Connect with us

LATEST NEWS

ಅಶ್ಲೀಲ ಪದ ಬಳಕೆ ನಿಜ ಎಂದ ಪರಿಷತ್ ಸದಸ್ಯರು; ಸಿ.ಟಿ ರವಿಗೆ ಮತ್ತೆ ಸಂಕಷ್ಟ

Published

on

ಮಂಗಳೂರು/ಬೆಂಗಳೂರು : ಡಿಸೆಂಬರ್ 19ರಂದು ಬೆಳಗಾವಿಯ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣದಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಪ್ರಕರಣ ಸಂಬಂಧ ಪರಿಷತ್‌ನ ಕಾಂಗ್ರೆಸ್ ಸದಸ್ಯರಾದ ಉಮಾಶ್ರೀ ಮತ್ತು ನಾಗರಾಜ್ ಯಾದವ್ ಗುರುವಾರ ಸಿಐಡಿ ವಿಚಾರಣೆಗೆ ಹಾಜರಾಗಿದ್ದು, ಕಲಾಪದ ಸಂದರ್ಭದಲ್ಲಿ ಸಿ.ಟಿ. ರವಿ ಅವರು ಸಚಿವೆ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಸಿದ್ದು ನಿಜ ಮತ್ತು ಅದನ್ನು ನಾವುಗಳು ವಿರೋಧಿಸಿದ್ದೆವು ಎಂದು ಹೇಳಿಕೆ ದಾಖಲಿಸಿದ್ದಾರೆ.

ಅಶ್ಲೀಲ ಪದ ಬಳಕೆ ನಿಜ ಎಂದ ಪರಿಷತ್ ಸದಸ್ಯರು
ಕಲಾಪದ ಸಂದರ್ಭದಲ್ಲಿ ಸಿ.ಟಿ. ರವಿ ಅವರು ವಿಚಾರವೊಂದರ ಚರ್ಚೆ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ್ದು ನಿಜ. ಆ ಪದವನ್ನು ಸ್ಪಷ್ಟವಾಗಿ ಕೇಳಿದ್ದೇವೆ. ಅದಕ್ಕೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದರು. ಜತೆಗೆ ಸ್ಥಳದಲ್ಲಿದ್ದ ನಾವು ಕೂಡಲೇ ರವಿ ವಿರುದ್ದ ಪ್ರತಿಭಟನೆ ನಡೆಸಿದ್ದೆವು. ಅಲ್ಲದೇ ಅವರ ವಿರುದ್ದ ಕ್ರಮಕ್ಕೆ ಸಭಾಪತಿಗಳಿಗೂ ದೂರು ನೀಡಿದ್ದೇವೆ. ಆದರೆ ರವಿ ಅವರು ಈ ಪದ ಬಳಕೆಯೇ ಮಾಡಿಲ್ಲ ಎಂದು ಹೇಳಿದರು. ಸಿ.ಟಿ. ರವಿ ಬಳಸಿದ ಅಶ್ಲೀಲ ಪದ ಕಡತದಲ್ಲಿ ದಾಖಲಾಗಿತ್ತು ಎಂದು ಇಬ್ಬರು ಸದಸ್ಯರು ಹೇಳಿಕೆ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ ಕಳ್ಳ ಈಗ ಪೊಲೀಸರ ಅತಿಥಿ

ಉಮಾಶ್ರೀ ಅವರನ್ನು ಮಹಿಳಾ ಡಿವೈಎಸ್ಪಿಯೊಬ್ಬರು ಮತ್ತು ನಾಗರಾಜ್ ಯಾದವ್ ಅವರನ್ನು ಡಿವೈಎಸ್ಪಿ ಕೇಶವಮೂರ್ತಿ ವಿಚಾರಣೆ ನಡೆಸಿದ್ದು, ಲಿಖಿತ ಮತ್ತು ಮೌಖಿಕ ರೂಪದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಜತೆಗೆ ವೀಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರವಿ ಬೇಷರತ್ ಕ್ಷಮೆ ಕೇಳಬೇಕು ಎಂದ ನಾಗರಾಜ್
ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಿಷತ್ ಸದಸ್ಯ ನಾಗರಾಜ್ ಯಾದವ್, “ಪರಿಷತ್ ಕಲಾಪದಲ್ಲಿ ನಡೆದ ಘಟನೆಯನ್ನು ತನಿಖಾಧಿಕಾರಿಗಳಿಗೆ ಸಮರ್ಪಕವಾಗಿ ವಿವರಿಸಿದ್ದೇನೆ. ಯಾವ ಮಹಿಳೆಗೂ ಆ ರೀತಿಯ ಅಶ್ಲೀಲ ಪದ ಬಳಸಬಾರದು. ರವಿ ಅವರು ಮೊಂಡುತನ ಬಿಟ್ಟು ಬೇಷರತ್ ಕ್ಷಮೆ ಕೇಳಬೇಕು” ಎಂದರು

DAKSHINA KANNADA

ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹೀಂ ನವಾಝ್ ಆಯ್ಕೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, 10942 ಮತಗಳನ್ನು ಗಳಿಸಿ ಇಬ್ರಾಹೀಂ ನವಾಝ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಡಕಬೈಲ್ ನಿವಾಸಿಯಾಗಿರುವ ಇಬ್ರಾಹೀಂ ನವಾಝ್ ಈ ಹಿಂದೆ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕರಿಯಂಗಳ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಅವರು ಬಂಟ್ವಾಳ ಹ್ಯೂಮನ್ ವೆಲ್ಫೇರ್ ಫೌಂಡೇಶನ್ ಸ್ಥಾಪಕಾಧ್ಯಕ್ಷರಾಗಿ, ಆಸರೆ ಸೇವಾ ಫೌಂಡೇಶನ್ ಕಾರ್ಯದರ್ಶಿ, ನವೋದಯ ಅಟೋ-ರಿಕ್ಷಾ ಚಾಲಕ-ಮಾಲಕರ ಸಂಘ ಗೌರವಧ್ಯಕ್ಷರಾಗಿ, ಬಂಟ್ವಾಳ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಸದಸ್ಯ, ತೆಂಗು ಬೆಳೆಗಾರರ ಉತ್ಪಾದಕರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳಿಗೆ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ 2024ರ ಆಗಸ್ಟ್ ತಿಂಗಳಿನಲ್ಲಿ ಮತದಾನ ನಡೆದಿತ್ತು. ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಎಂಟು ಅಭ್ಯರ್ಥಿಗಳು ಕಣದಲ್ಲಿದ್ದರು.

Continue Reading

LATEST NEWS

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಶ್ರೀಲಂಕಾದ ಸ್ಟಾರ್ ಆಟಗಾರ

Published

on

ಮಂಗಳೂರು/ಗಾಲೆ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಶ್ರೀಲಂಕಾದ ಸೋಲನುಭವಿಸಿದೆ. ಹೀಗಾಗಿ ಮಾಜಿ ನಾಯಕ ದಿಮುತ್ ಕರುಣಾರತ್ನ ಸೋಲಿನೊಂದಿಗೆ ತಮ್ಮ 36ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ದಿಮುತ್ ಇಂಟರ್​ನ್ಯಾಷನಲ್​ ಕೆರಿಯರ್ ಅಂತ್ಯಗೊಳಿಸಿದ್ದಾರೆ. ವಿಶೇಷ ಎಂದರೆ ಇದು ದಿಮುತ್ ಕರುಣರತ್ನೆ ಅವರ 100ನೇ ಟೆಸ್ಟ್ ಪಂದ್ಯವಾಗಿತ್ತು.

ಈ ಸ್ಮರಣೀಯ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ದಿಮುತ್ ಮೊದಲ ಇನಿಂಗ್ಸ್​ನಲ್ಲಿ 36 ರನ್​ಗಳಿಸಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 14 ರನ್​ ಬಾರಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ತಮ್ಮ 100ನೇ ಪಂದ್ಯದಲ್ಲಿ ಕೇವಲ 40 ರನ್​ ಮಾತ್ರ ಕಲೆಹಾಕಿದ್ದಾರೆ.

ಇದನ್ನೂ ಓದಿ: ಗೂಗಲ್ ಮ್ಯಾಪ್: ಮತ್ತೊಂದು ಭೀಕರ ಅಪಘಾತ !

ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡವು 9 ವಿಕೆಟ್​ಗಳ ಹೀನಾಯ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಲಂಕಾ ದಾಂಡಿಗ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

2011 ರಲ್ಲಿ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ  ದಿಮುತ್ ಕರುಣರತ್ನೆ ಶ್ರೀಲಂಕಾ ಪರ ಒಟ್ಟು 237 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 17 ಶತಕ ಹಾಗೂ 50 ಅರ್ಧಶತಕಗಳೊಂದಿಗೆ ಒಟ್ಟು 8538 ರನ್ ಕಲೆಹಾಕಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಶ್ರೀಲಂಕಾದ 12ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Continue Reading

LATEST NEWS

ಮನೆ-ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಅಗ್ನಿ ಅವಘಡ

Published

on

ಧಾರವಾಡ: ಮನೆಗಳಿಗೆ ನೇರ ಸಂಪರ್ಕವನ್ನು ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಧಾರವಾಡದ ರಜತಗಿರಿ ಬಡಾವಣೆಯಲ್ಲಿ ನಡೆದಿದೆ.

ಮನೆ-ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಇದಾಗಿದ್ದು, ಬಡಾವಣೆಯಲ್ಲಿ ಗ್ಯಾಸ್ ಪೈಪ್ ಲೈನ್‌ನ ಎರಡೂ ಕಡೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ.

ಪೈಪ್‌ ಲೈನ್‌ಗೆ ಬೆಂಕಿ ಹೊತ್ತಿದ ಪರಿಣಾಮ ಮಾರ್ಗದುದ್ದಕ್ಕೂ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಹತ್ತಿರದ ನಿವಾಸಿಗಳು ಭಯದಿಂದ ಮನೆಯಿಂದ ಹೊರಗಡೆ ನಡೆದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page