Connect with us

ಮಂಗಳೂರು ಸ್ಮಾರ್ಟ್‌ ಎಂ.ಡಿ ಗೆ ದುಬಾರಿ ಕಾರ್‌ ಗಿಫ್ಟ್‌  ನೀಡಿದ ರಾಷ್ಟ್ರೀಕೃತ ಬ್ಯಾಂಕ್ …!  

Published

on

ಮಂಗಳೂರು ಸ್ಮಾರ್ಟ್‌ ಎಂ.ಡಿ ಗೆ ದುಬಾರಿ ಕಾರ್‌ ಗಿಫ್ಟ್‌  ನೀಡಿದ ರಾಷ್ಟ್ರೀಕೃತ ಬ್ಯಾಂಕ್ …!  

ಮಂಗಳೂರು :  ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಜೀರ್ ಗೆ ಕೆನರಾ ಬ್ಯಾಂಕ್ ವತಿಯಿಂದ ಕಾರನ್ನು ಗಿಫ್ಟ್ ಮಾಡಲಾಗಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ನಾಲ್ಕು ದಿನಗಳ ಹಿಂದೆ ಮಂಗಳೂರಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಗಳೇ ಸ್ವತಃ ಕಾರನ್ನು ಸ್ಮಾರ್ಟ್ ಸಿಟಿ ಎಂಡಿ ಮಹಮ್ಮದ್ ನಜೀರ್ ಗೆ ಹಸ್ತಾಂತರ ಮಾಡಿದ್ದಾರೆ.

“ಸ್ಮಾರ್ಟ್ ಸಿಟಿ” ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ. ಯೋಜನೆ ಮುಖ್ಯಸ್ಥರಾಗಿ ಐಎಎಸ್ ದರ್ಜೆಯ ಅಧಿಕಾರಿಯನ್ನೇ ನೇಮಕ ಮಾಡಬೇಕೆಂದು ಪ್ರಧಾನಿ ಸೂಚನೆ ಇದ್ದರೂ, ಮಂಗಳೂರಿನಲ್ಲಿ ಮಾತ್ರ ಕೆಎಎಸ್ ದರ್ಜೆಯೂ ಅಲ್ಲದ ವ್ಯಕ್ತಿಯನ್ನು ಸ್ಮಾರ್ಟ್ ಸಿಟಿ ಯೋಜನೆಯ ಎಂಡಿ ಮಾಡಲಾಗಿದೆ ಎನ್ನಲಾಗಿದೆ ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಆಗಿದ್ದ ಎಂಬ “ಅರ್ಹತೆ” ಆಧಾರದಲ್ಲಿ ಸ್ಮಾರ್ಟ್ ಸಿಟಿ ಎಂಡಿಯಾಗಿರುವ ವ್ಯಕ್ತಿಗೆ ಈಗ ಕೇಂದ್ರ ಸರಕಾರದ ಅಧೀನದ ಬ್ಯಾಂಕಿನಿಂದಲೇ ಕಾರು ಗಿಫ್ಟ್ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಬ್ಯಾಂಕ್ ಮೂಲದಿಂದ ತಿಳಿದ ಮಾಹಿತಿ ಪ್ರಕಾರ, ಕೆನರಾ ಬ್ಯಾಂಕಿನಲ್ಲಿ ಸ್ಮಾರ್ಟ್ ಸಿಟಿಗೆಂದು ಬಂದಿರುವ 200 ಕೋಟಿ ರೂಪಾಯಿ ಅನುದಾನದ ಹಣವನ್ನು ಎಫ್ ಡಿ ಇಡಲಾಗಿದೆ.

ಇಂಥ ದೊಡ್ಡ ಮೊತ್ತದ ಎಫ್ ಡಿ ಮಾಡಿರುವುದಕ್ಕಾಗಿ ಸ್ಮಾರ್ಟ್ ಸಿಟಿ ಎಂಡಿಗೆ ಕೆನರಾ ಬ್ಯಾಂಕ್ ಪ್ರಮುಖರು ಸೇರಿ ಕಾರನ್ನು ಸ್ಪಾನ್ಸರ್ ಮಾಡಿದ್ದಾರಂತೆ.

ಎರ್ಟಿಕಾ ನ್ಯೂ ಮಾಡೆಲ್ ಕಾರು ಇದಾಗಿದ್ದು ಹಿಂಭಾಗದಲ್ಲಿ ಕೆನರಾ ಬ್ಯಾಂಕಿನಿಂದ ಸ್ಪಾನ್ಸರ್ ಅಂತಲೇ ಬರೆಯಲಾಗಿದೆ. ಆದರೆ, ಒಬ್ಬ ಸರಕಾರಿ ಅಧಿಕಾರಿಗೆ ಯಾವುದೇ ರೀತಿಯಲ್ಲಿ ಗಿಫ್ಟ್ ನೀಡುವಂತಿಲ್ಲ.

ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕರಿಗೆ ಕಾರನ್ನು ಸ್ಪಾನ್ಸರ್ ಮಾಡಿದ್ದು ಎಂದರೂ, ಸಾರ್ವಜನಿಕ ರಂಗದ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ಮಾಡಿದ್ದು ಕಾನೂನು ಉಲ್ಲಂಘನೆಯಾಗುತ್ತದೆ. ಬ್ಯಾಂಕಿನ ಸಿಎಸ್ ಆರ್ ಫಂಡನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಾತ್ರ ಹೂಡಿಕೆ ಮಾಡಬಹುದು.

ತಪ್ಪಿದಲ್ಲಿ ಸಾರ್ವಜನಿಕರಿಗೆ ಉಪಯೋಗ ಆಗಬಲ್ಲ ರಸ್ತೆ ಡಿವೈಡರ್ ನಿರ್ಮಾಣ, ಪೊಲೀಸ್ ಬ್ಯಾರಿಕೇಡ್, ಪಾರ್ಕ್ ದುರಸ್ತಿ, ಶೌಚಾಲಯ, ಸರಕಾರಿ ಕಚೇರಿ ದುರಸ್ತಿಯಂಥ ಕೆಲಸಗಳನ್ನು ಮಾತ್ರ ಮಾಡಬಹುದಾಗಿದೆ.

ಯಾವುದೇ ಒಬ್ಬ ಅಧಿಕಾರಸ್ಥ ವ್ಯಕ್ತಿಗೆ ಕಾರನ್ನು ಗಿಫ್ಟ್ ಮಾಡುವುದು ಲಂಚಕ್ಕೆ ಸಮಾನವಾಗುತ್ತದೆ. ಇಂಥದ್ರಲ್ಲಿ ಮಂಗಳೂರು ಸ್ಮಾರ್ಟ್ ಸಿಟಿಯ ಸ್ಮಾರ್ಟ್ ಎಂಡಿಗೆ ಕಾರು ಗಿಫ್ಟ್ ಮಾಡಿರುವುದರ ಹಿಂದಿನ ಮರ್ಮವೇನು ಅನ್ನುವುದು ಸಾರ್ವಜನಿಕರಿಗೆ ತಿಳಿಯಬೇಕಿದೆ.

ಸ್ಮಾರ್ಟ್ ಸಿಟಿ ಯೋಜನೆ ಕೇಂದ್ರ ಮತ್ತು ರಾಜ್ಯ ಸರಕಾರದ ಜಂಟಿ ಪಾಲುದಾರಿಕೆಯ ಯೋಜನೆಯಾಗಿದ್ದು ಮಂಗಳೂರಿನಲ್ಲಿ ಅನುಷ್ಠಾನ ಹಂತದಲ್ಲಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಮಹಿಳಾ, ಮಕ್ಕಳ ಆಸ್ಪತ್ರೆಯಲ್ಲಿ ಎನ್‌ ಆರ್‌ಸಿ ಕೇಂದ್ರ ಇಲ್ಲದಕ್ಕೆ ಗರಂ ಆದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

Published

on

ಉಡುಪಿ:  ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು.

ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು  ನಾಲ್ಕು ವರ್ಷಗಳಾದರೂ ಇನ್ನೂ ಎನ್‌ ಆರ್‌ ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್‌ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಮಕ್ಕಳು ದಾಖಲಾದ ಮೇಲೆ ಪ್ರತಿಯೊಂದು ಹೆಸರು, ತಾಯಿ ಹೆಸರು ದಾಖಲೆ ಮಾಡಿ, ಬಳಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಹಿನ್ನೆಲೆಯಲ್ಲಿ ಬರೆಯಲಾಗಿದೆ. ವಿವರ ಮಗುವಿನ ತಂದೆ ತಾಯಿ ಹೆಸರು ವಿಳಾಸ ಕೂಡ ಇಲ್ಲ. ಇದರಿಂದ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

Continue Reading

BELTHANGADY

ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

Published

on

ಶಿರಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

 

ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ ,  ಉಜಿರೆ ನಿವಾಸಿಗಳಾದ ಶ್ರೀಧರ್ , ಜನಾರ್ದನ ಕೆರಿಮಾರ್ ಮೃತ ದುರ್ದೈವಿಗಳು. ಧರ್ಮಸ್ಥಳದಿಂದ ಮದ್ಯಾಹ್ನ 1.30ಕ್ಕೆ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆ.ಎಸ್. ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಘಾಟ್ ಗಡಿ ಸಮೀಪ ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

 

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮತ್ತೋರ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.  ಘಟನೆಯಲ್ಲಿ ಸುರೇಶ್ ಎಂಬವರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

ಸಿಲಿಂಡರ್ ಅಭಾವ: ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

Published

on

ಬೆಂಗಳೂರು: ಇಸ್ರೇಲ್‌, ಅಮೇರಿಕ ಮತ್ತು ಇರಾನ್‌ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಇದೀಗ ಗ್ಯಾಸ್ ಸಿಲಿಂಡರ್ ಕೊರತೆಯ ನಡುವೆ, ಗ್ರಾಹಕರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ಈಗ ಬೆಲೆ ಏರಿಕೆಯ ಬಿಸಿ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ.


ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಅಯೋಮಯವಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಸಹ ಬಂದ್‌ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಅಡುಗೆ ಎಣ್ಣೆ ಮಾಲಿಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100-200 ಬಾಕ್ಸ್‌ ಎಣ್ಣೆ ಬುಕ್‌ ಮಾಡಿದರೆ 20-50 ಬಾಕ್ಸ್‌ ಮಾತ್ರ ಕಳುಹಿಸುತ್ತಾರೆ. ಏಜೆಂಟರಲ್ಲಿ ಕೇಳಿದರೆ, ಸಪ್ಲೈ ಆಗುತ್ತಿಲ್ಲ. ಹೆಚ್ಚು ಬಾಕ್ಸ್‌ ನೀಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ 15-20 ರೂ. ದರ ಜಾಸ್ತಿ ಆಗಿರುವುದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೀಮೆಎಣ್ಣೆ ಹಂಚಿಕೆ ಮತ್ತು ಆಮದು ನೀತಿಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದ ಹೊಸ ನಿರ್ಧಾರ

ಗ್ಯಾಸ್ ಅಭಾವ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದಾಗಿ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಕಾಡುತ್ತಿದೆ. ನಗರದ ಕೆಲವು ಹೋಟೆಲ್‌ಗಳು ಮತ್ತು ಪಿಜಿಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಮತ್ತೆ ಹಳೆಯ ಪದ್ಧತಿಯಂತೆ ಸೌದೆ ಒಲೆಗಳನ್ನು ಬಳಸುವ ಅನಿವಾರ್ಯತೆ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page