Connect with us

DAKSHINA KANNADA

ಮುಂದಿನ ನಾಲ್ಕು ದಿನ ಕಾಲ ಡ್ರೋನ್ ಹಾರಾಟ ನಿಷೇಧ; ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ

Published

on

ಮಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ಮತ್ತು ಡ್ರೋನ್ ಚಿತ್ರೀಕರಣ ನಡೆಸುವುದನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಶನಿವಾರ (ಮೇ 10) ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ದೇಶದ ಮೊದಲ ಭಿಕ್ಷಾಟನೆ ಮುಕ್ತ ನಗರ ಯಾವುದು ಗೊತ್ತಾ?

ಮೇ 10ರ ಸಂಜೆ 4 ಗಂಟೆಯಿಂದ ಮೇ 14ರ ಸಂಜೆ 4 ಗಂಟೆಯವರೆಗೆ ಡ್ರೋನ್ ನಿಯಮ 2021ರ ರೂಲ್ಸ್ 24ರ ಅಡಿಯಲ್ಲಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡೋನ್ ಬಳಕೆ ಹಾರಾಟ ಮತ್ತು ಡ್ರೋನ್ ಮೂಲಕ ಚಿತ್ರೀಕರಣ ನಡೆಸುವುದನ್ನು ನಿಷೇಧಿಸಲಾಗಿದೆ.

 

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page