Connect with us

ದಿನೇ ದಿನೇ ಏರುತ್ತಲಿದೆ ಕೊರೊನಾ ಹಾವಳಿ: ವಿಶ್ವಾದ್ಯಂತ ಕೊರೊನಾಗೆ 3 ಸಾವಿರಕ್ಕೂಅಧಿಕ ಬಲಿ

Published

on

ವಿಶ್ವಾದ್ಯಂತ ಕೊರೊನಾಗೆ 3 ಸಾವಿರಕ್ಕೂಅಧಿಕ ಬಲಿ: 86 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ..!

ಬೀಜಿಂಗ್: ಚೀನಾದ ವುವಾನ್‌ನಲ್ಲಿ ಆರಂಭವಾದ ಕೊರೊನಾ ಈಗ ವಿಶ್ವದ 60ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದು, ಜಾಗತಿಕವಾಗಿ 3 ಸಾವಿರಕ್ಕೂ ಅಧಿಕ ಮಂದಿ ಈ ವೈರಸ್‌ಗೆ ಬಲಿಯಾಗಿದ್ದಾರೆ.

ಜತೆಗೆ ಸುಮಾರು 86 ಸಾವಿರ ಮಂದಿಗೆ ಸೋಂಕು ತಗುಲಿದ್ದು, ಇವರೆಲ್ಲರೂ ನಿಗಾದಲ್ಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಹೊಸ ವರದಿಯಲ್ಲಿ ತಿಳಿಸಲಾಗಿದೆ.

ಚೀನಾವೊಂದರಲ್ಲೇ 2,870 ಮಂದಿ ಮೃತಪಟ್ಟಿದ್ದು, ಇಲ್ಲಿ 79,824 ಸೋಂಕಿತರಿದ್ದಾರೆ ಎಂದು ಅದು ತಿಳಿಸಿದೆ.

ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4ಕ್ಕೇರಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಅದರಂತೆ, ಅಫ್ಘಾನಿಸ್ತಾನದ ಜೊತೆ ಪಾಕ್‌ ಹೊಂದಿರುವ ಗಡಿಯನ್ನು ಸೋಮವಾರದಿಂದ 7 ದಿನಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ.

ಕರಾಚಿ ಸೇರಿದಂತೆ ಸಿಂಧ್‌ ಪ್ರಾಂತ್ಯದ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.ಇರಾನ್‌ನಲ್ಲೂ ಕೋವಿಡ್‌-19 ವೈರಸ್‌ ವ್ಯಾಪಕವಾಗಿ ಹಬ್ಬುತ್ತಿದ್ದು, ಭಾನುವಾರ ಒಂದೇ ದಿನ 11 ಮಂದಿ ಸಾವಿಗೀಡಾಗಿದ್ದಾರೆ.

ಈ ಮೂಲಕ ವೈರಸ್‌ಗೆ ಬಲಿಯಾದವರ ಸಂಖ್ಯೆ 54ಕ್ಕೇರಿದ್ದು, 978 ಮಂದಿಗೆ ಸೋಂಕು ತಗುಲಿದೆ. ಐರ್ಲೆಂಡ್‌ನ‌ಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ.

ದಕ್ಷಿಣ ಕೊರಿಯಾದಲ್ಲಿ 376 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,526ಕ್ಕೇರಿದೆ. ಜಪಾನ್‌ನ ಡೈಮಂಡ್‌ ಪ್ರಿನ್ಸೆಸ್‌ ನೌಕೆಯಿಂದ ಸ್ವದೇಶಕ್ಕೆ ಮರಳಿದ್ದ 78 ವರ್ಷದ ವ್ಯಕ್ತಿ ಸಿಡ್ನಿಯ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ.

ಈ ಮೂಲಕ ಆಸ್ಟ್ರೇಲಿಯಾದಲ್ಲಿ ಕೊರೊನಾಗೆ ಮೊದಲ ಬಲಿ ಆದಂತಾಗಿದೆ. ಅಮೆರಿಕದಲ್ಲೂ ವೈರಸ್‌ಗೆ ಮೊದಲ ಸಾವು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇರಾನ್‌, ಇಟಲಿ ಸೇರಿ ಕೆಲವು ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿ ಅಧ್ಯಕ್ಷ ಟ್ರಂಪ್‌ ಆದೇಶ ಹೊರಡಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page