Connect with us

ವೀರೇಂದ್ರ ಹೆಗ್ಗಡೆಯವರ ಹಸ್ತದಲ್ಲಿ 30 ಸಾವಿರ ಆಹಾರ ಕಿಟ್ ಗಳ ವಿತರಣೆಗೆ ವಿದ್ಯುಕ್ತ ಚಾಲನೆ..

Published

on

ವೀರೇಂದ್ರ ಹೆಗ್ಗಡೆಯವರ ಹಸ್ತದಲ್ಲಿ 30 ಸಾವಿರ ಆಹಾರ ಕಿಟ್ ಗಳ ವಿತರಣೆಗೆ ವಿದ್ಯುಕ್ತ ಚಾಲನೆ..

ಬೆಳ್ತಂಗಡಿ: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮನುಷ್ಯನ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಆಹಾರವನ್ನು ಜನಕ್ಕೆ ಒದಗಿಸುವಲ್ಲಿ ಇದೀಗ ತಾಲೂಕಿನ ಶಾಸಕ ಹರೀಶ್ ಪೂಂಜಾ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ 81 ಗ್ರಾಮಗಳ ಬೂತ್ ಗಳಿಗೆ ದಿನಸಿ ಸಾಮಾನುಗಳ ಕಿಟ್ ತಲುಪಿಸಲು ಲಾರಿ, ಟೆಂಪೋ ಹಾಗೂ ಪಿಕಪ್ ವಾಹನಗಳು, ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲುಗಟ್ಟಿ ನಿಂತಿದ್ದವು.

ತಾಲೂಕಿನ ಬರೋಬ್ಬರಿ ಮೂವತ್ತು ಸಾವಿರ ಮನೆಗಳಿಗೆ ಆಹಾರದ ಕಿಟ್ ಇಂದು ದೊರೆಯಲಿದ್ದು, ಈ ಮೂಲಕ ಬೆಳ್ತಂಗಡಿ ತಾಲೂಕಿನ ಮುಕ್ಕಾಲು ಭಾಗದ ಜನರಿಗೆ ಏಕಕಾಲದಲ್ಲಿ ತಿಂಗಳ ಮಟ್ಟಿಗೆ ಆಹಾರದ ವ್ಯವಸ್ಥೆಯಾದಂತಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು (ಎಪ್ರಿಲ್ 23) ಬೆಳಗ್ಗೆ 7 ಗಂಟೆ ಸುಮಾರಿಗೆ,

ಶ್ರೀ ಕ್ಷೇತ್ರದ ಎದುರು ಭಾಗದಲ್ಲಿ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಸಂಸದ ನಳಿನ್ ಕುಮಾರ್ ಕಟೀಲ್, ವಿರೇಂದ್ರ ಹೆಗ್ಗಡೆಯವರ ಕಾರ್ಯದರ್ಶಿ ವೀರು ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯ ಕೊರಗಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಉಜಿರೆ ರತ್ನವರ್ಮ ಕ್ರೀಡಾಂಗಣದಿಂದ ಆಹಾರದ ಕಿಟ್ ಹೊತ್ತು ಹೊರಟ ವಾಹನಗಳು, ಇಂದು ಸೂರ್ಯ ಮುಳುಗುವ ಹೊತ್ತಿಗೆ, ಈಗಾಗಲೇ ಪಟ್ಟಿ ಮಾಡಿರುವ ಅರ್ಹ ಫಲಾನುಭವಿಗಳಿಗೆ, ತಾಲೂಕಿನ 241 ಬೂತ್ ಗೆ ತಲಾ 100 ರಂತೆ ಕಿಟ್ ವಿತರಣೆಯಾಗಲಿದೆ.

ಆಯಾಯ ಗ್ರಾಮಗಳ ಬೂತ್ ನ ಹುಡುಗರು ಮನೆ-ಮನೆಗೆ ತೆರಳಿ ಕಿಟ್ ವಿತರಣೆ ಮಾಡಲಿದ್ದಾರೆ.

ಇನ್ನು ಆಹಾರದ ಕಿಟ್ ತಯಾರಿಕಾ ಕಾರ್ಯಕ್ರಮವು, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ತಾನದ ಸಭಾಭವನದಲ್ಲಿ,

ಉದ್ಯಮಿಗಳಾದ ರಾಜೇಶ್ ಪೈ ಸಂಧ್ಯಾ ಟ್ರೇಡರ್ಸ್, ಮೋಹನ್ ಕುಮಾರ್ ಲಕ್ಷ್ಮೀ ಗ್ರೂಪ್ಸ್ ಅವರ ಉಸ್ತುವಾರಿಯಲ್ಲಿ ಹಾಗೂ ‘ಬದುಕು ಕಟ್ಟೋಣ’ ತಂಡದ ಸದಸ್ಯರ ಸಹಕಾರದಲ್ಲಿ ಶುಚಿಯಾಗಿ-ಅಚ್ಚುಕಟ್ಟಾಗಿ ಕಿಟ್ ತಯಾರಿ ನಡೆದಿತ್ತು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಮಹಿಳಾ, ಮಕ್ಕಳ ಆಸ್ಪತ್ರೆಯಲ್ಲಿ ಎನ್‌ ಆರ್‌ಸಿ ಕೇಂದ್ರ ಇಲ್ಲದಕ್ಕೆ ಗರಂ ಆದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

Published

on

ಉಡುಪಿ:  ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು.

ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು  ನಾಲ್ಕು ವರ್ಷಗಳಾದರೂ ಇನ್ನೂ ಎನ್‌ ಆರ್‌ ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್‌ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಮಕ್ಕಳು ದಾಖಲಾದ ಮೇಲೆ ಪ್ರತಿಯೊಂದು ಹೆಸರು, ತಾಯಿ ಹೆಸರು ದಾಖಲೆ ಮಾಡಿ, ಬಳಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಹಿನ್ನೆಲೆಯಲ್ಲಿ ಬರೆಯಲಾಗಿದೆ. ವಿವರ ಮಗುವಿನ ತಂದೆ ತಾಯಿ ಹೆಸರು ವಿಳಾಸ ಕೂಡ ಇಲ್ಲ. ಇದರಿಂದ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

Continue Reading

BELTHANGADY

ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

Published

on

ಶಿರಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

 

ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ ,  ಉಜಿರೆ ನಿವಾಸಿಗಳಾದ ಶ್ರೀಧರ್ , ಜನಾರ್ದನ ಕೆರಿಮಾರ್ ಮೃತ ದುರ್ದೈವಿಗಳು. ಧರ್ಮಸ್ಥಳದಿಂದ ಮದ್ಯಾಹ್ನ 1.30ಕ್ಕೆ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆ.ಎಸ್. ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಘಾಟ್ ಗಡಿ ಸಮೀಪ ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

 

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮತ್ತೋರ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.  ಘಟನೆಯಲ್ಲಿ ಸುರೇಶ್ ಎಂಬವರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

ಸಿಲಿಂಡರ್ ಅಭಾವ: ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

Published

on

ಬೆಂಗಳೂರು: ಇಸ್ರೇಲ್‌, ಅಮೇರಿಕ ಮತ್ತು ಇರಾನ್‌ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಇದೀಗ ಗ್ಯಾಸ್ ಸಿಲಿಂಡರ್ ಕೊರತೆಯ ನಡುವೆ, ಗ್ರಾಹಕರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ಈಗ ಬೆಲೆ ಏರಿಕೆಯ ಬಿಸಿ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ.


ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಅಯೋಮಯವಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಸಹ ಬಂದ್‌ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಅಡುಗೆ ಎಣ್ಣೆ ಮಾಲಿಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100-200 ಬಾಕ್ಸ್‌ ಎಣ್ಣೆ ಬುಕ್‌ ಮಾಡಿದರೆ 20-50 ಬಾಕ್ಸ್‌ ಮಾತ್ರ ಕಳುಹಿಸುತ್ತಾರೆ. ಏಜೆಂಟರಲ್ಲಿ ಕೇಳಿದರೆ, ಸಪ್ಲೈ ಆಗುತ್ತಿಲ್ಲ. ಹೆಚ್ಚು ಬಾಕ್ಸ್‌ ನೀಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ 15-20 ರೂ. ದರ ಜಾಸ್ತಿ ಆಗಿರುವುದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೀಮೆಎಣ್ಣೆ ಹಂಚಿಕೆ ಮತ್ತು ಆಮದು ನೀತಿಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದ ಹೊಸ ನಿರ್ಧಾರ

ಗ್ಯಾಸ್ ಅಭಾವ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದಾಗಿ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಕಾಡುತ್ತಿದೆ. ನಗರದ ಕೆಲವು ಹೋಟೆಲ್‌ಗಳು ಮತ್ತು ಪಿಜಿಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಮತ್ತೆ ಹಳೆಯ ಪದ್ಧತಿಯಂತೆ ಸೌದೆ ಒಲೆಗಳನ್ನು ಬಳಸುವ ಅನಿವಾರ್ಯತೆ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page