Connect with us

DAKSHINA KANNADA

ಉಳ್ಳಾಲ : ರಾಸಾಯನಿಕ ಲೋಡ್ ಟ್ಯಾಂಕರ್ ಪಲ್ಟಿ – ಗ್ಯಾಸ್ ಲೀಕೇಜ್ ನಡುವೆ ತಡರಾತ್ರಿ ವರೆಗೂ ಕಾರ್ಯಾಚರಣೆ..!

Published

on

ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿ ಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ.

ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿ ಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ.

ಹೆದ್ದಾರಿ ಮದ್ಯೆಯೇ ಪಲ್ಟಿಯಾಗಿ ಬಿದ್ದು ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅವರನ್ನು ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡರಾತ್ರಿ 1ರ ವರೆಗೆ ನಡೆದ ತೆರವು ಕಾರ್ಯಾಚರಣೆ !
ಲಾರಿ ಹಾಗೂ ಗ್ಯಾಸ್ ಹೊಂದಿದ್ದ ಟ್ಯಾಂಕರ್ ತೆರವು ತಡರಾತ್ರಿ 1 ಗಂಟೆಯವರೆಗೆ ನಡೆಯಿತು. ಅಗ್ನಿ ಶಾಮಕ ದಳ, ಎಸಿಪಿ ಧನ್ಯಾ ಎನ್. ನಾಯಕ್, ದಕ್ಷಿಣ ಸಂಚಾರಿ ಠಾಣೆಯ ರಮೇಶ್ ಹಾನಾಪುರ್, ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಯಸ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಿತು.

ನಡು ರಸ್ತೆಯಲ್ಲೇ ಉರುಳಿದ್ದ ರಾಸಾಯನಿಕ ಟ್ಯಾಂಕರಿನಿಂದ ಸಣ್ಣ ಪ್ರಮಾಣದಲ್ಲಿ ಸೋರಿಕೆ ಉಂಟಾಗಿ ಪರಿಸರವಿಡೀ ದುರ್ವಾಸನೆ ಬೀರುತಿತ್ತು.

ಸ್ಥಳಕ್ಕಾಗಮಿಸಿದ ಬೈಕಂಪಾಡಿ ಬಿಎಎಸ್ ಎಫ್ ಸುರಕ್ಷಾ ತಂಡ ಸಮೀಪದ ವಾಣಿಜ್ಯ ಮಳಿಗೆಗಳ ವಿದ್ಯುತ್ ದೀಪಗಳನ್ನು ಆರಿಸಲು ಸೂಚನೆ ನೀಡಿತು.

ರಾ.ಹೆ.66 ರ ಎರಡೂ ಕಡೆಗಳಲ್ಲಿ ವಾಹನಗಳು ಸಂಚರಿಸದಂತೆ ಸಂಚಾರಿ ಠಾಣಾ ಪೊಲೀಸರು ತಡೆಹಿಡಿದಿದ್ದರು.

ಬಿಎಎಸ್ ಎಫ್ ನಿಂದ ಬಂದ ಬೃಹತ್ ಗಾತ್ರದ ಕ್ರೇನ್ ಸಹಿತ ಎರಡು ಸಣ್ಣ ಕ್ರೇನ್ ಗಳನ್ನು ಬಳಸಿಕೊಂಡು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ , ಮೊದಲಿಗೆ ಲಾರಿಯನ್ನು ಮೇಲಕ್ಕೆತ್ತಿ, ಆನಂತರ ಟ್ಯಾಂಕರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ, ಇನ್ನೊಂದು ಲಾರಿಗೆ ಲೋಡ್ ಮಾಡಿ ತಕ್ಷಣ ಕಳುಹಿಸಲಾಯಿತು.

ರಾಸಾಯನಿಕ ಹೊಂದಿರುವ ಟ್ಯಾಂಕ್ ಹಲವು ಪದರಗಳು ಹಾಗೂ ಸುತ್ತಲೂ ಕಬ್ಬಿಣದ ಸುರಕ್ಷಾ ಕವಚ ಇರುವುದರಿಂದ ಸಣ್ಣ ಪ್ರಮಾಣದಲ್ಲಿ ಸೋರಿಕೆ ಉಂಟಾಗಿದೆ. ಸಾಬೂನಿಗೆ ಹಾಕುವ ರಾಸಾಯನಿಕ ಆಗುವುದರಿಂದ ಅಷ್ಟೊಂದು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಬಿಎಎಸ್ ಎಫ್ ಸೇಫ್ಟಿ ಆಫೀಸರ್ ತಿಳಿಸಿದ್ದಾರೆ.

ಯಶಸ್ವಿ ತೆರವು ಕಾರ್ಯಾಚರಣೆ ನಂತರ ಸ್ಥಳೀಯರು ನಿಟ್ಟುಸಿರು ಬಿಡುವಂತಾಯಿತು.

ಉಳ್ಳಾಲ ಶಾಸಕ ಯು.ಟಿ ಖಾದರ್ ಅವರು ಬೆಂಗಳೂರು ಭೇಟಿಯಲ್ಲಿದ್ದರೂ ಆಪ್ತಸಹಾಯಕ ಪ್ರವೀಣ್ ಅವರನ್ನು ಸ್ಥಳಕ್ಕೆ ಕಳುಹಿಸಿ ತೆರವು ಕಾರ್ಯಾಚರಣೆ ಕುರಿತು ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಂಡರು.

DAKSHINA KANNADA

ಫೆ.14ರಂದು 16ನೇ ವರ್ಷದ ಜಯ-ವಿಜಯ ಜೋಡುಕರೆ ಕಂಬಳ; ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಜಯ-ವಿಜಯ ಜೋಡುಕರೆ ಕಂಬಳ ಸಮಿತಿ (ರಿ) ಜಪ್ಪಿನಮೊಗರು ಮಂಗಳೂರು ಇವರ ನೇತೃತ್ವದಲ್ಲಿ ಮನ್ಕು ತೋಟಗುತ್ತು ಮತ್ತು ನಾಡಾಜೆಗುತ್ತು ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿಯವರ ಸ್ಮರಣಾರ್ಥ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಫೆ.14 ಮತ್ತು 15ರಂದು ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ನಗರದ ಓಷಿಯನ್ ಪರ್ಲ್ ಹೊಟೇಲ್ ನಲ್ಲಿ ನಡೆಯಿತು. ಸುತೇಜ್ ಎಂಟರ್ ಪ್ರೈಸಸ್ ಮುಂಬಯಿ ಇದರ ಎಂಡಿ, ಹಾಗೂ ಕಂಬಳದ ಮಾರ್ಗದರ್ಶಕ ಎಚ್. ಸುಧಾಕರ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಮುಂದಾಳತ್ವದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು.

ನಂತರ ಈ ಬಗ್ಗೆ ಸುಧಾಕರ್ ಶೆಟ್ಟಿ ಮಾತನಾಡಿ ಜಪ್ಪಿನಮೊಗರುವಿನಲ್ಲಿ ನಡೆಯುತ್ತಿರುವ ಕಂಬಳ ಅತ್ಯಂತ ವಿಶೇಷವಾದದ್ದು. ಯಾಕಂದ್ರೆ ಶಾಸಕ ವೇದವ್ಯಾಸ್ ಕಾಮತ್ ಅವರ ಸಹಕಾರದಿಂದ ವ್ಯವಸ್ಥಿತವಾಗಿ ಈಗ ನಡೆಯುತ್ತಿದೆ. ಕಂಬಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸ್ತಾರೆ. ಕಂಬಳವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: 33ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಗೌರವಾಧ್ಯಕ್ಷ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ ಶ್ರೀ ಅನಂತಪದ್ಮನಾಭ ಅಸ್ರಣ್ಣರ ಆಶೀರ್ವಚನದೊಂದಿಗೆ ವೇದಮೂರ್ತಿ ಬ್ರಹ್ಮ ಶ್ರೀ ವಿಠಲದಾಸ್ ತಂತ್ರಿವರ್ಯರಿಂದ ಕಂಬಳವು ಉದ್ಘಾಟನೆಗೊಳ್ಳಲಿದೆ. ಉದ್ಯಮಿಗಳು ಸೇರಿದಂತೆ ಸಿನಿಮಾ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುತ್ತದೆ. ಕಂಬಳದಲ್ಲಿ 150ಕ್ಕೂ ಹೆಚ್ಚಿನ ಸಂಖ್ಯೆಯ ಕೋಣಗಳು ಭಾಗವಹಿಸಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಯ ವಿಜಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅನಿಲ್ ಶೆಟ್ಟಿ, ಕಾರ್ಯಾಧ್ಯಕ್ಷೆ ವೀಣಾಮಂಗಳ, ಮತ್ತೋರ್ವ ಕಾರ್ಯಾಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ತಿರುವೈಲುಗುತ್ತು, ಸಂದೀಪ್ ಶೆಟ್ಟಿ ಎಕ್ಕೂರು ಮತ್ತಿತ್ತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕಾಂಗ್ರೆಸ್ ನಲ್ಲಿರುವ ಹಿಂದೂಗಳಿಗೆ ರಾಮ ದೇವರಲ್ಲವೇ: ಕಾಂಗ್ರೆಸ್ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ

Published

on

ಮಂಗಳೂರು: ರಾಮನ ಹೆಸರಿಟ್ಟರೆ ಕಾಂಗ್ರೆಸಿಗರಿಗೆ ಹೊಟ್ಟೆ ಉರಿ ಏಕೆ? ಕಾಂಗ್ರೆಸ್ ನಲ್ಲಿರುವ ಹಿಂದೂಗಳಿಗೆ ರಾಮ ದೇವರಲ್ಲವೇ ಎಂದು ಶಾಸಕ ವೇದವ್ಯಾಸ ಕಾಮತ್‌ ಕೇಂದ್ರ ಸರಕಾರದ ವಿಬಿ- ಜಿ- ರಾಮ್‌- ಜಿ- ಕಾಯ್ದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌ ನಾಯಕರನ್ನು ಪ್ರಶ್ನಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿ ರಾಮನ ಹೆಸರು ಬಂತು ಎಂದಾಗ ಕಾಂಗ್ರೆಸಿಗರು ಅಲರ್ಜಿ ತರ ಮಾತನಾಡುವುದೇಕೆ? ಮನ್ ರೇಗಾ ಹೆಸರನ್ನು ನರೇಗಾ ಎಂದು ಬದಲಿಸಿದ್ದು ಕಾಂಗ್ರೆಸ್ ಅಲ್ಲವೇ ಎಂದರು.

ವೋಟ್‌ ಬ್ಯಾಂಕಿಗಾಗಿ ಕಾಂಗ್ರೆಸ್‌ ಮಾಡುತ್ತಿರುವ ರಾಜಕಾರಣ ಈಗ ಜನರಿಗೆ ಅರ್ಥವಾಗಿದೆ. ದೇಶದ ಬೆರಳೆಣಿಕೆಯ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಆಡಳಿತವಿದೆ. ಕಾಂಗ್ರೆಸಿಗರಿಗೆ ರಾಮನ ಶಾಪ ಇದೆ, ಇದನ್ನು ಸರಿ ಮಾಡಲು ಮೊದಲು ಕಲಿಯಿರಿ ಎಂದವರು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ದೇವಸ್ಥಾನದ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾಕಬಾರದೆಂಬ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದ ಮಾಜಿ ಸಚಿವ ಬಿ ರಮಾನಾಥ ರೈ

ಕಾಂಗ್ರೆಸ್ ನವರಿಗೆ ಮಾಡಲು ಬೇರೆ ಕೆಲಸವಿಲ್ಲ. ರಾಜ್ಯದಲ್ಲಿ ಅವರದೇ ಸರಕಾರವಿದೆ. ಆವರ ಆಡಳಿತ ವೈಫಲ್ಯಗಳನ್ನು ಸರಿಪಡಿಸುವ ಸಾಮರ್ಥ್ಯ ಅವರಿಗಿಲ್ಲ. ಮಂಗಳೂರಿನಲ್ಲಿ ಈ- ಖಾತಾ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಜೈಲಿನ ಜಾಮರ್ ಸಮಸ್ಯೆ ನಿವಾರಣೆ ಮಾಡುವ ಸಾಮರ್ಥ್ಯ ಇಲ್ಲ. ಮೂಡಾ, ತಾಲೂಕು ಕಚೇರಿಗಳು ಸಮಸ್ಯೆಗಳ ಆಗರವಾಗಿವೆ ಎಂದು ಟೀಕಿಸಿದರು.

Continue Reading

DAKSHINA KANNADA

33ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

Published

on

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯುತ್ತಿರುವ 33ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಇಂದು ಬೆಳಿಗ್ಗೆ ಆರಂಭಗೊಂಡಿದೆ.

ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಉದ್ಘಾಟನೆ ನರೆವೇರಿಸಿದರು.

ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ನಗರಸಭೆ ಮುಖ್ಯಾಧಿಕಾರಿ ವಿದ್ಯಾ ಕಾಳೆ, ಪದ್ಮನಾಭ ಶೆಟ್ಟಿ, ಜಯಂತ್ ನಡುಬೈಲು, ಸುಂದರ ಗೌಡ, ಉದ್ಯಮಿ ದಿವ್ಯಾ ಶೆಟ್ಟಿ, ಡಾ ಶರತ್‌ ಶೆಟ್ಟಿ, ಬಾಬು ಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಡ್ವೆ ನಂದಿಕೂರು 33ನೇ ವರ್ಷದ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟ; ಇಲ್ಲಿದೆ ಫಲಿತಾಂಶ

ನೇಗಿಲು ಹಿರಿಯ, ನೇಗಿಲು ಕಿರಿಯ, ಕನೆಹಲಗೆ, ಅಡ್ಡ ಹಲಗೆ, ಹಗ್ಗ ಕಿರಿಯ, ಹಗ್ಗ ಹಿರಿಯ ವಿಭಾಗಗಳಲ್ಲಿ ಕಂಬಳ ನಡೆಯಿತು. ಕಳೆದ ವರ್ಷ ಪುತ್ತೂರು ಕಂಬಳದಲ್ಲಿ ಕರೆಯಲ್ಲೆ ರಾಜ್ಯಮಟ್ಟದ ಕೆಸರು ಗದ್ದೆ ಓಟ ಸ್ಪರ್ಧೆ ಏರ್ಪಡಿಸಲಾಗಿತ್ತು . ಈ ವರ್ಷ ಇದರ ಜೊತೆಗೆ ಮೊದಲ ಬಾರಿ ರಿಲೇ ಸ್ಪರ್ಧೆ ಏರ್ಪಡಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page