Connect with us

LATEST NEWS

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಟೆಂಪೋ :ಪುಟಾಣಿ ಸೇರಿದಂತೆ ಮೂವರ ದುರ್ಮರಣ..!

Published

on

ಚಿತ್ರದುರ್ಗ: ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಪುಟಾಣಿ ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಹಿರಿಯೂರಿನ (35) ಸೆಲ್ವಿ (29) ನೀಲಮ್ಮ (6) ದೀಪಿಕಾ ಎಂಬವರೇ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಹಿರಿಯೂರಿನಿಂದ ಚಳ್ಳಕೆರೆ ಕಾಂಕ್ರೀಟ್ ಕೆಲಸಕ್ಕೆಂದು ಹೋಗುತ್ತಿದ್ದ ಸಂದರ್ಭದಲ್ಲಿ ಹಿರಿಯೂರು ಪಟ್ಟಣದ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಹಿರಿಯೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ, ಪರಿಶೀಲನೆ ನಡೆಸಿದ್ದಾರೆ.

LATEST NEWS

ಬಿಸಿಲಿನಲ್ಲಿ ಆಡುವವರೇ ಎಚ್ಚರ; ಮೈದಾನದಲ್ಲಿ ಕುಸಿದು ಬಿದ್ದು ಕ್ರಿಕೆಟಿಗ ಸಾವು

Published

on

ನವದೆಹಲಿ: ತೀವ್ರ ಬಿಸಿಲಿನ ಧಗೆಯಿಂದ ಕ್ರಿಕೆಟ್ ಆಟಗಾರರೊಬ್ಬರು ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಓಲ್ಡ್ ಕಾನ್ಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್‌ನ ಸದಸ್ಯ ಜುನೈದ್ ಜಾಫರ್ ಖಾನ್ ಮೃತಪಟ್ಟವರು. ಮೂಲತಃ ಪಾಕಿಸ್ತಾನದವರು ಆದ ಇವರು ಕ್ರಿಕೆಟ್ ಮೇಲೆ ಅಪಾರ ಆಸಕ್ತಿಯನ್ನು ಹೊಂದಿದ್ದರು. ಮಾ 15 ರಂದು ಪ್ರಿನ್ಸ್ ಆಲ್ಪ್ರೆಡ್ ಓಲ್ಡ್ ಕಾಲೇಜಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಆಟವಾಡುತ್ತಿದ್ದಾಗ ಮೈದಾನದಲ್ಲೇ ಕುಸಿದು ಬಿದ್ದರು.

ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕ್ಲಬ್ ಸದಸ್ಯರು, ಸಹೋದ್ಯೋಗಿ ವೈದ್ಯರು ಮತ್ತು ಸ್ನೇಹಿತರು ಖಾನ್ ಕುಟುಂಬಕ್ಕೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

Continue Reading

DAKSHINA KANNADA

ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Published

on

ಬೆಂಗಳೂರು: ಬಿಸಿಲ ಧಗೆಯಿಂದ ತತ್ತರಿಸಿ ಹೋಗಿದ್ದ ಜನರಿಗೆ ಇದೀಗ ಮಳೆಯ ಮುನ್ಸೂಚನೆ ಆಗಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿ ಭಾರೀ ಮಳೆಯಾಗಲಿದೆ. ಅಲ್ಲದೇ ಗಾಳಿಯ ವೇಗವು ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣ ಅಲೆ ಇರಲಿದೆ.

Continue Reading

LATEST NEWS

ಬ್ಯಾಂಕಾಕ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಸುಳ್ಯ ಯುವಕ ..!

Published

on

ಸುಳ್ಯ : ನಗರದ ಪಂಬೆತ್ತಾಡಿಯ ಯುವಕ ಬ್ಯಾಂಕಾಕ್‍ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸುಳ್ಯದ ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ 26 ವರ್ಷದ ಲಿಖಿನ್ ಮೃತಪಟ್ಟ ಯುವಕ.

ಈಜಿಪ್ಟ್‌ನ ಶಿಪ್‍ನಲ್ಲಿ ಉದ್ಯೋಗಕ್ಕೆ ನೇಮಕ ಗೊಂಡು ಅಲ್ಲಿಗೆ ತೆರಳಲು ವಿಮಾನ ಪ್ರಯಾಣಕ್ಕಾಗಿ ಬ್ಯಾಂಕಾಕ್‍ನಲ್ಲಿ ಒಂದು ರೂಮ್‍ ಬುಕ್ ಮಾಡಿಕೊಂಡು ತಂಗಿದ್ದರು. ಆದರೆ ರಾತ್ರಿ ವೇಳೆ ಅವರು ತಮ್ಮ ರೂಂನಲ್ಲಿ ಸಾವನ್ನಪ್ಪಿದ್ದಾರೆ.

ಈ ಸಾವು ಅನೇಕ ಶಂಕೆಗಳಿಗೆ ಕಾರಣವಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರರನ್ನು ಅಗಲಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page