Connect with us

BANTWAL

ಕಾಂಗ್ರೆಸ್‌- ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

Published

on

ಬಂಟ್ವಾಳ: ಇಲ್ಲಿನ ಪುಂಜಾಲಕಟ್ಟೆ ಪೆಟ್ರೋಲ್ ಪಂಪ್ನ‌ಲ್ಲಿ ಕಾಂಗ್ರೆಸ್‌- ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಕಾಂಗ್ರೇಸ್ ನೇತ್ರತ್ವದಲ್ಲಿ ಕೇಂದ್ರ ಸರಕಾರದ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಪುಂಜಾಲಕಟ್ಟೆ ದೈಕಿನಕಟ್ಟೆ ಪೆಟ್ರೋಲ್ ಪಂಪ್ ನಲ್ಲಿ ಪ್ರತಿಭಟನೆ ನಡೆಸಿದರು. ಪೆಟ್ರೋಲ್, ಡಿಸೇಲ್ ಹಾಗೂ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಳದ ವಿರುದ್ಧ ಕಾಂಗ್ರೇಸಿಗರು ಪ್ರತಿಭಟನೆಯಲ್ಲಿ ತೊಡಗಿ ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದರು.

 

ಧಿಕ್ಕಾರ ಕೂಗುತ್ತಿದ್ದ ಸಂದರ್ಭದಲ್ಲಿ ಪೆಟ್ರೋಲ್ ಹಾಕಲು ಪೆಟ್ರೋಲ್ ಪಂಪ್ ಗೆ ಬಂದ ಮಾಜಿ ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ ಅವರು ಮಾತ್ರ ಪ್ರಧಾನಿ ಮೋದಿಯವರಿಗೆ ಜೈಕಾರ ಕೂಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೇಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರಧಾನಿಗೆ ಮತ್ತು ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾಂಗ್ರೇಸ್ ಕಾರ್ಯಕರ್ತ ಮೋಹನ್ ವಿರುದ್ದ ರೊಚ್ಚಿಗೆದ್ದ ಬಿಜೆಪಿ ಯುವಕರು ತರಾಟೆಗೆ ತೆಗೆದುಕೊಂಡರು. ಕಾಂಗ್ರೇಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಘರ್ಷಣೆಯ ಹಂತವನ್ನು ತಲುಪುವುದನ್ನು ಮನಗಂಡ ತುಂಗಪ್ಪ ಬಂಗೇರ, ಪದ್ಮಶೇಖರ ಜೈನ್, ಬೇಬಿ ಕುಂದರ್ ಕಾರ್ಯಕರ್ತರನ್ನು ಸಮಾಧಾನಪಡಿಸಿ ಬಿಗಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ.

BANTWAL

2028ಕ್ಕೆ ರಮಾನಾಥ ರೈ ಅಭ್ಯರ್ಥಿ: ನಾವೂರು ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Published

on

ಬಂಟ್ವಾಳ: 2028ಕ್ಕೂ ನಾವೇ ಅಧಿಕಾರಕ್ಕೆ ಬಂದೇ ಬರ್ತೀವಿ. ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ. ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡ್ತೇವೆ, ರಮಾನಾಥ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ, ಮುಂದಿನ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗ್ತಾರೆ, ಅವರನ್ನು ಮತ್ತೆ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಮಾನಾಥ ರೈ ಅವರು ತಮ್ಮ ಶಾಸಕ,ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ ಎಂದರು

ಬೆಂಜನಪದವು ಕ್ರೀಡಾಂಗಣ
ಬೆಂಜನಪದವಿನಲ್ಲಿ ಹತ್ತು ಕೋಟಿ ರೂ ಮಂಜೂರಾಗಿತ್ತು, ಅದನ್ನು ಅನುಷ್ಠಾನ ಮಾಡಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ಕ್ರೀಡಾಂಗಣ ನಿರ್ಮಾಣಕ್ಕೆ ನನಗೆ ಅವಕಾಶವನ್ನು ಮಾಡಿಕೊಡಬೇಕು ಎಂದು ಪ್ರಾಸ್ರಾವಿಕವಾಗಿ ಮಾತನಾಡಿದ ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ರಮಾನಾಥ ರೈ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಈ ಬಾರಿ ಕ್ರೀಡಾಂಗಣ ನಿರ್ಮಾಣಕ್ಕೆ ನೆರವು ನೀಡುವುದಾಗಿ ಹೇಳಿದರು.

ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ.ಸಂತೋಷ್ ಗುರೂಜಿ, ಎಂ ಎಲ್ ಸಿ ಸಲೀಮ್ ಆಹ್ಮದ್, ಐವಾನ್ ಡಿಸೋಜ, ಶಾಸಕರುಗಳಾದ ಅಶೋಕ್ ಕುಮಾರ್ ರೈ ,ಟಿ.ಡಿ.ರಾಜೇಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್,ಟಿ.ಎಮ್ ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ,ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಸಹಿತ ಪ್ರಮುಖರು ಹಾಜರಿದ್ದರು. ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಸ್ವಾಗತಿಸಿದರು.

WATCH VIDEO:

Continue Reading

BANTWAL

ಬಂಟ್ವಾಳ: ಅಪಘಾತಕ್ಕೊಳಗಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಸಾವು

Published

on

ಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ನಡೆದಿದೆ.

ಅಡ್ಯಾರು ನಿವಾಸಿ 65 ವರ್ಷದ  ಜಯರಾಮ  ಮೃತಪಟ್ಟ ವ್ಯಕ್ತಿ. ಎರಡು ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಬಡಗುಂಡಿ ಎಂಬಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಸವಾರನಿಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ‌ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.  ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ

Published

on

ಬಂಟ್ವಾಳ: ದಿ. ಕಾಂತಪ್ಪ ಪೂಜಾರಿ ಕುಟುಂಬಸ್ಥರ ಧರ್ಮದೈವಗಳ ಧರ್ಮಚಾವಡಿಯ ಶಿಲಾನ್ಯಾಸ ಕಾರ್ಯಕ್ರಮ ಸರಪಾಡಿ ಗ್ರಾಮದ ಮುದಿಮರ ಬರ್ಕೆಯಲ್ಲಿ ಫೆ.28ರಂದು ನಡೆಯಿತು.

ಧಾರ್ಮಿಕ ವಿದಿವಿಧಾನವನ್ನು ಸದಾಶಿವ ಮುಚ್ಚಿಣ್ಣಾಯ ಕಾರಿಂಜ ಅವರು ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಗುತ್ತಿನ ಮನೆತನದವರು, ಕುಟುಂಭಸ್ಥರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯೋಗಿಶ್‌ ಕೆ ಸುವರ್ಣ ಮುದಿಮರ ಸ್ವಾಗತಿಸಿ, ಪ್ರಕಾಶ್ ಅಂಚನ್‌ ಕಾರ್ಯಕ್ರಮ ನಿರೂಪಿಸಿದರು.

ಇದನ್ನೂ ಓದಿ: ಮಂಗಳೂರು: ಅರ್ತಿವೊಡಲು ವಿಷ್ಣುಮೂರ್ತಿ ದೇವಳದ ಬ್ರಹ್ಮಕಲಶೋತ್ಸವ ಸಿದ್ಧತೆ; ಆಮಂತ್ರಣ ಪತ್ರಿಕೆ ಬಿಡುಗಡೆ

Continue Reading
Advertisement

Trending

Copyright © 2025 Namma Kudla News

You cannot copy content of this page