Connect with us

ಸಾಲ ಮರುಪಾವತಿಗೆ ಕಾಲಾವಕಾಶ ಕೊಟ್ಟು ಬದುಕಲು ಬಿಡಿ ಪ್ಲೀಸ್ ..!!

Published

on

 ಸಾಲ ಮರುಪಾವತಿಗೆ ಕಾಲಾವಕಾಶ ಕೊಟ್ಟು ಬದುಕಲು ಬಿಡಿ ಪ್ಲೀಸ್ ..!!.

-ಪವಿತ್ರ ಶೆಟ್ಟಿ ದೇರ್ಲಕ್ಕಿ

ಮಂಗಳೂರು: ಡೆಡ್ಲಿ ಕೊರೋನಾ ವೈರಸ್‌ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಜನರು ಆತಂಕದಲ್ಲಿದ್ದಾರೆ. 8000ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದುಕೊಂಡಿದೆ ಈ ಕಿಲ್ಲರ್.

ಇದೆಲ್ಲದರ ಮಧ್ಯೆ ಈಗ ಜನಸಾಮಾನ್ಯರ ಬದುಕಿಗೆ ಕೊಳ್ಳಿ ಇಡಲು ಬ್ಯಾಂಕ್‌ಗಳು, ಖಾಸಾಗಿ ಫೈನಾನ್ಸ್‌ಗಳು ಮುಂದಾಗಿವೆ.

ಚೀನಾದ ವೂಹಾನ್‌ ಪ್ರಾಂತದಲ್ಲಿ ಕಳೆದ ಡಿಸೆಂಬರ್‌ನಲ್ಲಿ ಕಾಣಿಸಿಕೊಂಡ ಮಾರಣಾಂತಿಕ ಕೊರೋನಾ ವೈರಸ್‌ನಿಂದ ಇಡೀ ಪ್ರಪಂಚವೇ ಆತಂಕದಲ್ಲಿ ದಿನ ದೂಡುತ್ತಿದೆ. ಸಾವು ನೋವಿನ ಕಥೆಗಳಿಗೆ ಈ ಕಿಲ್ಲರ್‌ ವೈರಸ್‌ ಕಾರಣವಾಗುತ್ತಿದೆ.

ಈಗಾಗಲೇ 8000ಕ್ಕೂ ಅಧಿಕ ಮಂದಿ ಕೋವಿಡ್‌ 19ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟುತ್ತಿದೆ.

ಒಂದೆಡೆ ಜನರು ಜೀವ ಭಯದಲ್ಲಿದ್ದರೆ, ಮತ್ತೊಂದೆಡೆ ಆರ್ಥಿಕ ಸ್ಥಿತಿಗತಿ ಅದೋಗತಿಗೆ ತಲುಪಿದೆ. ಮೊದಲೇ ಆರ್ಥಿಕ ಹೊಡೆತ ತಿಂದಿದ್ದ ಭಾರತ ದೇಶಕ್ಕೆ ಕೊರೋನಾ ವೈರಸ್‌ ದೊಡ್ಡ ಕಂಟಕವಾಗಿ ಬಿಟ್ಟಿದೆ.

ಹೌದು. ಪ್ರಪಂಚದ ಶ್ರೀಮಂತ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದ ರಿಲಯನ್ಸ್ ಇಂಡಸ್ಟ್ರೀಯ ಮಾಲಕ ಮುಕೇಶ್ ಅಂಬಾನಿ ಬರೋಬ್ಬರಿ 5 ಬಿಲಿಯನ್ ಅಮೆರಿಕನ್ ಡಾಲರ್ ನಷ್ಟ ಅನುಭವಿಸಿದ್ದಾರೆ.

ಅಷ್ಟೇ ಅಲ್ಲ. ಆದಿತ್ಯ ಬಿರ್ಲಾ ಗ್ರೂಪ್, ವಿಪ್ರೋ, ಅದಾನಿ ಗ್ರೂಪ್, ಇನ್ಫೋಸಿಸ್, ಮಹೀಂದ್ರಾ ಗ್ರೂಪ್ ಗಳು ಕೂಡ ಭಾರಿ ನಷ್ಟ ಅನುಭವಿಸಿದ್ದಾರೆ. ಶೇರು ಮಾರುಕಟ್ಟೆ ಸಂಪೂರ್ಣ ನೆಲಕಚ್ಚಿದೆ.

ಅದಷ್ಟೇ ಅಲ್ಲ. ಈ ಕೊರೋನಾ ಎಫೆಕ್ಟ್‌ನಿಂದಾಗಿ ದಿನದ ಕೂಲಿಯನ್ನೆ ನಂಬಿ ಬದುಕಿದ್ದ ಲಕ್ಷಾಂತರ ನೌಕರರು, ಕಾರ್ಮಿಕರು ದಿನದೂಡಲು ಹರಸಾಹಸ ಪಡುತ್ತಿದ್ದಾರೆ.

ಕೊರೋನಾ ಸೋಂಕು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಮಾಲ್‌, ಥಿಯೇಟರ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಸೇರಿದಂತೆ ಹೆಚ್ಚು ಜನ ಸೇರುವ ಶಾಪ್‌ಗಳನ್ನು ಬಂದ್ ಮಾಡಲಾಗಿದೆ.

ಸಭೆ ಸಮಾರಂಭಗಳನ್ನು ಮದುವೆ -ಮುಂಜಿಗಳನ್ನು ನಿಷೇಧಿಸಲಾಗಿದೆ. ಇದರಿಂದಾಗಿ ಜನಸಾಮಾನ್ಯರಿಗೆ ದಿನ ಸವೆಸೋದು ಕಷ್ಟಸಾಧ್ಯವಾಗಿದೆ.

ಈ ಮಧ್ಯೆ ಬ್ಯಾಂಕ್‌ಗಳು, ಫೈನಾನ್ಸ್‌ಗಳು ರಕ್ಕಸರಂತೆ ಕಾಡುತ್ತಿದ್ದಾರೆ. ಸಾಲ ಮರುಪಾವತಿ ಮಾಡದ ಗ್ರಾಹಕರನ್ನು ಕಾಡಲಾರಂಭಿಸಿದ್ದು ವಾಹನಗಳನ್ನು ಸೀಜ್‌ ಮಾಡುತ್ತಿದ್ದಾರೆ. ಇದರ ಬಗ್ಗೆ ಜನ ಆತಂಕ ವ್ಯಕ್ತಪಡಿಸಿದ್ದಾರೆ.

ನೊಂದ ಜನರು, ಸಾಲ ಕಟ್ಟಲು ರೆಡಿ ಇದ್ದೇವೆ. ಸಾಲ ಮರುಪಾವತಿಗೆ ನಮಗೆ ಕಾಲಾವಕಾಶ ಬೇಕು. ಎರಡು- ಮೂರು ತಿಂಗಳು ವಿನಾಯಿತಿ ನೀಡಿದರೆ ಬಡ ಕುಟುಂಬಗಳಿಗೆ ಅನುಕೂಲವಾಗುತ್ತದೆ ಅನ್ನುತ್ತಿದ್ದಾರೆ. ಕೆಲಸವೇ ಇಲ್ಲದೆ ತಿನ್ನಲು ಕೂಳಿಗಾಗಿ ಹರಸಾಹಸ ಪಡುತ್ತಿದ್ದಾರೆ. ಇನ್ನು ಸಾಲ ಎಲ್ಲಿಂದ ತಾನೆ ಕಟ್ಟಿಯಾರು? ದಿನ ಕೂಲಿಯನ್ನು ನಂಬಿ ಬದುಕುವ ಕಾರ್ಮಿಕರು, ನೌಕರಿಗೆ ಬ್ಯಾಂಕ್‌ಗಳು, ಫೈನಾನ್ಸ್‌ಗಳು ಮಾನವೀಯ ನೆಲೆಯಲ್ಲಿ ವಿನಾಯತಿ ನೀಡಬೇಕು ಎಂದು ಜನ ಆಗ್ರಹಿಸಿದ್ದಾರೆ.

ಇನ್ನು ಈ ಬಗ್ಗೆ ಕರಾವಳಿ ಶಾಸಕರಾದ ಯು.ಟಿ. ಖಾದರ್ ಅವರೂ ಸರ್ಕಾರದ ಗಮನ ಸೆಳೆದಿದ್ದು, ಕೊರೋನಾ ಅಟ್ಟಹಾಸದಿಂದ ದುಡಿಯುವ ವರ್ಗಕ್ಕೆ ಸಮಸ್ಯೆಯಾಗುತ್ತಿದೆ,

ಮಾಲಕರು ತಿಂಗಳ ಬಾಡಿಗೆಗೆ ವಿನಾಯತಿ ನೀಡಬೇಕು. ದುಡಿಯುವ ವರ್ಗದ ಬಗ್ಗೆ ಕಾಳಜಿ ವಹಿಸಿ ಇದಕ್ಕೆ ಕ್ರಮ ಕೈಗೊಳ್ಳಬೇಕು.

ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ನಾಡಿನ ಜನರ ನಿದ್ದೆ ಕೆಡಿಸಿರುವ ಈ ಡೆಡ್ಲಿ ಕೊರೋನಾದಿಂದ ಹೈರಾಣಾಗಿರುವ ಜನತೆ ಸಮಸ್ಯೆಗೆ ಮುಕ್ತಿ ಸಿಗಬೇಕಿದೆ.

ಸರ್ಕಾರ ಈ ಬಗ್ಗೆ ಗಮನ ಹರಿಸಿ ಸಾಲ ಮರುಪಾವತಿಗೆ ವಿನಾಯಿತಿ ಕೊಡಲು ಬ್ಯಾಂಕ್‌ಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು. ಈ ಮೂಲಕ ಜನಸಾಮಾನ್ಯರ ನೋವಿಗೆ ಸ್ಪಂದಿಸಬೇಕಿದೆ.

ವಿಡಿಯೋಗಾಗಿ..

Advertisement
Click to comment

Leave a Reply

Your email address will not be published. Required fields are marked *

STATE

ಬೆಳಗಾವಿ ಅಧಿವೇಶನದಲ್ಲಿ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ 50 ಲಕ್ಷ ರೂ. ನೀಡಲು ಶಾಸಕರ ಮನವಿ

Published

on

ಬೆಳಗಾವಿ: ಢಾಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಗೆದ್ದ ಕಾರ್ಕಳ್ ಮಿಯ್ಯಾರಿನ ಧನಲಕ್ಷ್ಮಿ ಪೂಜಾರಿ ಅವರು ಇಂದು ತನ್ನ ಕೋಚ್‌ ತೇಜಸ್ವಿನಿ ಪೈ ಅವರ ಜತೆಗೆ ಬೆಳವಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದಅಧಿವೇಶನದ ಕಲಾಪ ವೀಕ್ಷಿಸಿದರು.

 

ಈ ಸಂದರ್ಭದಲ್ಲಿ ಧನ ಲಕ್ಷ್ಮಿ ಅವರನ್ನು ಸರಕಾರದ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಧನಲಕ್ಷ್ಮಿ ಅದರ ಸಾಧನೆಯನ್ನು ಗುರುತಿಸಿ ಸರಕಾರದ ವತಿಯಿಂದ ಈಗಾಗಲೇ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿದೆ ಎಂದು ತಿಳಿಸಿದರು.

ಧನಲಕ್ಷ್ಮಿ ಮತ್ತು ಆಕೆಯ ತರಬೇತುದಾರರಾದ ತೇಜಸ್ವಿನಿ ಪೈ ಅವರನ್ನು ಅಭಿನಂದಿಸುತ್ತೇನೆ ಎಂದರು. ಧನಲಕ್ಞ್ಮಿ ಅವರಿಗೆ  ಕನಿಷ್ಟ 50 ಲಕ್ಷ ರೂಪಾಯಿ ಬಹುಮಾನ ನೀಡ ಬೇಕೆಂದು ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದರು.ಆಕೆಗೆ ಸರಕಾರಿ ಉದ್ಯೋಗ ಕೊಡಿಸಬೇಕೆಂದು ವಿ ಸುನಿಲ್ ಕುಮಾರ್ ಮನವಿ ಮಾಡಿದರು.

Continue Reading

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

DAKSHINA KANNADA

‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

Published

on

ಮಂಗಳೂರು: ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’  ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಪೌಂಡೇಶನ್‌ನ ಸುಹೈಲ್ ಕಂದಕ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಭಿಯಾನದ ಉದ್ಘಾಟನೆಯನ್ನು ಸ್ಪೀಕರ್ ಯು ಟಿ ಖಾದರ್ ನೆರವೇರಿಸುವರು. ಸಂಸದ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿರುತ್ತಾರೆ ಎಂದರು.

ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನವನ್ನು ಆಯೋಜಿಸುತ್ತಿದ್ದು ಇದರ ಅಂಗವಾಗಿ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಹಲವು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರ ಎಸಿಪಿ ರವೀಶ್ ನಾಯಕ್, ಕಾಂಗ್ರೆಸ್ ನಾಯಕ ವಿಕಾಸ್ ಶೆಟ್ಟಿ, ಬಾರ್ನ್ ಅಗೇನ್ ರಿಕವರಿ ಸೆಂಟರ್, ಬೀನಾ ಸಲ್ದಾನ ಮೊದಲಾದವರಿದ್ದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page