Connect with us

ಸರ್ಕಾರಿ ಅಧಿಕಾರಿಗಳೇ ಕೊಂಚ ಮಾನವೀಯತೆ ತೋರಿಸಿ :  ಸಾವಿನ ದವಡೆಯಲ್ಲಿರುವವರಿಗೆ ನೆರವಾಗಿ ಪ್ಲೀಸ್..!!

Published

on

ಸರ್ಕಾರಿ ಅಧಿಕಾರಿಗಳೇ ಕೊಂಚ ಮಾನವೀಯತೆ ತೋರಿಸಿ :  ಸಾವಿನ ದವಡೆಯಲ್ಲಿರುವವರಿಗೆ ನೆರವಾಗಿ ಪ್ಲೀಸ್..!!

ಚಿಕ್ಕಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಆದ್ರೆ ಈ ಲಾಕ್ ಡೌನ್ ಕೆಲವರಿಗೆ ಮಾತ್ರ ಅನ್ವಯಿಸುತ್ತದೆಯೇ ಅನ್ನೋ ಅನುಮಾನ ಕಾಡುತ್ತದೆ.

ಯಾಕೆಂದರೆ ಲಾಕ್ ಡೌನ್ ಸಂದರ್ಭದಲ್ಲಿ ಪ್ರಜ್ಞಾವಂತ ನಾಗರೀಕರು ಸುಖಾಸುಮ್ಮನೆ ಮನೆಯಿಂದ ಹೊರಬರದೆ, ಮನೆಯಲ್ಲೇ ಇದ್ದು ಪೊಲೀಸರಿಗೆ ಸಹಾಯ ಮಾಡಬೇಕು ಅನ್ನೋದು ಸರಿ.

ಆದ್ರೆ ತೀವ್ರ ಅಗತ್ಯ ಬಿದ್ದಾಗ, ಅಂದ್ರೆ ಮನೆಯಲ್ಲಿ ರೋಗಿಗಳು ಇದ್ದಲ್ಲಿ, ಅವರನ್ನು ಡೈಲಿ ರೂಟೀನ್ ಚೆಕ್ ಅಪ್ ಗೆ ಕರೆದುಕೊಂಡು ಹೋಗಲೇಬೇಕಲ್ಲವೇ.

ಇದಕ್ಕೆ ಪೊಲೀಸರು ಕೂಡ ಸಾಥ್ ನೀಡಬೇಕಾಗಿದೆ. ಅದು ಬಿಟ್ಟು ಅವರ ಮೇಲೆ ದರ್ಪ ತೋರಿಸುವುದು ಎಷ್ಟರಮಟ್ಟಿಗೆ ಸರಿ.?

ಹೌದು ಇದೀಗ ಕ್ಯಾನ್ಸರ್ ರೋಗಿಯೊಬ್ಬರನ್ನು ಕರೆದುಕೊಂಡು ಬರುತ್ತಿದ್ದ ಆಂಬ್ಯುಲೆನ್ಸ್ ಅನ್ನೇ ವಾಪಸ್ ಕಳುಹಿಸಿ, ಪೊಲೀಸರೇ ಬೂಟಾಟಿಕೆ ತೋರಿಸಿರುವ ಘಟನೆ ಚಿಕ್ಕಮಗಳೂರಿನ ಕಳಸದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಜಗದೀಶ್​ ಭಟ್ ಎಂಬುವವರ ಅಮ್ಮ ಸುಶೀಲಮ್ಮನಿಗೆ 75 ವರ್ಷ. ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ.

ಕ್ಯಾನ್ಸರ್​ ಪೀಡಿತರಾಗಿರುವ ಅಮ್ಮನಿಗೆ ಕೀಮೋಥೆರಪಿ ಕೊಡಿಸಲು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆಂಬ್ಯುಲೆನ್ಸ್​ ಅನ್ನು ಪೊಲೀಸರು ಅಡ್ಡ ಹಾಕಿದ್ದಾರೆ.

ತಾಯಿಗೆ ಚಿಕಿತ್ಸೆ ಕೊಡಿಸಲು ಅವಕಾಶ ಮಾಡಿಕೊಡುವಂತೆ ಜಗದೀಶ್​ ಭಟ್​, ಪೊಲೀಸರಿಗೆ ಪರಿ-ಪರಿಯಾಗಿ ಮನವಿ ಮಾಡಿದರೂ ಕೇಳದೆ ಅವರನ್ನು ವಾಪಾಸ್​ ಕಳುಹಿಸಿದ್ದಾರೆ.

ಇದೀಗ ಅಧಿಕಾರಿಗಳ ದಬ್ಬಾಳಿಕೆಯಿಂದ ಕ್ಯಾನ್ಸರ್​ಪೀಡಿತ ಸುಶೀಲಮ್ಮನಿಗೆ ಕೀಮೋಥೆರಪಿ ಮಾಡಿಸಲು ಮಂಗಳೂರಿನ ಫಾದರ್​ ಮುಲ್ಲರ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಾಗದಂತಾಗಿದೆ.

ಜಗದೀಶ್ ಅವರು ತಮ್ಮ ಅಮ್ಮನನ್ನು ಮಂಗಳೂರಿನ ಆಸ್ಪತ್ರೆಗೆ ಆಂಬ್ಯುಲೆನ್ಸ್ ​ನಲ್ಲಿ ಕರೆದುಕೊಂಡು ಹೊರಟಿದ್ದಾಗ, ಬಸ್ರಿಕಲ್ ಚೆಕ್​ಪೋಸ್ಟ್​ನಲ್ಲಿ ಪೊಲೀಸರು ತಡೆದಿದ್ದಾರೆ.

ವೈದ್ಯಕೀಯ ಕಾರಣಕ್ಕೆ ಅಮ್ಮನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಅವಕಾಶ ನೀಡುವಂತೆ ಮನವಿ ಮಾಡಿದರೂ ಕೇಳದ ಪೊಲೀಸರು ಆಂಬ್ಯುಲೆನ್ಸ್​ಅನ್ನು ವಾಪಾಸ್ ಕಳುಹಿಸಿದ್ದಾರೆ.

ಇದು ಕೆಲವು ಕಿಡಿಗೇಡಿಗಳು ಲಾಕ್​ಡೌನ್​ ನಿಯಮ ಉಲ್ಲಂಘಿಸಿದ ಪರಿಣಾಮ, ನಿಜವಾಗಿ ಅಗತ್ಯ ಇರುವವರೂ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ.

ಸದ್ಯ ಪೊಲೀಸರ ದಬ್ಬಾಳಿಕೆಯಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅಮ್ಮನಿಗೆ ಚಿಕಿತ್ಸೆ ಕೊಡಿಸಲಾಗದೇ ಮಗ ಪರದಾಡುವಂತಾಗಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಲ್ಲಿ ಇಂತಹ ದಬ್ಬಾಳಿಕೆಗೆ ಕಡಿವಾಣ ಬೀಳಬಹುದೇನೋ.?.

ವಿಡಿಯೋ..

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page