Connect with us

ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಯನ್ನು ನಿಂದಿಸಿ ಬೆದರಿಕೆ ಹಾಕಿದ ಆರೋಪಿಗಳು ಎರೆಸ್ಟ್..!

Published

on

ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಯನ್ನು ನಿಂದಿಸಿ ಬೆದರಿಕೆ ಹಾಕಿದ ಆರೋಪಿಗಳು ಎರಸ್ಟ್..!

ಬಂಟ್ವಾಳ : ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಯನ್ನು ನಿಂದಿಸಿ ಬೆದರಿಕೆ ಹಾಕಿದ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ. ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಬಂಧಿತ ಆರೋಪಿಗಳಾಗಿದ್ದಾರೆ.

ಏಪ್ರಿಲ್ 1 ರಂದು ಆರೋಗ್ಯ ಇಲಾಖೆಯ ಅಡಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ಅಮ್ಟಾಡಿ ಗ್ರಾಮದ ತುಳಸಿ ಎಂಬವರು ಕೊರೋನಾ ವೈರಸ್ ಮುಂಜಾಗೃತಾ ಕರ್ತವ್ಯದ ನಿಮಿತ್ತ ವಿದೇಶದಿಂದ ಆಗಮಿಸಿರುವ ಕಿನ್ನಿಬೆಟ್ಟು ಪರಿಸರದ ನಿತೇಶ ಹಾಗೂ ಕಲಾಯಿ ಪರಿಸರದ ಜಯಂತ ಎಂಬವರುಗಳ ಆರೋಗ್ಯವನ್ನು ಮೊಬೈಲ್ ಮೂಲಕ ಕರೆ ಮಾಡಿ ವಿಚಾರಿಸಿದ್ದರು.

ಆ ದಿನ ಸಂಜೆ ಸಮಯ ಸುಮಾರು 06.00 ಗಂಟೆಗೆ ಕರ್ತವ್ಯದಲ್ಲಿ ಇರುವ ಸಮಯ ಸದ್ರಿ ವಿದೇಶದಿಂದ ಆಗಮಿಸಿರುವ ನಿತೇಶ ಎಂಬಾತನ ಸಂಬಂಧಿ ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಎಂಬವರು ಸದರಿ ಆಶಾ ಕಾರ್ಯಕರ್ತೆಗೆ ಮೊಬೈಲ್ ಮೂಲಕ ಕರೆಮಾಡಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

DAKSHINA KANNADA

‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

Published

on

ಮಂಗಳೂರು: ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’  ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಪೌಂಡೇಶನ್‌ನ ಸುಹೈಲ್ ಕಂದಕ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಭಿಯಾನದ ಉದ್ಘಾಟನೆಯನ್ನು ಸ್ಪೀಕರ್ ಯು ಟಿ ಖಾದರ್ ನೆರವೇರಿಸುವರು. ಸಂಸದ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿರುತ್ತಾರೆ ಎಂದರು.

ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನವನ್ನು ಆಯೋಜಿಸುತ್ತಿದ್ದು ಇದರ ಅಂಗವಾಗಿ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಹಲವು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರ ಎಸಿಪಿ ರವೀಶ್ ನಾಯಕ್, ಕಾಂಗ್ರೆಸ್ ನಾಯಕ ವಿಕಾಸ್ ಶೆಟ್ಟಿ, ಬಾರ್ನ್ ಅಗೇನ್ ರಿಕವರಿ ಸೆಂಟರ್, ಬೀನಾ ಸಲ್ದಾನ ಮೊದಲಾದವರಿದ್ದರು.

 

Continue Reading

LATEST NEWS

ಪತಿಯನ್ನು ನಂಬಿ ಪ್ರಾ*ಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Published

on

ಮಂಗಳೂರು/ನಾಗ್ಪುರ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಿರಣ್ ಸೂರಜ್ ದಾಧೆ (29) ಆ*ತ್ಮಹ*ತ್ಯೆಗೆ ಶರಣಾದ ಆಟಗಾರ್ತಿ.

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ನಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವೆಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕು*ಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕು*ಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಇದನ್ನೂ ಓದಿ : ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆ*ದರಿಸಿ ಮಾನಸಿಕವಾಗಿ ಹಿಂ*ಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂ*ತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page