ಬೆಳ್ತಂಗಡಿ ತಾಲೂಕು ಪರಿಶಿಷ್ಠ ಜಾತಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಬೆಳ್ತಂಗಡಿ ತಾಲೂಕು, ದ.ಕ ಇಲ್ಲಿನ ಡಾರ್ಮಿಟರ್ ಹಾಲ್ ರಚನೆಯ ಟೆಂಡರ್ ಕಾಮಗಾರಿಯ ಬಿಲ್ ಮಂಜೂರಾತಿಗಾಗಿ ಫಿರ್ಯಾದುದಾರರಿಂದ ಕುಮಾರಿ ರೂಪಾ, ಸಹಾಯಕ ಅಭಿಯಂತರರು, ತಾಂತ್ರಿಕ ವಿಭಾಗ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರವರು 10,000 ರೂಪಾಯಿ ಲಂಚದ ಹಣದ ಬೇಡಿಕೆಯಿಟ್ಟಿದ್ದರು,
ಇಂದು ಆರೋಪಿತ ಸರ್ಕಾರಿ ಅಧಿಕಾರಿ ಪಿರಾದುದಾರರಿಂದ ರೂ. 8000 ಲಂಚದ ಹಣವನ್ನು ಸ್ವೀಕರಿಸುವಾಗ ಸ್ಥಳದಲ್ಲಿಯೇ ಲೋಕಾಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಸದರಿ ಆರೋಪಿತರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಯುಕ್ತ ಎಸ್‌ಪಿ ಸಿ.ಎ. ಸೈಮನ್ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರುಗಳಾದ ಶ್ರೀಮತಿ ಕಲಾವತಿ.ಕೆ, ಚಲುವರಾಜು.ಬಿ, ಹಾಗೂ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಸಿಬ್ಬಂದಿಗಳ ಜೊತೆ ಟ್ರ್ಯಾಪ್, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು..





