Connect with us

LATEST NEWS

ವಿ.ಹಿಂ.ಪ ಬಜರಂಗದಳದಿಂದ ಸಂಕಷ್ಟದಲ್ಲಿರುವ 60 ಮನೆಗಳಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ..!

Published

on

ಮಂಗಳೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಭಗತ್ ಶಾಖೆ ಹಾಗೂ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೊಟ್ಟಾರ ಇವರ ವತಿಯಿಂದ ಇಂದು ಕೊಟ್ಟಾರ ಪರಿಸರದ ಈ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ 60 ಮನೆಗಳಿಗೆ ಆಹಾರ ಸಾಮಗ್ರಿ ಮತ್ತು ದಿನನಿತ್ಯ ಬಳಕೆಗೆ ಬೇಕಾಗುವ ಅಗತ್ಯ ವಸ್ತುಗಳ ಕಿಟ್ಟನ್ನು ವಿತರಿಸಲಾಯಿತು. ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಧ್ಯೇಯವಾಕ್ಯದಂತೆ ನಮ್ಮ ಸಂಘಟನೆಯ ಕಾರ್ಯಕರ್ತರು ಸ್ವತಃ ತಮ್ಮ ಮನೆಗಳಲ್ಲಿ ಕಷ್ಟ ಇದ್ದರೂ ಕೂಡ ತಮ್ಮಿಂದ ಆಗುವಷ್ಟು ಹಣವನ್ನು ನೀಡಿ ಈ ಸೇವಾ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಕೊಟ್ಟಾರ ಇದರ ಅಧ್ಯಕ್ಷ ಲೋಕೇಶ್ ಶೆಟ್ಟಿ ಗುರಿ ಕಂಡ , ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಸುನಿಲ್ ಪಾಲ್ದಡಿ ,  ರಾಜು ಕುಲಾಲ್ ,ಮತ್ತು ಬಜರಂಗದಳದ ಸಂಚಾಲಕ ರಾದ  ಅವಿನಾಶ್ ಶೆಟ್ಟಿ , ಸಹ ಸಂಚಾಲಕರಾದ  ರಾಕೇಶ್ ರೈ ಪಾಲ್ದಡಿ , ಗೋರಕ್ಷ ಪ್ರಮುಖರಾದ  ವಿನೋದ್ ಕೋಟ್ಯಾನ್ , ಮಣ್ಣಗುಡ್ಡ ಪ್ರಖಂಡದ ವಿಶ್ವ ಹಿಂದು ಪರಿಷತ್ತಿನ ಕಾರ್ಯದರ್ಶಿಯಾದ  ಸತೀಶ್ ಶೆಟ್ಟಿ , ಹಿಂದೂ ಸೇವಾ ಸಮಿತಿ ಕೋಡಿಕಲ್ ಇದರ ಅಧ್ಯಕ್ಷರಾದಂತಹ ಪುಷ್ಪರಾಜ್ ಶೆಟ್ಟಿ , ಸಕ್ರಿಯ ಕಾರ್ಯಕರ್ತರಾಗಿರುವ  ಗಣೇಶ್ ರೈ ಪಾಲ್ದಡಿ ,  ಶರತ್ ಪಾಲ್ದಡಿ,  ಚಂದ್ರಹಾಸ್ ಪಾಲ್ದಡಿ ಉಪಸ್ಥಿತರಿದ್ದರು.

DAKSHINA KANNADA

ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

Published

on

ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂ*ಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾ*ವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ ಎಂದು ಗುರುತಿಸಲಾಗಿದೆ. ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಮನೋಜ್ ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ತನ್ನ ಬೈಕಲ್ಲಿ ತೆರಳಿದ್ದರು. ರಾತ್ರಿ ವೇಳೆ ವಾಪಸ್ ಆಗುತ್ತಿದ್ದಾಗ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ.

ಇದನ್ನೂ ಓದಿ: WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

ಇದರಿಂದ ರಸ್ತೆಗೆಸೆಯಲ್ಪಟ್ಟ ಮನೋಜ್ ಅವರು ಗಂ*ಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

Continue Reading

LATEST NEWS

WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

Published

on

ಮಂಗಳೂರು/ವಿಜಯಪುರ : ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಜಯಪುರದಲ್ಲಿ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.  ಡ್ಯಾನ್ಸ್ ಮಾಡುವಾಗಲೇ ಯುವಕನೊಬ್ಬ ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಈ ದು*ರಂತ ಸಂಭವಿಸಿದೆ.

28 ವರ್ಷದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಮೃ*ತ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ  ಹೃ*ದಯಾಘಾತಕ್ಕೊಳಗಾಗಿ ಕು*ಸಿದು ಬಿದ್ದಿದ್ದಾನೆ.

ಇದನ್ನೂ ಓದಿ : ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ. ಯುವಕನ ಕೊನೆಯ ಕ್ಷಣದ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

 

Continue Reading

LATEST NEWS

ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

Published

on

ಮಂಗಳೂರು/ಬೆಳಗಾವಿ: ಮಹಾಮಾರಿ ಕೋವಿಡ್ ಕುರಿತು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮಿಜಿಯವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕೊವಿಡ್ ಕುರಿತು ಸ್ವಾಮೀಜಿ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರಿ. ಉಸಿರಾಟಕ್ಕೆ ತೊಂದರೆಯಾಗಿ ಸಾ*ವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ’ ಎಂದರು.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

‘ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು’ ಎಂದು ಸ್ವಾಮೀಜಿ ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page