Connect with us

ಮಂಗಳೂರಿಗೆ ದುಬೈ ಕಂಟಕ: ಮುಂದಿನ ವಿಮಾನ ಬಂದಾಗ ಸೂಕ್ತ ಕ್ರಮ ಕೈಗೊಳ್ಳುತ್ತೇವೆಂದು ಭರವಸೆ ನೀಡಿದ ಜಿಲ್ಲಾಧಿಕಾರಿ

Published

on

ಮಂಗಳೂರಿಗೆ ದುಬೈ ಕಂಟಕ: ಮುಂದಿನ ವಿಮಾನ ಬಂದಾಗ ಸೂಕ್ತ ಕ್ರಮ ಕೈಗೊಳ್ಳುತ್ತೇವೆಂದು ಭರವಸೆ ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೊರೊನಾ ಶಾಕ್ ಹಿನ್ನಲೆ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಮೇ 12 ರಂದು, ಸುಮಾರು 179 ಮಂದಿ ವಿಮಾನದಲ್ಲಿ ಬಂದಿದ್ದಾರೆ. ಅದರಲ್ಲಿ 125 ಜನ ಮಂಗಳೂರಿನಲ್ಲಿ ಕ್ವಾರೆಂಟೈನಲ್ಲಿದ್ದರು.

ಇದೀಗ 15 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸುರತ್ಕಲ್ ಮೂಲದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದೆ.

ಹಾಗಾಗಿ ಸುರತ್ಕಲ್ ಪ್ರದೇಶವನ್ನು ಕಂಟೋನ್ಮೆಂಟ್ ಮಾಡಲಿದ್ದೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ದ.ಕ‌ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾಹಿತಿ ನೀಡಿದ್ದಾರೆ.

ಮಾತು ಮುಂದುವರಿಸಿದ ಅವರು, 38 ಮಂದಿ ಗರ್ಭಿಣಿಯರು ವಿಮಾನದಲ್ಲಿ ಬಂದಿದ್ದರು. ಇದರಲ್ಲಿ ಯಾರಿಗೂ ಪಾಸಿಟಿವ್ ಕಂಡು ಬಂದಿಲ್ಲ.

ಇನ್ನು ಒಂದೇ ಫ್ಯಾಮಿಲಿಯಲ್ಲಿ ಮೂರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 45 ವರ್ಷದ ಗಂಡ, 33 ವರ್ಷದ ಹೆಂಡತಿ ಹಾಗೂ 6 ವರ್ಷದ ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಈಗಾಗಲೇ 125 ಜನರ ಸ್ವಾಬ್ ಟೆಸ್ಟ್ ರಿಸಲ್ಟ್ ಬಂದಿದೆ. ಆದ್ರೆ ಇನ್ನೂ 12ನೇ ದಿನದಂದು ಸ್ವಾಬ್ ಟೆಸ್ಟ್ ಮಾಡಲಿದ್ದೇವೆ ಎಂದು ‌ಜಿಲ್ಲಾಧಿಕಾರಿ ಸಿಂಧೂ ಮಾಹಿತಿ ನೀಡಿದ್ದಾರೆ.

ಇನ್ನು ಮೇ 18 ರಂದು ದುಬೈನಿಂದ, ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಅದರಲ್ಲಿ ಕೂಡ 171 ಮಂದಿ ಪ್ರಯಾಣಿಕರು ಮಂಗಳೂರಿಗೆ ಬರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆದ್ರೆ ಒಟ್ಟು ಎಷ್ಟು ಸಂಖ್ಯೆಯಲ್ಲಿ ಬರಲಿದ್ದಾರೆ ಎಂಬುವುದು ದ.ಕ ಜಿಲ್ಲಾಡಳಿತಕ್ಕೆ ಮಾಹಿತಿ ಬಂದಿಲ್ಲ.

ಇನ್ನು ಈಗಾಗಲೇ ಮಂಗಳೂರಿಗೆ ಬಂದಿದ್ದ ಪ್ರಯಾಣಿಕರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಆದರೂ ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದಿದೆ ಎಂದವರು ತಿಳಿಸಿದರು.

ಬಳಿಕ ಮಾತನಾಡಿದ ಅವರು ಪಾಸಿಟಿವ್ ರೋಗಿಗಳ ಪ್ರೈಮರಿ ಕ್ವಾಂಟ್ಯಾಕ್ಟ್ ಪರಿಶೀಲನೆ ಮಾಡುತ್ತಿದ್ದೇವೆ.

ಅವರ ಪಕ್ಕದ ಸೀಟ್ ನಲ್ಲಿ ಕೂತದವರ ಅಬ್ಸರ್ವೇಷನ್ ಮಾಡುತ್ತೇವೆ. ಆದ್ರೆ ದುಬೈನಲ್ಲಿ ಪ್ರಯಾಣಿಕರನ್ನು ಕೇವಲ ಸ್ಕ್ರೀನಿಂಗ್ ಮಾತ್ರ ಮಾಡುತ್ತಾರೆಯೇ ಹೊರತು ಯಾವುದೇ ಟೆಸ್ಟ್ ಗಳನ್ನು ಮಾಡೋದಿಲ್ಲ.

ಇನ್ನು ಮುಂದಿನ ವಿಮಾನದ ಪ್ರಯಾಣಿಕರನ್ನು ಕಂಪ್ಲೀಟ್ ಟೆಸ್ಟ್ ಮಾಡಬೇಕು. ಈ ಬಗ್ಗೆ ಸರ್ಕಾರದ ಜೊತೆ ಮಾತುಕತೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಭರವಸೆ ವ್ಯಕ್ತಪಡಿಸಿದ್ದಾರೆ.

ಈಗಾಗಲೇ 15 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನುಳಿದ ಒಟ್ಟು 125 ಮಂದಿ ಮಂಗಳೂರು ನಗರದ ಹೋಟೆಲ್ ಗಳಲ್ಲಿ ಕ್ವಾರೆಂಟೈನ್ ನಲ್ಲಿದ್ದಾರೆ ಎಂದು ದ.ಕ‌ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪತ್ರೀಕಾಗೋಷ್ಟಿಯಲ್ಲಿ ಸಮಗ್ರ ಮಾಹಿತಿ ನೀಡಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page