Connect with us

DAKSHINA KANNADA

7 ದಶಕಗಳಿಂದ ವಿದ್ಯುತ್ ಮರೀಚಿಕೆ- ಸರ್ಕಾರಕ್ಕೆ ಸಡ್ಡು ಹೊಡೆದ ಚೆಂಬು ಗ್ರಾಮಸ್ಥರು

Published

on

ಸುಳ್ಯ: ವಿದ್ಯುತ್ ಸಮಸ್ಯೆಯನ್ನು ಅನುಭವಿಸದೆ ನೀರಿನಿಂದಲೇ ಕರೆಂಟ್ ಉತ್ಪಾದಿಸಿ ಸ್ವಾವಲಂಬಿಯಾದ ಗ್ರಾಮವೆಂದರೆ ಕೊಡಗಿನ ಚೆಂಬು ಗ್ರಾಮ.

ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇಂದಿಗೂ ವಿದ್ಯುತ್ತನ್ನೇ ಕಾಣದ ಹಲವು ಪ್ರದೇಶಗಳು ಇಂದಿಗೂ ನಮ್ಮ ಮುಂದಿದೆ.

ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯನ್ನು ಹಂಚಿಕೊಂಡಿರುವ ಕೊಡಗಿನ ಚೆಂಬು ಗ್ರಾಮ ಮಾತ್ರ ಇವುಗಳಿಗಿಂತ ಸ್ವಲ್ಪ ವಿಭಿನ್ನ.

ಸರ್ಕಾರದ ಸೌಲಭ್ಯವನ್ನು ಅವಲಂಬಿಸದೆ ಜಲವಿದ್ಯುತ್ತನ್ನೇ ಬಳಸಿಕೊಂಡು ತಮಗೆ ಬೇಕಾದ ವಿದ್ಯುತ್ ಉತ್ಪಾದಿಸುತ್ತಿರುವ ಇಲ್ಲಿನ ಕುಟುಂಬಗಳು ಈ ಗ್ರಾಮವನ್ನು ವಿದ್ಯುತ್‍ನಲ್ಲಿ ಸ್ವಾವಲಂಬಿ ಗ್ರಾಮವನ್ನಾಗಿ ಮಾಡಿದೆ.

ಈ ಗ್ರಾಮದ ಜನರನ್ನು ಪವರ್ ಕಟ್ ಎನ್ನುವ ಬಾಧೆಯನ್ನು ಎಂದಿಗೂ ಬಾಧಿಸಿಲ್ಲ.

ಇದು ದಕ್ಷಿಣ ಕನ್ನಡ ಜಿಲ್ಲೆಯ ಗಡಿಯನ್ನು ಹಂಚಿಕೊಂಡಿರುವ ಕೊಡಗು ವ್ಯಾಪ್ತಿಯಲ್ಲಿರುವ ವಿದ್ಯುತ್ ನಲ್ಲಿ ಸ್ವಾವಲಂಭಿಯಾದ ಚೆಂಬು ಗ್ರಾಮವು ಹೆಚ್ಚಾಗಿ ಅರಣ್ಯ ಪ್ರದೇಶವನ್ನೇ ಹೊಂದಿರುವ ಪ್ರದೇಶ.

ಇಲ್ಲಿ ಸಮರ್ಪಕವಾದ ರಸ್ತೆ ಸಂಪರ್ಕವಾಗಲೀ, ವಿದ್ಯುತ್ ಸಂಪರ್ಕವಾಗಲಿ ಇಲ್ಲ.

ಹೆಚ್ಚಾಗಿ ದಟ್ಟಾರಣ್ಯವನ್ನೇ ಹೊಂದಿರುವ ಚೆಂಬು ಗ್ರಾಮದ ಕೆಲವು ಕಡೆಗಳಿಗೆ ಮಾತ್ರ ವಿದ್ಯುತ್ ಸಂಪರ್ಕವಿದ್ದು, ಇನ್ನು ಕೆಲವು ಕಡೆಗೆ ವಿದ್ಯುತ್ ಕಂಬಗಳನ್ನು ಹಾಕಲು ಅರಣ್ಯ ಇಲಾಖೆಯ ಆಕ್ಷೇಪವಿದೆ.

ಈ ಕಾರಣದಿಂದಾಗಿ ಇಲ್ಲಿ ವಿದ್ಯುತ್ ಸಂಪರ್ಕವು ಕಷ್ಟ ಸಾಧ್ಯ ಎಂದು ತಿಳಿದ ಇಲ್ಲಿನ ಕುಟುಂಬಗಳು ಈ ಭಾಗದಲ್ಲಿ ಹೇರಳವಾಗಿ ಹರಿಯುವ ಜಲಧಾರೆಗಳನ್ನೇ ಬಳಸಿಕೊಂಡು ವಿದ್ಯುತ್ ಉತ್ಪಾದಿಸಲು ತೊಡಗಿದ್ದಾರೆ.

ಪರಿಣಾಮ ಇಲ್ಲಿನ ಶೇಕಡ 80 ಕ್ಕೂ ಮಿಕ್ಕಿ ಮನೆಗಳು ಇಂದು ಜಲವಿದ್ಯುತ್ತನ್ನೇ ವರ್ಷಪೂರ್ತಿ ಬಳಸಿಕೊಂಡು ತನ್ನ ವಿದ್ಯುತ್ ಕೊರತೆಯನ್ನು ನೀಗಿಸಿದೆ.

ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಚೆಂಬು ಗ್ರಾಮಪಂಚಾಯತ್ ಇಲ್ಲಿನ ಬಹುತೇಕ ಮನೆಗಳಿಗೆ ವಿದ್ಯುತ್ ಉತ್ಪಾದಿಸಲು ಬೇಕಾದ ಸಲಕರಣೆಗಳನ್ನು ಕಲ್ಪಿಸುವ ಮೂಲಕ ವಿದ್ಯುತ್ ಸ್ವಾವಲಂಭಿಯನ್ನಾಗಿ ರೂಪಿಸುವಲ್ಲಿ ಸಹಕಾರ ನೀಡಿದೆ.

ಬಂಡೆಗಳ ಮಧ್ಯದಿಂದ, ಹಳ್ಳಗಳಿಂದ ನೀರನ್ನು ಪೈಪ್ ಮೂಲಕ ತಮ್ಮ ಜಮೀನಿನಲ್ಲಿ ನಿರ್ಮಿಸಿದ ಟ್ಯಾಂಕ್‌ನಲ್ಲಿ ನೀರನ್ನು ಸಂಗ್ರಹಿಸುವ ಇಲ್ಲಿನ ಗ್ರಾಮಸ್ಥರು,

ಸಂಗ್ರಹಿಸಿದ ನೀರನ್ನು ವಿವಿಧ ಆಕಾರದ ಪೈಪ್ ಗಳನ್ನು ಜೋಡಿಸಿ ಟರ್ಬೈನ್ ಗೆ ಹಾಯಿಸುತ್ತಾರೆ.

ನೀರಿನ ರಭಸಕ್ಕೆ ಟರ್ಬೈನ್ ತಿರುಗಿ, ಜನರೇಟರ್ ಮೂಲಕ ವಿದ್ಯುತ್ ಉತ್ಪಾದನೆಯಾಗುತ್ತದೆ.

1 ಕೆ.ವಿ, 2.ಕೆ.ವಿ ಹೀಗೆ ವಿದ್ಯುತ್ ಉತ್ಪಾದಿಸುವ ಇಲ್ಲಿನ ಗ್ರಾಮಸ್ಥರು ದಿನದ 24 ಗಂಟೆಯೂ ಯಾವುದೇ ಅಡಚಣೆಗಳಿಲ್ಲದೆ ವಿದ್ಯುತ್ ಪಡೆಯುತ್ತಿದ್ದಾರೆ.

ಹರಿಯುವ ನೀರಿನ ಮೂಲಗಳಿದ್ದು ಇವುಗಳನ್ನು ಪ್ಲಾಸ್ಟಿಕ್ ಪೈಪ್‍ಗಳ ಮೂಲಕ ಶೇಖರಿಸಿ ಅವುಗಳನ್ನು ಟರ್ಬೈನ್ ಮೂಲಕ ಹರಿಸಿ ವಿದ್ಯುತ್ ತಯಾರಿಸಲಾಗುತ್ತಿದೆ.

30 ರಿಂದ 50 ಸಾವಿರ ರೂಪಾಯಿಗಳಿಗೆ ಈ ವ್ಯವಸ್ಥೆಯನ್ನು ಆಳವಡಿಸುವ ಮೂಲಕ ನಿರಂತರ ವಿದ್ಯುತ್‍ನ್ನು ಪಡೆಯುತ್ತಿದ್ದಾರೆ.

ಸರಕಾರದಿಂದ ಈ ವ್ಯವಸ್ಥೆಗೆ ಸಬ್ಸಿಡಿಯನ್ನೂ ನೀಡಲಾಗುತ್ತಿದ್ದು, ಇದರಿಂದಾಗಿ ಇಲ್ಲಿನ ಗ್ರಾಮಸ್ಥರು ಹೆಚ್ಚಿನ ಬಂಡವಾಳ ಹೂಡದೆಯೇ ನಿರಂತರ ವಿದ್ಯುತ್ ಪಡೆಯುತ್ತಿದ್ದಾರೆ.

ಮಳೆಗಾಲದಲ್ಲಿ ನಿರಂತರ ಕರೆಂಟ್ ಪಡೆಯುವ ಗ್ರಾಮಸ್ಥರು ಬೇಸಿಗೆಯಲ್ಲಿ ಹಗಲು ಹೊತ್ತು ನೀರನ್ನು ಕೃಷಿತೋಟಗಳಿಗೆ ಬಿಟ್ಟು, ರಾತ್ರಿ ಮಾತ್ರ ಟರ್ಬೈನ್ ಗಳನ್ನು ಬಳಸುತ್ತಾರೆ.

ಈ ಮೂಲಕ ಕೃಷಿಗೂ ಹಾಗೂ ಕರೆಂಟಿಗೂ ನೀರಿನ , ಎಲ್ಲಾ ಗೃಹೋಸಮತೋಲನವನ್ನು ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಒಂದು ಮನೆಗೆ ಅತೀ ಅಗತ್ಯವಾಗಿ ಬೇಕಾದಂತಹ ಎಲ್ಲಾ ವಿದ್ಯುತ್ ಉಪಕರಣಗಳನ್ನು ಜಲವಿದ್ಯುತ್ ಮೂಲಕವೇ ಉಪಯೋಗಿಸುತ್ತಿದ್ದು,

ಯಾವ ಮಳೆ-ಗಾಳಿ ಬಂದರೂ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪಡೆಯುತ್ತಿದ್ದಾರೆ.

ಎಲ್ಲಾ ರೀತಿಯ ಶುಲ್ಕ, ಹಣ ಪಾವತಿ ಮಾಡಿಯೂ ಅಡಚಣೆ ಮುಕ್ತ ವಿದ್ಯುತ್ ಸಂಪರ್ಕ ಸಿಗದೆ ಪರದಾಡುವ ಜನರ ಮಧ್ಯೆ , ಚೆಂಬು ಗ್ರಾಮದ ಜನ ಇದ್ಯಾವುದರ ಜಂಜಾಟವೇ ಇಲ್ಲದೆ ವಿದ್ಯುತ್ ಬಳಸುತ್ತಿದ್ದಾರೆ.

ನೈಸರ್ಗಿಕ ಸಂಪನ್ಮೂಲವನ್ನು ಬಳಸಿ ಚೆಂಬು ಗ್ರಾಮದ ಜನ ವಿದ್ಯುತ್‍ನಲ್ಲಿ ಸ್ವಾವಲಂಭನೆಯನ್ನು ಹೊಂದುವ ಮೂಲಕ ಮಾದರಿ ಗ್ರಾಮವಾಗಿ ಗುರುತಿಸಿಕೊಂಡಿದ್ದಾರೆ.

DAKSHINA KANNADA

ಮಂಗಳೂರು: ಡ್ರಗ್ಸ್‌ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಾಗಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ ಬಸ್ಸು ಮಾಲಕರ ಸಂಘವೂ ಕೈಜೋಡಿಸಿ ಡ್ರಗ್ ನಿರ್ಮೂಲನೆ ಮಾಡಲು ಬೀದಿ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದು ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರಗ್ ಜಾಲಕ್ಕೆ ಕಡಿವಾಣ, ನಶೆಗೆ ಒಳಗಾಗುವ ವಿದ್ಯಾರ್ಥಿಗಳನ್ನು ಅದರಿಂದ ಹೊರತರುವ ಕೆಲಸ ಮಾಡುತ್ತಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು. ಅಲ್ಲದೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ನಾವು ಕೈಜೋಡಿಸಿದ್ದೇವೆ. ಜನವರಿ 27ರ ಮಂಗಳವಾರ ರೋಶನಿ ನಿಲಯ ಕಾಲೇಜಿನ ಸಹಭಾಗಿತ್ವದೊಂದಿಗೆ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಹಲವು ಕಡೆ ಡ್ರಗ್‌ ವಿರೋಧಿ ಬೀದಿನಾಟಕ ಆಯೋಜನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

ನಗರದ ಸೆಂಟ್ರಲ್‌ ಬಸ್ಸು ನಿಲ್ದಾಣ, ತೊಕ್ಕೊಟ್ಟು ಬಸ್ಸು ನಿಲ್ದಾಣ, ತಲಪಾಡಿ, ಉಳ್ಳಾಲ, ಲಾಲ್‌ಭಾಗ್‌ ಸೇರಿದಂತೆ ಹಲವು ಕಡೆಗಳ ಬಸ್ಸು ನಿಲ್ದಾಣಗಳಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಬಸ್ಸುಗಳಲ್ಲಿ ಸ್ಟಿಕ್ಕರ್‌ ಹಚ್ಚಿ ಜಾಗೃತಿ ಮೂಡಿಸಲಿದ್ದೇವೆ. ಇದಕ್ಕೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ ರಾಮಚಂದ್ರ ನಾಯ್ಕ , ರಾಮಚಂದ್ರ ಪಿಲಾರ್ ಹಾಗೂ ಜೊತೆ ಕಾರ್ಯದರ್ಶಿ ರಾಜೇಶ್ ಟಿ ಯವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ 

Published

on

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026’ ಅಂತಾರಾಜ್ಯ ಪ್ರಶಸ್ತಿಯನ್ನು  ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆರಿಗೆ ಪ್ರದಾನ ಮಾಡಲಾಯಿತು.

ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನುಅವರು  ಸ್ವೀಕರಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ  ಅಂಕಣಕಾರರಾಗಿ ಹಾಗೂ ಕ್ರೀಡಾ  ವಿಮರ್ಶಾತ್ಮಕ ಲೇಖನಗಳ  ಮೂಲಕ ಎಸ್. ಜಗದೀಶ್ಚಂದ್ರ ಅಂಚನ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ.ಕೆ.ವಾಮನ್ ರಾವ್, ನಿರ್ದೇಶಕ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ‌ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು  ಮೊದಲಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

Published

on

 

ಸಾಂದರ್ಭಿಕ ಚಿತ್ರ

ಮಂಗಳೂರು : ವಿವಿಧ ಡಾಕ್ಯುಮೆಂಟ್ಸ್‌ ಗಳಿದ್ದ ಪರ್ಸೊಂದು ಕಳೆದುಹೋಗಿದೆ. ಚೇತನ್ ಎಂಬವರು ಬಂಟ್ವಾಳದಿಂದ ಕುಂಟಲ್ ಪಲ್ಕೆಯವರೆಗೆ ಆಟೋದಲ್ಲಿ ಪ್ರಯಾಣಿಸಿದ್ದು, ಈ ವೇಳೆ ಅವರ ಪರ್ಸ್  ಜೇಬಿನಿಂದ ಕೆಳಗೆ ಬಿದ್ದಿದೆ. ಅದರಲ್ಲಿ ಆಧಾರ್ ಕಾರ್ಡ್, ಹಣ ಹಾಗೂ ಇತರೆ ಡಾಕ್ಯುಮೆಂಟ್ಸ್‌ ಗಳಿದ್ದವು. ಯಾರಿಗಾದರೂ ಪರ್ಸ್ ಸಿಕ್ಕಿದ್ದಲ್ಲಿ 9036015784 ನಂಬರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page