Connect with us

LATEST NEWS

ಐಪಿಎಲ್‌ನಿಂದ ಹೊರಬಿದ್ದ ದೇವದತ್ತ ಪಡಿಕ್ಕಲ್; 12 ವರ್ಷಗಳ ಬಳಿಕ ಆರ್‌ಸಿಬಿಗೆ ಮರಳಿದ ಕನ್ನಡಿಗ

Published

on

ಮಂಗಳೂರು/ಬೆಂಗಳೂರು: 2025ರ ಐಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಗಾಯದ ಸಮಸ್ಯೆಯಿಂದ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಆದ್ರೆ ಇದರ ನಡುವೆ ಖುಷಿ ವಿಚಾರ ಏನಂದ್ರೆ ಪಡಿಕ್ಕಲ್ ಜಾಗಕ್ಕೆ ಮತ್ತೊಬ್ಬ ಕನ್ನಡಿಗ ಆರ್‌ಸಿಬಿ ತಂಡ ಸೇರಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ದೇವದತ್ ಪಡಿಕ್ಕಲ್ ಹೊರಬಿದ್ದಿದ್ದಾರೆ. ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿರುವ ಪಡಿಕ್ಕಲ್ ಅವರು ಆರ್​ಸಿಬಿ ತಂಡದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಈ ಋತುವಿನಲ್ಲಿ ಆರ್‌ಸಿಬಿ ಪರ 10 ಪಂದ್ಯಗಳನ್ನು ಆಡಿದ್ದ ದೇವದತ್ ಪಡಿಕ್ಕಲ್, ಎರಡು ಅರ್ಧಶತಕಗಳೊಂದಿಗೆ 247 ರನ್ ಗಳಿಸಿದ್ದರು. ಆದರೆ, ಬಲಗೈ ಮಂಡಿರಜ್ಜು ಗಾಯದಿಂದಾಗಿ ಅವರು ಉಳಿದ ಪಂದ್ಯಗಳಿಂದ ಹೊರಗುಳಿಯಬೇಕಾದ ಸ್ಥಿತಿ ಬಂದಿದೆ. ಇದರಿಂದ ಆರ್‌ಸಿಬಿಗೆ ಬದಲಿ ಆಟಗಾರನ ಅಗತ್ಯವಿತ್ತು. ಇದೀಗ ಅವರ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ. ಅದು ಕೂಡ 12 ವರ್ಷಗಳ ಬಳಿಕ ಎಂಬುದು ವಿಶೇಷ.

ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ; ನಾಯಕತ್ವದ ರೇಸ್‌ನಲ್ಲಿ ನಾಲ್ಕು ಹೆಸರುಗಳು?

ಅಂದರೆ ಮಯಾಂಕ್ ಅಗರ್ವಾಲ್ 12 ವರ್ಷಗಳ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. ಅದರಲ್ಲೂ ಅವರು ಐಪಿಎಲ್ ಕೆರಿಯರ್ ಆರಂಭಿಸಿದ್ದು ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. 2011 ರಲ್ಲಿ ಮಯಾಂಕ್ ಅಗರ್ವಾಲ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.

ಮಯಾಂಕ್ ಅಗರ್ವಾಲ್ ಅವರನ್ನು 1 ಕೋಟಿ ರೂಪಾಯಿಗೆ ಆರ್‌ಸಿಬಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮಯಾಂಕ್ ಐಪಿಎಲ್‌ನಲ್ಲಿ ಈಗಾಗಲೇ 127 ಪಂದ್ಯಗಳನ್ನು ಆಡಿದ್ದು, 2661 ರನ್ ಗಳಿಸಿದ್ದಾರೆ. ಅವರ ಖಾತೆಯಲ್ಲಿ 1 ಶತಕ ಮತ್ತು 13 ಅರ್ಧಶತಕಗಳಿವೆ. ಅವರ ಅನುಭವ ಮತ್ತು ಬ್ಯಾಟಿಂಗ್ ಕೌಶಲ್ಯ ಆರ್‌ಸಿಬಿಯ ಬ್ಯಾಟಿಂಗ್ ಶಕ್ತಿಯನ್ನು ಇನ್ನಷ್ಟು ಬಲಪಡಿಸಲಿದೆ ಎಂದು ತಂಡ ಭಾವಿಸಿದೆ.

2023 ಹಾಗೂ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಕಾಣಿಸಿಕೊಂಡಿದ್ದ ಮಯಾಂಕ್ ಅಗರ್ವಾಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಆರ್​ಸಿಬಿ ತಂಡಕ್ಕೆ ರಿಎಂಟ್ರೆ ಕೊಟ್ಟಿದ್ದಾರೆ.

Advertisement

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page