Connect with us

ರಾಹುಲ್ ಗಾಂಧಿ ಹೇಳಿಕೆ ಕಡೆಗಣಿಸಿದ್ದೇ ಕೊರೊನಾ ಭೀಕರತೆಗೆ ಕಾರಣ: ಖಾದರ್ ಆಕ್ರೋಶ..

Published

on

ರಾಹುಲ್ ಗಾಂಧಿ ಹೇಳಿಕೆ ಕಡೆಗಣಿಸಿದ್ದೇ ಕೊರೊನಾ ಭೀಕರತೆಗೆ ಕಾರಣ: ಖಾದರ್ ಆಕ್ರೋಶ..

ಮಂಗಳೂರು: ರಾಹುಲ್ ಗಾಂಧಿ ಹೇಳಿಕೆಯನ್ನ ಕಡೆಗಣಿಸಿದ್ದೇ ದೇಶದಲ್ಲಿ ಕೊರೊನಾ ಭೀಕರತೆಗೆ ಕಾರಣ ಅಂತ ಮಾಜಿ ಸಚಿವ, ಶಾಸಕ ಯುಟಿ ಖಾದರ್ ಹೇಳಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಮೊದಲ ವಾರದಲ್ಲೇ ರಾಹುಲ್ ಗಾಂಧಿಯವರು ಕೊರೊನಾ ಭೀಕರತೆ ಕುರಿತು ಎಚ್ಚರಿಸಿ ಅಂತರಾಷ್ಟ್ರೀಯ ವಿಮಾನಯಾನ ನಿಲ್ಲಿಸಲು ಸೂಚಿಸಿದ್ದರು.

ಅದನ್ನ ಪರಿಗಣಿಸಿ ತಕ್ಷಣ ಕಾರ್ಯಗತರಾಗಿದ್ದಿದ್ರೆ ದೇಶದಲ್ಲಿ ಶೇ.90ರಷ್ಟು ಕೊರೊನಾ  ಸೋಂಕು ಇರುತ್ತಿರಲಿಲ್ಲ.

ಯಾವುದೇ ಉತ್ತಮ ಸಲಹೆ ದೊರಕುವಾಗ ಪಕ್ಷದ ದೃಷ್ಟಿಕೋನವನ್ನು ಕೇಂದ್ರ ಸರ್ಕಾರ ಬಿಡಬೇಕು ಎಂದರು.

ಇನ್ನು ರಾಜ್ಯ ಸರ್ಕಾರದ ಆದೇಶಗಳು ಗೊಂದಲಮಯವಾಗಿದೆ. ಕೇರಳ, ಮಹಾರಾಷ್ಟ್ರ ಸರ್ಕಾರಗಳು 20, 30 ಸಾವಿರ ಕೋಟಿ ಪ್ಯಾಕೇಜ್ ಬಿಡುಗಡೆ ಮಾಡಿದ್ರೆ, ಕರ್ನಾಟಕ ರಾಜ್ಯ ಸರ್ಕಾರ ಕೇವಲ 1600 ಕೋಟಿ ರೂ ಪ್ಯಾಕೇಜ್ ಬಿಡುಗಡೆ ಮಾಡಿದೆ.

ಅದೂ ಎಲ್ಲಾ ವರ್ಗಕ್ಕೂ ತಲುಪಿಲ್ಲ. ಇನ್ನು ವಿದೇಶದಲ್ಲಿರುವ ಕರಾವಳಿಗರು ಸಂಕಷ್ಟದ್ದಲ್ಲಿದ್ದು, ಅವರನ್ನ ಕರೆತರುವ ಕೆಲಸವೂ ರಾಜ್ಯ ಸರ್ಕಾರದಿಂದ ಸಮರ್ಪಕವಾಗಿ ನಡೆಯುತ್ತಿಲ್ಲ.

ಕೇರಳ ಸರ್ಕಾರ ಮೊದಲ ಹಂತದಲ್ಲಿ 12 ವಿಮಾನಗಳಲ್ಲಿ ಕರೆತಂದರೆ, ನಮ್ಮಲ್ಲಿ ರಾಜ್ಯದಲ್ಲಿ ಕೇವಲ ಎರಡೇ ವಿಮಾನ ಬಂದಿದೆ.

ವಿದೇಶದಲ್ಲಿರುವ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಕರಾವಳಿಗರನ್ನ ಕರೆತರುವ ಕೆಲಸ ಆದಷ್ಟು ಬೇಗ ಆಗ್ಬೇಕು ಇದಕ್ಕೆ ಸಂಸದರು ಶ್ರಮಿಸಬೇಕೆಂದರು.

ಕರ್ನಾಟಕ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ ಎಂಬುವುದನ್ನು ಮುಖ್ಯಮಂತ್ರಿಗಳೇ ಸ್ವತಃ ಒಪ್ಪಿದ್ದಾರೆ.

ಆದ್ರೆ ಬಿಡುಗಡೆಯಾದ ಕೊರೊನಾ ಪರಿಹಾರ ನಿಧಿಯಲ್ಲಿ ನಯಾ ಪೈಸೆಯೂ ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ.

ಕರ್ನಾಟಕ ರಾಜ್ಯವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿರುವುದು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ. 25 ಸಂಸದರಿದ್ದು, ಒಬ್ಬರು ಬಾಯಿ ತೆರೆಯುತ್ತಿಲ್ಲವೆಂದರೆ ನಾಚಿಕೆ ಪಡುವ ವಿಷಯ.

ಎಲ್ಲಾ ಸಂಸದರೂ ರಾಜೀನಾಮೆ ಕೊಡಿ ಅಂತ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಲಾಕ್ ಡೌನ್ ಸಂಕಷ್ಟದ ಸುಳಿಯಲ್ಲಿ ಬೀಡಿ ಕಾರ್ಮಿಕರು,

ಅಸಂಘಟಿತ ಕಾರ್ಮಿಕ ವಲಯ, ಫೋಟೋಗ್ರಾಫರ್ಸ್, ಗೂಡಂಗಡಿ, ಬೀದಿ ಬದಿ ವ್ಯಾಪಾರಿಗಳು, ಕ್ಷೌರಿಕರು ಮುಂತಾದವರು ಸಿಲುಕಿದ್ದಾರೆ.

ಆದಷ್ಟು ಬೇಗ ಇವರಿಗೂ ಸರ್ಕಾರದಿಂದ ಪರಿಹಾರ ದೊರಕಬೇಕು ಎಂದು ಆಗ್ರಹಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page