್’ ವಯನಾಡ್, ಮಲಪ್ಪುರಂ ಹಾಗೂ ಕೋಯಿಕ್ಕೋಡ್ ಜಿಲ್ಲೆಯ ಪ್ರಮುಖ ನದಿ. ಆದರೆ, ಈಗ ಚಿತ್ರಣವೇ ಬದಲಾಗಿದ್ದು, ನೋವಿನ ಕಡಲಾಗಿ ಹರಿಯುತ್ತಿದೆ.


ದುರಂ*ತದಲ್ಲಿ ಇಹಲೋಕ ಯಾತ್ರೆ ಮುಗಿಸಿರುವವರ ಹೆ*ಣಗಳು ನದಿಯಲ್ಲಿ ತೇಲಿ ಬರುತ್ತಿದ್ದು, ನೌಕಾಪಡೆ, ಪೊಲೀಸರು, ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಹಾಗೂ ಸ್ಥಳೀಯರು ಶ*ವಗಳನ್ನು ಹೊರತೆಗೆಯುತ್ತಿದ್ದಾರೆ. ಭೀ*ಕರ ಭೂಕು*ಸಿತದಿಂದ ವಯನಾಡು ಅಕ್ಷರಶಃ ನಲುಗಿ ಹೋಗಿದೆ. ಸಾ*ವಿನ ಸಂಖ್ಯೆ ಏರುತ್ತಿದೆ. ಮೃ*ತರ ಸಂಖ್ಯೆ 350 ಕ್ಕೂ ಅಧಿಕ.  ಸುಂದರ ಪ್ರಕೃತಿ ಸೊಬಗಿನಿಂದ ಕಂಗೊಳಿಸುತ್ತಿದ್ದ ವಯನಾಡು ಮನಕಲಕುವ ದೃಶ್ಯವಾಗಿ ಬದಲಾಗಿದ್ದು, ಸಂಕಟ ಉಣಬಡಿಸುತ್ತಿದೆ.

ಮುಂದುವರಿದ ಕಾರ್ಯಾಚರಣೆ :

ಸದ್ಯ ರಕ್ಷಣಾ ಕಾರ್ಯಾಚರಣೆ 6 ನೇ ದಿನಕ್ಕೆ ಕಾಲಿಟ್ಟಿದೆ. ಮೃ*ತದೇಹಗಳನ್ನು ಹೊರತೆಗೆಯುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಬಲ ಮತ್ತು ಉಪಕರಣಗಳನ್ನು ನಿಯೋಜಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಾಪತ್ತೆಯಾದವರ ಹುಡುಕಾಟವೂ ಮುಂದುವರಿದಿದೆ. ಸುಧಾರಿತ ರಾಡಾರ್, ಡ್ರೋನ್ ಹಾಗೂ ಭಾರಿ ಯಂತ್ರೋಪಕರಣಗಳ ಬಳಸಲಾಗುತ್ತಿದೆ.

ಇದನ್ನೂ ಓದಿ  : ಕುಂದಾಪುರ : ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ, ವಿಕೃ*ತಿ ಮೆರೆದ ಪತಿ
ವಯನಾಡ್, ಮಲಪ್ಪುರಂ ಹಾಗೂ ಕೋಯಿಕ್ಕೋಡ್ ನಲ್ಲಿ ಹರಿವ ಚಾಲಿಯಾರ್ ನದಿಯ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

hasana

ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Published

on

ಹಾಸನ: ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣದೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ.


ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕ (29) ಎಂಬುವವರು ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದಕ್ಕೆ ಆಗಮಿಸಿದ್ದರು. ಫೆಬ್ರವರಿ 12 ರಂದು ರಾತ್ರಿ 7-30 ರ ಸುಮಾರಿಗೆ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕ ತಮಗೆ ಯಾರೋ ಪರಿಚಯದವರು ಸಿಕ್ಕಿರುವುದಾಗಿ ತಿಳಿಸಿದ್ದರು. ಆ ಮಾತು ಮುಗಿಯುತ್ತಿದ್ದಂತೆಯೇ ಫೋನ್‌ ಸ್ವಿಚ್‌ ಆಫ್‌ ಆಗಿದೆ.

ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರೂ ಸಹ ಸ್ಪಂದಿಸಿದ ಅರೆಹಳ್ಳಿ ಮತ್ತು ಬೇಲೂರು ಪೊಲೀಸರ ವಿರುದ್ಧ ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಮಹಿಳೆಯ ಬ್ಯಾಗ್, ಚಪ್ಪಲಿ ಹಾಗೂ ಒಳ ಉಡುಪುಗಳು ಪತ್ತೆಯಾಗಿರುವುದು ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಮಹಿಳೆಯು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಚಿನ್ನಾಭರಣಗಳನ್ನು ಧರಿಸಿದ್ದರು ಎಂದು ಹೇಳಲಾಗುತ್ತಿದೆ. ಒಡವೆಗಾಗಿ ದುಷ್ಕರ್ಮಿಗಳು ಮಹಿಳೆಯನ್ನ ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸರು ಈಗ ತನಿಖೆ ಚುರುಕುಗೊಳಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಜಯ ವಿಜಯ ಕಂಬಳಕ್ಕೆ ಚಾಲನೆ

Published

on

ಮಂಗಳೂರು :  ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 16 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು(ಫೆ.14) ಬೆಳಗ್ಗೆ ಚಾಲನೆ ದೊರೆತಿದೆ.

ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿ ಮೆನ್ನು ತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥಈ ಕಂಬಳ ನಡೆಯುತ್ತಿದೆ. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್‌ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ನುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಬಿಜೆಪಿ ನಾಯಕ ಮೋನಪ್ಪ ಭಂಡಾರಿ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌, ಪ್ರವೀಣ್‌ಚಂದ್ರ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Continue Reading

LATEST NEWS

ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

Published

on

ಮಂಗಳೂರು/ಬೆಂಗಳೂರು :  ಗಿರಿನಗರದ ಬ್ಯಾಂಕ್ ಶಾಖೆಯಲ್ಲಿ ಕೋಟಿಗಟ್ಟಲೆ ಮೌಲ್ಯದ  ಚಿನ್ನಕ್ಕೆ ಕನ್ನ ಹಾಕಲಾಗಿದೆ. ಸುಮಾರು 4 ಕೋಟಿ ಮೌಲ್ಯದ ಚಿನ್ನಾಭರಣ ಕದಿಯಲಾಗಿದೆ. ತನಿಖೆ ವೇಳೆ ಬೇಲಿಯೇ ಎದ್ದು ಹೊಲ ಮೇಯ್ದಿರುವ ಕಥೆ ಇದು ಎಂಬುದು ಬಯಲಾಗಿದೆ.  ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್​ ಕಿರಣ್ ಕುಮಾರ್‌ನಿಂದ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಬೆಟ್ಟಿಂಗ್‌ಗಾಗಿ ಕೃ*ತ್ಯ :

ಕಿರಣ್ ಕುಮಾರ್ ಗಿರಿನಗರದ ಬ್ಯಾಂಕೊಂದರ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಮ್ಯಾನೇಜರ್ ಇಲ್ಲದ ವೇಳೆ ಸ್ವಲ್ಪಸ್ವಲ್ಪ ಚಿನ್ನ ಕದಿಯುತ್ತಿದ್ದ. ಬ್ಯಾಂಕ್‌ನಲ್ಲಿ ಅಡ ಇಟ್ಟಿದ್ದ ಗ್ರಾಹಕರ ಚಿನ್ನಾಭರಣವನ್ನು ಕದ್ದು ಬೆಟ್ಟಿಂಗ್ ಗೇಮ್ ಆಡುವ ಚಟಕ್ಕಿಳಿದಿದ್ದ ಈತ, ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದಿದ್ದಾನೆ ಎಂದು ತಿಳಿದು ಬಂದಿದೆ.

ಗ್ರಾಹಕರು ತಮ್ಮ ಅಡವಿಟ್ಟ ಚಿನ್ನ ಪಡೆಯಲು ಬಂದಾಗ ಲಾಕರ್ ಪರಿಶೀಲನೆ ನಡೆಸಿದ ವೇಳೆ ಕೆಲವು ಚಿನ್ನಾಭರಣಗಳ ನಾಪತ್ತೆ ಪತ್ತೆಯಾಗಿತ್ತು. ಬಳಿಕ ಇತರೆ ಪ್ಯಾಕೇಟ್ ಪರಿಶೀಲಿಸಿದ ಮ್ಯಾನೇಜರ್ 21 ಪ್ಯಾಕೇಟ್‌ಗಳಲ್ಲಿ ಕೆಲವು ಹಾಗೂ 3 ಪ್ಯಾಕೇಟ್‌ಗಳಲ್ಲಿ ಸಂಪೂರ್ಣ ಚಿನ್ನ ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಸುಮಾರು 4 ಕೋಟಿ ರೂ. ಮೌಲ್ಯದ 2,783 ಗ್ರಾಂ ಚಿನ್ನ ಕಾಣೆಯಾಗಿದೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ : ಅವಳಿ ಮಕ್ಕಳ ಹೆಸರು ರಿವೀಲ್ ಮಾಡಿದ ನಟ ರಾಮ್ ಚರಣ್; ವ್ಹಾವ್ ಅಂದ್ರು ಫ್ಯಾನ್ಸ್!

ವಿಚಾರಣೆ ವೇಳೆ ಕೃತ್ಯ ತಪ್ಪೊಪ್ಪಿಕೊಂಡಿದ್ದ ಕಿರಣ್, ಕದ್ದ ಚಿನ್ನವನ್ನು ಬೇರೆ ಬೇರೆ ಅಂಗಡಿಯಲ್ಲಿ ಗಿರವಿ ಹಾಕಿ ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಬಳಸಿದ್ದನು ಎನ್ನಲಾಗಿದೆ. ಈತನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈಗಾಗಲೇ 700 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಉಳಿದ ಚಿನ್ನ ಮತ್ತು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page