Connect with us

LATEST NEWS

ಉತ್ತರಕಾಶಿಯಲ್ಲಿ ಮೇಘಸ್ಫೋಟ ; 9 ಮಂದಿ ಕಾರ್ಮಿಕರು ನಾಪತ್ತೆ

Published

on

ಉತ್ತರಕಾಶಿ: ಉತ್ತರಾಖಂಡದ ಉತ್ತರ ಕಾಶಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು 9 ಮಂದಿ ನಾಪತ್ತೆಯಾಗಿದ್ದಾರೆ.

ಬಾರ್ಕೋಟ್-ಯಮುನೋತ್ರಿ ರಸ್ತೆಯ ಬಾಲಿಗಢದಲ್ಲಿ ಇಂದು ಬೆಳಗ್ಗೆ ಹಠಾತ್ ಮೇಘಸ್ಫೋಟ ಸಂಭವಿಸಿದ್ದು, ನಿರ್ಮಾಣ ಹಂತದಲ್ಲಿರುವ ಹೋಟೆಲ್ ಗೆ ಹಾನಿಯುಂಟಾಗಿದೆ. ಎಂಟರಿಂದ ಒಂಬತ್ತು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ಆಗಮಿಸಿವೆ. ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: ಕಾರು ಮತ್ತು ಜೀಪ್ ಡಿಕ್ಕಿ – ದತ್ತಪೀಠ ಮಾರ್ಗದಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್

ನಿರಂತರ ಮಳೆಯಿಂದಾಗಿ ನಂದಪ್ರಯಾಗ ಮತ್ತು ಭನೇರೋಪಾನಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇನ್ನು ಸಿಲ್ಯೆ ಬ್ಯಾಂಡ್ ಬಳಿ ಎರಡು-ಮೂರು ಸ್ಥಳಗಳಲ್ಲಿ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಕಾಣೆಯಾದವರಲ್ಲಿ ಮಹಿಳೆಯರೂ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಕಾಣೆಯಾದ ಕಾರ್ಮಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

LATEST NEWS

ಧಾರವಾಡದಲ್ಲಿ ಒಂದೇ ದಿನ ಇಬ್ಬರು ಪೊಲೀಸರು ಸಾ*ವು

Published

on

ಮಂಗಳೂರು/ಧಾರವಾಡ : ಧಾರವಾಢ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ಪೊಲೀಸರು ಮೃ*ತಪಟ್ಟಿದ್ದಾರೆ. ಎಎಸ್‌ಐ  ಒಬ್ಬರು ಹೃದಯಾ*ಘಾತದಿಂದ  ಸಾ*ವನ್ನಪ್ಪಿದ್ದು, ಹೆಡ್ ಕಾನ್ಸ್ಟೇಬಲ್ ಒಬ್ಬರು ಅನಾರೋಗ್ಯದಿಂದ ಮೃ*ತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸ್ ಠಾಣೆಯ ಎಎಸ್‌ಐ ಚಂದ್ರಕಾಂತ ಹುಟಗಿ ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾರೆ. ಪೊಲೀಸ್ ಠಾಣೆಯಿಂದ ಮನೆಗೆ ವಿಶ್ರಾಂತಿಗೆ ತೆರಳಿದ್ದ  ಅವರಿಗೆ ಹೃದಯಾಘಾತವಾಗಿದೆ. ಸ್ಥಳದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ : ಮದುವೆಗೆ ಕೇವಲ ಒಂದು ಗಂಟೆ ಮೊದಲು ವಧುವನ್ನು ಕೊಂದ ವರ!

ಮತ್ತೊಂದೆಡೆ ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಎನ್.ಬಿ ಭಜಂತ್ರಿ ಬಹು ಅಂಗಾಗ ವೈಫಲ್ಯದಿಂದ ಮೃ*ತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಸಾ*ವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

 

Continue Reading

DAKSHINA KANNADA

ಅದ್ದೂರಿಯಾಗಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

Published

on

ಮಂಗಳೂರು :  72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಇಂದು(ನ.16) ಅದ್ದೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ , ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್ ಗಳು, ಸೌಹಾರ್ದ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು’ ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಸಹಕಾರ ಸಪ್ತಾಹವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಉದ್ಘಾಟಿಸಿದರು.

ಬಳಿಕ ಅವರು  ಮಾತನಾಡಿ, ಸಹಕಾರ ಕ್ಷೇತ್ರವು ಶಕ್ತಿ ಇಲ್ಲದವರಿಗೆ ಶಕ್ತಿ ಹಾಗೂ ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ರಂಗವು ಈ ದಿಶೆಯಲ್ಲಿ ಶ್ಲಾಘನೀಯ ಕೆಲಸ ಮಾಡಿದೆ. ಕರಾವಳಿ ಭಾಗದ ಸಾಕಷ್ಟು ಮಂದಿ ಮಹಿಳೆಯರು ಸ್ವ- ಸಹಾಯ ಸಂಘಗಳ ಮೂಲಕ ಸ್ವಾವಲಂಬಿಗಳಾಗಿದ್ದಾರೆ. ಅವರಲ್ಲಿ ಆತ್ಮವಿಶ್ವಾಸ ತುಂಬಿದೆ. ಶಿಕ್ಷಣ ಮತ್ತು ಇತರ ಕೆಲವು ಕ್ಷೇತ್ರಗಳಿಗೆ ಸಾಲ ಸೌಲಭ್ಯ ನೀಡಲು ವಾಣಿಜ್ಯ ಬ್ಯಾಂಕುಗಳು ಹಿಂದೇಟು ಹಾಕಿದಾಗ ಸಹಕಾರಿ ಬ್ಯಾಂಕು ಮುಂದೆ ಬಂದು ಸಾಲ ಒದಗಿಸಿ ಸಹಕರಿಸಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಗಾರ್ಮೆಂಟ್ ಫ್ಯಾಕ್ಟರಿಯನ್ನು ಆರಂಭಿಸಿ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮುಂದಾಗಲಿ ಎಂದು ಸಲಹೆ ಮಾಡಿದರು.

ವಸ್ತು ಪ್ರದರ್ಶನ ಮಳಿಗೆ ಜಿ.ಟಿ. ದೇವೇಗೌಡ ಉದ್ಘಾಟನೆ :

ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ವಸ್ತು ಪ್ರದರ್ಶನ ಮಳಿಗೆಗಳನ್ನು ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ಸಹಕಾರಿ ಕ್ಷೇತ್ರವನ್ನು ಭದ್ರವಾಗಿ ಉಳಿಸಿದ ಕೀರ್ತಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಸಲ್ಲುತ್ತದೆ. ಇಲ್ಲಿ ಸಹಕಾರಿ ತತ್ವಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಂತಹ ಚುರುಕು ಮತಿಯ ಜನರಿಂದಾಗಿ ಇದು ಸಾಧ್ಯವಾಗಿದೆ ಎಂದು ಹೇಳಿದರು.

ಹಳ್ಳಿ ಹಳ್ಳಿಗಳಿಗೆ ಹೋಗಿ ಸೇವೆ : ಎಂ.ಎನ್.ಆರ್

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ। ಎಂ.ಎನ್.ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಬ್ಯಾಂಕುಗಳ ತವರೂರು. ವಿಪರ್ಯಾಸವೆಂದರೆ ಜಿಲ್ಲೆಯಲ್ಲಿ ಹುಟ್ಟಿದ ವಾಣಿಜ್ಯ ಬ್ಯಾಂಕುಗಳು ವಿಲೀನಗೊಂಡು ನೆಲೆ ಕಳೆದುಕೊಳ್ಳುತ್ತಿವೆ. ಆದರೆ, ಸಹಕಾರಿ ಬ್ಯಾಂಕುಗಳು ಹಳ್ಳಿ ಹಳ್ಳಿಗಳಿಗೆ ಹೋಗಿ ಸೇವೆ ಒದಗಿಸುತ್ತಿವೆ. ವಾಣಿಜ್ಯ ಬ್ಯಾಂಕುಗಳಿಗೆ ಮಹಿಳೆಯರು ಹೋದರೆ ವರ್ಷ ಕಳೆದರೂ ಸಾಲ ಸಿಗುತ್ತಿಲ್ಲ. ಆದರೆ ಸಹಕಾರಿ ಬ್ಯಾಂಕುಗಳಿಗೆ ಹೋದರೆ ಅರ್ಧ ದಿನದ ಒಳಗೆ ಸಾಲ ಕೊಡುವ ವ್ಯವಸ್ಥೆ ನಮ್ಮಲ್ಲಿದೆ. ಹಾಗಾಗಿ ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸಕ್ಕೆ ಪಾತ್ರವಾಗಿವೆ ಎಂದರು.

ಪ್ರಶಸ್ತಿ ಪ್ರದಾನ :

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಸಹಕಾರಿ ಸಂಸ್ಥೆಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ, ಎರಡು ಉತ್ತಮ ಸಹಕಾರಿ ಸಂಸ್ಥೆಗಳಿಗೆ ಮತ್ತು ಮಹಿಳಾ ಸಹಕಾರಿ ಬ್ಯಾಂಕುಗಳಿಗೆ ಪ್ರಶಸ್ತಿ ವಿತರಣೆ, ನಂದಿನಿಯ ಎರಡು ಹೊಸ ಉತ್ಪನ್ನಗಳ ಬಿಡುಗಡೆ, ಸಹಕಾರ ಶಿಕ್ಷಣ ನಿಧಿಯ ಅರ್ಪಣೆ, ಸ್ಮರಣ ಸಂಚಿಕೆ ಮತ್ತು ಸಹಕಾರಿ ಪತ್ರಿಕೆ ಬಿಡುಗಡೆ ನೆರವೇರಿತು.

ಇದನ್ನೂ ಓದಿ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ : ಆಕರ್ಷಕ ಮೆರವಣಿಗೆ

ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಯಶ್ ಪಾಲ್‌ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ ಭಂಡಾರಿ ಮತ್ತು ಐವನ್ ಡಿ’ಸೋಜಾ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್ ಜನರಲ್ ಮ್ಯಾನೇಜರ್ ಡಾ. ಸುರೇಂದ್ರ ಬಾಬು, ಕರ್ನಾಟಕ ರಾಜ್ಯ ಸಹಕಾರ ಸಂಘಗಳ  ನಿಬಂಧಕ ಟಿ.ಎಚ್.ಎಂ. ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ವ್ಯವಸ್ಥಾಪಕ ನಿರ್ದೇಶಕ ಲಿಂಗರಾಜ್, ಸಹಕಾರ ಸಂಘಗಳ ಜಂಟಿ ನಿಬಂಧಕ ಮೈಸೂರು ಪ್ರಾಂತ್ಯದ ಪ್ರಸಾದ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಉಪ ನಿಬಂಧಕ ರಮೇಶ್ ಎಚ್.ಎನ್., ಉಡುಪಿ ಜಿಲ್ಲೆಯ ಉಪ ನಿಬಂಧಕರಾದ ಲಾವಣ್ಯ, ಎಸ್.ಸಿ.ಡಿ.ಸಿ.ಸಿ.  ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಟ್ರಸ್ಟ್ ನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪೂರ್ಣಿಮಾ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.

 

Continue Reading

DAKSHINA KANNADA

72ನೇ ಅಖಿಲ ಭಾರತ ಸಹಕಾರ ಸಪ್ತಾಹ : ಆಕರ್ಷಕ ಮೆರವಣಿಗೆ

Published

on

ಮಂಗಳೂರು : ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು’  ಎಂಬ ಧ್ಯೇಯ ವಾಕ್ಯದೊಂದಿಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಇಂದು ನಡೆಯಿತು. ಉದ್ಘಾಟನಾ ಕಾರ್ಯಕ್ರಮಕ್ಕೆ ಮೊದಲು ಕೊಡಿಯಾಲ್‌ ಬೈಲಿನ  ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಿಂದ ಕರಾವಳಿ ಉತ್ಸವ ಮೈದಾನ ತನಕ ಆಕರ್ಷಕ ಮೆರವಣಿಗೆ ನಡೆಯಿತು. ಮೆರವಣಿಗೆಗೆ  ರಾಜ್ಯ ವಿಧಾನ ಸಭೆಯ ಸ್ಪೀಕರ್‌ ಯು.ಟಿ. ಖಾದರ್ ಚಾಲನೆ ನೀಡಿದರು.

ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್ .ರಾಜೇಂದ್ರ ಕುಮಾರ್, ಸಹಕಾರಿ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ, ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ನಬಾರ್ಡ್ ಜನರಲ್ ಮ್ಯಾನೇಜರ್ ಡಾ. ಸುರೇಂದ್ರ ಬಾಬು ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯಲ್ಲಿ 45ಕ್ಕೂ ಅಧಿಕ ಟ್ಯಾಬ್ಲೋ, ಡೊಳ್ಳು, ಕುಣಿತ, ಕಂಗೀಲು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಕಲಾ ತಂಡಗಳು ಭಾಗವಹಿಸಿದ್ದವು.

ಸಹಕಾರ ಬಂಧುಗಳು ಹಾಗೂ ಸ್ವಸಹಾಯ ಗುಂಪಿನ ಸದಸ್ಯರು ಪಾಲ್ಗೊಂಡಿದ್ದರು. ಸಹಕಾರ ರಥ, ಘಟೋತ್ಕಜ, ಚೆಂಡೆ, ಕೊಂಬು, ಸಹಕಾರಿ ಬಣ್ಣದ ಕೊಡೆಗಳು, ಭುವನೇಶ್ವರಿ ದೇವಿಯ ಸ್ತಬ್ಧಚಿತ್ರ, ಪುರುಷರ ಹಾಗೂ ಮಹಿಳೆಯರ ಡೊಳ್ಳು ಕುಣಿತ, ಮೊಳಹಳ್ಳಿ ಶಿವರಾವ್ ಸ್ತಬ್ಧಚಿತ್ರ, ಮಹಿಳೆಯರ ವೀರಗಾಸೆ, ಹೈನುಗಾರಿಕೆ ಸ್ತಬ್ಧಚಿತ್ರ, ಮೀನುಗಾರಿಕೆ ಸ್ತಬ್ಧಚಿತ್ರ, ಹೊನ್ನಾವರ ಬ್ಯಾಂಡ್ , ಕೆಎಂಎಫ್ – ನಂದಿನಿ ಆನ್ ವ್ಹೀಲ್ ಸ್ತಬ್ಧಚಿತ್ರ, ಸುಗ್ಗಿ ಕುಣಿತ, ತುಳುನಾಡು ವೈಭವ ಸ್ತಬ್ಧಚಿತ್ರ, ನವೋದಯ ಪ್ರಚಾರ ವಾಹನ, ಪುರವಂತಿಗೆ, ಗ್ರಾಮೀಣ ಬ್ಯಾಂಕಿಂಗ್ ಚಟುವಟಿಕೆಯ ಸ್ತಬ್ಧಚಿತ್ರ, ಚೆಂಡೆ ವಾಹನ, ಸೋಮನ ಕುಣಿತ, ಪಟ್ಟದ ಕುಣಿತ, ಶಿವನ ಮೂರ್ತಿಯ ಸ್ತಬ್ಧಚಿತ್ರ, ನವೋದಯ ಗುಂಪಿನ ಸಭೆ ನಡೆಸುವ ಸ್ತಬ್ಧಚಿತ್ರ, ಗೊರವರ ಕುಣಿತ, ಪ್ರಾಥಮಿಕ ಪತ್ತಿನ ಸಂಘದ ಸ್ತಬ್ಧಚಿತ್ರ, ಕೃಷಿ ಚಟುವಟಿಕೆಯ ಸ್ತಬ್ಧಚಿತ್ರ, ಉಳುಮೆ ಮಾಡುವ ರೈತನ ಸ್ತಬ್ಧಚಿತ್ರ, ಎಸ್ ಸಿಡಿಸಿಸಿ ಬ್ಯಾಂಕ್ ನ ಮೊಬೈಲ್ ಬ್ಯಾಂಕ್ ವಾಹನ ಮತ್ತಿತರ ಸ್ತಬ್ಧಚಿತ್ರಗಳು ಮೆರವಣಿಗೆಗೆ ಮೆರುಗು ನೀಡಿದವು.

Continue Reading
Advertisement

Trending

Copyright © 2025 Namma Kudla News

You cannot copy content of this page