Connect with us

LATEST NEWS

ಸ್ಪಿನ್ನರ್ ಚಹಾಲ್ ಜೊತೆ ಕಾಣಿಸಿಕೊಂಡ ಹುಡುಗಿ ಯಾರು ಗೊತ್ತಾ?

Published

on

ಮಂಗಳೂರು/ದುಬೈ: ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಾಲ್ ಹಾಗೂ ಧನಶ್ರೀ ವಿಚ್ಛೇದನ ಪಡೆದಿದ್ದಾರೆ ಎನ್ನು ಸುದ್ದಿ ಇತ್ತೀಚೆಗೆ ಜೋರಾಗಿ ಹರಡಿತ್ತು. ಈ ಬಗ್ಗೆ ಚಹಾಲ್ ದಂಪತಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಿರುವಾಗಲೇ ನಿನ್ನೆ (ಮಾ.09) ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಚಹಲ್ ಅವರು ಹುಗಿಯೊಂದಿಗೆ ಕಾಣಿಸಿಕೊಂಡ ವಿಚಾರ ಸಖತ್ ಸದ್ದು ಮಾಡುತ್ತಿದೆ.

ಚಹಲ್ ಹಾಗೂ ಧನಶ್ರೀ ವಿಚ್ಛೇದನ ವಿಚಾರ ಇನ್ನೂ ಸುದ್ದಿಯಲ್ಲಿ ಇದೆ. ಧನಶ್ರೀಗೆ ಚಹಲ್ ಅವರು ದೊಡ್ಡ ಮೊತ್ತದ ಜೀವನಾಂಶ ನೀಡಿದ್ದಾರೆ ಎಂದೆಲ್ಲ ಹೇಳಲಾಗುತ್ತಿದೆ. ಹೀಗಿರುವಾಗಲೇ ಅವರು ಬೇರೆ ಯುವತಿ ಜೊತೆ ಡೇಟಿಂಗ್ ಆರಂಭಿಸಿದರೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆಗಳು ನಡೆಯುತ್ತಿವೆ.

ಅಂದಹಾಗೆ, ಚಾಹಲ್ ಜೊತೆಯಲ್ಲಿ ಕುಳಿತಿದ್ದ ಈ ಹುಡುಗಿಯ ಹೆಸರು ಮಹಾವಶ್. ಈಕೆ ರೇಡಿಯೋ ಜಾಕಿ ಹಾಗೂ ನಟಿ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಕೊನೆಗೂ ಚಾಂಪಿಯನ್ಸ್ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡ ಭಾರತ

ಕಳೆದ ಜನವರಿಯಲ್ಲಿ ಚಹಲ್ ಹಾಗೂ ಮಾಹವಾಶಾ ಮಧ್ಯೆ ಲಿಂಕ್ ಇದೆ ಹೇಳಲಾಗಿತ್ತು. ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿತ್ತು. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು. ಈಗ ಇಬ್ಬರೂ ಮತ್ತೆ ಕಾಣಿಸಿಕೊಂಡಿದ್ದು ಚರ್ಚೆ ಹುಟ್ಟುಹಾಕಿದೆ.

ಮೊದಲು ವೈರಲ್ ಆದ ಫೋಟೋಗೆ ಮಾಹವಾಶಾ ಅವರು ಸ್ಪಷ್ಟನೆ ನೀಡಿದ್ದರು. ‘ನಮ್ಮಿಬ್ಬರ ಮಧ್ಯೆ ಪ್ರೀತಿ ಇಲ್ಲ’ ಎಂದು ಹೇಳಿದ್ದರು. ಈಗ ಮತ್ತೆ ಇವರ ಹೆಸರು ಮುನ್ನೆಲೆಗೆ ಬಂದಿದೆ.

ಮಾಹವಾಶಾ ಅವರು ‘ಸೆಕ್ಷನ್ 108’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರು ರೆಡಿಯೋ ಜಾಕಿ ಕೂಡ ಹೌದು. ಅವರು ವೆಬ್ ಸೀರಿಸ್ ಒಂದರಲ್ಲಿ ನಾಯಕಿ ಆಗಿಯೂ ನಟಿಸುತ್ತಿದ್ದಾರೆ.

 

LATEST NEWS

ಬಸ್ ನಿಲ್ದಾಣಕ್ಕೆ ಕಾರು ಡಿ*ಕ್ಕಿ; ಚಾಲಕನಿಗೆ ಗಾ*ಯ

Published

on

ಕಾಪು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಸ್ ನಿಲ್ದಾಣಕ್ಕೆ ಡಿ*ಕ್ಕಿಯಾದ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ(ಡಿ.07) ಸಂಭವಿಸಿದೆ.

ಕಾರು ಚಾಲಕ ಕೊಪ್ಪಲಂಗಡಿಯ ಇಸ್ಮಾಯಿಲ್  ಗಾ*ಯಗೊಂಡಿದ್ದಾರೆ. ಕಾಪುನಿಂದ ಉಚ್ಚಿಲ ಕಡೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಇಸ್ಮಾಯಿಲ್‌ರನ್ನು  ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ಮಹಿಳೆಯ ಹ*ತ್ಯೆ ಪ್ರಕರಣ : ಪೊಲೀಸರು ಬೀಸಿದ ಬಲೆಗೆ ಹಂ*ತಕ ಸಿಕ್ಕಿ ಬಿದ್ದಿದ್ದು ಹೇಗೆ?

ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು

Continue Reading

LATEST NEWS

ನಾಗರಹಾವು ಕಡಿದು ವ್ಯಕ್ತಿ ಸಾ*ವು

Published

on

ಉಡುಪಿ : ನಾಗರಹಾವು ಕ*ಡಿದು ವ್ಯಕ್ತಿಯೊಬ್ಬರು ಸಾ*ವನ್ನಪ್ಪಿರುವ ಘಟನೆ ಉಡುಪಿ ಕುತ್ಯಾರು ಗ್ರಾಮದಲ್ಲಿ ನಡೆದಿದೆ. ಸುರೇಂದ್ರ ಕಿಟ್ಟು ಪೂಜಾರಿ(54) ಮೃ*ತಪಟ್ಟ ವ್ಯಕ್ತಿ.

ಸುರೇಂದ್ರ ಸ್ಥಳೀಯರೊಬ್ಬರಿಗೆ ಸೇರಿದ ತೋಟದಲ್ಲಿ ಕಳೆದ 6 ವರ್ಷಗಳಿಂದ ತೋಟ ನೋಡಿಕೊಳ್ಳುವ ಕೆಲಸ ಮಾಡಿಕೊಂಡಿದ್ದರು. ಡಿ. 5 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಅಡಕೆ ಮರಗಳಿಗೆ ಕ್ರಿಮಿನಾಶಕ ಸಿಂಪಡಿಸಲು ತೋಟಕ್ಕೆ ಹೋಗಿದ್ದಾಗ ನಾಗರಹಾವು ಕ*ಚ್ಚಿದೆ.

ಇದನ್ನೂ ಓದಿ : ನಾಲ್ಕು ತಿಂಗಳ ಹಿಂದಷ್ಟೇ ಮದುವೆ… ನವವಿವಾಹಿತೆಯ ದುರಂ*ತ ಅಂತ್ಯ!

ತಕ್ಷಣವೇ ಅವರನ್ನು ಕಿನ್ನಿಗೋಳಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆಯೇ ಸುರೇಂದ್ರ ಪೂಜಾರಿ ಮೃ*ತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃ*ತರ ಪುತ್ರ ಕಿರಣ್.ಎಸ್ ನೀಡಿದ ದೂರಿನ ಮೇರೆಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

LATEST NEWS

ನಾಲ್ಕು ತಿಂಗಳ ಹಿಂದಷ್ಟೇ ಮದುವೆ… ನವವಿವಾಹಿತೆಯ ದುರಂ*ತ ಅಂತ್ಯ!

Published

on

ಮಂಗಳೂರು/ಬೆಂಗಳೂರು : ಗ್ಯಾಸ್ ಗೀಸರ್​ ಸೋರಿಕೆಯಿಂದ ನವ ವಿವಾಹಿತೆ ಸಾ*ವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಭೂಮಿಕಾ ಮೃ*ತ ದುರ್ದೈವಿ.

ಭೂಮಿಕಾ ಹಾಸನ ಮೂಲದವರಾಗಿದ್ದು ನಾಲ್ಕು ತಿಂಗಳ ಹಿಂದಷ್ಟೇ ಕೃಷ್ಣಮೂರ್ತಿ ಎಂಬುವವರ ಜೊತೆ ಮದುವೆಯಾಗಿದ್ದರು. ಪತಿ ಕೆಲಸಕ್ಕೆ ಹೋದ ಬಳಿಕ ಭೂಮಿಕಾ ಸ್ನಾನಕ್ಕೆ ಹೋಗಿದ್ದಳಂತೆ. ಗ್ಯಾಸ್​ ಲೀಕ್​ ಆದ ಹಿನ್ನೆಲೆ ಭೂಮಿಕಾಗೆ ಉಸಿರುಗಟ್ಟಿದ್ದು, ಬಾತ್‌ ರೂಂನಲ್ಲೇ ಕೊನೆಯು*ಸಿರೆಳೆದಿದ್ದಾಳೆ.

ಇದನ್ನೂ ಓದಿ : ‘ಮದುವೆಯನ್ನು ರದ್ದುಗೊಳಿಸಲಾಗಿದೆ’ ಕೊನೆಗೂ ವದಂತಿಗೆ ಫುಲ್ ಸ್ಟಾಪ್ ನೀಡಿದ ಸ್ಮೃತಿ ಮಂಧಾನ

ಪತಿ ಕೆಲಸ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page