Connect with us

DAKSHINA KANNADA

ದ.ಕ. ಜಿಲ್ಲೆಯಲ್ಲಿನ ಅನಧಿಕೃತ ಬಂಟಿಂಗ್ಸ್- ಫ್ಲೆಕ್ಸ್ ತೆರವಿಗೆ ಡಿಸಿ ಆದೇಶ – ರಾಜಕಾರಣಿಗಳ ಔತಣ ಕೂಟಕ್ಕೂ ನಿರ್ಬಂಧ..!

Published

on

ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಪೂರ್ವ ಸಿದ್ದತೆಯಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಅನಧಿಕೃತ ಜಾಹೀರಾತು ಫಲಕ ತೆರವು ಮಾಡಲು ಹಾಗೂ ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಮಂಗಳೂರು : ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಪೂರ್ವ ಸಿದ್ದತೆಯಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಅನಧಿಕೃತ ಜಾಹೀರಾತು ಫಲಕ ತೆರವು ಮಾಡಲು ಹಾಗೂ ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್‌- ಬಂಟಿಂಗ್ಸ್‌ ಮತ್ತು ಫ್ಲೆಕ್ಸ್‌, ಗೋಡೆ ಬರಹ ಮತ್ತು ಇತರ ಜಾಹಿರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿ ಬೇಕು ಎಂದು ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ. ಆರ್‌. ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ರಾಜಕೀಯ ಪಕ್ಷ ಮತ್ತು ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಔತಣ ಕೂಟ ಏರ್ಪಡಿಸುವಂತಿಲ್ಲ.

ಒಂದು ವೇಳೆ ಉಲ್ಲಂಘಿಸಿದಲ್ಲಿ ಸ್ಥಳೀಯ ಪ್ರಾಧಿಕಾರಗಳು, ಪೊಲೀಸ್‌ ಇಲಾಖೆ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಐಪಿಸಿ ಕಲಂ 171 ರಡಿಯಲ್ಲಿ ಹಾಗೂ ಸಂಬಂಧಪಟ್ಟ ಇತರ ಕಾಯ್ದೆಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.

ಅನುಮತಿ ನೀಡುವಾಗ ಸಭೆ ಮುಕ್ತಾಯವಾದ ಕೂಡಲೇ  ಬ್ಯಾನರ್‌ – ಬಂಟಿಂಗ್‌ ತೆರವುಗೊಳಿಸಲು ಸೂಚಿಸಬೇಕು.

ಕಾನೂನು ಸುವ್ಯವಸ್ಥೆ, ಸಾಮಾಜಿಕ ಅಶಾಂತಿ ಹಾಗೂ ಶಬ್ದಮಾಲಿನ್ಯ ಉಂಟುಮಾಡುವ ಯಾವುದೇ ಚಟುವಟಿಕೆ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಕೊಂಡು, ಜಿಲ್ಲಾಡಳಿತಕ್ಕೆ ವರದಿ ನೀಡಬೇಕು.

ಇದಕ್ಕೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿದಿನ ತಮ್ಮ ನೇತೃತ್ವದಲ್ಲಿ ಮೇಲುಸ್ತುವಾರಿ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಬೇಕು.

ಈ ಕುರಿತ ವರದಿ ಪ್ರತಿದಿನ ಮತ್ತು ಒಟ್ಟಾರೆ ಮಾಹಿತಿ ಪ್ರತೀ ಶನಿವಾರ ಜಿಲ್ಲಾ ಪಂಚಾಯತ್‌ ಸಿಇಒ ಅವರಿಗೆ ಸಲ್ಲಿಸುವಂತೆ  ಜಿಲ್ಲಾಧಿಕಾರಿ  ಸೂಚನೆ ನೀಡಿದ್ದಾರೆ.

 

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಡಿ.6ರಂದು ಸಹಕಾರ ರತ್ನ ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ

Published

on

ಮಂಗಳೂರು: ಕರ್ನಾಟಕ ಸರಕಾರದ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ ಡಿಸೆಂಬರ್ 6 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಭಾಸ್ಕರಾಭಿನಂದನಾ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಭಾಸ್ಕರ್ ಎಸ್. ಕೋಟ್ಯಾನ್‌ ಅವರು ಸಹಕಾರ, ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಈ ವರ್ಷ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳೆಲ್ಲ ಸೇರಿ ಸಾರ್ವಜನಿಕವಾಗಿ ಅವರನ್ನು ಅಭಿನಂದಿಸಲು ತೀರ್ಮಾನಿಸಿದ್ದಾರೆ ಎಂದು ಭಾಸ್ಕರಾಭಿನಂದನಾ ಸಮಿತಿಯ ಸಂಚಾಲಕ ಚಿತ್ತರಂಜನ್ ಬೋಳಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪುರಭವನದಲ್ಲಿ ಡಿಸೆಂಬರ್ 6 ರಂದು ಅಪರಾಹ್ನ 3 ಗಂಟೆಗೆ ಚಿತ್ರನಟ ಮಂಜು ರೈ ಮೂಳೂರು ಅವರ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಮಾರಂಭಕ್ಕೆ ಚಾಲನೆ ಸಿಗಲಿದೆ. 3.45 ಕ್ಕೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ.

 

ಸೋಲೂರು ಮಠದ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ  ಸಂಸದ ಬ್ರಿಜೇಶ್ ಚೌಟ ದೀಪ ಬೆಳಗಿಸುವರು. ಸ್ಪೀಕರ್ ಯು.ಟಿ. ಖಾದರ್ ಭಾಸ್ಕರಾಭಿನಂದನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಗಣ್ಯರು ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ವಿವರಿಸಿದರು.

ಸುದ್ದಿಗೋಷ್ಟಿಯಲ್ಲಿ ಭಾಸ್ಕರಾಭಿನಂದನಾ ಸಮಿತಿಯ ಪ್ರಧಾನ ಸಂಚಾಲಕ ಸದಾನಂದ ಪೂಜಾರಿ, ಸಂಚಾಲಕ ಕೆ.ಟಿ. ಸುವರ್ಣ ಮತ್ತಿತರರು ಇದ್ದರು.

 

Continue Reading

DAKSHINA KANNADA

ಡಿ.7ರಂದು ಶಾರದಾ ವಿದ್ಯಾಲಯದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ, ಸಾಂಸ್ಕೃತಿಕ ವೈಭವ

Published

on

ಮಂಗಳೂರು: ಮಕ್ಕಳಲ್ಲಿ ಶಿಸ್ತು, ಧೈರ್ಯ ಹಾಗೂ ಸಾಹಸ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಸ ಕ್ರೀಡೆ, ನೃತ್ಯ, ಸಂಗೀತ ಇವೆಲ್ಲವುಗಳನ್ನೊಳಗೊಂಡ ಹೊನಲು ಬೆಳಕಿನ ಕ್ರೀಡೋತ್ಸವ ಡಿ7ರ ಭಾನುವಾರದದಂದು ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಹೇಳಿದರು.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಈ ಬಾರಿಯ ಕ್ರೀಡೋತ್ಸವ ಸಮಾರಂಭವನ್ನು ಮೈಸೂರಿನ ಸಂಸದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಆಗಮಿಸಲಿದ್ದಾರೆ. ಸಾಹಸ ಕ್ರೀಡೆ, ಸಾಂಸ್ಕೃತಿಕ ಪ್ರದರ್ಶನದಲ್ಲಿ ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಿಇಒ ಸಮೀರ್ ಪುರಾಣಿಕ್ ಮಾತನಾಡಿ 4ನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ಈ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಕಂಬ, ಫೈರ್ ಜಂಪ್, ಯೋಗಾಸನ ಸೇರಿದಂತೆ ಪಿರಮಿಡ್ ರಚನೆಯ ಕ್ರೀಡಾ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: WATCH : ಉಡುಪಿ: ಶಾಲೆಯ ರೋಡ್ ಸರಿ ಇಲ್ಲ…ನಗರಸಭೆ ಆಯುಕ್ತರಿಗೆ ದೂರು ಕೊಟ್ಟ ಪುಟ್ಟ ವಿದ್ಯಾರ್ಥಿ

ಸಂಸ್ಥೆಯ ಪ್ರಾಂಶುಪಾಲ ದಯಾನಂದ ಕಟೀಲ್ ಶೋಭಾಯಾತ್ರೆಯಲ್ಲಿ ಒಡೆಯರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಈ ಕ್ರೀಡೋತ್ಸವಕ್ಕೆ ಮಕ್ಕಳನ್ನು ತಯಾರು ಮಾಡಲು ಯಾವುದೇ ತರಬೇತುದಾರರಿಲ್ಲ. ಶಾರದಾ ಕುಟುಂಬ ಜೊತೆಯಾಗಿ ಸೇರಿಕೊಂಡೇ ಮಕ್ಕಳನ್ನು ಸಿದ್ಧಪಡಿಸಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿ ಸುಧಾಕರ್ ಪೇಜಾವರ, ಶಾರದಾ ಪಿಯು ಕಾಲೇಜು ಪ್ರಾಂಶುಪಾಲ ಪ್ರಕಾಶ್ ನಾಯಕ್ ಉಪಸ್ಥಿತರಿದ್ದರು.

Continue Reading

DAKSHINA KANNADA

ಕುದ್ರೋಳಿ ಭಗವತಿ ಕ್ಷೇತ್ರಕ್ಕೆ ವರ್ಕಳ ಶಿವಗಿರಿ ಮಠದ ಶ್ರೀಗಳ ಭೇಟಿ

Published

on

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧೀಜಿಯವರ ನಡುವಿನ ಐತಿಹಾಸಿಕ ವರ್ಕಳ ಶಿವಗಿರಿ ಸಂವಾದವು ಮಂಗಳೂರು ವಿವಿಯಲ್ಲಿ ನಡೆದಿದ್ದು, ಕಾರ್ಯಕ್ರಮಕ್ಕೆ ಆಶೀರ್ವಚನವನ್ನು ನೀಡಲು ಆಗಮಿಸಿದ್ದ ಶಿವಗಿರಿ ಮಠದ ಪೀಠಾಧಿಪತಿ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿ ಇಂದು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭ ಕುದ್ರೋಳಿ ಕ್ಷೇತ್ರಾಡಳಿತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದು, ಯತಿವರೇಣ್ಯರನ್ನು ಸ್ವಾಗತಿಸಿದರು. ಮಹಿಳಾ ಸಮಿತಿ ಸದಸ್ಯರು ಅವರ ಆಗಮನದುದ್ದಕ್ಕೂ ಪೂರ್ಣಕುಂಭ ಸ್ವಾಗತಿಸಿದರು.

ಇದೇ ವೇಳೆ ಶ್ರೀಗಳು ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರತಿ ಬೆಳಗಿದರು. ಅಲ್ಲದೆ ಮಂತ್ರಪಠಣ ಮಾಡಿದರು. ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು. ಬಳಿಕ ಭಗವತಿ ಕ್ಷೇತ್ರದಲ್ಲಿ ಶ್ರೀಗಳಿಗೆ ವಿಶೇಷ ಗೌರವಾರ್ಪಾಣೆ ಕ್ಷೇತ್ರದ ವತಿಯಿಂದ ನೀಡಲಾಯಿತು. ಪ್ರಾರ್ಥನೆ ನೆರವೇರಿಸಿದ ಪ್ರಸಾದ ವಿತರಿಸಲಾಯಿತು.

ಇದೇ ವೇಳೆ ಶ್ರೀ ಭಗವತಿ ಕ್ಷೇತ್ರಕ್ಕೆ ವರ್ಕಳ ಶಿವಗಿರಿ ಮಠದ ಶ್ರೀ ಜ್ಞಾನಾನಂದ ತೀರ್ಥ ಸ್ವಾಮೀಜಿ ಅವರೂ ಭೇಟಿ ನೀಡಿದ್ದು, ಅವರನ್ನೂ ಕ್ಷೇತ್ರಾಡಳಿತ ಮಂಡಳಿ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿ, ಗೌರವಿಸಿದರು.

ಮೊಕ್ತೇಸರರಾದ ರವೀಂದ್ರ, ರಾಜ್ ಗೋಪಾಲ್, ವೈಬಿ ಸುಂದರ್, ಉಷಾ ಪ್ರಭಾಕರ್, ಕಾರ್ಯದರ್ಶಿ ಸುಧೀರ್ ಬಿ, ಆಶಾ ಚಂದ್ರಮೋಹನ್, ದಿನೇಶ್ ಕುಂಪಲ, ರಾಕೇಶ್, ಶಿವ ಪ್ರಸಾದ್, ಆಚಾರಪಟ್ಟವರು, ಗುರಿಕಾರರು, ಮಹಿಳಾ ಸೇವಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page