Connect with us

DAKSHINA KANNADA

“ಕಾಂಗ್ರೆಸ್ ನನ್ನನ್ನು ಅಪಹರಿಸಿ ನಾಮಪತ್ರ ವಾಪಾಸ್ ಪಡೆಯಲು ಬೆದರಿಸಿದ್ದಾರೆ”: ಉಳ್ಳಾಲ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ..!

Published

on

“ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ” ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.

ಮಂಗಳೂರು: “ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ” ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.

“ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ.

ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ” ಎಂದರು.

ಬಳಿಕ ಮಾತಾಡಿದ ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ ಅವರು, “ಈ ಬಾರಿ ಯಾರ ಸಹಾಯವೂ ಇಲ್ಲದೆ ಸ್ವತಂತ್ರವಾಗಿ ನಮ್ಮ ಜೆಡಿಎಸ್ ಪಕ್ಷ ಅಸ್ತಿತ್ವಕ್ಕೆ ಬರಲಿದೆ.

ನಾವು ಜನಪರವಾದ ಪಂಚರತ್ನ ಯೋಜನೆಯ ಮೂಲಕ ಜನರ ಮನಸಿಗೆ ಹತ್ತಿರವಾಗಿದ್ದೇವೆ.

ಜೆಡಿಎಸ್ ಹೇಳಿರುವ ಜನಪರ ಕಾರ್ಯಕ್ರಮವನ್ನು ಆಡಳಿತಕ್ಕೆ ಬರುವ ಮರುಕ್ಷಣವೇ ಜಾರಿಗೆ ತರಲು ನಾವು ಸಿದ್ಧರಿದ್ದೇವೆ.

ಜನರ ಮಧ್ಯೆ ಗೊಂದಲ, ವೈಷಮ್ಯ ಮೂಡಿಸುವ ರಾಜಕೀಯ ನಾವು ಎಂದಿಗೂ ಮಾಡಿಲ್ಲ. ಕುಮಾರಸ್ವಾಮಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ನಿಶ್ಚಿತ.

ಜಿಲ್ಲೆಯಲ್ಲಿ 8 ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ಮೊಯಿದೀನ್ ಬಾವಾ ಅವರನ್ನು ಕಣಕ್ಕಿಳಿಸಿದ್ದು ಗೆಲ್ಲುವ ವಿಶ್ವಾಸ ನಮ್ಮಲ್ಲಿದೆ.

ವಿಷಾದದ ಸಂಗತಿ ಏನೆಂದರೆ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಹಾಕಿದ್ದೆವು.

ಮಂಗಳೂರು ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಬೇಕಾದ ಅಲ್ತಾಫ್ ಕುಂಪಲ ಎಂಬ ಒಬ್ಬ ವ್ಯಕ್ತಿಯನ್ನು ಅವರ ಸಮಾಜಸೇವೆಯನ್ನು ಗುರುತಿಸಿ ಟಿಕೆಟ್ ನೀಡಿದ್ದೇವೆ.

ಆದರೆ ಎರಡು ದಿನಗಳ ಹಿಂದೆ ಅವರು ಹಬ್ಬದ ದಿನ ಮಸೀದಿಯಿಂದ ಹೊರಬರುವಾಗ ತಂಡವೊಂದು ಅವರನ್ನು ಬೆದರಿಸಿ ಚುನಾವಣಾಧಿಕಾರಿಯ ಬಳಿಗೆ ಕರೆದೊಯ್ದು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಲಾಯಿತು.

ಇದು ಎಲ್ಲರೂ ಚಿಂತಿಸಬೇಕಾದ ವಿಷಯವಾಗಿದೆ. ಯಾಕೆಂದರೆ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೇ ಎದುರಿಸಲಾಗದವರು ಸಮಾಜದ ಜನರನ್ನು ಹೇಗೆ ನಡೆಯಿಸಿಕೊಳ್ಳಬಹುದು?” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನಜೀರ್ ಉಳ್ಳಾಲ್, ವಸಂತ ಪೂಜಾರಿ, ಅಶ್ರಫ್ ಸಾಜೀದ್, ಆಶ್ರಪ್ ಖಾಜಿ, ಯುವ ಜನತಾದಳದ ಅಕ್ಷಿತ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

BELTHANGADY

ಬೆಳ್ತಂಗಡಿ: ಕಾರು ಓವರ್ ಟೇಕ್ ಮಾಡುವ ವೇಳೆ ಅಪಘಾತ, ಬೈಕ್ ಸವಾರ ಸಾವು

Published

on

ಬೆಳ್ತಂಗಡಿ: ಕಾರು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ಕಲ್ಲಗುಡ್ಡೆ ನಿವಾಸಿ 42 ವರ್ಷ ಪ್ರಾಯದ ಸಯ್ಯದ್ ಪಾಶ ಮೃತ ದುರ್ಧೈವಿಯಾಗಿದ್ದಾರೆ. ಬೆಳ್ತಂಗಡಿಯ ಚರ್ಚ್ ರಸ್ತೆಯ ಕಲ್ಕುಣಿ ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಸಯ್ಯದ್ ಪಾಶ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆದಿತ್ತಾದ್ರೂ ಅವರು ಇಹಲೋಕ ತ್ಯಜಿಸಿದ್ದಾರೆ. ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದ ಕಾರಣ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

DAKSHINA KANNADA

ಪುತ್ತೂರು: ರೈಲಿನಿಂದ ಜಾರಿ 25 ಅಡಿ ಆಳಕ್ಕೆ ಬಿದ್ದ ಯುವಕ

Published

on

ಪುತ್ತೂರು: ರೈಲಿನಿಂದ ಜಾರಿ ಯುವಕನೊಬ್ಬ 25 ಅಡಿ ಆಳಕ್ಕೆ ಬಿದ್ದು ಬಳಿಕ ಪವಾಡ ಸದೃಶವಾಗಿ ಬದುಕುಳಿದ ಘಟನೆ ಕಡಬದ ಸವಣೂರು ಎಂಬಲ್ಲಿ ನಡೆದಿದೆ.

ಉದಯ್ ಕುಮಾರ್ ರೈಲಿನಿಂದ ಬಿದ್ದ ಯುವಕ. ಈತ ಮಂಗಳೂರಿನಿಂದ ಬೆಂಗಳೂರು ಕಡೆಗೆ ರೈಲಿನಲ್ಲಿ ಹೊರಟಿದ್ದನು. ಆದರೆ ಬಾಗಿಲ ಬಳಿ ನಿಂತಿದ್ದರಿಂದ ಆಕಸ್ಮತ್‌ ಆಗಿ ರೈಲಿನಿಂದ 25 ಅಡಿ ಆಳಕ್ಕೆ ಜಾರಿ ಮೋರಿ ಬಳಿ ಬಿದ್ದಿದ್ದ. ರಾತ್ರಿ ವೇಳೆ ಈತ ಬಿದ್ದಿದ್ದರಿಂದ ಸಹ ಪ್ರಯಾಣಿಕರಿಗೆ ಮಾತ್ರ ತಿಳಿದಿತ್ತು.

ನಂತರ ರೈಲು ಮುಂದಿನ ನಿಲ್ದಾಣ ತಲುಪಿದಾಗ ರೈಲ್ವೇ ಮಾಸ್ಟರ್ಗೆ ವಿಷಯವನ್ನು ತಿಳಿಸಿದರು. ಆದರೆ ಯುವಕ ಎಲ್ಲಿ ಬಿದ್ದ ಎಂಬುದಾಗಿ ಯಾರಿಗೂ ತಿಳಿದಿರಲಿಲ್ಲ. ರಾತ್ರಿಯಾದ್ದರಿಂದ ಹುಡುಕಲು ಸಹ ಸಾಧ್ಯವಾಗಲಿಲ್ಲ.

ಆದರೆ ಮರುದಿನ ಬೆಳಗ್ಗೆ ಯುವಕ ಮೋರಿಯ ಬಳಿ ನರಳಾಡುವುದನ್ನು ಸ್ಥಳೀಯರು ಗಮನಿಸಿ ಕೂಡಲೇ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಮುಖ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಹೀಗೆ 15 ಗಂಟೆಯ ಬಳಿಕ ಈತ ಪತ್ತೆಯಾಗಿರುವುದು ವಿಶೇಷವೇ ಸರಿ.

Continue Reading

DAKSHINA KANNADA

ಮಾವಿನ ಮಿಡಿ ಕೊಯ್ಯಲು ಹೋಗಿ ದುರಂ*ತ; ಮರದಿಂದ ಬಿ*ದ್ದು ವ್ಯಕ್ತಿ ಸಾ*ವು

Published

on

ಸುಳ್ಯ : ಮಾವಿನ ಮರ ಏರಿ ಮಾವಿನ ಮಿಡಿಗಳನ್ನು ಕೊಯ್ಯುತ್ತಿದ್ದ ವೇಳೆ ಮರದ ಕೊಂಬೆ ತುಂಡಾಗಿ ಬಿದ್ದು ವ್ಯಕ್ತಿಯೊಬ್ಬರು ಮೃ*ತ ಪಟ್ಟಿದ್ದಾರೆ. ಸುಳ್ಯ ತಾಲೂಕಿನ ಉಬರಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು, ಜನಾರ್ದನ ಪೂಜಾರಿ ಮೃ*ತ ದುರ್ದೈವಿ.

ಉಬರಡ್ಕದ ನೆಯ್ಯೋಣಿ ನಿವಾಸಿಯಾಗಿದ್ದ ಇವರು ಮಾರ್ಚ್ 22 ರಂದು ಮಾವಿನ ಮರದಿಂದ ಮಾವಿನ ಮಿಡಿ ಕೊಯ್ಯುತ್ತಿದ್ದರು. ಈ ವೇಳೆ ಕೊಂಬೆ ತುಂಡಾಗಿದೆ. ಪರಿಣಾಮ ಕೊಂಬೆಯ ಸಹಿತ ಮರದಿಂದ ಕೆಳಗೆ ಬಿ*ದ್ದ ಅವರಿಗೆ ಗಂಭೀ*ರ ಸ್ವರೂಪದ ಗಾ*ಯಗಳಾಗಿತ್ತು.

ಇದನ್ನೂ ಓದಿ : ಬೆಳ್ತಂಗಡಿ : ಟಿಸಿ ಬಳಿಯಲ್ಲಿ ಮೆಸ್ಕಾಂ ಸಿಬ್ಬಂದಿಯ ಮೃ*ತದೇಹ ಪತ್ತೆ

ಸೊಂಟ ಹಾಗೂ ತಲೆಗೆ ಏಟಾಗಿದ್ದ ಅವರನ್ನು ತಕ್ಷಣ ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಜನಾರ್ದನ ಪೂಜಾರಿ ಮೃ*ತಪಟ್ಟಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page