Connect with us

LATEST NEWS

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ ಹೊಟೇಲ್ ಗೆ ನುಗ್ಗಿದ ಕಂಟೈನರ್: ನಾಲ್ವರ ಸಾವು 

Published

on

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ ಹೊಟೇಲ್ ಗೆ ನುಗ್ಗಿದ ಕಂಟೈನರ್: ನಾಲ್ವರ ಸಾವು 

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ  ಹೊರವಲಯದ ಚದುಲಪುರ ಕ್ರಾಸ್ ನಲ್ಲಿ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿ ನಿಂತಿದ್ದ ಎರಡು ಕಾರು, ಒಂದು ಬೈಕ್‌ಗೆ ಡಿಕ್ಕಿ ಹೊಡೆದು ಹೊಟೇಲ್‌ಗೆ ನುಗ್ಗಿದ ಘಟನೆಯಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಸ್ವಿಫ್ಟ್ ಕಾರಿನಲ್ಲಿದ್ದ ಗವಿಗಾನಹಳ್ಳಿ ನಿವಾಸಿಗಳಾದ ವಕೀಲ ಯಮುನಾಚಾರ್ , ಚಿಕ್ಕಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಗುಮಾಸ್ತ ಎಚ್.ವಿ.ವೆಂಕಟೇಶ್ , ಟಾಟಾ ನೆಕ್ಸಾನ್ ಕಾರಿನಲ್ಲಿದ್ದ ಬೆಂಗಳೂರಿನ ಬಾಣಸವಾಡಿ ನಿವಾಸಿ ಕಲಾಂಜಿಯಂ , ದೊಡ್ಡಬಳ್ಳಾಪುರ ತಾಲ್ಲೂಕಿನ ಲಿಂಗಪುರದ ನಿವಾಸಿ ನಿತೇಶ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹರಿಯಾಣ ಮೂಲದ ಕಂಟೈನರ್ ಲಾರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಬೆಂಗಳೂರಿನಿಂದ ಹೈದರಾಬಾದ್ ನತ್ತ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ 6 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದರು. ಲಾರಿ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ..

LATEST NEWS

ಸ್ವಂತ ಮಗಳ ಮೇಲೆಯೇ ಆತ್ಯಾಚಾರವೆಸಗಿ ಗರ್ಭವತಿ ಮಾಡಿದ ತಂದೆ

Published

on

ದಿನದಿಂದ ದಿನಕ್ಕೆ ದೇಶದಲ್ಲಿ ಆತ್ಯಾಚಾರ ಲೈಂಗಿಕ ದೌರ್ಜನ್ಯಗಳ ಸಂಖ್ಯೆ ಹಚ್ಚುತ್ತಿದೆ. ಇದೀಗ ಇಂತಹದ್ದೇ ಒಂದು ಘಟನೆ ಗುಜರಾತ್‌ನಲ್ಲಿ ನಡೆದಿದೆ. 14 ವರ್ಷದ ತನ್ನ ಹೆತ್ತ ಮಗಳ ಮೇಲೆ ತಂದೆಯೊಬ್ಬ ಆತ್ಯಾಚಾರ ಎಸಗಿ ಆಕೆಯನ್ನು ಗರ್ಭವತಿ ಮಾಡಿದ ಘಟನೆ ಗುಜರಾತ್ನ ಅಹ್ಮದಾಬಾದ್ ನಲ್ಲಿ ನಡೆದಿದೆ.

ತನ್ನ 14 ವರ್ಷದ ಮಗಳ ಮೇಲೆ ನಿರಂತರವಾಗಿ ತಂದೆ ಆತ್ಯಾಚಾರವೆಸಗುತ್ತಿದ್ದ. ನಂತರ ಯಾರಲ್ಲೂ ಹೇಳದ ಹಾಗೆ ಬೆದರಿಕೆ ಹಾಕಿದ್ದ. ಆದರೆ ಆಕೆ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಂತಿಮವಾಗಿ ಫೆಬ್ರವರಿ 5 ರಂದು ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ.

ಆರೋಪಿಗೆ 6 ಮಕ್ಕಳಿದ್ದಾರೆ. ಅದರಲ್ಲಿ ಒಬ್ಬಾಕೆಯ ಮೇಲೆ ಆತ್ಯಾಚಾರವೆಸಗಿದ್ದಾನೆ. ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಅಂಗಡಿ-ಮಳಿಗೆಗಳಿಗೆ ಮೇಯರ್ ದಿಢೀರ್ ದಾಳಿ

Published

on

ಮಂಗಳೂರು : ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಅಂಗಡಿ-ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿ ಘಟನೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ  ನಡೆಯಿತು.

ಮಂಗಳುರಿನ ಫಿಝಾ ಬೈ ನೆಕ್ಸ್ ಮಾಲ್ ಹಾಗೂ ಟೋಕಿಯಾ ಮಾರ್ಕೇಟ್‌ಗಳಿಗೆ ಮೇಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಕೆಲವೊಂದು ಅಂಗಡಿಗಳು ಟ್ರೇಡ್‌ಲೈನ್ಸನ್ ನವೀಕರಿಸದ ಹಿನ್ನಲೆಯಲ್ಲಿ ಬೀಗ ಜಡಿದರು. ಮಾತ್ರವಲ್ಲದೇ ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಅಂಗಡಿ ಮಾಲಕಕರಿಗೆ ಮೇಯರ್ ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ಓದಿ : ಸಿದ್ಧರಾಮಯ್ಯಗೆ ಬಿಗ್ ರಿಲೀಫ್; ಸಿಬಿಐ ತನಿಖೆಯಿಂದ ಪಾರಾದ ಸಿಎಂ

ಈ ಸಂದರ್ಭ ಮಾತನಾಡಿದ ಮೇಯರ್, “ಹಲವಾರು ಮಂದಿಯ ದೂರಿನ ಮೇರಿಗೆ ದಾಳಿ ಮಾಡಲಾಗಿದೆ. ಕೆಲವೊಂದು ಅಂಗಡಿಗಳಲ್ಲಿ ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಹಿನ್ನಲೆಯಲ್ಲಿ ಅವರಿಗೆ ನೋಟೀಸ್ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳ ತಂಡದೊಂದಿಗೆ ದಾಳಿ ನಡೆಸಲಾಗುವುದು” ಎಂದು ಹೇಳಿದರು. ಈ ವೇಳೆ ಉಪಮೇಯರ್ ಭಾನುಮತಿ, ಪಾಲಿಕೆ ಸದಸ್ಯೆ ಸುಮಿತ್ರಾ ಕರಿಯ,ಕಂದಾಯ ಅಧಿಕಾರಿ ವಿಜಯ್,ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥತರಿದ್ದರು.

Continue Reading

LATEST NEWS

ಮಡಿಕೇರಿಯಲ್ಲಿ ಇನ್ನು ಮುಂದಕ್ಕೆ ನೀರಿನ ಬಾಟಲ್ ಸಿಗುವುದಿಲ್ಲ

Published

on

ಮಡಿಕೇರಿ ಪ್ರವಾಸಿತಾಣವಾದ್ದರಿಂದ ಅನೇಕ ಜನರು ಈ ಜಾಗಕ್ಕೆ ಬಂದು ಹೋಗುತ್ತಾರೆ. ಹೀಗೆ ಪ್ರೇಕ್ಷಣಿಯ ಸ್ಥಳಗಳಿಗೆ ಬರಬೇಕಾದರೆ ಪ್ಲಾಸ್ಟಿಕ್ ಬಾಟಲಿಯ ನೀರನ್ನು ತರುತ್ತಾರೆ. ನೀರು ತರುವುದು ಮಾತ್ರವಲ್ಲಿ ಅದರ ಬಾಟಲಿಯನ್ನು ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಾರೆ. ಇದನ್ನು ತಡೆಗಟ್ಟಲು ಮಡಿಕೇರಿಯಲ್ಲಿ ಹೊಸ ನಿಯಮವೊಂದನ್ನು ತರಲಾಗಿದೆ.

ಮಡಿಕೇರಿಯಲ್ಲಿ ಕಸ ವೈಜ್ಞಾನಿಕವಾಗಿ ವಿಲೇವಾರಿ ಆಗುತ್ತಿಲ್ಲ. ಹೀಗಾಗಿ ಸಹಸ್ರಾರು ಕೆಜಿ ಪ್ಲಾಸ್ಟಿಕ್ ಬಾಟಲಿಗಳನ್ನ ತೆಗೆದುಕೊಂಡು ಹೋಗಿ ಬೆಟ್ಟದ ಮೇಲೆ ಡಂಪ್ ಮಾಡಲಾಗುತ್ತಿದೆ. ಇದೇ ಇದೀಗ ಟನ್​ಗಟ್ಟಲೆ ಸಂಗ್ರಹವಾಗಿದೆ. ಈ ಸಮಸ್ಯೆಯಿಂದ ಮುಕ್ತವಾಗಲು ಇದೀಗ ಮಡಿಕೇರಿ ನಗರಸಭೆ ಮಡಿಕೇರಿ ನಗರದಲ್ಲಿ ಎರಡು ಲೀಟರ್​ವರೆಗಿನ ಪ್ಲಾಸ್ಟಿಕ ವಾಟರ್ ಬಾಟಲಿಗಳ ಮಾರಾಟವನ್ನ ನಿಷೇಧಿಸಿ ಆದೇಶ ಹೊರಡಿಸಿದೆ.

ಮಡಿಕೇರಿ ನಗರದಲ್ಲಿ ಈಗಾಗಲೇ ಮೂರು ಕಡೆ ಜಲ ಶುದ್ಧೀಕರಣ ಘಟಕ ಇದ್ದು ಅಲ್ಲಿ 1 ರೂ. ಹಾಗೂ 5 ರೂ. ನಾಣ್ಯ ಹಾಕಿದರೆ ಬೇಕಾದಷ್ಟು ಕುಡಿಯುವ ನೀರು ದೊರಯುತ್ತದೆ. ಅದರ ಜೊತೆಗೆ ನಗರದ ಹಲವು ಕಡೆ ವಾಟರ್ ಫಿಲ್ಟರ್​ಗಳನ್ನೂ ಅಳವಡಿಸಲು ಕೂಡ ಯೋಜನೆ ಸಿದ್ಧವಾಗಿದೆ.

ಸದ್ಯ ಈ ಯೋಜನೆಯನ್ನ ಪ್ರಾಯೋಗಿಕವಾಗಿ ಮಡಿಕೇರಿ ನಗರದಲ್ಲಿ ಮಾತ್ರ ಜಾರಿಗೆ ತರಲಾಗಿದೆ. ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಯನ್ನು ಪ್ಲಾಸ್ಟಿಕ್ ಬಾಟಲಿ ಮುಕ್ತ ಮಾಡುವ ಸಂಬಂಧ ಜಿಲ್ಲಾಡಳಿತ ಯೋಚಿಸುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page