Connect with us

ದಕ್ಷಿಣ ಕನ್ನಡ ಜಿಲ್ಲೆಯಿಂದ 7119 ವಲಸೆ ಕಾರ್ಮಿಕರು ಸ್ವಗ್ರಾಮಕ್ಕೆ ರವಾನೆ

Published

on

ದಕ್ಷಿಣ ಕನ್ನಡ ಜಿಲ್ಲೆಯಿಂದ 7119 ವಲಸೆ ಕಾರ್ಮಿಕರು ಸ್ವಗ್ರಾಮಕ್ಕೆ ರವಾನೆ

ಮಂಗಳೂರು: ಲಾಕ್ ಡೌನ್ ಹಿನ್ನಲೆಯಲ್ಲಿ ಸಿಲುಕಿಕೊಂಡು, ದಕ್ಷಿಣ ಕನ್ನಡ ಜಿಲ್ಲಾಡಳಿತದ ವಿವಿಧ ಆಶ್ರಯ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ನಿರಾಶ್ರಿತರನ್ನು ಜಿಲ್ಲಾಡಳಿತ ಅವರ ಸ್ವಗ್ರಾಮಕ್ಕೆ ತಲುಪಿಸುವಲ್ಲಿ ಯಶಸ್ವಿಯಾಗಿದೆ.

ಕೋವಿಡ್ -19 ಸಾಂಕ್ರಾಮಿಕ ಸೋಂಕಿನ ಹಿನ್ನಲೆಯಲ್ಲಿ ಲಾಕ್ ಡೌನ್ ವಿಧಿಸಿದ ಕಾರಣ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಸತಿ ರಹಿತರಾಗಿದ್ದ ಕಾರ್ಮಿಕರನ್ನು ಹಾಗೂ ನಿರಾಶ್ರಿತರನ್ನು ದ.ಕ.ಜಿಲ್ಲಾಡಳಿತದ ವತಿಯಿಂದ ತೆರೆಯಲಾಗಿದ್ದ ವಸತಿ ನಿಲಯಗಳಲ್ಲಿ ಮಾರ್ಚ್ 27 ರಿಂದ ಆಶ್ರಯ ನೀಡಲಾಗಿತ್ತು.

ಪುರಭವನ, ವಿವಿಧ ಸಭಾಂಗಣ, ಸರಕಾರಿ ವಿದ್ಯಾರ್ಥಿ ನಿಲಯ, ಹಾಸ್ಟೆಲ್ ಗಳಲ್ಲಿ  ಆಶ್ರಯ ನೀಡಲಾಗಿತ್ತು.

ಇವರಿಗೆ ದಿನದ ಎಲ್ಲಾ ಹೊತ್ತು ಊಟೋಪಚಾರದ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿತ್ತು. ಅವರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿತ್ತು.

ಇದೀಗ ಈ ಎಲ್ಲಾ ಕಾರ್ಮಿಕರ ಪೈಕಿ ರಾಜ್ಯದ ವಿವಿಧ ಜಿಲ್ಲೆಗಳ ಕಾರ್ಮಿಕರನ್ನು ಏಪ್ರಿಲ್ 24 ರಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೂಲಕ ಅವರವರ ಸ್ವಗ್ರಾಮಗಳಿಗೆ ಕಳುಹಿಸಿ ಕೊಡಲಾಗಿದೆ.

ಮಂಗಳೂರು ನಗರದಲ್ಲಿ ಕಟ್ಟಡ ಕಾರ್ಮಿಕರು ಹೆಚ್ಚಾಗಿರುವ ಕೂಳೂರು, ಸುರತ್ಕಲ್, ಪಣಂಬೂರು, ಬೈಕಂಪಾಡಿ, ಯೆಯ್ಯಾಡಿ, ಮುಲ್ಕಿ, ಉಳ್ಳಾಲ, ಬಂದರು, ಹೊಯಿಗೆ ಬಜಾರ್ ಮುಂತಾದ ಪ್ರದೇಶಗಳು

ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಿಂದ ತಮ್ಮ ತಮ್ಮ ಜಿಲ್ಲೆಗಳಿಗೆ ಕಟ್ಟಡ ಮತ್ತು ಕೃಷಿ ಕೆಲಸಗಳಿಗೆ ತೆರಳಲು ಇಚ್ಚಿಸಿದ 7119 ಕಾರ್ಮಿಕರನ್ನು ಕೆ.ಎಸ್.ಆರ್.ಟಿ.ಸಿ. ಹಾಗೂ ಖಾಸಗಿ ಬಸ್ ಗಳ ಮೂಲಕ ಅವರ ಸ್ವಗ್ರಾಮಗಳಿಗೆ ಕಳುಹಿಸಲಾಗಿದೆ.

ಒಟ್ಟು 266 ಬಸ್ ಗಳನ್ನು ಇದಕ್ಕಾಗಿ ಬಳಸಲಾಗಿತ್ತು.  ಹೆಚ್ಚಿನ ಕಾರ್ಮಿಕರು ಬಾಗಲಕೋಟೆ, ಕೊಪ್ಪಳ, ಬಿಜಾಪುರ, ಯಾದಗಿರಿ, ಗದಗ, ರಾಯಚೂರು ಹಾಗೂ ಗುಲ್ಪರ್ಗ ಜಿಲ್ಲೆಯವರಾಗಿರುತ್ತಾರೆ.

ಬಸ್ಸುಗಳಲ್ಲಿ ಸಂಚರಿಸುವಾಗ ಸಾಮಾಜಿಕ ಅಂತರ ಕಾಪಾಡಿಕೊಂಡು ಆಸನದ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಪ್ರತೀ ಬಸ್‌ನಲ್ಲಿ 22 ರಿಂದ 25 ಮಂದಿಯನ್ನಷ್ಟೇ ಕಳುಹಿಸಲಾಗಿತ್ತು.

ಜಿಲ್ಲಾಡಳಿತದ ಜೊತೆಗೆ ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆಯು ಈ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು.

ವಿವಿಧ ಜಿಲ್ಲೆಗಳಿಗೆ ತೆರಳುವ ಮುನ್ನ ಎಲ್ಲಾ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಜಿಲ್ಲಾ ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಗಿದೆ.

ಕಾರ್ಮಿಕರಿಗೆ ಪ್ರಯಾಣದ ಸಮಯದಲ್ಲಿ ಅವಶ್ಯವಿರುವ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನು ಕೂಡ ಒದಗಿಸಲಾಗಿತ್ತು.

Advertisement
Click to comment

Leave a Reply

Your email address will not be published. Required fields are marked *

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page