Connect with us

LATEST NEWS

ಐಪಿಎಲ್ ಗೆ ಕ್ಷಣಗಣನೆ….ಉದ್ಘಾಟನಾ ಸಮಾರಂಭದಲ್ಲಿ ಮಿಂಚಲಿದ್ದಾರೆ ಈ ಸ್ಟಾರ್ ಗಳು! ಇಲ್ಲಿದೆ ಸಮಾರಂಭದ ಸಂಪೂರ್ಣ ಮಾಹಿತಿ

Published

on

ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 22ರಂದು ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುವ ಆರಂಭಿಕ ಪಂದ್ಯಕ್ಕೂ ಮೊದಲು 17ನೇ ಆವೃತ್ತಿಯ ಐಪಿಎಲ್‌ನ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ.

2024ರ ಐಪಿಎಲ್ ಅನ್ನು ಶುಕ್ರವಾರ ರಾತ್ರಿ ಭವ್ಯವಾದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಬಿಸಿಸಿಐ ಬುಧವಾರ ದೃಢಪಡಿಸಿದೆ.
ಆರಂಭಿಕ ಪಂದ್ಯವು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವೆ ನಡೆಯಲಿದೆ.
ಶುಕ್ರವಾರ ಸಂಜೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇವಲ ಕ್ರಿಕೆಟ್ ತಾರೆಯರು ಮಿನುಗುವುದಲ್ಲ. ಜೊತೆಗೆ ಬಾಲಿವುಡ್ ಮತ್ತು ಭಾರತೀಯ ಚಲನಚಿತ್ರ ಸಂಗೀತ ಉದ್ಯಮದ ನಾಲ್ಕು ದೊಡ್ಡ ಸ್ಟಾರ್‌ಗಳು ಭಾಗಿಯಾಗಲಿರುವ ಬಗ್ಗೆ ಬಿಸಿಸಿಐ ಬಹಿರಂಗಪಡಿಸಿದೆ.

ಸ್ಟಾರ್ ನಟರೂ ಸಂಗೀತಗಾರರು ಭಾಗಿ :

ಉದ್ಘಾಟನಾ ಸಮಾರಂಭಕ್ಕೆ ಅದ್ದೂರಿ ಚಾಲನೆ ದೊರಕಲಿದೆ. ಇದರಲ್ಲಿ ಪ್ರದರ್ಶನ ನೀಡುವ ಇಬ್ಬರು ನಟರೆಂದರೆ, ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಹಾಗೂ ಸಂಗೀತ ದಂತಕಥೆ ಎಆರ್ ರೆಹಮಾನ್ ಮತ್ತು ಖ್ಯಾತ ಗಾಯಕ ಸೋನು ನಿಗಮ್ ಮಿಂಚಲಿದ್ದಾರೆ.


ರೆಹಮಾನ್ ಮತ್ತು ಸೋನು ನಿಗಮ್ ಸಂಗೀತ ಮೋಡಿಗೂ ಮುನ್ನ, ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅನೇಕ ಜನಪ್ರಿಯ ಹಾಡುಗಳಿಗೆ ನೃತ್ಯ ಮಾಡಲಿದ್ದಾರೆ. ಐಪಿಎಲ್‌ನ ಆರಂಭಿಕ ಪಂದ್ಯಕ್ಕೆ ಟಿಕೆಟ್ ಪಡೆದ ಪ್ರೇಕ್ಷಕರಿಗೆ ಡಬಲ್ ಧಮಾಕ ಸಿಗಲಿದೆ.

ಉದ್ಘಾಟನಾ ಸಮಾರಂಭ ಯಾವಾಗ?
2024ರ ಐಪಿಎಲ್ ಉದ್ಘಾಟನಾ ಸಮಾರಂಭವು ಮಾರ್ಚ್ 22ರಂದು ಭಾರತೀಯ ಕಾಲಮಾನ 6:30 ಕ್ಕೆ ಪ್ರಾರಂಭವಾಗಲಿದೆ.

ಎಲ್ಲಿ ನಡೆಯಲಿದೆ?
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 2024ರ ಐಪಿಎಲ್ ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಇದೇ ಮೈದಾನದಲ್ಲಿ ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವೆ ಮೊದಲ ಪಂದ್ಯ ಆರಂಭವಾಗಲಿದೆ.

ಯಾವುದರಲ್ಲಿ ಲೈವ್ ಸ್ಟ್ರೀಮಿಂಗ್?
ಐಪಿಎಲ್ 2024ರ ಉದ್ಘಾಟನಾ ಸಮಾರಂಭವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಇರಲಿದೆ. ಇನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರುತ್ತದೆ.

ಯಾವ ಸೆಲೆಬ್ರಿಟಿಗಳಿಂದ ಪ್ರದರ್ಶನ?
ಐಪಿಎಲ್ 2024ರ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮತ್ತು ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಮತ್ತು ಹಿನ್ನೆಲೆ ಗಾಯಕ ಸೋನು ನಿಗಮ್ ಅವರಿಂದ ಕಾರ್ಯಕ್ರಮ ನಡೆಯಲಿದೆ ಎಂದು ಬಿಸಿಸಿಐ ದೃಢಪಡಿಸಿದೆ.

ಯಾರೆಲ್ಲ ಅತಿಥಿಗಳು ಭಾಗಿ?
ಐಪಿಎಲ್ 2024ರ ಉದ್ಘಾಟನಾ ಸಮಾರಂಭದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜಯ್ ಶಾ, ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಜೊತೆಗೆ ಬಾಲಿವುಡ್ ತಾರೆಯರು ಮತ್ತು ತಮಿಳುನಾಡಿನ ಕೆಲವು ಪ್ರಮುಖ ರಾಜಕೀಯ ವ್ಯಕ್ತಿಗಳು ಭಾಗವಹಿಸಬಹುದು.

ಮೊದಲ ಪಂದ್ಯದ ಸಮಯ :
ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವಿನ ಮೊದಲ 2024ರ ಐಪಿಎಲ್ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ ಮತ್ತು ರಾತ್ರಿ 7.30ಕ್ಕೆ ಟಾಸ್ ನಡೆಯಲಿದೆ.

LATEST NEWS

ಎ.22ರ ಬಳಿಕ ರಾಜ್ಯಾದ್ಯಂತ ಭಾರೀ ಮಳೆ ಬರುವ ಸಾಧ್ಯತೆ

Published

on

ಬೆಂಗಳೂರು: ಎ.22ರ ಬಳಿಕ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Continue Reading

FILM

ಒಂದೆಡೆ ಜಾಟ್2 ಚಿತ್ರ ಘೋಷಣೆ; ಮತ್ತೊಂದೆಡೆ ನಟ ಸನ್ನಿ ಡಿಯೋಲ್, ರಣದೀಪ್ ಹೂಡಾ ವಿರುದ್ಧ ಎಫ್‌ಐಆರ್!

Published

on

ಮಂಗಳೂರು/ಮುಂಬೈ : ಸನ್ನಿ ಡಿಯೋಲ್‌ರ ‘ಜಾಟ್’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಸಕತ್ ಸೌಂಡ್ ಮಾಡುತ್ತಿದೆ. ಚಿತ್ರದಲ್ಲಿ ಆಯೇಶಾ ಖಾನ್, ಜರೀನಾ ವಹಾಬ್, ಬಾಂಧವಿ ಶ್ರೀಧರ್, ಪ್ರಣಿತಾ ಪಟ್ನಾಯಕ್, ದಯಾನಂದ ಶೆಟ್ಟಿ, ಜಗಪತಿ ಬಾಬು ನಟಿಸಿದ್ದಾರೆ.

ಚಿತ್ರ 50 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಈ ನಡುವೆ ಈ ಚಿತ್ರದ ಮುಂದುವರಿದ ಭಾಗ ಬರಲಿದೆ ಎಂದು ನಟ ಸನ್ನಿ ಡಿಯೋಲ್ ಘೋಷಿಸಿದ್ದಾರೆ. ಜಾಟ್ 2 ಚಿತ್ರ ನಿರ್ಮಾಣವಾಗಲಿದೆ ಎಂದು ನಟ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ಚಿತ್ರಕ್ಕೂ ಗೋಪಿಚಂದ್ ಮಲಿನೇನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ ಎಂಬುದು ಪೋಸ್ಟರ್‌ನಿಂದ ಬಹಿರಂಗವಾಗಿದೆ.

ಮತ್ತೊಂದೆಡೆ ಎಫ್‌ಐಆರ್!

ಸಿನಿಮಾ ಯಶಸ್ವಿಯಾದ ಸಂಭ್ರಮದಲ್ಲಿ ಚಿತ್ರತಂಡವಿದ್ದು, ಇದೀಗ ಸಂಕಷ್ಟವೊಂದು ಎದುರಾಗಿದೆ. ಜಾಟ್ ಚಿತ್ರದ ಒಂದು ದೃಶ್ಯದಲ್ಲಿ ಕ್ರೈಸ್ತ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ದೂರಲಾಗಿದೆ. ಏಸುಕ್ರಿಸ್ತ ಮತ್ತು ಕ್ರೈಸ್ತ ಧಾರ್ಮಿಕ ಆಚರಣೆಗಳನ್ನು ಅಗೌರವಿಸುವ ದೃಶ್ಯಗಳು ಚಿತ್ರದಲ್ಲಿವೆ ಎಂದು ಕ್ರೈಸ್ತ ಸಮುದಾಯದ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ : ಪ್ರಿಯಕರನೊಂದಿಗಿನ ಫೋಟೋ ಹಂಚಿಕೊಂಡ ಅರ್ಜುನ್ ಸರ್ಜಾ ಎರಡನೇ ಮಗಳು; ನಾನು ಮೊದಲೇ ಊಹಿಸಿದ್ದೆ ಎಂದ ಅಪ್ಪ!

ನಟರಾದ ಸನ್ನಿ ಡಿಯೋಲ್, ರಣದೀಪ್ ಹೂಡಾ, ವಿನೀತ್ ಕುಮಾರ್, ನಿರ್ದೇಶಕ ಗೋಪಿಚಂದ್, ನಿರ್ಮಾಪಕ ನವೀನ್ ವಿರುದ್ಧ ಎಫ್ಐಆರ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

Continue Reading

LATEST NEWS

ಬೆಂಗಳೂರಿನಲ್ಲಿ ಓಲಾದಲ್ಲಿ ಹೋಗುವ ಮಹಿಳೆಯರೇ ಎಚ್ಚರ; ಕಹಿ ಅನುಭವವನ್ನು ಹಂಚಿಕೊಂಡ ಯುವತಿ

Published

on

ಸಾಮಾನ್ಯವಾಗಿ ಬಸ್ಸಿನಲ್ಲಿ ಅನುಚಿತವಾಗಿ ವರ್ತಿಸುವ ಮೂಲಕ ಮಹಿಳೆಯರಿಗೆ ಅಹಿತಕರ ಅನುಭವವಾಗಿರುತ್ತದೆ. ಆದರೆ ಇದೀಗ ಶ್ರಾವಿಕಾ ಜೈನ್ ಬೆಂಗಳೂರಿನಲ್ಲಿ ರಾತ್ರಿ ಹನ್ನೊಂದು ಗಂಟೆಗೆ ಕ್ಯಾಬ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.

ಈ ವೇಳೆಯಲ್ಲಿ ಕ್ಯಾಬ್ ಡ್ರೈವರ್ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿರುವುದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಬಳಕೆದಾರರು ಈ ಪೋಸ್ಟ್ ಗೆ ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಹೌದು ತಮ್ಮ ಈ ಪೋಸ್ಟ್ ನಲ್ಲಿ ‘ಈ ಬೆಂಗಳೂರು ಸುರಕ್ಷಿತ ಎಂದು ಜನರು ಹೇಳುತ್ತಾರೆ? ನಿನ್ನೆ ರಾತ್ರಿ ವಿಮಾನ ನಿಲ್ದಾಣದಿಂದ ಕ್ಯಾಬ್‌ನಲ್ಲಿ ಬಂದದ್ದು ನನ್ನ ಜೀವನದ ಅತ್ಯಂತ ಭಯಾನಕ ಅನುಭವಗಳಲ್ಲಿ ಒಂದು.

ಬೆಂಗಳೂರಿನ ವಿಮಾನ ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಪುಯಾಣಿಸುತ್ತಿದ್ದ ವೇಳೆಯಲ್ಲಿ ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ. ನಿನ್ನೆ ರಾತ್ರಿ ವಿಮಾನ ನಿಲ್ದಾಣದಿಂದ ಕ್ಯಾಬ್‌ನಲ್ಲಿ ಚಾಲಕ ನನ್ನನ್ನು ಕಟ್ಟ ದೃಷ್ಟಿಯಿಂದ ನೋಡಲು ಪ್ರಾರಂಭಿಸಿದ್ದಾನ.

ಕ್ಯಾಬ್ ಡ್ರೈವರ್ ಯೂಟ್ಯೂಬ್‌ನಲ್ಲಿ ಜೋರಾಗಿ ಸಂಗೀತ ಹಾಕಿ ಜೋರಾಗಿ ಹಾಡುತ್ತಾ, ತನ್ನ ತೊಡೆಗಳನ್ನು ತಟ್ಟಲು ಪ್ರಾರಂಭಿಸಿದ್ದಾನೆ. ನಾನು ಹಾಡಿನ ಧ್ವನಿ ಕಡಿಮೆ ಮಾಡಲು ಪದೇ ಪದೇ ಹೇಳಿದರೂ ಕೂಡ ಈ ಚಾಲಕನು ಕೆಟ್ಟ ನೋಟದಿಂದ ಪ್ರತಿಕ್ರಿಯಿಸಿದ್ದಾನೆ. ಅಲ್ಲದೇ ಕಾರಿನಲ್ಲಿ ಸಿಗರೇಟ್ ಸೇದಿದ್ದಾನೆ. ಆ ಸಮಯದಲ್ಲಿ ನಾನು ಒಂಟಿಯಾಗಿದ್ದೆ. ರಾತ್ರಿ ಬೇರೆಯಾಗಿತ್ತು.ಈ ವೇಳೆಯಲ್ಲಿ ನನ್ನ ಮೂವರು ಸ್ನೇಹಿತರು ನನಗೆ ಕರೆ ಮಾಡಿ ನನ್ನ ಸ್ಥಳವನ್ನು ಟ್ರ್ಯಾಕ್ ಮಾಡುತ್ತಿದ್ದರು. ಅದಲ್ಲದೇ ಈ ಚಾಲಕನು ರಸ್ತೆಯ ಮಧ್ಯದಲ್ಲಿ ಕಾರನ್ನು ನಿಲ್ಲಿಸಿ ತಾನು ಟೀ ಕುಡಿಯಲು ಬಯಸುವುದಾಗಿ ಹೇಳಿದ.

ಆದರೆ ನಾನು, ನನ್ನನ್ನು ಮೊದಲು ಮನೆಗೆ ಕರದೊಯ್ಯುವಂತೆ ವಿನಂತಿಸಿದರೂ, ಚಾಲಕ ಹೊರಗೆ ಹೋಗಿದ್ದು ಹತ್ತು ನಿಮಿಷಗಳ ನಂತರ ಹಿಂತಿರುಗಿದ ಈ ಪ್ರಯಾಣದ ಉಳಿದ ಭಾಗದಲ್ಲಿ ಅವನು ತನ್ನನ್ನು ಅನುಚಿತವಾಗಿ ನೋಡುತ್ತಲೇ ಇದ್ದದ್ದು ನನಗೆ ಆ ಕ್ಷಣ ಭಯಾನಕವಾಗಿತ್ತು. ಆದರೆ ಯಾವುದೇ ಅಹಿತಕರ ಘಟನೆ ನಡೆಯದೇ ಮನೆಗೆ ತಲುಪಿದೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page