Connect with us

DAKSHINA KANNADA

ತಾಯ್ನಾಡಿಗೆ ಬಂದು ಸೇರಿದ ಕಡಬದ ಚಂದ್ರಶೇಖರ್‌ – ಮಗನ ಕಂಡು ತುಂಬಿ ತುಲುಕಿದ ತಾಯಿಯ ಕಣ್ಣಾಲಿ

Published

on

ಮಂಗಳೂರು: ದುರುದ್ದೇಶಪೂರ್ವಕವಾಗಿ ತನ್ನನ್ನು ಸಿಲುಕಿಸಿ ಹಾಕಲಾದ ಪ್ರಕರಣದಲ್ಲಿ ಸೌದಿ ಅರೇಬಿಯಾದಲ್ಲಿ ಜೈಲು ಪಾಲಾಗಿ ಕೊನೆಗೂ ಬಿಡುಗಡೆಯಾಗಿ ತಾಯ್ನಾಡಿಗೆ ಮರಳಿ ಬಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನಿವಾಸಿ ಚಂದ್ರಶೇಖರ್ಗೆ ಮನೆ ಮಂದಿ ಖುಷಿಯಿಂದ ಸ್ವಾಗತಿಸಿದರು.

ರಿಯಾದ್ ನಿಂದ ಮುಂಬೈಗೆ ಬಂದು ಅಲ್ಲಿಂದ ಮಂಗಳೂರಿಗೆ ಆಗಮಿಸಿದ ಚಂದ್ರಶೇಖರ್ ತಾನು ಮಾಡದ ತಪ್ಪಿಗೆ 11 ತಿಂಗಳಿನಿಂದ ಸೌದಿ ಜೈಲಿನಲ್ಲಿ ಬಂಧಿಯಾಗಿದ್ದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊರ ಬರುತ್ತಲೇ ಚಂದ್ರು ಭಾವುಕರಾಗಿದ್ದರು.

ಮಗನನ್ನು ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ತಾಯಿ ಹೇಮಾವತಿಯನ್ನು ಕಂಡ ಅಲ್ಲಿದ್ದವರ ಕಣ್ಣಾಲಿಗಳಲ್ಲಿಯೂ ನೀರು ತುಂಬಿಕೊಂಡಿತ್ತು.

ಸೌದಿ ಅರೇಬಿಯಾದಲ್ಲಿದ್ದ ವೇಳೆ ಸಿಮ್ ಖರೀದಿಸಲು ಹೋಗಿದ್ದ ಚಂದ್ರು ಬ್ಯಾಂಕ್ ಖಾತೆ ಹ್ಯಾಕ್ ಆಗಿತ್ತು. ಹ್ಯಾಕ್ ಆದ ಖಾತೆಗೆ ಮಹಿಳೆಯೊಬ್ಬರ ಖಾತೆಯಿಂದ 22 ಸಾವಿರ ಹಣ ಜಮೆಯಾಗಿತ್ತು. ಯಾರೋ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಇದನ್ನು ಚಂದ್ರಶೇಖರ್‌ ಅವರ ತಲೆಗೆ ಕಟ್ಟಲಾಗಿತ್ತು.

ವಂಚನೆ ಪ್ರಕರಣ ಎಸಗಿದ್ದಾರೆ ಎಂದು ಆರೋಪಿಸಿ ಚಂದ್ರಶೇಖರ್ ಅವರನ್ನು ಸೌದಿ ಅರೇಬಿಯಾದ ಪೊಲೀಸರು ಬಂಧಿಸಿದ್ದರು. ಬಳಿಕ ಅವರು ಜೈಲು ಪಾಲಾಗಿದ್ದರು. ಭಾರತೀಯ ವಿದೇಶಾಂಗ ಇಲಾಖೆ ಸೇರಿದಂತೆ ಹಲವರ ಪ್ರಯತ್ನದಿಂದ ಜೈಲಿನಿಂದ ಬಿಡುಗಡೆಯಾಗಿ ಬಂದು ಇದೀಗ ಮರಳಿ ಅವರು ತಾಯ್ನಾಡಿಗೆ ಬಂದಿದ್ದಾರೆ.

DAKSHINA KANNADA

ಉದ್ಘಾಟನೆಯ ರಾಜಕೀಯ ಮೇಲಾಟಕ್ಕೆ ರೋಗಿಗಳಿಗೆ ಪೇಚಾಟ..!

Published

on

ಮಂಗಳೂರು: ಕಾಮಗಾರಿಗಳ ಉದ್ಘಾಟನೆಯ ವಿಚಾರದಲ್ಲಿ ಮಂಗಳೂರು ನಗರದಲ್ಲಿ ಹಗ್ಗ ಜಗ್ಗಾಟ ಆರಂಭವಾಗಿದ್ದು, ಇದೀಗ ಉದ್ಘಾಟನೆಗೊಂಡು ಸ್ಥಳಾಂತರಗೊಂಡಿದ್ದ ಸೇವಾ ಕೇಂದ್ರಗಳಿಗೆ ಬೀಗ ಬಿದ್ದಿದೆ. ಇದರಿಂದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ಚಿಕಿತ್ಸಾ ಕೇಂದ್ರ, ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿಗಳ ವಸತಿ ಗೃಹ ಕಳೆದ ಭಾನುವಾರು ಉದ್ಘಾಟನೆಗೊಂಡಿತ್ತು. ಸಂಸದ ಬ್ರಿಜೇಶ್ ಚೌಟ , ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಮನೋಜ್ ಕುಮಾರ್ ಅವರು ಈ ಕಾಮಗಾರಿಗಳ ಉದ್ಘಾಟನೆ ಮಾಡಿದ್ದರು.

ಮಂಗಳಾದೇವಿ ವಾರ್ಡ್‌ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಈ ಕಾಮಗಾರಿಗಳನ್ನು ಮಾಡಲಾಗಿದ್ದು ಸ್ಥಳೀಯ ಕಾರ್ಪೋರೇಟರ್ ಪ್ರೇಮಾನಂದ ಶೆಟ್ಟಿ ಅವರು ಇದರ ಮುತುವರ್ಜಿ ವಹಿಸಿದ್ದರು. ಭಾನುವಾರ ಉದ್ಘಾಟನೆಗೊಂಡಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶು ಚಿಕಿತ್ಸಾ ಕೇಂದ್ರಗಳು ಅಂದೇ ಹಳೆ ಕಟ್ಟಡದಿಂದ ಸ್ಥಳಾಂತರವಾಗಿ ಕಾರ್ಯಾರಂಭ ಮಾಡಿತ್ತು. ಜನರೂ ಕೂಡಾ ಈ ಕೇಂದ್ರಗಳಿಗೆ ಬಂದು ಸೇವೆಯನ್ನು ಪಡೆಯುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದು, ಖಾಸಗಿ ಆಸ್ಪತ್ರೆಗಳಿಗೆ ಹೋಗುವ ಜಂಟಾಟ ತಪ್ಪಿದ ಖುಷಿಯಲ್ಲಿದ್ರು. ಆದ್ರೆ ಶುಕ್ರವಾರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂದ್ ಆಗಿದ್ದು, ಚಿಕಿತ್ಸೆಗಾಗಿ ಬಂದ ರೋಗಿಗಳು ಬೀಗ ನೋಡಿ ವಾಪಾಸಾಗಿದ್ದಾರೆ.

ಈ ಕಾಮಗಾರಿಗಳ ಉದ್ಘಾಟನೆಯ ವಿಚಾರವಾಗಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಸಮಾದಾನ ವ್ಯಕ್ತಪಡಿಸಿ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತಾರದೆ ಶಿಷ್ಠಾಚಾರ ಉಲ್ಲಂಘಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಮತ್ತೆ ಈ ಕಾಮಗಾರಿಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಹೀಗಾಗಿ ಶುಕ್ರವಾರ ಈ ಕೇಂದ್ರಗಳನ್ನು ಬಂದ್ ಮಾಡಿಸಲಾಗಿದೆ. ಅಧಿಕಾರಿಗಳು ಈ ಕೇಂದ್ರಗಳನ್ನು ಬಂದ್ ಮಾಡಿರುವ ವಿಚಾರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ರೀತಿಯ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಮಾಹಿತಿ ಇತ್ತಾದ್ರೂ ಬರಲಾಗುವುದಿಲ್ಲ ಎಂದು ಹೇಳಿದ್ದಾಗಿ ಶಾಸಕರು ಹೇಳಿದ್ದಾರೆ. ಹಾಗಂತ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂಬ ಕಾರಣಕ್ಕೆ ಮತ್ತೊಂದು ಬಾರಿ ಉದ್ಘಾಟನೆ ಮಾಡುವ ಔಚಿತ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನೆ ಮಾಡಿದ್ದಾರೆ.

Continue Reading

BELTHANGADY

ಸೌದಿ ಅರೇಬಿಯಾದ ಜಿದ್ದಾದಲ್ಲಿ ಬೆಳ್ತಂಗಡಿಯ ವ್ಯಕ್ತಿ ಹೃದಯಾಘಾತಕ್ಕೆ ಬಲಿ

Published

on

ಮಂಗಳೂರು/ಜಿದ್ದಾ : ಸೌದಿ ಅರೇಬಿಯಾದಿಂದ ಊರಿಗೆ ಮರಳಲು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ.

ಬೆಳ್ತಂಗಡಿ ಮೂಲದ ಹಿದಾಯತ್ ಮೃತ ದುರ್ಧೈವಿಯಾಗಿದ್ದು ನಿನ್ನೆ ರಾತ್ರಿ ಸೌದಿ ಅರೇಬಿಯಾದ ಜಿದ್ದಾ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ನಿನ್ನೆ ತನ್ನ ಸ್ನೇಹಿತರಿಗೆ ಕರೆ ಮಾಡಿ ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವಂತೆ ಹೇಳಿದ್ದರು ಎನ್ನಲಾಗಿದೆ.

ರಾತ್ರಿ 10:30ರ ವಿಮಾನ ಹಿಡಿಯಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವಾಗ ಹಿದಾಯತ್ ಅವರಿಗೆ ತೀವ್ರ ಎದೆ ನೋವು ಕಾಣಿಸಿದೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಅವರು ಅಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸರಕಾರಿ ಸಂಸ್ಥೆಗಳಲ್ಲಿ ಕೆಲಸ ಕೊಡಿಸುವುದಾಗಿ 2.66 ಲಕ್ಷ ರೂ. ವಂಚನೆ

ಉತ್ತಮ ಗಾಯಕರೂ ಆಗಿದ್ದ ಹಿದಾಯತ್ ಅವರು ಮೂಲತಹ ಬೆಳ್ತಂಗಡಿಯ ಸಂಜಯ ನಗರ ನಿವಾಸಿಯಾಗಿದ್ದಾರೆ. ಕೆಲ ಸಮಯದ ಹಿಂದೆ ಉದ್ಯೋಗ ನಿಮಿತ್ತ ಅವರು ವಿದೇಶಕ್ಕೆ ತೆರಳಿದ್ದು, ಇಂದು ಮುಂಜಾನೆ ಮಂಗಳೂರಿಗೆ ವಾಪಾಸಗಲಿದ್ದರು.

ಆದ್ರೆ ವಿಧಿಯಾಟ ಬೇರೆಯೇ ಆಗಿದ್ದು, ಮನೆಗೆ ಮರಳುವ ಸಂತೋಷದಲ್ಲಿದ್ದಾಗಲೇ ಜವರಾಯ ಅವರನ್ನು ಎಳೆದೊಯ್ದಿದ್ದಾನೆ. ಮೃತರು ತಂದೆ ತಾಯಿ ಹಾಗೂ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

 

 

Continue Reading

DAKSHINA KANNADA

ಸರಕಾರಿ ಸಂಸ್ಥೆಗಳಲ್ಲಿ ಕೆಲಸ ಕೊಡಿಸುವುದಾಗಿ 2.66 ಲಕ್ಷ ರೂ. ವಂಚನೆ

Published

on

ಮಂಗಳೂರು: ಇತ್ತೀಚೆಗೆ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಕೆಲವರು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ವಂಚನೆ ಎಸಗುತ್ತಿದ್ದಾರೆ. ಪ್ರತಿಷ್ಠಿತ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಕುರಿತಂತೆ ಪ್ರಕರಣ ದಾಖಲಾಗಿದೆ.

ಅವಿನಾಶ್ ಶೆಟ್ಟಿ, ನಮ್ರತಾ, ಅಕ್ಷತಾ ಹಾಗೂ ಗೌತಮ್ ಶೆಟ್ಟಿ ಆರೋಪಿಗಳು, ದೂರುದಾರರಿಗೆ ನಮ್ರತಾ ಎನ್ನುವವರ ಪರಿಚಯವಾಗಿದ್ದು, ಆಕೆ ತಾನು ಪ್ರತಿಷ್ಠಿತ ಸಂಸ್ಥೆಗಳಲ್ಲಿ ನೌಕರಿ ನೇಮಕಾತಿ ಮಾಡುತ್ತಿದ್ದು, ಟೆಂಡರುದಾರ ಅವಿನಾಶ್ ಶೆಟ್ಟಿಗೆ 2.50 ಲಕ್ಷ ರೂ. ನೀಡಿದರೆ ಉದ್ಯೋಗ ದೊರೆಯುತ್ತದೆ ಎಂದು ಹೇಳಿದ್ದಾಳೆ.

ಅದರಂತೆ ದೂರುದಾರರು ಅವಿನಾಶ್ ಶೆಟ್ಟಿ ಅವರಿಗೆ ಕರೆ ಮಾಡಿದ್ದು, ಆತ ಸೂಚನೆಯಂತೆ ದೂರುದಾರರ ಭಾವ ಮಂಗಳೂರು ಲಾಲ್‌ಬಾಗ್ ಪಾಲಿಕೆ ಕಚೇರಿ ಹಿಂಭಾಗದಲ್ಲಿ ಭೇಟಿಯಾಗಿದ್ದಾರೆ. ಅವರ ಮಗಳಿಗೆ ಉದ್ಯೋಗದ ಬಗ್ಗೆ ಮಾತನಾಡಿ ಬಯೋ-ಡಾಟಾ ಪಡೆದು, 2.50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾನೆ. ಅದರಂತೆ ಅವರು 2.50 ಲಕ್ಷ ರೂ. ಮೊತ್ತದ ಚೆಕ್ಕನ್ನು ನಮ್ರತಾಳಿಗೆ ನೀಡಿದ್ದಾರೆ. ಬಳಿಕ ಆತನನ್ನು ವಿಚಾರಿಸಿದಾಗ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾನೆ.

ಹಲವು ಜನರಿಗೆ ಉದ್ಯೋಗ ವಂಚನೆ ಮಾಡಿರುವ ಅವಿನಾಶ್ ಶೆಟ್ಟಿಯನ್ನು ಜ. 5ರಂದು ಉರ್ವ ಠಾಣೆ ಪೊಲೀಸರು ಬಂಧಿಸಿರುವ ವಿಚಾರ ತಿಳಿದು ಬಂದಿದೆ. ಈ ನಡುವೆ ಅಕ್ಷತಾ ಎನ್ನುವಾಕೆಯ ಖಾತೆಯಲ್ಲಿ ಚೆಕ್ ಕ್ಲಿಯರ್ ಆಗಿದೆ. ಇದಲ್ಲದೆ ಇನ್ನಷ್ಟು ಮೊತ್ತವನ್ನು ಗೂಗಲ್ ಪೇ ಮೂಲಕ ಗೌತಮ್ ಶೆಟ್ಟಿ ಎಂಬಾತನಿಗೆ ವರ್ಗಾವಣೆ ಮಾಡಿದ್ದಾರೆ. ಹಣ ಪಡೆದು ಉದ್ಯೋಗ ನೀಡದಿರುವ ಎಲ್ಲ ಆರೋಪಿಗಳ ಮೇಲೆ ಸೂಕ್ತ ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page