Connect with us

BELTHANGADY

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದ.ಕ. ಜಿಲ್ಲೆಯ ಭಕ್ತರ ಮತ್ತು ಅಭಿಮಾನಿಗಳ ಭೇಟಿ

Published

on

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿನ್ನೆ(ಆ.25) ಮಂಗಳೂರು, ಬಂಟ್ವಾಳ, ಸುರತ್ಕಲ್‌, ಉಳ್ಳಾಲ, ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತಿತರ ತಾಲೂಕುಗಳಿಂದ ಭಕ್ತರು ಮತ್ತು ಅಭಿಮಾನಿಗಳು ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಭೇಟಿ ನೀಡಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಗೌರವಾರ್ಪಣೆ ಸಲ್ಲಿಸಿದರು.

ಮೊದಲು ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಪ್ರಾರ್ಥನೆ ಸಲ್ಲಿಸಿ ಬಳಿಕ ದೇವಸ್ಥಾನದ ಎದುರು ಶಿವ ಪಂಚಾಕ್ಷರಿ ಪಠಣ ಮಾಡಿದರು. ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಗೌರವಾರ್ಪಣೆ ಸ್ವೀಕರಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಈ ಸಂದರ್ಭದಲ್ಲಿ ಭಾಷಣ ಅಥವಾ ಸಂದೇಶವನ್ನು ತಾನು ನೀಡುತ್ತಿಲ್ಲ. ಕ್ಷೇತ್ರದ ಬಗ್ಗೆ ಅಭಿಮಾನ ಮತ್ತು ಗೌರವ ಇರಿಸಿ ಬಂದಿರುವ ಎಲ್ಲರಿಗೂ ಧನ್ಯವಾದ ಅರ್ಪಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಅಮ್ಮನಿಲ್ಲದ ಜನ್ಮದಿನ…ಅಭಿಮಾನಿಗಳಿಗೆ ಪತ್ರ ಬರೆದ ಕಿಚ್ಚ ಸುದೀಪ್

ಸಂಸದ ಕ್ಯಾಪ್ಟನ್‌ ಬೃಜೇಶ್ ಚೌಟ, ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್‌ ನಾಯ್ಕ್, ಭರತ್ ಶೆಟ್ಟಿ, ಹರೀಶ್ ಪೂಂಜಾ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಬಿ. ನಾಗರಾಜ ಶೆಟ್ಟಿ, ಡಾ. ಮೋಹನ್ ಆಳ್ವ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಹರಿಕೃಷ್ಣ ಬಂಟ್ವಾಳ್, ಕೆ.ಪಿ. ಜಗದೀಶ್ ಅಧಿಕಾರಿ, ವಕೀಲ ಬಾಹುಬಲಿ ಪ್ರಸಾದ್, ಕೃಷ್ಣರಾಜ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

BELTHANGADY

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರ ಡಿ*ಕ್ಕಿಯಾಗಿ ವಯೋವೃದ್ಧ ಸಾ*ವು

Published

on

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.


ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು ಗುರುತಿಸಲಾಗಿದೆ. ಇವರು ಪತ್ನಿ, ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಹಂಝಾ ಅವರು ಸೌದೆ ಕಡಿಯುವ ಕೆಲಸಕ್ಕೆಂದು ಮದ್ದಡ್ಕಕ್ಕೆ ಹೋಗಿದ್ದರು. ಅವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಚಾಲಕ ಬಿಹಾರಿ ರೈ ಎಂಬಾತ ಯಂತ್ರವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಹಿಂದಕ್ಕೆ ತೆಗೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಹಂಝಾ ಅವರನ್ನು ತಕ್ಷಣವೇ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು : ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಆ*ತ್ಮಹ*ತ್ಯೆ

ಹಂಝಾ ಅವರದ್ದು ಬಡ ಕುಟುಂಬವಾಗಿದ್ದು, ತಮ್ಮ ವೃದ್ಧಾಪ್ಯದಲ್ಲೂ ಸೌದೆ ಕಡಿಯುವ ಕೆಲಸಕ್ಕೆ ಹೋಗುತ್ತಿದ್ದರು. ಅವರ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

Continue Reading

BELTHANGADY

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣ: ಇಬ್ಬರ ಬಂಧನ

Published

on

ಬೆಳ್ತಂಗಡಿ: ದ್ವಿಚಕ್ರ ವಾಹನ ಕಳವು ಪ್ರಕರಣದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿ ಕಳವಾದ ಬೈಕ್‌ ನ್ನು ವಶಪಡಿಸಿಕೊಂಡಿದ್ದಾರೆ.


ವೇಣೂರು ನಿವಾಸಿ ಮಹಮ್ಮದ್‌ ಇರ್ಷಾದ್‌ (25) ಮತ್ತು ಪಡಂಗಡಿ ನಿವಾಸಿ  ಸಾದಿಕ್‌ ಖಾನ್‌ (26) ಬಂಧಿತ ಆರೋಪಿಗಳು.

ನವೆಂಬರ್ 10 ರಂದು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಸಂಪತ್‌ ಕುಮಾರ್‌ ಎಂಬವರು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಾನೂರು ಶ್ರೀ ಗುರುನಾರಾಯಣ ವೃತ್ತದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೋಟಾರು ಸೈಕಲ್‌ ರಾತ್ರಿ ವೇಳೆ ಕಳವಾಗಿತ್ತು.

ಇದನ್ನೂ ಓದಿ: ಉಡುಪಿ : ನೌಕಾ ಪಡೆಯ ಹಡಗುಗಳ ಗೌಪ್ಯ ಮಾಹಿತಿ ಹಂಚಿಕೆ ಆರೋಪ; ಇಬ್ಬರ ಬಂಧನ

ಈ ಕುರಿತಂತೆ ಸಂಪತ್ ಕುಮಾರ್ ನೀಡಿದ ದೂರಿನಂತೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ವೇಣೂರು ಪೊಲೀಸ್‌ ಠಾಣೆಯ ಸಬ್‌ ಇನ್ಸ್ ಪೆಕ್ಟರ್‌ ಗಳಾದ ಅಕ್ಷಯ್‌ ಡವಗಿ, ಓಮನ ಎನ್.‌, ಎ.ಎಸ್.‌ ಐ. ವೆಂಕಟೇಶ್‌ ನಾಯ್ಕ, ಮತ್ತು ಸಿಬ್ಬಂದಿ ಕೃಷ್ಣ, ಕೇಶವತಿ, ಬಸವರಾಜ್‌, ಮೋಹನ್‌ ಅವರನ್ನೊಳಗೊಂಡ ತಂಡ ಇಬ್ಬರು ಅರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಳವಾದ ದ್ವಿಚಕ್ರ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BELTHANGADY

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಬಾಲಕ ಮೃ*ತ್ಯು

Published

on

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾ*ವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿ ಗ್ರಾಮದ ಕುತ್ರೋಟ್ಟು- ಟಿ.ಬಿ.ಕ್ರಾಸ್‌ ರಸ್ತೆಯ ಹೊಕ್ಕಿಲ ಎಂಬಲ್ಲಿ ಭಾನುವಾರ (ನ.16) ನಡೆದಿದೆ.


ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ, ಗಣೇಶ್ ಪುತ್ರ ತನ್ವಿತ್(12) ಮೃ*ತರು ಎಂದು ಗುರುತಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ನಾವೂರಿನ ಶಶಿ ಎಂಬವರ ಆಟೋದಲ್ಲಿ ಹೋಗುತ್ತಿದ್ದಾಗ ಈ ದುರಂತ ನಡೆದಿದೆ. ಚಾಲಕ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದ್ದು, ಗಾಯಗೊಂಡ ತನ್ವಿತ್‌ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ರಸ್ತೆ ಮಧ್ಯೆ ಮೃ*ತಪಟ್ಟಿದ್ದಾರೆ. ಗಾಯಗೊಂಡಿದ್ದ ಇತರೆ ಐದು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ: ಧಾರವಾಡದಲ್ಲಿ ಒಂದೇ ದಿನ ಇಬ್ಬರು ಪೊಲೀಸರು ಸಾ*ವು

ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page