Connect with us

LATEST NEWS

ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ ಆರೋಪ: ಸಂಸದ ನಳಿನ್‌ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿದ ಹೈಕೋರ್ಟ್‌

Published

on

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕದ್ರಿ ಪೂರ್ವ ಠಾಣೆ ಪೊಲೀಸರು ದಾಖಲಿಸಿದ್ದ ಎಫ್ಐ‌ಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.


ಈ ಬಗ್ಗೆ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ನಿನ್ನೆ ವಿಚಾರಣೆ ನಡೆಸಿ, ಮಂಗಳೂರು 2ನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಎಚ್‌. ಪವನಚಂದ್ರ ಶೆಟ್ಟಿ, ‘ಸಂಸದರು ಜನರನ್ನು ಪ್ರಚೋದಿಸುವ ಅಥವಾ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಉದ್ದೇಶ ಹೊಂದಿರಲಿಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ.

ಸಂವಿಧಾನದ 105ನೇ ವಿಧಿಯ ಅನುಸಾರ ಅಧಿಕಾರಿಗಳು ತಪ್ಪು ಮಾಡುತ್ತಿದ್ದಾರೆ ಎಂದು ಗೊತ್ತಾದಾಗ ಜನಪ್ರತಿನಿಧಿಗಳು ಮಧ್ಯಪ್ರವೇಶಿಸುವ ಅಧಿಕಾರ ಹೊಂದಿದ್ದಾರೆ. ಅಂತೆಯೇ, ಈ ಪ್ರಕರಣದಲ್ಲಿ ಆರೋಪ ರುಜುವಾತುಪಡಿಸುವಂತಹ ಅಂಶಗಳೇ ಇಲ್ಲ. ಆದ್ದರಿಂದ, ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿದ್ದರು.
ಪ್ರಕರಣ ಹಿನ್ನೆಲೆಯೇನು?
‘ರಾಜ್ಯದಲ್ಲಿ ಕೋಮುಗಲಭೆ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ 2017ರ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಮಂಗಳೂರು ಪೂರ್ವ ಠಾಣಾ ಇನ್ಸ್‌ಪೆಕ್ಟರ್ ಬಂಧಿಸಿದ್ದರು.

ಈ ಬಗ್ಗೆ ಮಾಹಿತಿ ಪಡೆದಿದ್ದ ನಳೀನ್ ಕುಮಾರ್ ಕಟೀಲ್, ತಕ್ಷಣವೇ ಠಾಣೆಗೆ ತೆರಳಿ ಕಾರ್ಯಕರ್ತರ ಬಂಧನದ ಕುರಿತ ಡೈರಿಯನ್ನು ತೋರಿಸುವಂತೆ ಇನ್‌ಸ್ಪೆಕ್ಟರ್ ಅವರನ್ನು ಕೇಳಿದ್ದರು. ಇದಕ್ಕೆ ಪ್ರತಿಯಾಗಿ ಪೊಲೀಸ್ ಇನ್‌ಸ್ಪೆಕ್ಟರ್ ಮಾರುತಿ ಜಿ. ನಾಯಕ್, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದಡಿ ಕಟೀಲ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗೆ ದೂರು ನೀಡಿದ್ದರು.

Advertisement
Click to comment

Leave a Reply

Your email address will not be published. Required fields are marked *

INTERNATIONAL

‘ಈಗಲೇ ಇರಾನ್‌ನಿಂದ ಹೊರಡಿ’ ಅಮೆರಿಕನ್‌ ಪ್ರಜೆಗಳಿಗೆ ಎಚ್ಚರಿಕೆ ಸಂದೇಶ

Published

on

ವಾಷಿಂಗ್ಟನ್:‌ ಅಮೆರಿಕ-ಇರಾನ್‌ ಉದ್ವಿಗ್ನತೆ ಮಹತ್ವದ ಘಟ್ಟ ತಲುಪುತ್ತಿರುವಂತೆ ತೋರುತ್ತಿದೆ. ಕಾರಣ, ಈಗಲೇ ಇರಾನ್‌ ನಿಂದ ಹೊರಡಿ, ಅಮೆರಿಕ ಸರ್ಕಾರದ ಸಹಾಯವನ್ನು ಅವಲಂಬಿಸಬೇಡಿ. ನಿಮ್ಮದೇ ಯೋಜನೆ ರೂಪಿಸಿಕೊಳ್ಳಿ ಎಂದು ಹೇಳಿದೆ. ಹೀಗಾಗಿ ಅಮೆರಿಕ ವಿದೇಶಾಂಗ ಇಲಾಖೆ ಹೊರಡಿಸಿದ ತುರ್ತು ಭದ್ರತಾ ಎಚ್ಚರಿಕೆ ಜಗತ್ತನ್ನೇ ಬೆಚ್ಚಿಬೀಳಿಸಿದೆ.


‌ಹೌದು, ಇರಾನ್‌ನ ಸರ್ವೋಚ್ಚ ನಾಯಕ ಆಯತೋಲ್ಲಾ ಖಮೇನಿ ಆಡಳಿತ ವಿರೋಧಿಸಿ ದೇಶಾದ್ಯಾಂತ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಎರಡು ವಾರಗಳನ್ನು ಪೂರೈಸಿರುವ ಪ್ರತಿಭಟನೆಯಿಂದ ಸಂಭವಿಸಿರುವ ಹಿಂಸಾಚಾರದಲ್ಲಿ 600 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಮೆರಿಕ ತನ್ನ ಪ್ರಜೆಗಳಿಗೆ ಇರಾನ್‌ ತೊರೆಯುವಂತೆ ಎಚ್ಚರಿಕೆ ನೀಡಿದೆ.

ಇರಾನ್‌ನಾದ್ಯಂತ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿವೆ ಮತ್ತು ಹಿಂಸಾಚಾರ ಹೆಚ್ಚಾಗಬಹುದು ಎಂದು ಅಮೆರಿಕ ಎಚ್ಚರಿಸಿದೆ. ಇದು ಪ್ರತಿಭಟನಾಕಾರರ ಬಂಧನ, ಗಲಭೆಯಿಂದಾಗಿ ದೈನಂದಿನ ಜೀವನಕ್ಕೆ ತೀವ್ರ ಅಡ್ಡಿಗಳಿಗೆ ಕಾರಣವಾಗಬಹುದು ಎಂದು ಅಮೆರಿಕ ತಿಳಿಸಿದೆ.

ಇರಾನ್‌ ಸರ್ಕಾರವು ಮೊಬೈಲ್‌, ಲ್ಯಾಂಡ್‌ಲೈನ್‌ ಮತ್ತು ಇಂಟರ್ನೆಟ್‌ ನೆಟ್‌ವರ್ಕ್‌ ಅನ್ನು ನಿರ್ಬಂಧಿಸಿದೆ ಎಂದು ಹೇಳಿದೆ. ಅಲ್ಲದೆ ಹಲವಾರು ವಿಮಾನಯಾನ ಸಂಸ್ಥೆಗಳು ಇರಾನ್‌ಗೆ ಮತ್ತು ಅಲ್ಲಿಂದ ಬರುವ ವಿಮಾನಗಳನ್ನು ಸೀಮಿತಗೊಳಿಸಿವೆ ಅಥವಾ ರದ್ದುಗೊಳಿಸಿವೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಭಾರತೀಯರಿಗೆ ಗುಡ್ ನ್ಯೂಸ್ : ವೀಸಾ ಮುಕ್ತ ಪ್ರಯಾಣ ಘೋಷಿಸಿದ ಜರ್ಮನಿ

‘ನಿರಂತರ ಇಂಟರ್ನೆಟ್‌ ಕಡಿತ ಇರುವುದರಿಂದ ಪರ್ಯಾಯ ಸಂವಹನ ವಿಧಾನಗಳನ್ನು ಯೋಜಿಸಬೇಕು ಮತ್ತು ಸುರಕ್ಷಿತವಾಗಿದ್ದರೆ, ಅರ್ಮೇನಿಯಾ ಅಥವಾ ಟರ್ಕಿ ಮೂಲಕ ಭೂಮಾರ್ಗದಲ್ಲಿ ಇರಾನ್‌ನಿಂದ ಹೊರಡುವುದನ್ನು ಪರಿಗಣಿಸಬೇಕು’ ಎಂದು ಎಚ್ಚರಿಕೆಯಲ್ಲಿ ಸೂಚಿಸಲಾಗಿದೆ.

Continue Reading

LATEST NEWS

ಇತ್ತ ಯೋಧ ಸಾ*ವು…ಅತ್ತ ಹೆಣ್ಣು ಮಗು ಜನನ…ಹಸುಗೂಸಿನೊಂದಿಗೆ ಸ್ಟ್ರೆಚರ್‌ನಲ್ಲಿ ಬಂದು ಅಂತಿಮ ದರ್ಶನ ಪಡೆದ ಪತ್ನಿ!

Published

on

ಮಂಗಳೂರು/ಮಹಾರಾಷ್ಟ್ರ : ಆತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಪತ್ನಿ ಗರ್ಭಿಣಿಯಾಗಿದ್ದ ಕಾರಣ ಪಿತೃತ್ವ ರಜೆ ಪಡೆದು ಹುಟ್ಟೂರಿಗೆ ಬಂದಿದ್ರು. ಅತ್ತ ಪತ್ನಿಗೆ ಹೆರಿಗೆ ನೋ*ವು ಕಾಣಿಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಆಗಮನಕ್ಕಾಗಿ ಯೋಧನ ಕುಟುಂಬ ಕಾಯುತ್ತಿತ್ತು. ಆದ್ರೆ, ವಿಧಿಯಾಟ ಬೇರೆಯೇ ಆಗಿತ್ತು.

ಹೌದು, ಪತ್ನಿಗೆ ಬೇಕಾದ ಅಗತ್ಯ ವಸ್ತುಗಳನ್ನು ತರಲು ಬೈಕ್ ನಲ್ಲಿ ತೆರಳಿದ್ದ ಯೋಧ ಅಪ*ಘಾತಕ್ಕೀಡಾಗಿ ಪ್ರಾ*ಣ ಕಳೆದುಕೊಂಡಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ನಡೆದಿರೋದು ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ.

35 ವರ್ಷದ ಪ್ರಮೋದ್ ಜಾಧವ್ ಮೃ*ತ ಯೋಧ. ಮಿನಿ ಟ್ರಕ್  ಬೈಕ್‌ಗೆ ಡಿ*ಕ್ಕಿಯಾಗಿ ಪ್ರಮೋದ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಕೊನೆಯು*ಸಿರೆಳೆದಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಅವರ ಪತ್ನಿ ರುತುಜಾ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದಾರೆ.

ಇದನ್ನೂ ಓದಿ : ಶಬರಿಮಲೆಗೆ ಹೋಗಿ ಬಂದ ದಿನವೇ ಕ್ರೌ*ರ್ಯ ಮೆರೆದ ಪತಿ; ಪತ್ನಿಯ ಕೊಂ*ದು ನದಿಗೆ ಎಸೆದ ಪಾಪಿ

ಪತಿಗೆ ವಿದಾಯ ಹೇಳಲು ಪುಟ್ಟ ಕಂದಮ್ಮನೊಂದಿಗೆ ಪತ್ನಿ ಸ್ಟ್ರೆಚರ್ ನಲ್ಲಿ ಬಂದ ದೃಶ್ಯ ಕರುಳು ಹಿಂಡುವಂತಿತ್ತು.  ಈ ದೃಶ್ಯ  ಕಂಡು ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದೆ.

Continue Reading

hasana

ಹಾಸನ: ಕಾಡಾನೆ ದಾ*ಳಿಗೆ ಬ*ಲಿಯಾದ ಮಹಿಳೆ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Published

on

ಹಾಸನ: ಕಳೆದ ಕೆಲವು ವರ್ಷಗಳಿಂದ ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾ*ಳಿಗಳು ಹೆಚ್ಚುತ್ತಿದ್ದು, ಅಮಾಯಕರು ಬ*ಲಿಯಾಗುತ್ತಿರುವುದು ಜನರಲ್ಲಿ ಭಯ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಮತ್ತೊಂದು ಘಟನೆ ನಡೆದಿದೆ. ಕಾಡಾನೆಯ ದಾ*ಳಿಗೆ ಕಾರ್ಮಿಕ ಮಹಿಳೆಯೊಬ್ಬರು ಬ*ಲಿಯಾಗಿರುವ ಘಟನೆ ಸಕಲೇಶಪುರ ತಾಲೂಕಿನ ಮೋಗಲಿ ಗ್ರಾಮದಲ್ಲಿ ಮಂಗಳವಾರ(ಜ.13) ನಡೆದಿದೆ. ಶೋಭಾ(40) ಮೃತಪಟ್ಟ ಮಹಿಳೆ.


ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ಹೋಗಿದ್ದರು. ಕೆಲಸದ ವೇಳೆ ಕಾಡಾನೆ ಏಕಾಏಕಿ ದಾ*ಳಿ ನಡೆಸಿದೆ. ಇದರಿಂದ ತಪ್ಪಿಸಿಕೊಳ್ಳಲು ಮೂವರು ಓಡಿದರೂ, ಶೋಭಾರನ್ನು ಬೆನ್ನಟ್ಟಿದ ಕಾಡಾನೆ ತುಳಿದು ಸ್ಥಳದಲ್ಲೇ ಸಾ*ಯಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ.

ಗ್ರಾಮಸ್ಥರ ಆಕ್ರೋಶ

ಕಾಡಾನೆ ದಾಳಿಯಿಂದ ಮಹಿಳೆ ಮೃ*ತಪಟ್ಟಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು, ಅರಣ್ಯ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ, ಮೃ*ತದೇಹ ಕೊಂಡೊಯ್ಯಲು ನಿರಾಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಅರಣ್ಯಾಧಿಕಾರಿಗಳು ಕಾಡಾನೆಗಳ ಸಂಚಾರದ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡುತ್ತಿಲ್ಲ. ಅಷ್ಟೇ ಅಲ್ಲದೇ ಪುಂಡಾಣೆಗಳನ್ನು ಸೆರೆಹಿಡಿಯುತ್ತಿಲ್ಲ. ಜತೆಗೆ ರೆಡಿಯೋ ಕಾಲರ್‌ ಅಳವಡಿಸಲಿಲ್ಲ ಎಂದು ಆರೋಪಿಸಿದರು.

ಘಟನಾ ಸ್ಥಳಕ್ಕೆ ಶಾಸಕ ಸಿಮೆಂಟ್‌ ಮಂಜು, ಮಾಜಿ ಶಾಸಕ ಎಚ್‌ಕೆ ಕುಮಾರಸ್ವಾಮಿ ಮತ್ತು ಡಿಎಫ್‌ಒ ಸೌರಭ್‌ ಕುಮಾರ್‌ ಭೇಟಿ ನೀಡಿ ಮೃ*ತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆದರೆ, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು, ‘ಪರಿಹಾರದ ಹಣ ನಮಗೆ ಬೇಡ, ಶಾಶ್ವತ ಪರಿಹಾರ ಬೇಕು ಎಂದು’ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಂಧನ, ಇನ್ನೋರ್ವನಿಗಾಗಿ ಶೋಧ

ಪ್ರತಿಭಟನೆ ತೀವ್ರವಾಗಿದ್ದರಿಂದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಲತಾ ಕುಮಾರಿ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಮೃ*ತ ಮಹಿಳೆಯ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಜತೆಗೆ ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಹೇಳಿದರು. ಒಟ್ಟಾರೆಯಾಗಿ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page