Connect with us

ಸುರತ್ಕಲ್ ಬ೦ಟರ ಸಂಘದ ವತಿಯಿಂದ ಆಹಾರದ ಕಿಟ್ ವಿತರಣೆ

Published

on

ಸುರತ್ಕಲ್ ಬ೦ಟರ ಸಂಘದ ವತಿಯಿಂದ ಆಹಾರದ ಕಿಟ್ ವಿತರಣೆ

ಮಂಗಳೂರು: ಸರಕಾರ ಹಾಗೂ ಸಮಾಜ ಒಂದಾಗಿ ಸೇರಿಕೊಂಡು ಮಾರಕ ರೋಗ ಕೊರೊನಾದ ವಿರುದ್ಧ ಹೋರಾಡಬೇಕಾಗಿದೆ.

ಸರಕಾರ ಮತ್ತು ಸಂಘ ಸ೦ಸ್ಥೆಗಳು ಒಂದಾಗಿ ಇಂತಹ ಕಠಿಣ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಕೆಲಸ ಮಾಡುತ್ತಿದೆ.

ವಿಶ್ವಕ್ಕೆ ಮಾರಿಯಾದ ಕೊರೊನಾದ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನುಡಿದರು.

ಅವರು ಸುರತ್ಕಲ್ ಬ೦ಟರ ಸಂಘ ಮತ್ತು ಬ೦ಟರ ಮಹಿಳಾ ವೇದಿಕೆಯ ವತಿಯಿಂದ, ಪ್ರತಿಯೊಬ್ಬರಿಗೂ ತಲಾ 1000 ರೂಪಾಯಿಯಂತೆ ಎಲ್ಲಾ ಸಮುದಾಯ ಸುಮಾರು 200 ಜನರಿಗೆ, ದಿನನಿತ್ಯ ಅಗತ್ಯವಾದ ಆಹಾರದ ಕಿಟ್ ವಿತರಿಸಿ ಮಾತನಾಡಿದರು.

ವಿಶ್ವಕ್ಕೆ ಮಾರಕವಾದ ಕೊರೊನಾ ರೋಗವನ್ನು ತೊಡೆದುಹಾಕಲು ಸರಕಾರವು ಬಹಳ ಹರಸಾಹಸಪಡುತ್ತಿದ್ದು ನಾವೆಲ್ಲರೂ ಒಗ್ಗಟ್ಟಾಗಿ ಸೇರಿಕೊಂಡು ಸರಕಾರಕ್ಕೆ ಆದಷ್ಟು ಮಾನಸಿಕವಾಗಿ ಸಹಾಯ ಮಾಡಬೇಕು.

ಆದಷ್ಟು ಮನೆಯಲ್ಲಿದ್ದು ಕೆಲಸ ಕಾರ್ಯಗಳನ್ನು ಮಾಡಿಕೊಂಡು ಅಗತ್ಯವಿದ್ದಲ್ಲಿ ಮಾತ್ರ ತಮಗೆ ಬೇಕಾಗುವ ವಸ್ತುಗಳಿಗಾಗಿ ಹೊರಬಂದು ತಮ್ಮ ಆರೋಗ್ಯದ ಕಡೆ ಸಾಕಷ್ಟು ಕಾಳಜಿ ವಹಿಸಬೇಕು‌ ಎಂದು ವಿನಂತಿಸಿದರು‌.

ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ವರುಣ್ ಚೌಟ, ಶ್ವೇತಾ ಪೂಜಾರಿ, ನಯನಾ ಕೋಟ್ಯಾನ್, ಮಾಜಿ ಕಾರ್ಪೋರೇಟರ್ ಗುಣಶೇಖರ ಶೆಟ್ಟಿ, ಸುರತ್ಕಲ್ ಬ೦ಟರ ಸಂಘದ ಅಧ್ಯಕ್ಷ  ಸುಧಾಕರ ಎಸ್ ಪೂಂಜ,

ನಿಕಟ ಪೂರ್ವ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಉಪಾಧ್ಯಕ್ಷ ನವೀನ್ ಶೆಟ್ಟಿ ಪಡ್ರ, ಮಹಿಳಾ ವೇದಿಕೆಯ ಅಧ್ಯಕ್ಷೆ ಬೇಬಿ ಶೆಟ್ಟಿ,

ಕಾರ್ಯದರ್ಶಿ ಚಿತ್ರಾ ಜೆ. ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ನಿರ್ದೇಶಕರು ಮತ್ತಿತ್ತರರು ಉಪಸ್ಥಿತರಿದ್ದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page