Connect with us

MANGALORE

ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯಿಂದ ‘ಚಂಡಿಕಾ ಹವನ’

Published

on

ಮಂಗಳೂರು: ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠ ಸಂಸ್ಥಾನದ ಶಾಖಾ ಮಠದಲ್ಲಿ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮೊಕ್ಕಾಂನಲ್ಲಿದ್ದು ಈ ಪ್ರಯುಕ್ತ ಶ್ರೀ ದೇವಳದಲ್ಲಿ ” ಚಂಡಿಕಾ ಹವನ ” ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು.


ಪ್ರಾತಃ ಕಾಲ ಸಂಸ್ಥಾನದ ದೇವರ ನೈರ್ಮಾಲ್ಯ ಪೂಜೆ ನಡೆದ ಬಳಿಕ ಶ್ರೀ ವೆಂಕಟರಮಣ ಹಾಗೂ ಶ್ರೀ ಮಹಾಲಸಾ ನಾರಾಯಣಿ ದೇವರಿಗೆ ಶ್ರೀಗಳಿಂದ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ವೇದ ಮೂರ್ತಿ ಎಚ್. ಯೋಗೀಶ್ ಭಟ್, ಸತೀಶ್ ಪೈ ,

ಶಾಖಾ ಮಠದ ವ್ಯವಸ್ಥಾಪಕ ಸಮಿತಿಯ ಡಿ. ವಾಸುದೇವ ಕಾಮತ್, ಜಿ . ರತ್ನಾಕರ್ ಕಾಮತ್, ಶಶಿಧರ್ ಪೈ ಮಾರೂರ್, ಸೂರಜ್ ಕಾಮತ್, ದೀಪಕ್ ಕುಡ್ವ, ಪ್ರಶಾಂತ್ ಪೈ , ಅನಿಲ್ ಕಾಮತ್ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.

LATEST NEWS

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Published

on

ಬೆಳ್ತಂಗಡಿ: ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ.


ಹಾಸನ ಚನ್ನರಾಯಪಟ್ಟಣ ನಿವಾಸಿ, ಎಸ್‌.ಎನ್‌.ಚಂದ್ರೆಗೌಡ ಆರೋಪಿ. ಈ ವಿಷಯದ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2009ರಲ್ಲಿ ದಾಖಲಾದ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: “ಸುಳ್ಳು ಆರೋಪಗಳಿಂದ ರಕ್ಷಿಸಿ”: ಕೇರಳದಲ್ಲಿ ಕಾರ್ಡ್‌ಬೋರ್ಡ್ ಧರಿಸಿ ಪುರುಷರ ವಿಭಿನ್ನ ಪ್ರತಿಭಟನೆ

ಇದೀಗ ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಜನವರಿ 20 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟನೆ ತಿಳಿಸಿದೆ.

Continue Reading

LATEST NEWS

ಅಲೋಶಿಯಸ್ ಕಾಲೇಜಿನ ಮಾಜಿ ರೆಕ್ಟರ್‌, ಪ್ರಾಂಶುಪಾಲ ಫಾದರ್‌ ಲಿಯೋ ಡಿ ಸೋಜಾ ಎಸ್ ಜೆ ವಿಧಿವಶ

Published

on

ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಾಜಿ ರೆಕ್ಟರ್ ಮತ್ತು ಪ್ರಾಂಶುಪಾಲ ಫಾದರ್ ಲಿಯೋ ಡಿ ಸೋಜ ಎಸ್‌ಜೆ (93) ಮಂಗಳವಾರ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು.


ಖ್ಯಾತ ಜೆಸ್ಯೂಟ್ ಪಾದ್ರಿ, ವಿಜ್ಞಾನಿಯಾಗಿದ್ದ ಫಾ. ಲಿಯೋ ಡಿ ಸೋಜ ಅವರು ಸಸ್ಯಶಾಸ್ತ್ರ ಸಂಶೋಧಕರಾಗಿ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಷ್ಠಿತ ಅಂತರ್‌ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಅವರ ಹಲವಾರು ಸಂಶೋಧನಾ ಪ್ರಬಂಧಗಳು ಪ್ರಕಟವಾಗಿತ್ತು.

ಮಂಗಳೂರಿನಲ್ಲಿ ಜನಿಸಿದ ಅವರು ಸಂತ ಅಲೋಶಿಯಸ್ ಕಾಲೇಜು ಸಂಸ್ಥೆಗಳಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದು, ಅದೇ ಸಂಸ್ಥೆಯೊಂದಿಗೆ ಅವರು ತಮ್ಮ ಜೀವನದುದ್ದಕ್ಕೂ ನಿಕಟ ಸಂಬಂಧ ಹೊಂದಿದ್ದರು. ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರಾಗಿ ಬಳಿಕ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಸಂಸ್ಥೆಗಳ ರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಹನೂರು: ಬೆಂಕಿ ಅನಾಹುತ; ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಮೇವು ಸುಟ್ಟು ಭಸ್ಮ

ಜರ್ಮನಿಯ ವಿಶ್ವಪ್ರಸಿದ್ಧ ಮ್ಯಾಕ್ಸ್ ಪ್ಲಾಂಕ್ ಸಂಸ್ಥೆಯಲ್ಲಿ ಪಿಎಚ್‌ಡಿ ಅಧ್ಯಯನವನ್ನು ನಡೆಸಿದ್ದರು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ (ಸ್ವಾಯತ್ತ) ಅನ್ವಯಿಕ ಜೀವಶಾಸ್ತ್ರದ ಯೋಗಾಲಯವನ್ನು ಸ್ಥಾಪಿಸಿದ್ದರು. ಉನ್ನತ ಶಿಕ್ಷಣ ಮತ್ತು ಆಧ್ಯಾತ್ಮಿಕ ನಾಯಕತ್ವಕ್ಕೆ ಅವರ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ, ಕಳೆದ ವರ್ಷದ ಜುಲೈನಲ್ಲಿ ಕೊಲಂಬಿಯಾದ ಬೊಗೋಟಾದಲ್ಲಿ ನಡೆದ ಅಂತರ್‌ರಾಷ್ಟ್ರೀಯ ಜೆಸ್ಯೂಟ್ ವಿಶ್ವವಿದ್ಯಾಲಯಗಳ ಸಂಘ (ಐಎಜೆಯು)ದ ಸಮ್ಮೇಳನದಲ್ಲಿ ಫಾದರ್ ಲಿಯೋ ಡಿ ಸೋಜ ಅವರಿಗೆ ಪ್ರತಿಷ್ಠಿತ ಕ್ಯಾನಿಸಿಯಸ್ ಪದಕ ನೀಡಿ ಗೌರವಿಸಲಾಗಿತ್ತು.

Continue Reading

LATEST NEWS

ಮಂಗಳೂರು: ಜೋಡಿಕೊಲೆ ಪ್ರಕರಣದ ಆಪರಾಧಿಗೆ ಶಿಕ್ಷೆ

Published

on

ಮಂಗಳೂರು: ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.


ಅಲ್ಫೋನ್ಸ್ ಸಲ್ಡಾನಾ ಎಂಬಾತ 2020ರ ಎಪ್ರಿಲ್ 29ರಂದು ಆರೋಪಿಯು ಮನೆ ಸಮೀಪದ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜ ಮತ್ತವರ ಪತ್ನಿ ಹೆಲೆನ್ ಡಿಸೋಜ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಅವರನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ.

ಇದನ್ನೂ ಓದಿ: ಖಾಸಗಿ ಹೊಟೇಲ್‌ನಲ್ಲಿ ಆರ್‌ಎಫ್‌ಓ ಶವ ಪತ್ತೆ; ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಕಾಂತರಾಜ್‌

ಅಂದಿನ ಮುಲ್ಕಿ ಠಾಣೆಯ ನಿರೀಕ್ಷಕ ಜಯರಾಮ ಡಿ.ಗೌಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಆರಂಭದಲ್ಲಿ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ವಿಚಾರಣೆ ನಡೆಸಿದ್ದರು. ಆರೋಪಿಯು ಜೀವಾವಧಿ ಶಿಕ್ಷೆಯೊಂದಿಗೆ 2 ಲಕ್ಷ ರೂಪಾಯಿ ದಂಡ ಪಾವತಿಸಲು ನ್ಯಾಯಾಲಯ ಆದೇಶಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page