Connect with us

BELTHANGADY

9 ತಿಂಗಳ ಹಿಂದೆ ಬೆಂಗಳೂರಿನಲ್ಲಿ ಕೊಲೆಯಾದ ಯುವಕನ ಶವಕ್ಕಾಗಿ ಚಾರ್ಮಾಡಿ ಘಾಟ್‌ನಲ್ಲಿ ಶೋಧ…!

Published

on

ಬೆಳ್ತಂಗಡಿ: ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ ಹಿನ್ನೆಲೆಯಲ್ಲಿ ಇಲ್ಲಿಗೆ ಆಗಮಿಸಿದ ಬೆಂಗಳೂರು ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ಐ ಮತ್ತು ಸಿಬ್ಬಂದಿ ಶವ ಪತ್ತೆ ಹಚ್ಚುವ ಕಾರ್ಯಾಚರಣೆ ನಿನ್ನೆ ನಡೆಸಿದ್ದಾರೆ.


ಚಿಕ್ಕಮಗಳೂರು -ದ.ಕ ವ್ಯಾಪ್ತಿಯ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಹುಡುಕಾಟ ಆರಂಭಿಸಿದ್ದಾರೆ.


ಬೆಂಗಳೂರಿನ ಕೋಣನಕುಂಟೆ ನಿವಾಸಿ ಶರತ್ ಎಂಬಾತ ಸಾಲ ಪಡೆದು ಹಿಂತಿರುಗಿಸದೆ ಓಡಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಗ್ಯಾಂಗ್ ಶರತ್ ನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು.

ಕೊಲೆಯಾದ ಎಚ್. ಶರತ್ ಚಿಕ್ಕಬಳ್ಳಾಪುರ ಹಾಗೂ ಯಲಹಂಕ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಸಬ್ಸಿಡಿ ದರದಲ್ಲಿ ವಾಹನ ಕೊಡಿಸುವುದಾಗಿ ನಂಬಿಸಿದ್ದ.


ಆದರೆ ಕಾರು ಕೊಡಿಸದೆ ಅಲ್ಲಿನ‌ ಜನರಿಗೆ ವಂಚಿಸಿದ್ದ. ಇದರಿಂದ ಶರತ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು. ಈ ನಡುವೆ ತಂಡವೊಂದು ಈತನನ್ನು ಕಿಡ್ನಾಪ್‌ ಮಾಡಿ ಕೊಲೆ ಮಾಡಿ ಚಾರ್ಮಾಡಿ ಪರಿಸರದಲ್ಲಿ ಎಸೆದಿದೆ ಎನ್ನಲಾಗಿತ್ತು.


ಕೆಲವರು ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ಹರಿದಾಡುತ್ತಿದೆ.

ಕೃತ್ಯಕ್ಕೆ ಸಂಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರು 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿಸುತ್ತಿದ್ದಾರೆ. ಕಿಡ್ನಾಪ್, ಕೊಲೆ 9 ತಿಂಗಳ ಹಿಂದೆಯೇ ನಡೆದಿದೆ.

ಆದರೆ ಪ್ರಕರಣ ನಡೆದು ಕೆಲವು ತಿಂಗಳ ನಂತರ ಕೇಂದ್ರ ವಿಭಾಗದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದ ಪತ್ರ ಹಾಗೂ ಚಿತ್ರಹಿಂಸೆ ನೀಡಿದ ದೃಶ್ಯದ ಪೆನ್ ಡ್ರೈವ್ ಕೊಲೆಯ ಸುಳಿವು ನೀಡಿದೆ.


‌ ಬಳಿಕ‌ ಪೊಲೀಸರು ವಿಶೇಷ ತಂಡ ರಚಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 10 ಜನರನ್ನು ಬಂಧಿಸಿದಾಗ ಘಟನೆಯ ಸಂಪೂರ್ಣ ಚಿತ್ರಣ ದೊರಕಿದೆ.

ಇಬ್ಬರು ಆರೋಪಿಗಳನ್ನು, ಪೊಲೀಸರು ಚಾರ್ಮಾಡಿ ಘಾಟಿ ಪರಿಸರಕ್ಕೆ ಕರೆತಂದು ಶವ ಹುಡುಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

BELTHANGADY

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಚಾರ್ಮಾಡಿಯ ನಿವಾಸಿ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. 1990 ರಲ್ಲಿ ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. 1992 ರಲ್ಲಿ ಇದನ್ನು ಎಲ್‌ಪಿಸಿ ಪ್ರಕರಣ ಎಂಬುದಾಗಿ ಪರಿಗಣಿಸಲಾಗಿತ್ತು. ಈತನ ಪತ್ತೆ ಹಚ್ಚುವ ಬಗ್ಗೆ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ: ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿ*ಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಇದೀಗ ಆರೋಪಿ ರವೀಂದ್ರನನ್ನು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ಪೊಲೀಸರು ದಸ್ತಗಿರಿ ಮಾಡಿ ಜನವರಿ 6 ರಂದು ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BELTHANGADY

ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ

Published

on

ಬೆಳ್ತಂಗಡಿ: ತಾಲೂಕಿನ ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.


ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಡಿಕ್ಕಿ ಆಗಿದ್ದು, ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ.

ಇದನ್ನೂ ಓದಿ: ಬಸ್ ಹತ್ತುವ ವೇಳೆ ದುರಂ*ತ; ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾ*ವು

ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.

Continue Reading

BELTHANGADY

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರ ಡಿ*ಕ್ಕಿಯಾಗಿ ವಯೋವೃದ್ಧ ಸಾ*ವು

Published

on

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.


ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು ಗುರುತಿಸಲಾಗಿದೆ. ಇವರು ಪತ್ನಿ, ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಹಂಝಾ ಅವರು ಸೌದೆ ಕಡಿಯುವ ಕೆಲಸಕ್ಕೆಂದು ಮದ್ದಡ್ಕಕ್ಕೆ ಹೋಗಿದ್ದರು. ಅವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಚಾಲಕ ಬಿಹಾರಿ ರೈ ಎಂಬಾತ ಯಂತ್ರವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಹಿಂದಕ್ಕೆ ತೆಗೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಹಂಝಾ ಅವರನ್ನು ತಕ್ಷಣವೇ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು : ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಆ*ತ್ಮಹ*ತ್ಯೆ

ಹಂಝಾ ಅವರದ್ದು ಬಡ ಕುಟುಂಬವಾಗಿದ್ದು, ತಮ್ಮ ವೃದ್ಧಾಪ್ಯದಲ್ಲೂ ಸೌದೆ ಕಡಿಯುವ ಕೆಲಸಕ್ಕೆ ಹೋಗುತ್ತಿದ್ದರು. ಅವರ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page