Connect with us

FILM

ಲಾಕ್ ಡೌನ್ ನಿಂದಾಗಿ ಖರ್ಚಿಗೆ ಹಣ ಇಲ್ಲ ಎಂದು ಗಂಡನ ಮನೆ ದೋಚಿದ ನಟಿ

Published

on

ಚೆನ್ನೈ: ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದ ಕಾರಣ ಹಣ ಇಲ್ಲ ಎಂದು ತಮಿಳು ದಾರಾವಾಹಿ ನಟಿಯೊಬ್ಬಳು ತನ್ನ ಗಂಡನ ಮನೆಯಲ್ಲೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ತಮಿಳು ಕಿರುತೆರೆಯ ಖ್ಯಾತ ನಟಿ ಸುಚಿತ್ರಾ ಮತ್ತು ಆಕೆಯ ಪತಿ ತಮ್ಮ ಸ್ವಂತ ಮನೆಯಲ್ಲಿಯೇ ಕಳ್ಳತನ ಮಾಡಿದ್ದಾರೆ ಎಂದು ಸುದ್ದಿಯಾಗಿದೆ.


ತಮಿಳು ದಾರಾವಾಹಿಗಳಲ್ಲಿ ನಟಿಸುತ್ತಿರುವ ನಟಿ ಸುಚಿತ್ರಾ ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆಗಿದ್ದ ಸಂದರ್ಭದಲ್ಲಿ ಮಣಿಕಂಠನ್ ಎಂಬಾತನ ಜೊತೆ ಮದುವೆಯಾಗಿದ್ದಳು. ನಂತರ ನವದಂಪತಿ ಮಣಿಕಂಠನ್ ಮನೆಗೆ ಹೋಗಿದ್ದಾರೆ. ಅಲ್ಲಿ ಪೋಷಕರು ಮೊದಲಿಗೆ ಅವರ ಮದುವೆಯನ್ನು ಒಪ್ಪಿಕೊಂಡಿರಲಿಲ್ಲ. ನಂತರ ಎಲ್ಲರೂ ಒಪ್ಪಿಕೊಂಡು ಇಬ್ಬರನ್ನೂ ಮನೆಗೆ ಸೇರಿಸಿಕೊಂಡಿದ್ದಾರೆ.


ಸುಚಿತ್ರಾ ಪತಿಯ ಮನೆಯಲ್ಲಿರುವ ಹಣ ಮತ್ತು ಆಭರಣಗಳನ್ನು ನೋಡಿ ಇಷ್ಟಪಟ್ಟಿದ್ದಳು. ಕೊರೊನಾದಿಂದ ಕೆಲಸವಿಲ್ಲದೇ ಇಬ್ಬರಿಗೂ ಹಣದ ಸಮಸ್ಯೆ ಎದುರಾಗಿದೆ. ಮನೆಯಲ್ಲಿ ಕೇಳಿದರೂ ಕೊಡುವುದಿಲ್ಲ ಎಂದು ಈ ಜೋಡಿ ಮಾಸ್ಟರ್ ಪ್ಲಾನ್ ಮಾಡಿದೆ. ಕೊನೆಗೆ ಮನೆಯಲ್ಲಿರುವ ಹಣ, ಒಡವೆಯನ್ನು ದೋಚಲೂ ಇಬ್ಬರು ನಿರ್ಧರಿಸಿದ್ದರು ಎಂದು ವರದಿಯಾಗಿದೆ.

ಅದರಂತೆಯೇ ನನಗೆ ಕೆಲಸ ಇದೆ ಎಂದು ನಟಿ ಸುಚಿತ್ರಾ ಚೆನ್ನೈನಿಂದ ಹೋಗಿದ್ದಾಳೆ. ಇತ್ತ ಕಳ್ಳತನ ಮಾಡಲೂ ಪತಿ ಮಣಿಕಂಠನ್ ಮನೆಯಲ್ಲಿಯೇ ಉಳಿದುಕೊಂಡಿದ್ದನು. ನಂತರ ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾನೆ. ಮನೆಯಲ್ಲಿ ಕಳ್ಳತನವಾದ ವಿಚಾರ ತಿಳಿದು ಮಣಿಕಂಠನ್ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ಮಾಡಿದ ಪೊಲೀಸರಿಗೆ ಮನೆಯವರೇ ಕದ್ದಿರುವ ವಿಚಾರ ತಿಳಿದಿದೆ. ತಕ್ಷಣ ಮಣಿಕಂಠನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಬಳಿ ಮಣಿಕಂದನ್ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆದರೆ ಸುಚಿತ್ರಾ ನಾಪತ್ತೆಯಾಗಿದ್ದಾಳೆ.

FILM

ತುಳು ಚಿತ್ರ “ಧರ್ಮ ಚಾವಡಿ” ಜುಲೈ 11 ಕ್ಕೆ ಬಿಡುಗಡೆ

Published

on

ಮಂಗಳೂರು: ಕೃಷ್ಣವಾಣಿ ಪಿಚ್ಚರ್ಸ್‌ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ರಮೇಶ್ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.


ಚಿತ್ರದ ಬಗ್ಗೆ ಸುದ್ದಿಗಾರರಿಗೆ ಮಾಹಿತಿನೀಡಿದ ಅವರು, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ.

ಶ್ರೀನಾಥ್ ಪವಾರ್ ಸಂಕಲನ ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರವಿ ಸ್ನೇಹಿತ್, ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ, ರಂಜನ್ ಬೋಲೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ ಎಂದರು.

ಇದನ್ನೂ ಓದಿ: ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡ್ಲ್‌ ಈಸ್ಟ್- 2025; ತುಳುನಾಡಿನ ಮಹಿಳೆಯರಿಗಾಗಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

ಪತ್ರಿಕಾಗೋಷ್ಠಿಯಲ್ಲಿ ಜಗದೀಶ್ ಅಮೀನ್, ನಿತೀನ್ ರೈ ಕುಕ್ಕುವಳ್ಳಿ, ಪ್ರಸಾದ್ ಕೆ.ಶೆಟ್ಟಿ, ಅರುಣ್ ರೈ ಪುತ್ತೂರು, ಧನ್ಯಾ ಪೂಜಾರಿ, ನೇಹ ಕೋಟ್ಯಾನ್ ಉಪಸ್ಥಿತರಿದ್ದರು.

Continue Reading

FILM

ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯ ‘ಜೈ’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

Published

on

ಮಂಗಳೂರು: ನಟ, ನಿರ್ದೇಶಕ ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಬಹುನಿರೀಕ್ಷಿತ ಸಿನಿಮಾ ‘ಜೈ’. ಗಿರಿಗಿಟ್, ಗಮ್ಜಾಲ್, ಸರ್ಕಸ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ರೂಪೇಶ್ ಶೆಟ್ಟಿ ಇದೀಗ ‘ಜೈ’ ಮೂಲಕ ಎಂಟ್ರಿ ಕೊಡುತ್ತಿದ್ದಾರೆ.

ಬಿಗ್ ಬಜೆಟ್ ಸಿನಿಮಾವಾಗಿರುವ ‘ಜೈ’ ಚಿತ್ರ ಯಾವಾಗ ತೆರೆಗೆ ಬರುತ್ತೋ ಎಂದು ಕಾದವರಿಗೆ ಸಿಹಿ ಸುದ್ದಿ ಕೊಟ್ಟಿದೆ ಚಿತ್ರತಂಡ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ನವೆಂಬರ್ 14 ರಂದು ಚಿತ್ರ ತುಳು ಹಾಗೂ ಕನ್ನಡ ಎರಡೂ ಭಾಷೆಗಳಲ್ಲೂ ತೆರೆಗೆ ಅಪ್ಪಳಿಸಲಿದೆ. ಅಂದಹಾಗೆ, ಈ ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟನಾಗಿದ್ದು, ಜೊತೆಗೆ ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದು, ಅದ್ವಿತಿ ಶೆಟ್ಟಿ ನಾಯಕಿಯಾಗಿ ಮಿಂಚಿದ್ದಾರೆ. ಇನ್ನು ಬಾಲಿವುಡ್ ನಟ ಸುನಿಲ್ ಶೆಟ್ಟಿ ಈ ಚಿತ್ರದ ಮೂಲಕ ಕೋಸ್ಟಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದು ಸುದ್ದಿಯಾಗಿತ್ತು. ಇವರೊಂದಿಗೆ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರ್ ಮೊದಲಾದವರು ಪಾತ್ರವಾಗಿದ್ದಾರೆ.

ಕತೆ, ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದು, ವಿನುತ್ ಕೆ. ಕ್ಯಾಮರಾ ವರ್ಕ್, ಲೊಯ್ ವೆಲೆಂಟಿನ್ ಸಲ್ದಾನ ಸಂಗೀತ ಚಿತ್ರಕ್ಕಿದೆ. ಆರ್. ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಡಿ ಚಿತ್ರ ನಿರ್ಮಾಣವಾಗಿದೆ.

Continue Reading

FILM

ಕುಂದಾಪುರದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ರಿಷಬ್ ಶೆಟ್ಟಿ

Published

on

ಕುಂದಾಪುರ: ಕಾಂತಾರ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಇಂದು (ಜುಲೈ 7) ತಮ್ಮ 42ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ.

‘ಕಾಂತಾರ ಅಧ್ಯಾಯ-1 ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಇರುವ ಅವರು, ಸದ್ಯ ಕುಂದಾಪುರದಲ್ಲೇ ಬೀಡುಬಿಟ್ಟಿದ್ದಾರೆ. ಅಲ್ಲಿಯೇ ಅವರು ಹುಟ್ಟುಹಬ್ಬ ಆಚರಣೆಯನ್ನು ಮಾಡಿಕೊಂಡಿದ್ದಾರೆ. ಪ್ರೀತಿಯ ಮಡದಿ ಪ್ರಗತಿ ಶೆಟ್ಟಿ ಅವರು ಪತಿ ರಿಷಬ್ ಕೇಕ್ ತಿನ್ನಿಸಿ, ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಹುಟ್ಟುಹಬ್ಬ ಆಚರಿಸಿಕೊಂಡ ರಿಷಬ್ ಅವರಿಗೆ ದುರ್ಗಾಸ್ತಮಾನ ಮತ್ತು ಸೀತಾ ಪುಸ್ತಕಗಳನ್ನು ಗಿಫ್ಟ್ ನೀಡಲಾಯಿತು.

ಇದನ್ನೂ ಓದಿ: ಮದುವೆಯಾದ 6 ತಿಂಗಳಿಗೆ ಪೊಲೀಸ್ ಪೇದೆ ಹಣದಾಸೆಗೆ ಬಲಿಯಾದ್ಲು ಪತ್ನಿ?

ನಟ ರಿಷಬ್ ಶೆಟ್ಟಿ ಬರ್ತ್ ಡೇಯಲ್ಲಿ ವಿಜಯ್ ಕಿರಗಂದೂರು, ಚೆಲುವೇಗೌಡ ಸೇರಿದಂತೆ ಟೀಮ್ ಸದಸ್ಯರು ಭಾಗಿಯಾಗಿದ್ದಾರೆ. ಅಲ್ಲದೇ ನಟ ರಿಷಬ್ ಶೆಟ್ಟಿ ಹುಟ್ಟು ಹಬ್ಬದ ನಿಮಿತ್ತ ಹೊಂಬಾಳೆ ಸಂಸ್ಥೆಯು ಕಾಂತಾರ ಚಾಪ್ಟರ್ 1 ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಸರ್‌ಪ್ರೈಸ್ ಕೊಟ್ಟಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page