Connect with us

LATEST NEWS

“ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಭಂಡ ಧೈರ್ಯ ಬೇಡ “

Published

on

ಮಂಗಳೂರು : ಸುಳ್ಳು ಸುದ್ದಿ ಹರಡಿ ಶಾಂತಿ ಕದಡಲು ಪ್ರಯತ್ನಿಸುವ ಸಮಾಜಘಾತುಕರ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಿದೆ. ಫೇಸ್‌ಬುಕ್, ವಾಟ್ಸಾಪ್ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಭಂಡ ಧೈರ್ಯ ಬೇಡ. ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹತ್ಯೆಯಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ವಿರುದ್ಧ ಅವಹೇಳನಕಾರಿ ಬರಹವನ್ನು ಪೋಸ್ಟ್ ಮಾಡಿದ ‘ಮಂಗಳೂರು ಮುಸ್ಲಿಂ’ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರು ಪೊಲೀಸರು ಸುಮೋಟೋ ಕೇಸ್‌ ದಾಖಲಿಸಿದ್ದಾರೆ.

ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಗುತ್ತಿದ್ದಂತೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹ ಬರೆದು ಕೊಲೆಯಾದವನು ಶಿವಮೊಗ್ಗದ ಬೀದಿ ನಾಯಿ ಎಂದು ಉಲ್ಲೇಸಿದ್ದಾರೆ.2015ರಲ್ಲಿ ಹರ್ಷ ಪ್ರವಾದಿಯನ್ನು‌ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಪ್ರವಾದಿ ನಿಂದನೆ ಮಾಡಿದವರನ್ನು ಎಂದಿಗೂ ಬಿಡಲ್ಲ ಎಂದು ಫೇಸ್‌ಬುಕ್ ಪೇಜ್ ನಲ್ಲಿ ಎಚ್ಚರಿಕೆ ನೀಡಲಾಗಿತ್ತು.

ಈ ಬಗ್ಗೆ ಮಂಗಳೂರು ಮುಸ್ಲಿಮ್ಸ್ ಫೇಸ್‌ಬುಕ್‌ ಪೇಜ್‌ನಲ್ಲಿ ಎಚ್ಚರಿಕೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಅವರು ಶಿವಮೊಗ್ಗ ಕೊಲೆಯ ಬಳಿಕ ಮಂಗಳೂರಿನಲ್ಲಿ ಕೆಲ ವ್ಯಕ್ತಿ, ಸಂಘಟನೆಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆಗಳನ್ನು ಕೆರಳಿಸುವ, ಹತ್ಯೆ ಬೆದರಿಕೆಗಳನ್ನು ಹಾಕುತ್ತಿರುವುದು ಕಂಡು ಬಂದಿದ್ದು ಇಂತವರ ವಿರುದ್ದ ನಿರ್ದಕ್ಷಿಣ್ಯ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಜೊತೆಗೆ ವಾಟ್ಸಾಪ್, ಫೇಸ್ ಬುಕ್‌ಗಳಲ್ಲಿ ಇಂತಹ ಸೂಕ್ಷ್ಮ ವಿಚಾರಗಳನ್ನು ಲೈಕ್ ಅಥವಾ ಶೇರ್ ಮಾಡಿದರೂ ಅಂತವರ ವಿರುದ್ದವೂ ಕ್ರಮ ಜರುಗಿಸಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page