Connect with us

ದಕ್ಷಿಣ ಕನ್ನಡ ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ : ಖಾಸಾಗಿ ಆಸ್ಪತ್ರೆಯ 8 ಸಾವಿರ ಬೆಡ್‌ ಗಳ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿಗೆ ಸೂಚನೆ..!

Published

on

ದಕ್ಷಿಣ ಕನ್ನಡ ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ : ಖಾಸಾಗಿ ಆಸ್ಪತ್ರೆಯ 8 ಸಾವಿರ ಬೆಡ್‌ ಗಳ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿಗೆ ಸೂಚನೆ..!

ಬೆಂಗಳೂರು: ದ.ಕ. ಜಿಲ್ಲೆಯಲ್ಲಿರುವ ಎಂಟು ಖಾಸಾಗಿ ಆಸ್ಪತ್ರೆಯ 8 ಸಾವಿರ ಬೆಡ್‌ ಗಳ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಗೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಸ್ಪತ್ರೆ ಹಾಗೂ ತಾಲ್ಲೂಕು ಹಾಗೂ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕಯುಕ್ತ ಬೆಡ್’ಗಳ ಸಂಖ್ಯೆಯನ್ನು ಕೂಡಲೇ ಹೆಚ್ಚಿಸಬೇಕು ಎಂದು ಉಪ ಮುಖ್ಯಮಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಬೆಂಗಳೂರಿನಿಂದಲೇ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮತ್ತಿತರೆ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲಾಸ್ಪತ್ರೆ ವೆನ್’ಲಾಕ್ ಹಾಗೂ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನೇಟೆಡ್ ಬೆಡ್’ಗಳನ್ನು ಕೂಡಲೇ ಹೆಚ್ವಿಸಬೇಕು. ದಿನೇದಿನೇ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡುವುದು ತುರ್ತು ಅಗತ್ಯವಾಗಿದೆ ಎಂದು ತಿಳಿಸಿದರು.

ವೆನ್’ಲಾಕ್ ಆಸ್ಪತ್ರೆಯಲ್ಲಿ ಈಗಾಗಲೇ 150 ಹಾಸಿಗೆಗಳಿಗೆ ಆಮ್ಲಜನಕ ವ್ಯವಸ್ಥೆ ಇರುವ ಅಂಶವನ್ನು ಜಿಲ್ಲಾಧಿಕಾರಿಗಳು ಡಿಸಿಎಂ ಗಮನಕ್ಕೆ ತಂದರು. “ಸದ್ಯಕ್ಕೆ ಇಷ್ಟು ಪ್ರಮಾಣದ ಆಕ್ಸಿಜನೇಟೆಡ್ ಬೆಡ್ಡುಗಳು ಸಾಕಾಗುವುದಿಲ್ಲ. ಈ ಪ್ರಮಾಣವನ್ನು 450ಕ್ಕೆ ಹೆಚ್ಚಿಸಿ. ಕೂಡಲೇ ಈ ಕುರಿತ ಪ್ರಸ್ತಾವನೆಯನ್ನು ಆರೋಗ್ಯ ಆಯುಕ್ತರಿಗೆ ಕಳಿಸಿ. ನಾನೂ ಅವರ ಜತೆ ಮಾತನಾಡಿ ಆದಷ್ಟು ಬೇಗ ಮಂಜೂರಾತಿ ಕೊಡಿಸುತ್ತೇನೆ. ಇದರ ಜತೆಗೆ ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲೂ ಇಂಥ ಬೆಡ್ಡಿನ ವ್ಯವಸ್ಥೆ ಆಗಲೇಬೇಕು ಎಂದು ಡಿಸಿ ಅವರಿಗೆ ಸೂಚಿಸಿದರು.

ಬೆಡ್ ವಶಕ್ಕೆ ಪಡೆಯಲು ಸಚಿವರ ಸೂಚನೆ:
ಜಿಲ್ಲೆಯಲ್ಲಿ 8 ವೈದ್ಯಕೀಯ ಕಾಲೇಜುಗಳಿವೆ. ಸಾಕಷ್ಟು ಖಾಸಗಿ ಆಸ್ಪತ್ರೆಗಳಿವೆ. ಹೀಗೆ ಕಾಲೇಜು, ಸರಕಾರಿ-ಖಾಸಗಿ ಆಸ್ಪತ್ರೆ ಸೇರಿ ಎಲ್ಲೆಡೆ ಕನಿಷ್ಟ 8 ಸಾವಿರಕ್ಕೂ ಹೆಚ್ಚು ಬೆಡ್ಡುಗಳಿವೆ. ಕೂಡಲೇ ಇವರಿಂದ ಅವುಗಳನ್ನು ಸರಕಾರದ ವಶಕ್ಕೆ ಪಡೆದುಕೊಳ್ಳಬೇಕು. ತತ್;ಕ್ಷಣವೇ ಆಯಾ ಮ್ಯಾನೇಜುಮೆಂಟುಗಳ ಜತೆ ಮಾತನಾಡಿ ಅಗ್ರಿಮೆಂಟ್ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗೆ ಡಿಸಿಎಂ ಸೂಚಿಸಿದರು.

ಸರಕಾರಿ, ಖಾಸಗಿ ಯಾವುದೇ ಆಸ್ಪತ್ರೆ ಇರಲಿ, ಸರ್ಕಾರದಿಂದ ಶಿಫಾರಸ್ಸಾದ ರೋಗಿಗಳಿಗೆ ಚಿಕಿತ್ಸೆ ಸಂಪೂರ್ಣ ಉಚಿತ. ಖಾಸಗಿ ಆಸ್ಪತ್ರೆಗಳಿಗೆ ಆ ವೆಚ್ಚವನ್ನು ಸರಕಾರವೇ ಭರಿಸುತ್ತದೆ. ಯಾರೂ ಕೂಡ ರೋಗಿಗಳಿಂದ ಹಣ ಪಡೆಯುವಂತಿಲ್ಲ. ಮುಖ್ಯವಾಗಿ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ರೋಗಿಗಳನ್ನು ನೇರವಾಗಿ ಚಿಕಿತ್ಸೆ ಲಭ್ಯವಿರುವ ಆಸ್ಪತ್ರೆಗಳಿಗೇ ಕಳಿಸಬೇಕು. ವಿನಾಕಾರಣ ರೋಗಿಯನ್ನು ಸುತ್ತಿಸಬಾರದು. ಆಸ್ಪತ್ರೆಗೆ ಬರುವ ರೋಗಿಗೆ ಕೂಡಲೇ ಬೆಡ್ ಹಂಚಿಕೆಯಾಗಬೇಕು ಎಂದು ಅವರು ಸಲಹೆ ನೀಡಿದರು. ಇದೇ ವೇಳೆ ಜಿಲ್ಲೆಯ ಕೋವಿಡ್ ಕೇರ್ ಸೆಂಟರುಗಳಲ್ಲಿ 250 ಹಾಸಿಗೆಗಳು ಸಿದ್ಧವಾಗಿದ್ದು, ಕೆಲವೇ ದಿನಗಳಲ್ಲಿ 3,800 ಹಾಸಿಗೆಗಳು ಲಭ್ಯವಾಗಲಿವೆ ಎಂಬ ಅಂಶವನ್ನು ಜಿಲ್ಲಾಧಿಕಾರಿಯವರು ಡಿಸಿಎಂ ಗಮನಕ್ಕೆ ತಂದರು.

ಡ್ಯಾಷ್’ಬೋರ್ಡ್ ವ್ಯವಸ್ಥೆಗೆ ಸೂಚನೆ:
ಕೋವಿಡ್ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡಬೇಕಾದರೆ ಡ್ಯಾಷ್’ಬೋರ್ಡ್ ವ್ಯವಸ್ಥೆಯನ್ನು ಉತ್ತಮವಾಗಿ ಮಾಡಿಕೊಳ್ಳಬೇಕು. ಎಲ್ಲಿ ಬೆಡ್ಡುಗಳಿವೆ? ರೋಗಿಗಳು ಎಷ್ಟಿದ್ದಾರೆ? ಮೂಲಸೌಕರ್ಯಗಳ ವ್ಯವಸ್ಥೆ ಇತ್ಯಾದಿ ಸೇರಿದಂತೆ ಎಲ್ಲವೂ ಈ ಡ್ಯಾಷ್’ಬೋರ್ಡ್ ನಲ್ಲೇ ಸಿಗಬೇಕು. ಯಾವುದೇ ವ್ಯಕ್ತಿಗೆ ಸೋಂಕು ಪಾಸಿಟೀವ್ ಬಂದರೆ ಆ ವಿಷಯವನ್ನು ಜನರಿಗೆ ತಿಳಿಸಿ. ಆಗ ಜನರಲ್ಲಿ ಆತಂಕ, ಗೊಂದಲ ತಪ್ಪುತ್ತದೆ. ಜತೆಯಲ್ಲೇ ನಾನ್ ಕೋವಿಡ್ ರೋಗಿಗಳಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ಸಿಗುವಂತೆ ಆಗಬೇಕು. ಸೆಂಟ್ರಲೈಸ್ಡ್ ರಿಪೋರ್ಟಿಂಗ್ ಸಿಸ್ಟಂ ಅನ್ನು ಅಳವಡಿಸಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಜಿಲ್ಲೆಯಲ್ಲಿ ಸದ್ಯಕ್ಕೆ 59 ಆಂಬುಲೆನ್ಸುಗಳಿದ್ದು, ಮತ್ತಷ್ಟು ಖರೀದಿಸಿ, ಹೆಚ್ಚುವರಿಯಾಗಿ ಚಾಲಕರನ್ನು ನೇಮಿಸಿಸಕೊಳ್ಳಿ. ಊಟ, ಔಷಧಿ, ಪಿಪಿಎ ಕಿಟ್ಟುಗಳು ಕೊರತೆಯಾಗದಂತೆ ನೋಡಿಕೊಳ್ಳಿ. ಹೋಮ್ ಕೇರ್ ಬಗ್ಗೆ ಮತ್ತಷ್ಟು ಅರಿವು ಮೂಡಿಸಿ ಎಂದು ಅವರು ಸೂಚಿಸಿದರು. ಈಗಾಗಲೇ ಜಿಲ್ಲೆಯಾದ್ಯಂತ 430 ಜನರು ಹೋಮ್ ಕೇರ್’ಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೇಕರು ತಮ್ಮ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುವ ಒಲವು ತೋರುತ್ತಿದ್ದಾರೆಂದು ಡಿಸಿ ಸಿಂಧೂ ಅವರು ಮಾಹಿತಿ ನೀಡಿದರು.

ಇದರ ಜತೆಯಲ್ಲೇ ಸೋಂಕಿತರ ಪರೀಕ್ಷೆಯ ಪ್ರಮಾಣವನ್ನು ಹೆಚ್ಚು ಮಾಡುವಂತೆ ಡಿಸಿಎಂ ಸೂಚಿಸಿದರು. ಸದ್ಯಕ್ಕೆ ದಿನವೊಂದಕ್ಕೆ 750 ಟೆಸ್ಟ್ ಆಗುತ್ತಿದೆ. ಈವರೆಗೂ 38 ಸಾವಿರ ಜನರಿಗೆ ಪರೀಕ್ಷೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ವಿಡಿಯೋ ಮಾತುಕತೆಯಲ್ಲಿ ಡಿಸಿಎಂ ಜತೆ ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಖಾತೆ ಮಂತ್ರಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪುಂಜಾ ಪಾಲ್ಗೊಂಡರೆ, ಮಂಗಳೂರಿನಿಂದ ಜಿಲ್ಲಾಧಿಕಾರಿಯವರ ಜತೆ ಶಾಸಕರಾದ ಯು.ಟಿ. ಖಾದರ್,  ವೇದವ್ಯಾಸ ಕಾಮತ್ ಭಾಗಿಯಾಗಿದ್ದರು. ಜತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಚರಂಡಿಗೆ ಬಿ*ದ್ದು ಬಾಲಕ ಸಾ*ವು

Published

on

ಮಂಗಳೂರು/ಬೀದರ್ : ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕ  ಚರಂಡಿಗೆ ಬಿ*ದ್ದು ಸಾ*ವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅವಿನಾಶ್ ಮೃ*ತ ಬಾಲಕ. ಮನೆಯ ಮುಂದೆ ಆಡುತ್ತಿದ್ದ ಬಾಲಕ ಕಾಣೆಯಾಗಿದ್ದ. ಹೀಗಾಗಿ  ಕುಟುಂಬಸ್ಥರು ಹುಡುಕಾಡಿದ್ದು, ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾ*ವನ್ನಪ್ಪಿರುವುದು ಗೊತ್ತಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಬಗದಲ್ ಪೊಲೀಸ್ ವ್ಯಾಪ್ತಿಯಲ್ಲಿ ಈ ದುರಂ*ತ ಸಂಭವಿಸಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Continue Reading

hasana

ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Published

on

ಹಾಸನ: ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣದೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ.


ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕ (29) ಎಂಬುವವರು ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದಕ್ಕೆ ಆಗಮಿಸಿದ್ದರು. ಫೆಬ್ರವರಿ 12 ರಂದು ರಾತ್ರಿ 7-30 ರ ಸುಮಾರಿಗೆ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕ ತಮಗೆ ಯಾರೋ ಪರಿಚಯದವರು ಸಿಕ್ಕಿರುವುದಾಗಿ ತಿಳಿಸಿದ್ದರು. ಆ ಮಾತು ಮುಗಿಯುತ್ತಿದ್ದಂತೆಯೇ ಫೋನ್‌ ಸ್ವಿಚ್‌ ಆಫ್‌ ಆಗಿದೆ.

ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರೂ ಸಹ ಸ್ಪಂದಿಸಿದ ಅರೆಹಳ್ಳಿ ಮತ್ತು ಬೇಲೂರು ಪೊಲೀಸರ ವಿರುದ್ಧ ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಮಹಿಳೆಯ ಬ್ಯಾಗ್, ಚಪ್ಪಲಿ ಹಾಗೂ ಒಳ ಉಡುಪುಗಳು ಪತ್ತೆಯಾಗಿರುವುದು ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಮಹಿಳೆಯು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಚಿನ್ನಾಭರಣಗಳನ್ನು ಧರಿಸಿದ್ದರು ಎಂದು ಹೇಳಲಾಗುತ್ತಿದೆ. ಒಡವೆಗಾಗಿ ದುಷ್ಕರ್ಮಿಗಳು ಮಹಿಳೆಯನ್ನ ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸರು ಈಗ ತನಿಖೆ ಚುರುಕುಗೊಳಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಜಯ ವಿಜಯ ಕಂಬಳಕ್ಕೆ ಚಾಲನೆ

Published

on

ಮಂಗಳೂರು :  ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 16 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು(ಫೆ.14) ಬೆಳಗ್ಗೆ ಚಾಲನೆ ದೊರೆತಿದೆ.

ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿ ಮೆನ್ನು ತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥಈ ಕಂಬಳ ನಡೆಯುತ್ತಿದೆ. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್‌ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ನುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಬಿಜೆಪಿ ನಾಯಕ ಮೋನಪ್ಪ ಭಂಡಾರಿ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌, ಪ್ರವೀಣ್‌ಚಂದ್ರ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page